bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Esther 4
Esther 4
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 5 →
1
ಮೊರ್ದೆಕೈಯು ನಡೆದದ್ದನ್ನೆಲ್ಲಾ ಕೇಳಿದಾಗ ಬಟ್ಟೆಗಳನ್ನು ಹರಕೊಂಡು ಗೋಣಿತಟ್ಟನ್ನು ಕಟ್ಟಿಕೊಂಡು ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗುತ್ತಾ ದುಃಖಾತಿಶಯದಿಂದ ಗೋಳಾಡಿ
2
ಅರಮನೆಯ ಹೆಬ್ಬಾಗಲಿನ ಮುಂದೆ ಬಂದನು; ಗೋಣಿತಟ್ಟು ಕಟ್ಟಿಕೊಂಡವರು ಒಳಗೆ ಹೋಗಬಾರದೆಂದು ಅಪ್ಪಣೆಯಾಗಿತ್ತು.
3
ಯಾವ ಯಾವ ಸಂಸ್ಥಾನಗಳಲ್ಲಿ ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದವೋ ಅಲ್ಲೆಲ್ಲಾ ಯೆಹೂದ್ಯರೊಳಗೆ ಮಹಾದುಃಖವೂ ಉಪವಾಸರೋದನ ಪ್ರಲಾಪಗಳೂ ಉಂಟಾದವು. ಅನೇಕರು ಗೋಣಿತಟ್ಟನ್ನು ಹಾಸಿ ಬೂದಿಹಾಕಿಕೊಂಡು ಅದರ ಮೇಲೆ ಕೂತರು.
4
ಎಸ್ತೇರಳ ಸೇವಕಿಯರೂ ಕಂಚುಕಿಗಳೂ ರಾಣಿಯಾದ ಆಕೆಯ ಬಳಿಗೆ ಬಂದು ಅದನ್ನು ತಿಳಿಸಿದಾಗ ಆಕೆಯು ಬಹಳವಾಗಿ ಕಳವಳಗೊಂಡು ಮೊರ್ದೆಕೈಗೆ ವಸ್ತ್ರಗಳನ್ನು ಕಳುಹಿಸಿ - ಗೋಣಿತಟ್ಟನ್ನು ತೆಗೆದುಬಿಟ್ಟು ಇವುಗಳನ್ನು ಧರಿಸಿಕೋ ಎಂದು ಹೇಳಿಸಿದಳು; ಆದರೆ ಅವನು ಅವುಗಳನ್ನು ಸ್ವೀಕರಿಸಲಿಲ್ಲ.
5
ಆಗ ಆಕೆ ಅರಸನಿಂದ ತನ್ನ ಸೇವೆಗೋಸ್ಕರ ನೇವಿುಸಲ್ಪಟ್ಟಿದ್ದ ಹತಾಕನೆಂಬ ರಾಜಕಂಚುಕಿಯನ್ನು ಕರಿಸಿ - ನೀನು ಮೊರ್ದೆಕೈಯ ಬಳಿಗೆ ಹೋಗಿ ಇದೇನು, ಯಾಕೆ ಎಂದು ವಿಚಾರಿಸಿಕೊಂಡು ಬಾ ಎಂದು ಹೇಳಿಕಳುಹಿಸಿದಳು.
6
ಹತಾಕನು ಅರಮನೆಯ ಬಾಗಲಿನ ಮುಂದಿರುವ ಪಟ್ಟಣದ ಬೈಲಿಗೆ ಮೊರ್ದೆಕೈಯ ಹತ್ತಿರ ಹೋದಾಗ
7
ಮೊರ್ದೆಕೈಯು ತನಗೆ ಸಂಭವಿಸಿದದ್ದೆಲ್ಲವನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡಲು ಅಪ್ಪಣೆಪಡಕೊಳ್ಳುವದಕ್ಕಾಗಿ ರಾಜಭಂಡಾರಕ್ಕೆ ತೂಕಮಾಡಿ ಕೊಡುತ್ತೇನೆಂದು ವಾಗ್ದಾನಮಾಡಿದ ಸರಿಯಾದ ಹಣದ ಗಂಟು ಇಷ್ಟೆಂಬದನ್ನೂ ಅವನಿಗೆ ತಿಳಿಸಿದ್ದಲ್ಲದೆ
8
ತಮ್ಮನ್ನು ಸಂಹರಿಸುವದಕ್ಕೋಸ್ಕರ ಶೂಷನಿನಲ್ಲಿ ಪ್ರಕಟವಾದ ರಾಜಶಾಸನದ ಒಂದು ಪ್ರತಿಯನ್ನು ಕೊಟ್ಟು - ಇದನ್ನು ಎಸ್ತೇರಳಿಗೆ ತೋರಿಸಿ ವಿವರಿಸು; ಮತ್ತು ಆಕೆಯು ಅರಸನ ಬಳಿಗೆ ಹೋಗಿ ಅವನು ಕೃಪೆ ತೋರಿಸುವಂತೆ ಅವನ ಸನ್ನಿಧಿಯಲ್ಲಿ ತನ್ನ ಜನರಿಗೋಸ್ಕರ ಬಿನ್ನಹ ಮಾಡಲಿ ಎಂದು ಹೇಳಿಕಳುಹಿಸಿದನು.
