bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Ecclesiastes 11
Ecclesiastes 11
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 12 →
1
ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹು ದಿನದ ಮೇಲೆ ಅದು ನಿನಗೆ ಸಿಕ್ಕುವದು.
2
ಏಳು ಮಂದಿಗೆ, ಹೌದು, ಎಂಟು ಮಂದಿಗೆ ಹಂಚಿಬಿಡು; ಲೋಕದಲ್ಲಿ ಮುಂದೆ ಸಂಭವಿಸುವ ಕೇಡು ನಿನಗೆ ಗೊತ್ತಿಲ್ಲ.
3
ಮಳೆ ತುಂಬಿದ ಮೋಡಗಳು ಭೂವಿುಯ ಮೇಲೆ ಸುರಿದುಬಿಡುವವು; ಮರವು ತೆಂಕಣಕ್ಕಾಗಲಿ ಬಡಗಣಕ್ಕಾಗಲಿ ಬಿದ್ದರೆ ಬಿದ್ದ ಹಾಗೆಯೇ ಇರುವದು.
4
ಗಾಳಿಯನ್ನು ನೋಡುತ್ತಲೇ ಇರುವವನು ಬೀಜ ಬಿತ್ತನು; ಮೋಡಗಳನ್ನು ಗಮನಿಸುತ್ತಲೇ ಇರುವವನು ಪೈರು ಕೊಯ್ಯನು.
5
ಗಾಳಿಯ ಗತಿಯನ್ನೂ ಗರ್ಭಿಣಿಯ ಗರ್ಭದೊಳಗೆ ಎಲುಬು ಬೆಳೆಯುವ ರೀತಿಯನ್ನೂ ನೀನು ಹೇಗೆ ತಿಳಿಯುವದಿಲ್ಲವೋ ಹಾಗೆ ಸರ್ವಕರ್ತನಾದ ದೇವರ ಕಾರ್ಯವನ್ನು ಅರಿಯೆ.
6
ಮುಂಜಾನೆ ಬೀಜ ಬಿತ್ತು, ಸಂಜೆಯತನಕ ಕೈದೆಗೆಯಬೇಡ; ಇದು ಸಫಲವೋ, ಅದು ಸಫಲವೋ, ಒಂದು ವೇಳೆ ಎರಡೂ ಚೆನ್ನಾಗುವವೋ ನಿನಗೆ ತಿಳಿಯದು. ಬೆಳಕು ಇಂಪು; ಸೂರ್ಯನನ್ನು ಕಾಣುವದು ಕಣ್ಣಿಗೆ ಹಿತ.
7
ಬಹು ವರುಷ ಬದುಕುವವನು ಅವುಗಳಲ್ಲೆಲ್ಲಾ ಆನಂದಿಸಲಿ;
8
ಆದರೆ ಅಂಧಕಾರದ ದಿನಗಳು ಬಹಳವೆಂದು ನೆನಪಿಗೆ ತರಲಿ. ಮುಂದಾಗುವದೆಲ್ಲಾ ವ್ಯರ್ಥವೇ.
9
ಯೌವನಸ್ಥನೇ, ಪ್ರಾಯದಲ್ಲಿ ಆನಂದಿಸು; ಯೌವನದ ದಿನಗಳಲ್ಲಿ ಹೃದಯವು ನಿನ್ನನ್ನು ಹರ್ಷಗೊಳಿಸಲಿ; ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೋ; ಆದರೆ ಈ ಎಲ್ಲಾ ವಿಷಯಗಳಲ್ಲಿಯೂ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವನೆಂದು ತಿಳಿದಿರು.
10
ನಿನ್ನ ಹೃದಯದಿಂದ ಕರಕರೆಯನ್ನೂ ದೇಹದಿಂದ ಶ್ರಮೆಯನ್ನೂ ತೊಲಗಿಸು; ಬಾಲ್ಯವೂ ಪ್ರಾಯವೂ ವ್ಯರ್ಥವಷ್ಟೆ.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 12 →
All chapters:
1
2
3
4
5
6
7
8
9
10
11
12