bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Exodus 39
Exodus 39
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 38
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 40 →
1
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಆ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದೇವಮಂದಿರದ ಸೇವೆಗೆ ಅಲಂಕಾರವಾದ ವಸ್ತ್ರಗಳನ್ನೂ ಆರೋನನಿಗೆ ದೀಕ್ಷಾವಸ್ತ್ರಗಳನ್ನೂ ಮಾಡಿದರು.
2
ಮಹಾಯಾಜಕನ ಎಫೋದೆಂಬ ಕವಚವನ್ನು ಹುರಿನಾರಿನ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಮಾಡಿದನು.
3
ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದೊಡನೆಯೂ ನಾರಿನ ಬಟ್ಟೆಯೊಡನೆಯೂ ವಿಚಿತ್ರವಾದ [ಕಸೂತಿ] ಕೆಲಸದವರ ಪದ್ಧತಿಯ ಮೇರೆಗೆ ಬುಟೇದಾರಿಯ ಕೆಲಸವನ್ನು ಮಾಡುವದಕ್ಕಾಗಿ ಬಂಗಾರವನ್ನು ಹೊಡೆದು ತಗಡುಗಳನ್ನು ಮಾಡಿ ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು.
4
ಆ ಕವಚಕ್ಕೆ ಹೆಗಲಿನ ಮೇಲೆ ಎರಡು ಪಟ್ಟಿಗಳನ್ನು ಮಾಡಿದರು; ಅದರ ಎರಡು ಕೊನೆಗಳು ಜೋಡಿಸಲ್ಪಟ್ಟವು.
5
ಕವಚದ ಮೇಲಿರುವ ವಿಚಿತ್ರವಾದ ಬುಟೇದಾರಿಯ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ಹುರಿನಾರಿನ ಬಟ್ಟೆಯಿಂದಲೂ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಉಂಟಾಗಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
6
ಮುದ್ರಾರತ್ನವನ್ನು ಕೆತ್ತುವ ರೀತಿಯಲ್ಲಿ [ಎರಡು] ಗೋಮೇಧಕರತ್ನಗಳಲ್ಲಿ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳನ್ನು ಕೆತ್ತಿ ಆ ರತ್ನಗಳನ್ನು ಕುಂದಣದಲ್ಲಿ ಕಟ್ಟಿದರು.
7
ಆ ಎರಡು ರತ್ನಗಳು ಇಸ್ರಾಯೇಲ್ಯರ ಜ್ಞಾಪಕಾರ್ಥವಾದ ರತ್ನಗಳಾಗುವಂತೆ ಅವುಗಳನ್ನು ಕವಚದ ಹೆಗಲಿನ ಮೇಲಿರುವ ಪಟ್ಟಿಗಳಲ್ಲಿ ಬಿಗಿಸಿದನು. ಯೆಹೋವನು ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದನು.
8
ಕವಚದಂತೆಯೇ ಬುಟೇದಾರಿಯ ಕೆಲಸದಿಂದ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಹುರಿನಾರಿನ ಬಟ್ಟೆಯಲ್ಲಿ ಚೀಲದ ಪದಕವನ್ನು ಮಾಡಿದನು.
9
ಅದು ಚಚ್ಚೌಕವಾಗಿತ್ತು. ಆ ಚೀಲದ ಪದಕವು ಎರಡು ಪದರುಳ್ಳದ್ದಾಗಿತ್ತು; ಅದು ಒಂದು ಗೇಣುದ್ದವೂ ಒಂದು ಗೇಣಗಲವೂ ಆಗಿತ್ತು.
10
ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ರಚಿಸಿದರು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ ಪುಷ್ಯರಾಗ ಸ್ಫಟಿಕಗಳೂ,
11
ಎರಡನೆಯ ಸಾಲಿನಲ್ಲಿ ಕೆಂಪರಲು ನೀಲ ಪಚ್ಚೆಗಳೂ,
12
ಮೂರನೆಯ ಸಾಲಿನಲ್ಲಿ ಸುವರ್ಣರತ್ನ ಗೋಮೇಧಕ ಧೂಮ್ರಮಣಿಗಳೂ,
13
ನಾಲ್ಕನೆಯ ಸಾಲಿನಲ್ಲಿ ಪೀತರತ್ನ ಬೆರುಲ್ಲ ವೈಡೂರ್ಯಗಳೂ ಚಿನ್ನದ ಜವೆಯ ಕಲ್ಲಿಗಳಲ್ಲಿ ಸೇರಿಸಲ್ಪಟ್ಟವು.
14
ಇಸ್ರಾಯೇಲ್ಯರ ಕುಲಗಳ ಸಂಖ್ಯೆಯ ಪ್ರಕಾರ ಹನ್ನೆರಡು ರತ್ನಗಳಿದ್ದವು; ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರು ಕೆತ್ತಲ್ಪಟ್ಟಿತು.
15
ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿದರು.
