bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Exodus 26
Exodus 26
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 27 →
1
[ನನ್ನ ನಿವಾಸಕ್ಕಾಗಿ] ಒಂದು ಗುಡಾರವನ್ನು ಹತ್ತು ತಾನು ಬಟ್ಟೆಗಳಿಂದ ಮಾಡಿಸಬೇಕು. ಅವು ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ ಧೂಮ್ರ ರಕ್ತವರ್ಣಗಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿಸಬೇಕು.
2
ಪ್ರತಿಯೊಂದು ಬಟ್ಟೆಯು ಇಪ್ಪತ್ತೆಂಟು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು; ಎಲ್ಲಾ ಬಟ್ಟೆಗಳು ಒಂದೇ ಅಳತೆಯಾಗಿರಬೇಕು.
3
ಐದೈದು ಬಟ್ಟೆಗಳನ್ನು ಒಂದೊಂದಾಗಿ ಜೋಡಿಸಬೇಕು;
4
ಈ ಎರಡು ಜೋಡನೆಗಳಲ್ಲಿ ಒಂದೊಂದರ ಕೊನೇಬಟ್ಟೆಯ ಅಂಚಿನಲ್ಲಿ ನೀಲಿದಾರದಿಂದ ಕುಣಿಕೆಗಳನ್ನು ಮಾಡಿಸಬೇಕು;
5
ಆ ಕುಣಿಕೆಗಳು ಐವತ್ತೈವತ್ತರ ಮೇರೆಗೆ ಒಂದಕ್ಕೊಂದು ಎದುರಾಗಿರಬೇಕು.
6
ಅದಲ್ಲದೆ ಐವತ್ತು ಚಿನ್ನದ ಕೊಂಡಿಗಳನ್ನು ಮಾಡಿಸಿ ಆ ಬಟ್ಟೆಗಳನ್ನು ಒಂದಕ್ಕೊಂದು ಕೂಡಿಸಬೇಕು; ಹೀಗೆ ಒಂದೇ ಗುಡಾರವಾಗುವದು.
7
ಈ ಗುಡಾರದ ಮೇಲೆ ಹೊದಿಸುವದಕ್ಕಾಗಿ ಆಡುಕೂದಲಿನ ಹನ್ನೊಂದು ತಾನು ಬಟ್ಟೆಗಳನ್ನು ಮಾಡಿಸಬೇಕು.
8
ಒಂದೊಂದು ಬಟ್ಟೆಯು ಮೂವತ್ತು ಮೊಳ ಉದ್ದವಾಗಿಯೂ ನಾಲ್ಕು ಮೊಳ ಅಗಲವಾಗಿಯೂ ಇರಬೇಕು; ಎಲ್ಲಾ ಬಟ್ಟೆಗಳೂ ಒಂದೇ ಅಳತೆಯಾಗಿರಬೇಕು.
9
ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ವಿುಕ್ಕ ಆರು ಬಟ್ಟೆಗಳನ್ನೂ ಒಂದಾಗಿ ಜೋಡಿಸಿ ಆರನೆಯ ಬಟ್ಟೆಯನ್ನು ಡೇರೆಯ ಮುಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.
10
ಒಂದೊಂದರ ಕೊನೆಯ ಬಟ್ಟೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಬೇಕು.
11
ತಾಮ್ರದ ಐವತ್ತು ಕೊಂಡಿಗಳನ್ನು ಮಾಡಿಸಿ ಒಂದೇ ಡೇರೆಯಾಗುವಂತೆ ಆ ಕೊಂಡಿಗಳನ್ನು ಕುಣಿಕೆಗಳಲ್ಲಿ ಸಿಕ್ಕಿಸಿ ಸಮಸ್ತವನ್ನು ಕೂಡಿಸಬೇಕು.
12
ಹೊದಿಕೆಯ ಬಟ್ಟೆಗಳಲ್ಲಿ ಅರ್ಧ ಬಟ್ಟೆ ಹೆಚ್ಚಾಗಿರುವದಷ್ಟೆ; ಆ ಹೆಚ್ಚಿನ ಭಾಗವು ಗುಡಾರದ ಹಿಂಭಾಗದಲ್ಲಿ ಮಡಿಸಿ ತೂಗಾಡುವಂತೆ ಬಿಡಬೇಕು.