9
ಹತಾಕನು ಹಿಂದಿರುಗಿ ಬಂದು ಎಸ್ತೇರಳಿಗೆ ಮೊರ್ದೆಕೈಯ ಮಾತುಗಳನ್ನು ತಿಳಿಸಲು
10
ಎಸ್ತೇರಳು ಅವನನ್ನು ತಿರಿಗಿ ಮೊರ್ದೆಕೈಯ ಹತ್ತಿರ ಕಳುಹಿಸಿ -
11
ಅರಸನು ಕರಿಸಿದರೆ ಹೊರತು ಅವನ ಬಳಿಗೆ ಒಳಗಣ ಪ್ರಾಕಾರಕ್ಕೆ ಹೋಗುವವರು ಮರಣದಂಡನೆಗೆ ಪಾತ್ರರಾಗುವರು ಎಂಬ ಒಂದೇ ನಿಯಮವು ಎಲ್ಲಾ ಸ್ತ್ರೀ ಪುರುಷರಿಗುಂಟು; ಯಾರ ಕಡೆಗೆ ಅವನು ತನ್ನ ಸುವರ್ಣದಂಡವನ್ನು ಚಾಚುವನೋ ಅವರು ಮಾತ್ರ ಜೀವದಿಂದುಳಿಯುವರೆಂಬದು ಅರಸನ ಎಲ್ಲಾ ಸೇವಕರಿಗೂ ಸಂಸ್ಥಾನಗಳ ಎಲ್ಲಾ ಜನರಿಗೂ ಗೊತ್ತುಂಟಲ್ಲಾ; ನನಗಂತೂ ಮೂವತ್ತು ದಿನಗಳಿಂದ ಅರಸನ ಬಳಿಗೆ ಹೋಗುವದಕ್ಕೆ ಆಮಂತ್ರಣವಾಗಲಿಲ್ಲ ಎಂದು ಹೇಳಿಸಿದಳು.
12
ಹತಾಕನು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದಾಗ
13
ಅವನು ತಿರಿಗಿ ಎಸ್ತೇರಳಿಗೆ - ಯೆಹೂದ್ಯರೆಲ್ಲಾ ನಾಶವಾದರೂ ನಾನೊಬ್ಬಳು ಅರಮನೆಯಲ್ಲಿರುವದರಿಂದ ಉಳಿಯುವೆನು ಎಂದು ಭಾವಿಸಿಕೊಳ್ಳಬೇಡ.
14
ನೀನು ಈಗ ಸುಮ್ಮನಿದ್ದು ಬಿಟ್ಟರೆ ಬೇರೆ ಕಡೆಯಿಂದ ಯೆಹೂದ್ಯರಿಗೆ ಸಹಾಯವೂ ವಿಮೋಚನೆಯೂ ಉಂಟಾದಾವು; ನೀನಾದರೋ ನಿನ್ನ ತಂದೆಯ ಮನೆಯವರೊಡನೆ ನಾಶವಾಗುವಿ. ಇದಲ್ಲದೆ ನೀನು ಇಂಥ ಸಂದರ್ಭಕ್ಕಾಗಿಯೇ ಪಟ್ಟಕ್ಕೆ ಬಂದಿರಬಹುದು, ಯಾರು ಬಲ್ಲರು ಎಂದು ಹೇಳಿ ಕಳುಹಿಸಿದನು.
15
ಆಗ ಎಸ್ತೇರಳು - ನೀನು ಹೋಗಿ ಶೂಷನಿನಲ್ಲಿ ಸಿಕ್ಕುವ ಎಲ್ಲಾ ಯೆಹೂದ್ಯರನ್ನು ಕೂಡಿಸು; ನೀವೆಲ್ಲರೂ ಮೂರು ದಿನ ಹಗಲಿರುಳು ಅನ್ನಪಾನಗಳನ್ನು ಬಿಟ್ಟು ನನಗೋಸ್ಕರ ಉಪವಾಸ ಮಾಡಿರಿ; ಅದರಂತೆ ನಾನೂ ನನ್ನ ಸೇವಕಿಯರೊಡನೆ ಉಪವಾಸದಿಂದಿರುವೆನು. ಅನಂತರ ನಾನು ವಿಧಿ ಮೀರಿ ಅರಸನ ಬಳಿಗೆ ಹೋಗುವೆನು, ಸತ್ತರೆ ಸಾಯುತ್ತೇನೆ ಎಂದು ಮೊರ್ದೆಕೈಗೆ ಮರಳಿ ಹೇಳಿಸಿದಳು.
17
ಮೊರ್ದೆಕೈಯು ಹಿಂದಿರುಗಿ ಹೋಗಿ ಎಸ್ತೇರಳು ಹೇಳಿದಂತೆಯೇ ಮಾಡಿದನು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 5 →
All chapters:
1
2
3
4
5
6
7
8
9
10