bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Exodus 28
Exodus 28
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 29 →
1
ಇದಲ್ಲದೆ ನನಗೆ ಯಾಜಕಸೇವೆ ಮಾಡುವದಕ್ಕೆ ನೀನು ನಿನ್ನ ಅಣ್ಣನಾದ ಆರೋನನನ್ನೂ ಅವನ ಮಕ್ಕಳಾದ ನಾದಾಬ್ ಅಬೀಹೂ ಎಲ್ಲಾಜಾರ್ ಈತಾಮಾರ್ ಎಂಬವರನ್ನೂ ಇಸ್ರಾಯೇಲ್ಯರಲ್ಲಿಂದ ನಿನ್ನ ಹತ್ತಿರಕ್ಕೆ ಕರಿಸಬೇಕು.
2
ನಿನ್ನ ಅಣ್ಣನಾದ ಆರೋನನಿಗೆ ತಕ್ಕ ಗೌರವವೂ ಅಲಂಕಾರವೂ ಉಂಟಾಗುವಂತೆ ಅವನಿಗೆ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.
3
ಯಾರಿಗೆ ನಾನು ಜಾಣತನದ ವರವನ್ನು ಪರಿಪೂರ್ತಿಯಾಗಿ ಅನುಗ್ರಹಿಸಿದ್ದೇನೋ ಅಂಥ ಜಾಣರೆಲ್ಲರ ಸಂಗಡ ನೀನು ಮಾತಾಡಿ ಅವರ ಕೈಯಿಂದ ಆ ವಸ್ತ್ರಗಳನ್ನು ಸಿದ್ಧಪಡಿಸಬೇಕು. ಆರೋನನು ಅವುಗಳನ್ನು ಧರಿಸಿಕೊಂಡು ನನ್ನ ಯಾಜಕನಾಗುವದಕ್ಕೆ ಪ್ರತಿಷ್ಠಿತನಾಗುವನು.
4
ಮಾಡಬೇಕಾದ ವಸ್ತ್ರಗಳು ಯಾವವಂದರೆ - ಪದಕದ ಚೀಲ ಮಹಾಯಾಜಕ ಕವಚ ಮೇಲಂಗಿ ವಿಚಿತ್ರವಾದ ನಿಲುವಂಗಿ ಮುಂಡಾಸ ನಡುಕಟ್ಟು ಇವುಗಳೇ. ನಿನ್ನ ಅಣ್ಣನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.
5
ಜನರು ಕಾಣಿಕೆಯಾಗಿ ಕೊಡುವ ಚಿನ್ನವನ್ನೂ ನೀಲಿ ಧೂಮ್ರರಕ್ತವರ್ಣಗಳುಳ್ಳ ದಾರವನ್ನೂ ನಾರಿನ ಬಟ್ಟೆಯನ್ನೂ ಆ ಕೆಲಸಕ್ಕಾಗಿ ಉಪಯೋಗಿಸಬೇಕು.
6
ಏಫೋದೆಂಬ ಮಹಾಯಾಜಕ ಕವಚವನ್ನು ಹುರಿನಾರಿನ ಬಟ್ಟೆಯಿಂದ ಮಾಡಿಸಿ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಬುಟೇದಾರೀ ಕೆಲಸದವರ ಕೈಯಿಂದ ಅಲಂಕರಿಸಬೇಕು.
7
ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳು ಇರಬೇಕು. ಅದರ ಎರಡು ಕೊನೆಗಳು ಜೋಡಿಸಲ್ಪಡಬೇಕು.
8
ಕವಚದ ಮೇಲಿರುವ ವಿಚಿತ್ರವಾದ ಬುಟೇದಾರಿಯ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದ ಮಾಡಲ್ಪಟ್ಟು ಚಿನ್ನದ ದಾರದಿಂದಲೂ ನೀಲಿ ಧೂಮ್ರರಕ್ತವರ್ಣಗಳುಳ್ಳ ದಾರದಿಂದಲೂ ಅಲಂಕರಿಸಲ್ಪಡಬೇಕು.
9
ಮತ್ತು ನೀನು ಎರಡು ಗೋಮೇಧಕರತ್ನಗಳನ್ನು ತೆಗೆದುಕೊಂಡು ಅವುಗಳಲ್ಲಿ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಕೆತ್ತಿಸಬೇಕು.