16
ಎರಡು ಚಿನ್ನದ ಜವೆಗಳನ್ನೂ ಎರಡು ಚಿನ್ನದ ಉಂಗುರಗಳನ್ನೂ ಮಾಡಿ ಆ ಉಂಗುರಗಳನ್ನು ಪದಕದ ಎರಡು ಮೂಲೆಗಳಿಗೆ ತಗಲಿಸಿದರು.
17
ಹೆಣಿಗೇ ಕೆಲಸದ ಆ ಎರಡು ಚಿನ್ನದ ಸರಪಣಿಗಳನ್ನು ಪದಕದ ಮೂಲೆಗಳಲ್ಲಿರುವ ಉಂಗುರಗಳಿಗೆ ಸಿಕ್ಕಿಸಿದರು.
18
ಹೆಣಿಗೇಕೆಲಸದ ಆ ಸರಪಣಿಗಳ ಕೊನೆಗಳನ್ನು ಕವಚದ ಹೆಗಲಿನ ಪಟ್ಟಿಗಳಲ್ಲಿರುವ ಎರಡು ಜವೆಗಳ ಮುಂಭಾಗಕ್ಕೆ ಸಿಕ್ಕಿಸಿದರು.
19
ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಟ್ಟರು.
20
ಮತ್ತು ಬೇರೆ ಎರಡು ಚಿನ್ನದ ಉಂಗುರಗಳನ್ನು ಮಾಡಿ ಕವಚದ ಎರಡು ಹೆಗಲಿನ ಪಟ್ಟಿಗಳ ಮುಂಭಾಗದ ಕೆಳಗೆ, ಕವಚವನ್ನು ಜೋಡಿಸಿರುವ ಸ್ಥಳದ ಹತ್ತಿರ ಆ ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಇರಿಸಿದರು.
21
ಪದಕವು ವಿಚಿತ್ರವಾದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ ಕವಚದಿಂದ ಕಳಚಿಬೀಳದಂತೆಯೂ ಅದರ ಉಂಗುರಗಳನ್ನು ಕವಚದ ಉಂಗುರಗಳಿಗೆ ನೀಲಿದಾರದಿಂದ ಕಟ್ಟಿದರು. ಯೆಹೋವನು ಮೋಶೆಗೆ ಹಾಗೆಯೇ ಆಜ್ಞಾಪಿಸಿದ್ದನು.
22
ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ಮೇಲಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇತ ಕೆಲಸದಿಂದ ಮಾಡಿದನು.
23
[ತಲೆದೂರಿಸುವದಕ್ಕೆ] ಅದರಲ್ಲಿ ಸಂದು ಮಾಡಿ ಅದು ಹರಿಯದಂತೆ ಯುದ್ಧದ ಕವಚದೋಪಾದಿಯಲ್ಲಿ ಆ ಸಂದಿನ ಸುತ್ತಲು ನೇಯಿಗೇ ಕಸೂತಿಯನ್ನು ಹಾಕಿದನು.
24
ಮೇಲಂಗಿಯ ಅಂಚಿನ ಸುತ್ತಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣಿನಂತೆ ಚಂಡುಗಳನ್ನು ಮಾಡಿದರು.
25
ಮತ್ತು ಚೊಕ್ಕಬಂಗಾರದಿಂದ ಗೆಜ್ಜೆಗಳನ್ನು ಮಾಡಿ ಮೇಲಂಗಿಯ ಅಂಚಿನಲ್ಲಿ ದಾಳಿಂಬ ಚಂಡುಗಳ ಸಂಗಡ ಇಟ್ಟರು.
26
ಚಿನ್ನದ ಗೆಜ್ಜೆಯೂ ದಾಳಿಂಬದಂತಿರುವ ಚಂಡೂ ಒಂದಾದ ಮೇಲೆ ಒಂದು ದೇವರ ಸೇವೆಗೋಸ್ಕರವಾದ ಆ ಮೇಲಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.
27
ಆರೋನನಿಗೂ ಅವನ ಮಕ್ಕಳಿಗೂ ಸಣ್ಣ ನಾರಿನಿಂದ ಹೆಣಿಗೇಕೆಲಸದ ರೀತಿಯಲ್ಲಿ ಅಂಗಿಗಳನ್ನೂ
28
ನಾರಿನಿಂದ ಮಹಾಯಾಜಕನ ಮುಂಡಾಸವನ್ನೂ ನಾರಿನಿಂದ ಯಾಜಕರ ಅಲಂಕಾರವಾದ ಮುಂಡಾಸಗಳನ್ನೂ
29
ಹುರಿನಾರಿನಿಂದ ಚಡ್ಡಿಗಳನ್ನೂ ಹುರಿನಾರಿನಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಬುಟೇದಾರೀ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
30
ಮತ್ತು ಚೊಕ್ಕಬಂಗಾರದಿಂದ ಪರಿಶುದ್ಧ ಕಿರೀಟವಾಗಿರುವ ಪಟ್ಟವನ್ನು ಮಾಡಿ ಮುದ್ರೆಯನ್ನು ಕೆತ್ತುವ ರೀತಿಯಲ್ಲಿ ಅದರಲ್ಲಿ - ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಬರೆದರು.
