bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Ecclesiastes 9
Ecclesiastes 9
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 10 →
1
ಏಕೆಂದರೆ ಧರ್ಮಿಗಳೂ ಜ್ಞಾನಿಗಳೂ ಅವರ ಕೃತ್ಯಗಳೂ ದೇವರ ಕೈಯಲ್ಲುಂಟು; ತಾವು ಪ್ರೀತಿಗೆ ಗುರಿಯೋ ದ್ವೇಷಕ್ಕೆ ಗುರಿಯೋ ಮನುಷ್ಯರಿಗೆ ಗೊತ್ತಿಲ್ಲ. ಅವರ ಮುಂದೆ ಸಮಸ್ತವೂ ಕಾದಿದೆ ಎಂಬೀ ವಿಷಯಗಳನ್ನೆಲ್ಲಾ ವಿಚಾರಿಸಬೇಕೆಂದು ಮನಸ್ಸಿಗೆ ತೆಗೆದುಕೊಂಡೆನು.
2
ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವದು; ಶಿಷ್ಟನಿಗೂ ದುಷ್ಟನಿಗೂ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಯಜ್ಞಮಾಡುವವನಿಗೂ ಮಾಡದವನಿಗೂ ಒಂದೇ ಗತಿ; ನಿರ್ದೋಷಿಯಂತೆ ದೋಷಿಯಿರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನು ಇರುವನು.
3
ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ.
4
ಜೀವಿತರ ಗುಂಪಿನಲ್ಲಿ ಸೇರಿದವನಿಗೆ ನಿರೀಕ್ಷೆಯುಂಟು;
5
ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು. ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯು ಉಂಟಷ್ಟೆ; ಸತ್ತವರಿಗೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇಲ್ಲ, ಅವರ ಜ್ಞಾಪಕವೇ ಹೋಯಿತಲ್ಲವೆ.
6
ಅವರು ಸತ್ತಾಗಲೇ ಅವರ ಪ್ರೀತಿಯೂ ಹಗೆಯೂ ಹೊಟ್ಟೇಕಿಚ್ಚೂ ಅಳಿದುಹೋದವು; ಲೋಕದೊಳಗೆ ನಡೆಯುವ ಯಾವ ಕೆಲಸದಲ್ಲಿಯೂ ಅವರಿಗೆ ಇನ್ನೆಂದಿಗೂ ಪಾಲೇ ಇಲ್ಲ.
7
ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು; ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ; ದೇವರು ನಿನ್ನ ನಡತೆಗೆ ಈಗ ಮೆಚ್ಚಿದನಷ್ಟೆ.
8
ನಿನ್ನ ಬಟ್ಟೆಗಳು ಬೆಳ್ಳಗಿರಲಿ; ತಲೆಗೆ ತೈಲದ ಕೊರತೆ ಇಲ್ಲದಿರಲಿ.
9
ಲೋಕದೊಳಗೆ ದೇವರು ನಿನಗೆ ನೇವಿುಸಿರುವ ವ್ಯರ್ಥ ಜೀವಮಾನದ ವ್ಯರ್ಥ ದಿನಗಳಲ್ಲೆಲ್ಲಾ ನಿನ್ನ ಪ್ರಿಯಪತ್ನಿಯೊಡನೆಯ ಸುಖದಿಂದ ಬದುಕು; ನಿನ್ನ ಬಾಳಿನಲ್ಲಿಯೂ ನೀನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಇದೇ ನಿನಗೆ ಬಂದ ಪಾಲು.
10
ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು; ನೀನು ಸೇರಬೇಕಾದ ಪಾತಾಳದಲ್ಲಿ ಯಾವ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.
11
ನಾನು ಲೋಕದಲ್ಲಿ ತಿರಿಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲವಿಲ್ಲ, ಬಲಿಷ್ಠರಿಗೆ ಯುದ್ಧದಲ್ಲಿ ಜಯವಾಗದು, ಜ್ಞಾನಿಗಳಿಗೆ ಅನ್ನ ಸಿಕ್ಕದು, ವಿವೇಕಿಗಳಿಗೆ ಧನ ಲಭಿಸದು, ಪ್ರವೀಣರಿಗೆ ದಯೆ ದೊರೆಯದು; ಕಾಲವೂ ಪ್ರಾಪ್ತಿಯೂ ಯಾರಿಗೂ ತಪ್ಪಿದ್ದಲ್ಲ ಎಂದು ತಿಳಿದುಕೊಂಡೆನು.
12
ಮನುಷ್ಯನೋ ತನ್ನ ಕಾಲಗತಿಯನ್ನು ತಿಳಿಯನಷ್ಟೆ; ಮೀನುಗಳು ಕೆಟ್ಟ ಬಲೆಗೂ ಪಕ್ಷಿಗಳು ಜಾಲಕ್ಕೂ ಸಿಕ್ಕಿಬೀಳುವ ಹಾಗೆ ನರಜನ್ಮದವರು ತಮ್ಮ ಮೇಲೆ ತಟ್ಟನೆ ಬೀಳುವ ಕೆಟ್ಟ ಕಾಲಪಾಶಕ್ಕೆ ಸಿಕ್ಕಿಕೊಳ್ಳುವರು.
13
ನಾನು ಲೋಕದಲ್ಲಿ ಜ್ಞಾನವನ್ನು ಈ ವಿಧವಾಗಿಯೂ ಕಂಡುಕೊಂಡೆನು; ಅದು ದೊಡ್ಡದೆಂದು ತೋಚಿತು;
14
ಇಗೋ, ಒಂದು ಚಿಕ್ಕ ಪಟ್ಟಣ, ಅದರಲ್ಲಿ ಕೊಂಚ ಜನರೇ ಇದ್ದರು; ಒಬ್ಬ ದೊಡ್ಡ ಅರಸು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.
15
ಆಗ ಅಲ್ಲಿದ್ದವರು ತಮ್ಮಲ್ಲಿ ಒಬ್ಬ ಬಡ ಜ್ಞಾನಿಯನ್ನು ಕಂಡುಕೊಂಡರು. ಅವನು ತನ್ನ ಜ್ಞಾನದಿಂದಲೇ ಆ ಪಟ್ಟಣವನ್ನು ರಕ್ಷಿಸಿದನು; ಆದರೆ ಆ ಬಡ ಜ್ಞಾನಿಯನ್ನು ಯಾರೂ ಸ್ಮರಿಸಲಿಲ್ಲ.
16
ನಾನು ಇದನ್ನು ನೋಡಿ, ಬಲಕ್ಕಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಬಡವನ ಜ್ಞಾನವನ್ನು ತಾತ್ಸಾರಮಾಡಿ ಅವನ ಮಾತುಗಳನ್ನು ಗಮನಿಸರು ಅಂದುಕೊಂಡೆನು.
17
ಹುಚ್ಚರೊಡೆಯನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಅಂಟುತ್ತವೆ.
18
ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಒಬ್ಬ ಪಾಪಿಯು ಬಹು ಶುಭವನ್ನು ಹಾಳುಮಾಡುವನು.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 10 →
All chapters:
1
2
3
4
5
6
7
8
9
10
11
12