bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Exodus 25
Exodus 25
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 26 →
1
ಯೆಹೋವನು ಮೋಶೆಗೆ ಹೇಳಿದ್ದೇನಂದರೆ -
2
ಇಸ್ರಾಯೇಲ್ಯರು ನನಗೋಸ್ಕರ ಕಾಣಿಕೆಯನ್ನು ಮೀಸಲಿಡಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.
3
ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು ಯಾವವಂದರೆ - ಚಿನ್ನ ಬೆಳ್ಳಿ ತಾಮ್ರ ಎಂಬ ಲೋಹಗಳೂ
4
ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರಗಳೂ ನಾರುಬಟ್ಟೆಗಳೂ ಆಡುಕೂದಲಿನ ಬಟ್ಟೆಗಳೂ
5
ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳೂ ಕಡಲು ಹಂದಿಯ ತೊಗಲುಗಳೂ ಜಾಲೀಮರವೂ
6
ದೀಪಕ್ಕೆ ಬೇಕಾದ ಎಣ್ಣೆಯೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುವಾಸನಾದ್ರವ್ಯಗಳೂ
7
ಮಹಾಯಾಜಕನ ಕವಚಕ್ಕೆ ಬೇಕಾಗಿರುವ ಗೋಮೇಧಕರತ್ನಗಳೂ ಪದಕದ ಚೀಲದಲ್ಲಿ ಕೆತ್ತಬೇಕಾದ ನಾನಾ ರತ್ನಗಳೂ ಇವೇ.
8
ನಾನು ಅವರ ಮಧ್ಯದಲ್ಲಿ ವಾಸಿಸುವದಕ್ಕೆ ನನಗೆ ಒಂದು ದೇವಸ್ಥಾನವನ್ನು ಕಟ್ಟಿಸಬೇಕು.
9
ನಾನು ನಿನಗೆ ತೋರಿಸುವ ಮಾದರಿಯ ಪ್ರಕಾರವೇ ಗುಡಾರವನ್ನೂ ಅದರಲ್ಲಿರುವ ಎಲ್ಲಾ ಸಾಮಾನುಗಳನ್ನೂ ಮಾಡಿಸಬೇಕು.
10
ನೀನು ಜಾಲೀಮರದಿಂದ ಒಂದು ಮಂಜೂಷವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಒಂದುವರೆ ಮೊಳ ಎತ್ತರವೂ ಆಗಿರಬೇಕು.
11
ಚೊಕ್ಕಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
12
ನಾಲ್ಕು ಬಂಗಾರದ ಬಳೆಗಳನ್ನು ಎರಕ ಹೊಯಿಸಿ ಅದರ ನಾಲ್ಕು ಮೂಲೆಗಳಲ್ಲಿ ಅಂದರೆ ಒಂದೊಂದು ಕಡೆಯಲ್ಲಿ ಎರಡೆರಡು ಬಳೆಗಳನ್ನು ಇಡಬೇಕು.
13
ಆ ಮಂಜೂಷವನ್ನು ಹೊರುವದಕ್ಕಾಗಿ ನೀನು ಜಾಲೀಮರದ ಕೋಲುಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ
14
ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.
15
ಆ ಕೋಲುಗಳನ್ನು ಮಂಜೂಷದ ಬಳೆಗಳಿಂದ ತೆಗೆಯದೆ ಅವುಗಳಲ್ಲಿಯೇ ಇಟ್ಟಿರಬೇಕು.
16
ಆ ಮಂಜೂಷದಲ್ಲಿ ನಾನು ನಿನಗೆ ಕೊಡುವ ಆಜ್ಞಾಶಾಸನವನ್ನು ಇಡಬೇಕು.
17
ಅದಲ್ಲದೆ ಚೊಕ್ಕ ಬಂಗಾರದ ಕೃಪಾಸನವನ್ನು ಮಾಡಿಸಬೇಕು. ಅದು ಎರಡುವರೆ ಮೊಳ ಉದ್ದವೂ ಒಂದುವರೆ ಮೊಳ ಅಗಲವೂ ಆಗಿರಬೇಕು.
18
ಕೃಪಾಸನದ ಎರಡು ಕೊನೆಗಳಲ್ಲಿ ಕೆರೂಬಿಯರ ಎರಡು ಬಂಗಾರದ ಆಕಾರಗಳನ್ನು ನಕಾಸಿಕೆಲಸದಿಂದ ಮಾಡಿಸಬೇಕು.
19
ಕೃಪಾಸನದ ಒಂದೊಂದು ಕೊನೆಯಲ್ಲಿ ಒಂದೊಂದು ಕೆರೂಬಿಯನ್ನು ಮಾಡಿಸಿ ಕೃಪಾಸನಕ್ಕೆ ಜೋಡಿಸಬೇಕು.
20
ಆ ಕೆರೂಬಿಗಳು ಮೇಲಕ್ಕೆ ರೆಕ್ಕೆಗಳನ್ನು ಚಾಚಿರುವಂತೆಯೂ ಕೃಪಾಸನವನ್ನು ತಮ್ಮ ರೆಕ್ಕೆಗಳಿಂದ ಮುಚ್ಚುವಂತೆಯೂ ಇರಬೇಕು. ಅವುಗಳ ಮುಖಗಳು ಎದುರುಬದುರಾಗಿ ಕೃಪಾಸನವನ್ನು ನೋಡುತ್ತಿರಬೇಕು.