10
ಒಂದು ರತ್ನದಲ್ಲಿ ಆರು ಹೆಸರುಗಳನ್ನು ಮತ್ತೊಂದು ರತ್ನದಲ್ಲಿ ವಿುಕ್ಕ ಆರು ಹೆಸರುಗಳನ್ನು ಅವರವರ ಜನನಕ್ರಮದ ಮೇರೆಗೆ ಕೆತ್ತಿಸಬೇಕು.
11
ಮುದ್ರಾರತ್ನವನ್ನು ಕೆತ್ತುವ ರೀತಿಯಲ್ಲಿ ಆ ಎರಡು ರತ್ನಗಳಲ್ಲಿ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಕೆತ್ತಿಸಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿಸಬೇಕು.
12
ಆ ಎರಡು ರತ್ನಗಳನ್ನು ಹೆಗಲಿನ ಮೇಲಿರುವ ಕವಚದ ಪಟ್ಟಿಗಳಲ್ಲಿ ಬಿಗಿಸಬೇಕು. ಅವು ಇಸ್ರಾಯೇಲ್ಯರ ಜ್ಞಾಪಕಾರ್ಥವಾದ ರತ್ನಗಳಾಗಿರುವವು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗೆಲ್ಲಾ ಇಸ್ರಾಯೇಲ್ಯರ ಕುಲಗಳ ಹೆಸರುಗಳನ್ನು ಆತನ ನೆನಪಿಗೆ ತರುವದಕ್ಕಾಗಿ ತನ್ನ ಎರಡು ಭುಜಗಳ ಮೇಲೆ ಧರಿಸಿಕೊಂಡು ಹೋಗುವನು.
13
[ಆ ರತ್ನಗಳನ್ನು ಖಚಿಸಿಡುವದಕ್ಕೆ] ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು.
14
ಅದಲ್ಲದೆ ಹೆಣಿಗೆ ಕೆಲಸದಿಂದ ಹುರಿಗಳಂತಿರುವ ಎರಡು ಚೊಕ್ಕಬಂಗಾರದ ಸರಪಣಿಗಳನ್ನು ಮಾಡಿಸಿ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು.
15
ಮತ್ತು ದೈವನಿರ್ಣಯದ ಚೀಲದ ಪದಕವನ್ನು ಬುಟೇದಾರಿ ಕೆಲಸದಿಂದ ಮಾಡಿಸಬೇಕು. ಅದನ್ನು ಕವಚದ ಕೆಲಸದಂತೆಯೆ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಮಾಡಿಸಬೇಕು.
16
ಅದು ಒಂದು ಗೇಣುದ್ದವಾಗಿಯೂ ಒಂದು ಗೇಣಗಲವಾಗಿಯೂ ಎರಡು ಪದರುಳ್ಳದ್ದಾಗಿ ಚಚ್ಚೌಕವಾಗಿರಬೇಕು;
17
ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ಜವೆಯ ಕಲ್ಲಿಗಳಲ್ಲಿ ರತ್ನಗಳನ್ನು ಸೇರಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ ಪುಷ್ಯರಾಗ ಸ್ಫಟಿಕಗಳನ್ನೂ;
18
ಎರಡನೆಯ ಸಾಲಿನಲ್ಲಿ ಕೆಂಪರಲು ನೀಲ ಪಚ್ಚೆಗಳನ್ನೂ;
19
ಮೂರನೆಯ ಸಾಲಿನಲ್ಲಿ ಸುವರ್ಣರತ್ನ ಗೋಮೇಧಕ ಧೂಮ್ರಮಣಿಗಳನ್ನೂ;
20
ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಬೆರುಲ್ಲ ವೈಡೂರ್ಯಗಳನ್ನೂ ಚಿನ್ನದ ಜವೆಯ ಕಲ್ಲಿಗಳಲ್ಲಿ ಸೇರಿಸಬೇಕು.
21
ಇಸ್ರಾಯೇಲ್ಯರ ಕುಲಗಳ ಸಂಖ್ಯಾಪ್ರಕಾರ ಹನ್ನೆರಡು ರತ್ನಗಳಿರಬೇಕು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.
22
ಅದಲ್ಲದೆ ಆ ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿಸಿಡಬೇಕು.
