bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Ecclesiastes 1
Ecclesiastes 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 2 →
1
ದಾವೀದನ ಮಗನೂ ಯೆರೂಸಲೇವಿುನಲ್ಲಿ ಆಳುವ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.
2
ಪ್ರಸಂಗಿಯು ಹೀಗೆ ಹೇಳುತ್ತಾನೆ - ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ!
3
ಮನುಷ್ಯನು ಈ ಲೋಕದಲ್ಲಿ ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಏನು ಲಾಭ?
4
ಒಂದು ತಲಾಂತರವು ಗತಿಸುವದು, ಇನ್ನೊಂದು ತಲಾಂತರವು ಬರುವದು. ಭೂವಿುಯಾದರೋ ಶಾಶ್ವತವಾಗಿ ನಿಲ್ಲುವದು.
5
ಸೂರ್ಯನು ಏರುವನು, ಸೂರ್ಯನು ಇಳಿಯುವನು, ಹೊರಟ ಸ್ಥಾನಕ್ಕೆ ಅಸುರುಸುರಾಗಿ ತಿರಿಗಿ ಓಡುವನು.
6
ಗಾಳಿಯು ತೆಂಕಣಕ್ಕೆ ಬೀಸಿ ಬಡಗಣಕ್ಕೆ ತಿರುಗುವದು; ಅದು ತಿರುತಿರುಗುತ್ತಾ ಹೋಗಿ ತಿರುತಿರುಗುತ್ತಾ ಬರುವದು.
7
ನದಿಗಳೆಲ್ಲಾ ಸಮುದ್ರಕ್ಕೆ ಹರಿದು ಹೋಗುವವು; ಆದರೂ ಸಮುದ್ರವು ತುಂಬುವದಿಲ್ಲ; ಅವು ಎಲ್ಲಿಗೆ ಹರಿದು ಹೋಗುತ್ತವೋ ಅಲ್ಲಿಗೇ ತಿರಿಗಿ ಹೋಗುವವು.
8
ಎಲ್ಲಾ ವಸ್ತುಗಳು ಬಳಲಿಹೋಗುವವು; ಇದನ್ನು ಮನುಷ್ಯನು ವಿವರಿಸಲಾರನು. ಕಣ್ಣು ನೋಡಿ ನೋಡಿ ತೃಪ್ತಿಗೊಳ್ಳದು, ಕಿವಿಯು ಕೇಳಿ ಕೇಳಿ ದಣಿಯದು.
9
ಇದ್ದದೇ ಇರುವದು, ನಡೆದದ್ದೇ ನಡೆಯುವದು, ಲೋಕದಲ್ಲಿ ಹೊಸದೇನೂ ಇಲ್ಲ.
10
ಇಗೋ, ಹೊಸದು ಎನಿಸಿಕೊಳ್ಳುವ ವಸ್ತುವಿದ್ದರೂ ಅದು ಪೂರ್ವದಲ್ಲಿ ನಮಗಿಂತ ಮುಂಚಿನ ಯುಗಗಳಲ್ಲಿಯೂ ಇದ್ದದ್ದೇ.
11
ಹಿಂದಿನ ತಲಾಂತರಗಳ ಜ್ಞಾಪಕವು [ಈಗಿನವರಿಗೆ] ಇಲ್ಲ; ಮುಂದಿನ ತಲಾಂತರಗಳ ಜ್ಞಾಪಕವೂ ಅವುಗಳ ಮುಂದಿನ ತಲಾಂತರಗಳಿಗೆ ಇರುವದಿಲ್ಲ.
12
ಪ್ರಸಂಗಿಯಾದ ನಾನು ಯೆರೂಸಲೇವಿುನಲ್ಲಿ ಇಸ್ರಾಯೇಲ್ಯರಿಗೆ ಅರಸನಾಗಿದ್ದೆನು.
13
ಆಕಾಶದ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ಜ್ಞಾನದಿಂದ ವಿಚಾರಿಸಿ ವಿಮರ್ಶಿಸಲು ಮನಸ್ಸಿಟ್ಟೆನು; ನರಜನ್ಮದವರ ಕರ್ತವ್ಯವೆಂದು ದೇವರು ನೇವಿುಸಿರುವ ಆ ಕೆಲಸವೆಲ್ಲಾ ಬಹು ಪ್ರಯಾಸವೇ.
14
ಲೋಕದಲ್ಲಿ ನಡೆಯುವ ಕೆಲಸಗಳನ್ನೆಲ್ಲಾ ನೋಡಿದ್ದೇನೆ; ಆಹಾ, ಗಾಳಿಯನ್ನು ಹಿಂದಟ್ಟಿದ ಹಾಗೆ ಸಮಸ್ತವೂ ವ್ಯರ್ಥ.
15
ವಕ್ರವಾದದ್ದನ್ನು ಸರಿಮಾಡುವದು ಅಸಾಧ್ಯ; ಇಲ್ಲದ್ದನ್ನು ಲೆಕ್ಕಿಸುವದು ಅಶಕ್ಯ.
16
ನಾನು ಮನಸ್ಸಿನಲ್ಲಿ ಯೋಚಿಸುತ್ತಾ - ಆಹಾ, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ; ನನ್ನ ಹೃದಯವು ಜ್ಞಾನವನ್ನೂ ತಿಳುವಳಿಕೆಯನ್ನೂ ವಿಶೇಷವಾಗಿ ಹೊಂದಿದೆ ಎಂದುಕೊಂಡೆನು.
17
ಜ್ಞಾನವನ್ನಲ್ಲದೆ ಮರುಳುತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಲು ಮನಸ್ಸಿಟ್ಟೆನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ಎಂದು ಅರಿತುಕೊಂಡೆನು.
18
ಬಹು ಜ್ಞಾನವಿದ್ದಲ್ಲಿ ಬಹು ಸಂಕಟ, ಹೆಚ್ಚು ತಿಳುವಳಿಕೆಯನ್ನು ಪಡೆದವನಿಗೆ ಹೆಚ್ಚು ವ್ಯಥೆ.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 2 →
All chapters:
1
2
3
4
5
6
7
8
9
10
11
12