bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Ephesians 1
Ephesians 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 2 →
1
ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು ಎಫೆಸದಲ್ಲಿರುವ ದೇವಜನರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಕೆಯಿಟ್ಟಿರುವವರಿಗೂ ಬರೆಯುವದೇನಂದರೆ -
2
ನಮ್ಮ ತಂದೆಯಾದ ದೇವರಿಂದಲೂ ಕರ್ತನಾದ ಯೇಸು ಕ್ರಿಸ್ತನಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
3
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ತಂದೆಯೂ ಆಗಿರುವಾತನಿಗೆ ಸ್ತೋತ್ರ. ಆತನು ಪರಲೋಕದಲ್ಲಿನ ಸಕಲ ಆತ್ಮೀಯವರಗಳನ್ನು ನಮಗೆ ಕ್ರಿಸ್ತ ಯೇಸುವಿನಲ್ಲಿ ಅನುಗ್ರಹಿಸಿದ್ದಾನೆ.
4
ಹೇಗಂದರೆ ನಾವು ಪ್ರೀತಿಯಲ್ಲಿ ನಡೆದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು ನಮ್ಮನ್ನು ಜಗದುತ್ಪತ್ತಿಗೆ ಮುಂಚೆ ಕ್ರಿಸ್ತನಲ್ಲಿ ಆರಿಸಿಕೊಂಡನು.
5
ಆತನು ತನ್ನ ಕೃಪೆಯನ್ನು ಪ್ರಖ್ಯಾತಿಗೆ ತರಬೇಕೆಂದು ನಮ್ಮನ್ನು ಯೇಸು ಕ್ರಿಸ್ತನ ಮೂಲಕ ತನ್ನ ಪುತ್ರರನ್ನಾಗಿ ಸ್ವೀಕರಿಸುವದಕ್ಕೆ ದಯಾಪೂರ್ವಕವಾದ ತನ್ನ ಚಿತ್ತಾನುಸಾರವಾಗಿ ಮೊದಲೇ ಸಂಕಲ್ಪಮಾಡಿದ್ದನು. ಈ ಕೃಪಾದಾನವು ಆತನ ಪ್ರಿಯನಲ್ಲಿಯೇ ನಮಗೆ ದೊರೆಯಿತು.
7
ಈತನು ನಮಗೋಸ್ಕರ ತನ್ನ ರಕ್ತವನ್ನು ಸುರಿಸಿದ್ದರಿಂದ ನಮ್ಮ ಅಪರಾಧಗಳು ಪರಿಹಾರವಾಗಿ ನಮಗೆ ಬಿಡುಗಡೆಯಾಯಿತು. ಇದು ದೇವರ ಕೃಪಾತಿಶಯವೇ.
8
ಆತನು ರಹಸ್ಯವಾದ ತನ್ನ ಸಂಕಲ್ಪವನ್ನು ನಮಗೆ ತಿಳಿಯಪಡಿಸುವದರ ಮೂಲಕ ವಿಶೇಷವಾದ ಜ್ಞಾನವನ್ನೂ ಬುದ್ಧಿಯನ್ನೂ ಕೊಟ್ಟು ಆ ಕೃಪೆಯನ್ನು ಇನ್ನೂ ಹೆಚ್ಚಾಗಿ ನಮಗೆ ತೋರಿಸಿದ್ದಾನೆ.
9
ತಾನು ಕಾಲವು ಪರಿಪೂರ್ಣವಾದಾಗ ನಿರ್ವಹಿಸಬೇಕಾದ ಒಂದು ಕೃಪೆಯುಳ್ಳ ಸಂಕಲ್ಪವನ್ನು ಆತನು ಕ್ರಿಸ್ತನಲ್ಲಿ ಮೊದಲೇ ನಿಷ್ಕರ್ಷೆಮಾಡಿಕೊಂಡಿದ್ದನು. ಅದೇನಂದರೆ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದಾಗಿ ಕೂಡಿಸಬೇಕೆಂಬದೇ. ಕ್ರಿಸ್ತನಲ್ಲಿಯೇ ಸಮಸ್ತವು ಒಂದಾಗುವದು.
11
ಇದಲ್ಲದೆ ಆತನಲ್ಲಿ ನಾವು ದೇವರ ಸ್ವಕೀಯ ಪ್ರಜೆಯಾದೆವು, ಬರಬೇಕಾದ ಕ್ರಿಸ್ತನನ್ನು ಎದುರುನೋಡುತ್ತಿದ್ದ ನಾವು ತನ್ನ ಮಹಿಮೆಯನ್ನು ಪ್ರಖ್ಯಾತಿಪಡಿಸಬೇಕೆಂದು ಸಮಸ್ತಕಾರ್ಯಗಳನ್ನು ತನ್ನ ಇಷ್ಟದಂತೆ ನಡಿಸುವ ದೇವರು ತನ್ನ ಸಂಕಲ್ಪದ ಮೇರೆಗೆ ನಮ್ಮನ್ನು ಆದಿಯಲ್ಲಿಯೇ ಆರಿಸಿಕೊಂಡನು.