23
ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಪದಕದ ಎರಡು ಮೂಲೆಗಳಿಗೆ ಹಚ್ಚಬೇಕು.
24
ಆ ಎರಡು ಸರಪಣಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಸಿಕ್ಕಿಸಬೇಕು.
25
ಆ ಸರಪಣಿಗಳ ಕೊನೆಗಳನ್ನು ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಬೇಕು.
26
ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಡಿಸಬೇಕು.
27
ಮತ್ತು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ, ಆ ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಬೇಕು.
28
ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು.
29
ದೈವನಿರ್ಣಯದ ಪದಕದ ಮೇಲೆ ಇಸ್ರಾಯೇಲ್ಯರ ಕುಲಗಳ ಹೆಸರುಗಳು ಬರೆದಿರುವದರಿಂದ ಆರೋನನು ಪವಿತ್ರಸ್ಥಾನದೊಳಗೆ ಹೋಗುವಾಗೆಲ್ಲಾ ಆ ಹೆಸರುಗಳನ್ನು ನಿತ್ಯವಾಗಿ ಯೆಹೋವನ ನೆನಪಿಗೆ ತರುವದಕ್ಕಾಗಿ ತನ್ನ ಹೃದಯದ ಮೇಲೆ ವಹಿಸುವನು.
30
ದೈವನಿರ್ಣಯವನ್ನು ತಿಳಿಸುವ ಊರೀಮ್ ತುಮ್ಮೀಮ್ ಎಂಬ ವಸ್ತುಗಳನ್ನು ಆ ಚೀಲದ ಪದಕದಲ್ಲಿ ಇಡಬೇಕು. ಆರೋನನು ಯೆಹೋವನ ಸನ್ನಿಧಿಗೆ ಹೋಗುವಾಗ ಅವು ಅವನ ಎದೆಯ ಮೇಲೆ ಇರುವವು. ಇಸ್ರಾಯೇಲ್ಯರು ಕೈಕೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಯೆಹೋವನ ಸನ್ನಿಧಿಯಲ್ಲಿ ಯಾವಾಗಲೂ ಧರಿಸಿಕೊಂಡಿರುವನು.
31
ಮಹಾಯಾಜಕನು ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀನು ನೀಲಿಬಣ್ಣದ ಬಟ್ಟೆಯಿಂದಲೇ ಮಾಡಿಸಬೇಕು.
32
ತಲೆದೂರಿಸುವದಕ್ಕೆ ಅದರಲ್ಲಿ ಸಂದು ಇರಬೇಕು. ಅದು ಹರಿಯದಂತೆ ಯುದ್ಧದ ಕವಚದೋಪಾದಿಯಲ್ಲಿ ಆ ಸಂದಿನ ಸುತ್ತಲು ನೇಯಿಗೇ ಕಸೂತಿಯನ್ನು ಹಾಕಿಸಬೇಕು.
33
ಮೇಲಂಗಿಯ ಅಂಚಿನ ಸುತ್ತಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣಿನಂತೆ ಚಂಡುಗಳನ್ನೂ ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನೂ ತಗಲಿಸಬೇಕು.
34
ಚಿನ್ನದ ಗೆಜ್ಜೆಯೂ ದಾಳಿಂಬದಂತಿರುವ ಚಂಡೂ ಒಂದಾದ ಮೇಲೆ ಒಂದು ಆ ಮೇಲಂಗಿಯ ಅಂಚಿನ ಸುತ್ತಲೂ ಇರಬೇಕು.
35
ಆರೋನನು ಸೇವೆಮಾಡುವ ಸಮಯದಲ್ಲಿ ಅದನ್ನು ಧರಿಸಿಕೊಳ್ಳಬೇಕು. ಅವನು ಯೆಹೋವನ ಸನ್ನಿಧಿಗೆ ಪವಿತ್ರಸ್ಥಾನದೊಳಗೆ ಹೋಗುವಾಗಲೂ ಬರುವಾಗಲೂ ಸಾಯದ ಹಾಗೆ ಆ ಗೆಜ್ಜೆಗಳ ಶಬ್ದವು ಕೇಳಿಸಬೇಕು.
36
ಚೊಕ್ಕಬಂಗಾರದ ಪಟ್ಟವನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಾಗಿ ಅದರಲ್ಲಿ ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಕೆತ್ತಿಸಬೇಕು.