31
ಅದನ್ನು ಮುಂಡಾಸಕ್ಕೆ ಬಿಗಿಸುವದಕ್ಕಾಗಿ ನೀಲಿದಾರವನ್ನು ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.
32
ಈ ರೀತಿಯಲ್ಲಿ ದೇವದರ್ಶನದ ಗುಡಾರದ ಕೆಲಸವೆಲ್ಲಾ ಸಂಪೂರ್ತಿಯಾಯಿತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಅದನ್ನು ಮಾಡಿದ್ದರು.
33
ಆಗ ಅವರು ಆ ಗುಡಾರವನ್ನು ಮೋಶೆಯ ಬಳಿಗೆ ತೆಗೆದುಕೊಂಡು ಬಂದರು. ಏನಂದರೆ - ಡೇರೆಯನ್ನೂ ಅದಕ್ಕೆ ಸಂಬಂಧಪಟ್ಟದ್ದೆಲ್ಲವನ್ನೂ ಅಂದರೆ ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ;
34
ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳಿಂದುಂಟಾದ ಮೇಲ್ಹೊದಿಕೆಯು, ಕಡಲು ಹಂದಿಯ ತೊಗಲುಗಳಿಂದುಂಟಾದ ಮೇಲ್ಹೊದಿಕೆಯು, [ಮಹಾಪವಿತ್ರಸ್ಥಾನವನ್ನು] ಮರೆಮಾಡುವ ತೆರೆಯು ಇವುಗಳನ್ನೂ;
35
ಆಜ್ಞಾಶಾಸನಗಳ ಮಂಜೂಷವು, ಅದರ ಕೋಲುಗಳು, ಕೃಪಾಸನವು ಇವುಗಳನ್ನೂ;
36
ಮೇಜು, ಅದರ ಎಲ್ಲಾ ಉಪಕರಣಗಳು, ನೈವೇದ್ಯದ ರೊಟ್ಟಿ ಇವುಗಳನ್ನೂ;
37
ಚೊಕ್ಕಬಂಗಾರದ ದೀಪಸ್ತಂಭವು, ಅದರ ಮೇಲಿಡಬೇಕಾದ ಹಣತೆಗಳು, ಅದರ ಉಪಕರಣಗಳು, ದೀಪಕ್ಕೆ ಬೇಕಾದ ಎಣ್ಣೆಯು ಇವುಗಳನ್ನೂ;
38
ಚಿನ್ನದ ಧೂಪವೇದಿಯು, ಅಭಿಷೇಕತೈಲವು, ಸುವಾಸನೆಯುಳ್ಳ ಧೂಪವು ಇವುಗಳನ್ನೂ;
39
ಡೇರೆಯ ಬಾಗಲಿನ ಪರದೆಯನ್ನೂ; ತಾಮ್ರದ ಯಜ್ಞವೇದಿಯು, ಅದರ ತಾಮ್ರದ ಜಾಳಿಗೆಯು, ಅದರ ಕೋಲುಗಳು, ಉಪಕರಣಗಳು ಇವುಗಳನ್ನೂ; ಗಂಗಾಳವು, ಅದರ ಪೀಠವು ಇವುಗಳನ್ನೂ;
40
ಅಂಗಳದ ತೆರೆಗಳು, ಕಂಬಗಳು, ಗದ್ದಿಗೇಕಲ್ಲುಗಳು ಇವುಗಳನ್ನೂ; ಅಂಗಳದ ಬಾಗಲಿನ ಪರದೆಯು, ಅದರ ಹಗ್ಗಗಳು, ಗೂಟಗಳು ಇವುಗಳನ್ನೂ; ದೇವದರ್ಶನದ ಗುಡಾರದ ಸೇವೆಗೆ ಬೇಕಾದ ಎಲ್ಲಾ ಉಪಕರಣಗಳನ್ನೂ;
41
ದೇವಮಂದಿರದೊಳಗೆ ನಡೆಯುವ ಸೇವೆಗೋಸ್ಕರ ಬೇಕಾದ ಅಲಂಕಾರವಸ್ತ್ರ ಅಂದರೆ ಆರೋನನಿಗೆ ಬೇಕಾದ ದೀಕ್ಷಾವಸ್ತ್ರ ಯಾಜಕಸೇವೆ ಮಾಡುವವರಾದ ಅವನ ಮಕ್ಕಳಿಗೆ ಬೇಕಾದ ವಸ್ತ್ರ ಇವುಗಳನ್ನೂ ತಂದರು.
42
ಯೆಹೋವನು ಮೋಶೆಗೆ ಆಜ್ಞಾಪಿಸಿದ್ದಂತೆಯೇ ಇಸ್ರಾಯೇಲ್ಯರು ಆ ಕೆಲಸವನ್ನೆಲ್ಲಾ ಮಾಡಿದ್ದರು.
43
ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳುಕೊಂಡು ಅವರನ್ನು ಆಶೀರ್ವದಿಸಿದನು.
← Chapter 38
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 40 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40