21
ಆ ಕೃಪಾಸನವನ್ನು ಮಂಜೂಷದ ಮೇಲಿಡಬೇಕು. ನಾನು ನಿನಗೆ ಕೊಡುವ ಆಜ್ಞಾಶಾಸನಗಳನ್ನು ಆ ಮಂಜೂಷದೊಳಗೆ ಇಡಬೇಕು.
22
ಅಲ್ಲಿಯೇ ನಾನು ನಿನಗೆ ದರ್ಶನವನ್ನು ಕೊಡುವೆನು; ಕೃಪಾಸನದ ಮೇಲೆ ಆಜ್ಞಾಶಾಸನಗಳನ್ನು ಇಟ್ಟಿರುವ ಮಂಜೂಷದ ಮೇಲಣ ಎರಡು ಕೆರೂಬಿಗಳ ನಡುವೆಯೇ ನಾನು ಇದ್ದು ನಿನ್ನ ಸಂಗಡ ಮಾತಾಡಿ ನೀನು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾಗಿರುವ ಎಲ್ಲಾ ಸಂಗತಿಗಳನ್ನು ತಿಳಿಸುವೆನು.
23
ನೀನು ಜಾಲೀಮರದಿಂದ ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು.
24
ಅದಕ್ಕೆ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.
25
ಮೇಜಿನ ಸುತ್ತಲೂ ಅಂಗೈ ಅಗಲದ ಅಡ್ಡಪಟ್ಟಿಯನ್ನು ಮಾಡಿಸಿ ಅದಕ್ಕೂ ಚಿನ್ನದ ಗೋಟು ಕಟ್ಟಿಸಬೇಕು.
26
ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಲ್ಲಿ ಹಚ್ಚಬೇಕು.
27
ಆ ಬಳೆಗಳು ಅಡ್ಡಪಟ್ಟಿಗೆ ಹತ್ತಿಕೊಂಡಿರಬೇಕು. ಮೇಜನ್ನು ಎತ್ತುವದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.
28
ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಇವುಗಳಿಂದಲೇ ಮೇಜನ್ನು ಎತ್ತಬೇಕು.
29
ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನೂ ಧೂಪಾರತಿಗಳನ್ನೂ ಹೂಜೆಗಳನ್ನೂ ಪಾನದ್ರವ್ಯವನ್ನರ್ಪಿಸುವದಕ್ಕೆ ಬೇಕಾದ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದಲೇ ಮಾಡಿಸಬೇಕು.
30
ನೈವೇದ್ಯವಾದ ರೊಟ್ಟಿಗಳು ಯಾವಾಗಲೂ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.
31
ಮತ್ತು ಚೊಕ್ಕಬಂಗಾರದ ದೀಪಸ್ತಂಭವನ್ನು ಮಾಡಿಸಬೇಕು. ಅದರ ಬುಡವನ್ನೂ ಕಂಬವನ್ನೂ ನಕಾಸಿಕೆಲಸದಿಂದ ಮಾಡಿಸಬೇಕು. ಆ ದೀಪಸ್ತಂಭವೆಲ್ಲಾ ಅಖಂಡವಾಗಿ ಪುಷ್ಪಪಾತ್ರೆಗಳಂತೆಯೂ ಪುಷ್ಪಗಳಂತೆಯೂ ಅಲಂಕಾರವಾಗಿ ಕೆತ್ತಿರಬೇಕು.
32
ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳು ಅಂತೂ ಆರು ಕೊಂಬೆಗಳು ಇರಬೇಕು.
33
ಪ್ರತಿಯೊಂದು ಕೊಂಬೆಯಲ್ಲಿ ಬಾದಾವಿು ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿರಬೇಕು; ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು; ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು.
34
ದೀಪಸ್ತಂಭದ ಕಡ್ಡಿಯಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾವಿು ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇರಬೇಕು.
35
ಎರಡೆರಡು ಕೊಂಬೆಗಳು ಕವಲು ಒಡೆದಿರುವ ಸ್ಧಳಗಳಲ್ಲೆಲ್ಲಾ ಒಂದೊಂದು ಪುಷ್ಪಪಾತ್ರೆಯಿರಬೇಕು.
36
ಪುಷ್ಪಪಾತ್ರೆಗಳೂ ಕೊಂಬೆಗಳೂ ಸಹಿತವಾದ ದೀಪಸ್ತಂಭವನ್ನೆಲ್ಲಾ ಒಟ್ಟಿಗೆ ಚೊಕ್ಕಬಂಗಾರದಿಂದ ನಕಾಸಿ ಕೆಲಸದಿಂದ ಮಾಡಿಸಬೇಕು.
37
ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು; ಆ ಹಣತೆಗಳಲ್ಲಿ ದೀಪಹಚ್ಚಲು ಎದುರಾಗಿ ಬೆಳಕು ಉಂಟಾಗುವದು.
38
ಅದರ ಕತ್ತರಿಗಳನ್ನೂ ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿಸಬೇಕು.
39
ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕ ಬಂಗಾರವಾಗಿರಬೇಕು.
40
ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು, ನೋಡು.
← Chapter 24
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 26 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40