37
ಅದನ್ನು ಮುಂಡಾಸಕ್ಕೆ ಬಿಗಿಯುವದಕ್ಕಾಗಿ ನೀಲಿದಾರವನ್ನು ಅದಕ್ಕೆ ಕಟ್ಟಿಸಬೇಕು; ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು.
38
ಇಸ್ರಾಯೇಲ್ಯರು ಕಾಣಿಕೆಯಗಿ ಸಮರ್ಪಿಸುವ ದೇವರ ಎಲ್ಲಾ ವಸ್ತುಗಳ ವಿಷಯದಲ್ಲಿ ದೋಷವೇನಾದರೂ ಇದ್ದರೆ ಆರೋನನು ಆ ಪಟ್ಟವನ್ನು ಯಾವಾಗಲೂ ಹಣೆಯ ಮೇಲೆ ಧರಿಸಿ ಆ ದೋಷವನ್ನು ವಹಿಸಿಕೊಂಡದರಿಂದ ಅವರು ಯೆಹೋವನ ಸನ್ನಿಧಿಯಲ್ಲಿ ಅಂಗೀಕರಿಸಲ್ಪಡುವರು.
39
ಆರೋನನು ಧರಿಸಬೇಕಾದ ನಿಲುವಂಗಿಯನ್ನು ನಾರಿನಿಂದ ವಿಚಿತ್ರವಾಗಿ ನೇಯಿಸಬೇಕು; ಅವನ ಮುಂಡಾಸವನ್ನು ನಾರಿನಿಂದ ಮಾಡಿಸಬೇಕು; ಅವನ ನಡುಕಟ್ಟನ್ನು ಬುಟೇದಾರಿ ಕೆಲಸದಿಂದ ಮಾಡಿಸಬೇಕು.
40
ಆರೋನನ ಮಕ್ಕಳಿಗೆ ತಕ್ಕ ಗೌರವವೂ ಅಲಂಕಾರವೂ ಉಂಟಾಗುವಂತೆ ಅವರಿಗೆ ನಿಲುವಂಗಿಗಳನ್ನೂ ನಡುಕಟ್ಟುಗಳನ್ನೂ ಮುಂಡಾಸಗಳನ್ನೂ ಮಾಡಿಸಬೇಕು.
41
ಆ ವಸ್ತ್ರಗಳನ್ನು ನಿನ್ನ ಅಣ್ಣನಾದ ಆರೋನನಿಗೂ ಅವನ ಮಕ್ಕಳಿಗೂ ತೊಡಿಸಿ ಅವರನ್ನು ಅಭಿಷೇಕಿಸಿ ಉದ್ಯೋಗಕ್ಕೆ ಸೇರಿಸಿ ಪ್ರತಿಷ್ಠಿಸಬೇಕು; ಆಗ ಅವರು ನನಗೆ ಯಾಜಕರಾಗಿರುವರು.
42
ಅದಲ್ಲದೆ ಅವರ ರಹಸ್ಯಾಂಗವು ಕಾಣಿಸದಂತೆ ಸೊಂಟದಿಂದ ತೊಡೆಯ ತನಕ ಇರುವ ನಾರಿನ ಚಡ್ಡಿಗಳನ್ನು ಮಾಡಿಸಬೇಕು.
43
ಆರೋನನೂ ಅವನ ಮಕ್ಕಳೂ ದೇವದರ್ಶನದ ಗುಡಾರದೊಳಗೆ ಹೋಗುವಾಗಲೂ ಪವಿತ್ರಸ್ಥಾನದಲ್ಲಿ ಸೇವೆಮಾಡುವದಕ್ಕೆ ಯಜ್ಞವೇದಿಯ ಹತ್ತಿರಕ್ಕೆ ಬರುವಾಗಲೂ ಇವುಗಳನ್ನು ಹಾಕಿಕೊಂಡಿರಬೇಕು. ಇಲ್ಲವಾದರೆ ಅವರು ಆ ಅಪರಾಧದ ಫಲವನ್ನು ಅನುಭವಿಸಿ ಸತ್ತಾರು. ಅವನಿಗೂ ಅವನ ವಂಶಸ್ಥರಿಗೂ ಇದು ಶಾಶ್ವತವಾದ ನಿಯಮ.
← Chapter 27
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 29 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40