13
ಹೊದಿಕೆಯ ಬಟ್ಟೆಗಳ ಉದ್ದದಲ್ಲಿ ಈ ಕಡೆ ಒಂದು ಮೊಳವೂ ಆ ಕಡೆ ಒಂದು ಮೊಳವೂ ಹೆಚ್ಚಾಗಿರುವದಷ್ಟೆ; ಅದು ಒಳಗಣ ಗುಡಾರವನ್ನು ಮುಚ್ಚುವಂತೆ ಈ ಕಡೆಯೂ ಆ ಕಡೆಯೂ ಇರಲಿ;
14
ಈ ಹೊದಿಕೆಗೆ ಹೊದಿಸುವದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿಸಬೇಕು.
15
ಗುಡಾರಕ್ಕೆ ಬೇಕಾದ ಚೌಕಟ್ಟುಗಳನ್ನು ಜಾಲೀಮರದಿಂದ ಮಾಡಿಸಬೇಕು.
16
ಪ್ರತಿಯೊಂದು ಚೌಕಟ್ಟೂ ಹತ್ತು ಮೊಳ ಉದ್ದವಾಗಿಯೂ ಒಂದುವರೆ ಮೊಳ ಅಗಲವಾಗಿಯೂ ಇರಬೇಕು.
17
ಪ್ರತಿಯೊಂದು ಚೌಕಟ್ಟೂ ಅಡ್ಡಪಟ್ಟಿಗಳಿಂದ ಜೋಡಿಸಲ್ಪಟ್ಟ ಎರಡು ನಿಲುವು ಪಟ್ಟಿಗಳುಳ್ಳದ್ದಾಗಿರಬೇಕು. ಗುಡಾರದ ಎಲ್ಲಾ ಚೌಕಟ್ಟುಗಳನ್ನೂ ಹಾಗೆ ಮಾಡಿಸಬೇಕು.
18
ಗುಡಾರದ ದಕ್ಷಿಣದಿಕ್ಕಿನಲ್ಲಿ ಇಪ್ಪತ್ತು ಚೌಕಟ್ಟುಗಳನ್ನು ನಿಲ್ಲಿಸಬೇಕು.
19
ನಾಲ್ವತ್ತು ಬೆಳ್ಳಿಯ ಗದ್ದಿಗೇ ಕಲ್ಲುಗಳನ್ನು ಮಾಡಿಸಿ ಆ ಇಪ್ಪತ್ತು ಚೌಕಟ್ಟುಗಳ ಕೆಳಗೆ ಇಡಬೇಕು. ಒಂದೊಂದು ಚೌಕಟ್ಟಿನಲ್ಲಿರುವ ಎರಡು ಪಟ್ಟಿಗಳಿಗೆ ಒಂದೊಂದು ಗದ್ದಿಗೇಕಲ್ಲು ಇರಬೇಕು.
20
ಹಾಗೆಯೇ ಗುಡಾರದ ಉತ್ತರದಿಕ್ಕಿನಲ್ಲಿಯೂ ಇಪ್ಪತ್ತು ಚೌಕಟ್ಟುಗಳೂ ಮತ್ತು
21
ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಗದ್ದಿಗೇಕಲ್ಲುಗಳೂ ಇರಬೇಕು.
22
ಗುಡಾರದ ಹಿಂಭಾಗಕ್ಕೆ ಅಂದರೆ ಪಶ್ಚಿಮದಿಕ್ಕಿನಲ್ಲಿ ಆರು ಚೌಕಟ್ಟುಗಳನ್ನು ಮಾಡಿಸಬೇಕು.
23
ಗುಡಾರದ ಹಿಂಭಾಗದ ಎರಡು ಮೂಲೆಗಳಿಗೆ ಬೇರೆ ಎರಡು ಚೌಕಟ್ಟುಗಳನ್ನು ಮಾಡಿಸಬೇಕು.
24
ಅವು ಬುಡದಿಂದ ತುದಿಯವರೆಗೂ ಅಂದರೆ ಮೊದಲನೆಯ ಬಳೆಯ ತನಕ ಜೋಡಿಸಿರಬೇಕು. ಹಾಗೆ ಎರಡು ಮೂಲೆಗಳಿಗೂ ಮಾಡಿಸಬೇಕು.
25
ಹೀಗೆ ಹಿಂಭಾಗದಲ್ಲಿ ಎಂಟು ಚೌಕಟ್ಟುಗಳೂ ಮತ್ತು ಪ್ರತಿಯೊಂದು ಚೌಕಟ್ಟಿಗೆ ಎರಡೆರಡು ಬೆಳ್ಳಿಯ ಗದ್ದಿಗೇ ಕಲ್ಲುಗಳೂ ಅಂತೂ ಹದಿನಾರು ಗದ್ದಿಗೇ ಕಲ್ಲುಗಳೂ ಇರುವವು.