13
ನಿಮ್ಮ ರಕ್ಷಣೆಯ ವಿಷಯವಾದ ಸುವಾರ್ತೆಯೆಂಬ ಸತ್ಯವಾಕ್ಯವನ್ನು ಕೇಳಿ ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಸಹ ವಾಗ್ದಾನಮಾಡಲ್ಪಟ್ಟ ಪವಿತ್ರಾತ್ಮನೆಂಬ ಮುದ್ರೆಯನ್ನು ಹೊಂದಿದಿರಿ.
14
ದೇವರು ಸಂಪಾದಿಸಿಕೊಂಡ ಜನರಿಗೆ ವಿಮೋಚನೆಯಾಗುವದೆಂಬದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಆ ವಿಮೋಚನೆಯು ದೇವರ ಮಹಿಮೆಗೆ ಎಷ್ಟೋ ಪ್ರಖ್ಯಾತಿಯನ್ನು ಉಂಟುಮಾಡುವದು.
15
ಹೀಗಿರಲಾಗಿ ಕರ್ತನಾದ ಯೇಸುವಿನಲ್ಲಿ ನೀವು ಇಟ್ಟಿರುವ ನಂಬಿಕೆಯನ್ನು ಕುರಿತೂ ದೇವಜನರೆಲ್ಲರಿಗೆ ನೀವು ತೋರಿಸುವ ಪ್ರೀತಿಯನ್ನು ಕುರಿತೂ ಕೇಳಿ ನಾನು ನಿಮ್ಮ ನಿವಿುತ್ತವಾಗಿ ಎಡೆಬಿಡದೆ ದೇವರಿಗೆ ಸ್ತೋತ್ರಮಾಡುತ್ತೇನೆ.
16
ನನ್ನ ಪ್ರಾರ್ಥನೆಗಳಲ್ಲಿ ನಿಮಗೋಸ್ಕರ ವಿಜ್ಞಾಪನೆಮಾಡಿ -
17
ನಮ್ಮ ಕರ್ತನಾದ ಯೇಸು ಕ್ರಿಸ್ತನ ದೇವರೂ ಪ್ರಭಾವಸ್ವರೂಪನಾದ ತಂದೆಯೂ ಆಗಿರುವಾತನು ತನ್ನ ವಿಷಯವಾಗಿ ತಿಳುವಳಿಕೆಯನ್ನು ಕೊಟ್ಟು ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥಗಳನ್ನು ತಿಳುಕೊಳ್ಳುವ ಜ್ಞಾನವುಳ್ಳ ಆತ್ಮವನ್ನು ನಿಮಗೆ ದಯಪಾಲಿಸಬೇಕೆಂದು ಪ್ರಾರ್ಥಿಸುತ್ತೇನೆ.
18
ಆತನು ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ ಆತನಿಂದ ಕರಿಸಿಕೊಂಡವರು ನಿರೀಕ್ಷಿಸುವ ಪದವಿ ಎಂಥದೆಂಬದನ್ನೂ ದೇವಜನರೆಂಬ ಆತನ ಸ್ವಾಸ್ಥ್ಯದ ಮಹಿಮಾತಿಶಯವು ಎಂಥದೆಂಬದನ್ನೂ
19
ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದದ್ದೆಂಬದನ್ನೂ ನೀವು ತಿಳುಕೊಳ್ಳುವಂತೆ ಅನುಗ್ರಹಿಸಲಿ.
20
ಆತನ ಬಲಾತಿಶಯವು ಎಷ್ಟು ಮಹತ್ತಾದದ್ದೆಂಬದು ಕ್ರಿಸ್ತನಲ್ಲಿ ತೋರಿಬಂದಿದೆ. ಹೇಗಂದರೆ ಆತನು ಸತ್ತಿದ್ದ ಕ್ರಿಸ್ತನನ್ನು ಬದುಕಿಸಿ
21
ಪರಲೋಕದೊಳಗೆ ಸಕಲ ರಾಜ್ಯತ್ವ ಅಧಿಕಾರ ಮಹತ್ವ ಪ್ರಭುತ್ವಾದಿಗಳ ಮೇಲೆಯೂ ಈ ಲೋಕದಲ್ಲಿ ಮಾತ್ರವಲ್ಲದೆ ಬರುವ ಲೋಕದಲ್ಲಿ ಸಹ ಹೆಸರುಗೊಂಡವರೆಲ್ಲರ ಮೇಲೆಯೂ ತನ್ನ ಬಲಗಡೆಯಲ್ಲಿ ಕೂಡ್ರಿಸಿಕೊಂಡನು.
22
ಆತನು ಸಮಸ್ತವನ್ನೂ ಕ್ರಿಸ್ತನ ಪಾದಗಳ ಕೆಳಗೆ ಹಾಕಿದನು. ಇದಲ್ಲದೆ ಆತನನ್ನು ಎಲ್ಲಾದರ ಮೇಲೆ ಇರಿಸಿ ಸಭೆಗೆ ಶಿರಸ್ಸಾಗಿ ನೇವಿುಸಿದನು.
23
ಸಭೆಯು ಆತನ ದೇಹವಾಗಿದೆ; ಎಲ್ಲವನ್ನೂ ಎಲ್ಲಾ ಸಂಬಂಧದಲ್ಲಿ ವ್ಯಾಪಿಸುವಾತನಿಂದ ಅದು ಪರಿಪೂರ್ಣತೆಯುಳ್ಳದ್ದಾಗಿದೆ.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 2 →
All chapters:
1
2
3
4
5
6