26
ಜಾಲೀಮರದಿಂದ ಅಗುಳಿಗಳನ್ನು ಮಾಡಿಸಬೇಕು. ಗುಡಾರದ ಎರಡು ಕಡೆಗಳ ಚೌಕಟ್ಟುಗಳಿಗೂ
27
ಅದರ ಹಿಂದುಗಡೆಯ ಅಂದರೆ ಪಶ್ಚಿಮ ಕಡೆಯ ಚೌಕಟ್ಟುಗಳಿಗೂ ಐದೈದು ಅಗುಳಿಗಳನ್ನು ಮಾಡಿಸಬೇಕು.
28
ಚೌಕಟ್ಟುಗಳ ನಟ್ಟ ನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟಬೇಕು.
29
ಆ ಚೌಕಟ್ಟುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅವುಗಳಲ್ಲಿ ಆ ಅಗುಳಿಗಳಿಗಾಗಿ ಚಿನ್ನದ ಬಳೆಗಳನ್ನು ಮಾಡಿಸಬೇಕು.
30
ಆ ಅಗುಳಿಗಳನ್ನೂ ಚಿನ್ನದ ತಗಡುಗಳಿಂದ ಹೊದಿಸಬೇಕು. ನಾನು ಬೆಟ್ಟದಲ್ಲಿ ನಿನಗೆ ತೋರಿಸಿಕೊಟ್ಟ ರೀತಿಯಲ್ಲೇ ಗುಡಾರವನ್ನು ನಿಲ್ಲಿಸಬೇಕು.
31
ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ಕೆರೂಬಿಗಳನ್ನು ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿಸಬೇಕು.
32
ಜಾಲೀಮರದಿಂದ ನಾಲ್ಕು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಿ ನಾಲ್ಕು ಬೆಳ್ಳಿಯ ಗದ್ದಿಗೇ ಕಲ್ಲುಗಳ ಮೇಲೆ ನಿಲ್ಲಿಸಿ ಚಿನ್ನದ ಕೊಂಡಿಗಳಿಂದ ಆ ತೆರೆಯನ್ನು ಆ ನಾಲ್ಕು ಕಂಬಗಳಿಗೆ ಸಿಕ್ಕಿಸಬೇಕು.
33
ಆ ತೆರೆಯನ್ನು ಕೊಂಡಿಗಳಿಗೆ ಸಿಕ್ಕಿಸಿದಾಗ ಅದರೊಳಗೆ ಆಜ್ಞಾಶಾಸನಗಳ ಮಂಜೂಷವನ್ನು ತರಿಸಿಡಬೇಕು, ಆ ತೆರೆಯು ಪವಿತ್ರಸ್ಥಾನವೆಂಬದನ್ನೂ ಮಹಾಪವಿತ್ರಸ್ಥಾನವೆಂಬದನ್ನೂ ಬೇರೆ ಬೇರೆ ಮಾಡುವದು.
34
ಮಹಾಪವಿತ್ರಸ್ಥಾನದಲ್ಲಿ ಆಜ್ಞಾಶಾಸನಗಳ ಮಂಜೂಷದ ಮೇಲೆ ಕೃಪಾಸನವನ್ನು ತಂದಿಡಬೇಕು.
35
ತೆರೆಯ ಹೊರಗಡೆಯಲ್ಲಿ ಮೇಜನ್ನೂ ಮೇಜಿನ ಎದುರಾಗಿ ಗುಡಾರದ ದಕ್ಷಿಣ ದಿಕ್ಕಿನಲ್ಲಿ ದೀಪಸ್ತಂಭವನ್ನೂ ಇಡಬೇಕು; ಮೇಜು ಉತ್ತರ ಕಡೆಯಲ್ಲಿರಬೇಕು.
36
ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿಸಬೇಕು.
37
ಆ ಪರದೆ ತೂಗಿಸುವದಕ್ಕಾಗಿ ಜಾಲೀಮರದಿಂದ ಐದು ಕಂಬಗಳನ್ನು ಮಾಡಿಸಿ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳ ಕೊಂಡಿಗಳನ್ನು ಚಿನ್ನದಿಂದ ಮಾಡಿಸಿ ಅವುಗಳಿಗೋಸ್ಕರ ಐದು ತಾಮ್ರದ ಗದ್ದಿಗೇ ಕಲ್ಲುಗಳನ್ನು ಎರಕಹೊಯಿಸಬೇಕು.
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 27 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40