bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Ezekiel 20
Ezekiel 20
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 21 →
1
[ಯೆಹೋಯಾಖೀನನು ಸೆರೆಯಾದ] ಏಳನೆಯ ವರುಷದ ಐದನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ಯೆಹೋವನನ್ನು ಪ್ರಶ್ನೆಕೇಳುವದಕ್ಕೆ ಬಂದು ನನ್ನ ಮುಂದೆ ಕೂತುಕೊಂಡರು.
2
ಆಗ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -
3
ನರಪುತ್ರನೇ, ಇಸ್ರಾಯೇಲಿನ ಹಿರಿಯರನ್ನು ಸಂಬೋಧಿಸಿ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನನ್ನು ಪ್ರಶ್ನೆಕೇಳುವದಕ್ಕೆ ಬಂದಿರೊ? ನನ್ನ ಜೀವದಾಣೆ, ನಾನು ನಿಮಗೆ ಉತ್ತರಕೊಡುವದೇ ಇಲ್ಲ; ಇದು ಕರ್ತನಾದ ಯೆಹೋವನ ನುಡಿ.
4
ನರಪುತ್ರನೇ, ಇವರಿಗೆ ನ್ಯಾಯತೀರಿಸಲು ನಿನ್ನ ಮನಸ್ಸು ಸ್ಥಿರವೋ, ಸ್ಥಿರವಾಗಿದೆಯೋ? ಇವರ ಪಿತೃಗಳ ದುರಾಚಾರಗಳನ್ನು ಇವರಿಗೆ ಹೀಗೆ ತಿಳಿಸು -
5
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ದಿವಸದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು ಯಾಕೋಬ ಸಂತಾನದವರಿಗೆ ಮಾತುಕೊಟ್ಟು ನಾನು ನಿಮ್ಮ ದೇವರಾದ ಯೆಹೋವನು ಎಂದು ಐಗುಪ್ತ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆನೋ ಆ ದಿವಸದಲ್ಲಿ ನಾನು ಅವರಿಗೆ -
6
ಸಕಲದೇಶ ಶಿರೋಮಣಿಯಾದ ದೇಶವನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಐಗುಪ್ತದೇಶದೊಳಗಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ಸೇರಿಸುವೆನು ಎಂದು ಪ್ರಮಾಣಮಾಡಿ
7
ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಟುಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂಬದಾಗಿ ಅವರನ್ನು ಎಚ್ಚರಿಸಿದೆನು.
8
ಅವರಾದರೋ ನನ್ನ ಮಾತನ್ನು ಕೇಳಲೊಲ್ಲದೆ ನನ್ನ ಮೇಲೆ ತಿರುಗಿಬಿದ್ದರು; ತಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಯಾರೂ ಬಿಸಾಟುಬಿಡಲಿಲ್ಲ. ಐಗುಪ್ತದ ವಿಗ್ರಹಗಳನ್ನು ತ್ಯಜಿಸಲಿಲ್ಲ; ಆಗ ನಾನು ಇವರ ಮೇಲೆ ಐಗುಪ್ತದೇಶದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.
9
ಆದರೂ ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡುವೆನು ಎಂಬದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.
10
ಆಗ ನಾನು ಅವರನ್ನು ಐಗುಪ್ತದೇಶದೊಳಗಿಂದ ಬಿಡಿಸಿ ಅರಣ್ಯಕ್ಕೆ ಕರತರಲು
11
ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅವರಿಗೆ ತಿಳಿಸಿಕೊಟ್ಟೆನು.
12
ಇದಲ್ಲದೆ ತಮ್ಮನ್ನು ದೇವಜನರನ್ನಾಗಿ ಮಾಡಿರುವ ಯೆಹೋವನು ನಾನೇ ಎಂದು ಅವರು ತಿಳುಕೊಳ್ಳುವಂತೆ ನನಗೂ ಅವರಿಗೂ ಗುರುತಾದ ಸಬ್ಬತ್ ದಿನಗಳನ್ನು ಅವರಿಗೆ ನೇವಿುಸಿದೆನು.
13
ಆದರೆ ಇಸ್ರಾಯೇಲ್ ವಂಶದವರು ಅರಣ್ಯದಲ್ಲಿ ನನ್ನ ಮೇಲೆ ತಿರುಗಿಬಿದ್ದರು. ಕೈಕೊಳ್ಳುವವರಿಗೆ ಜೀವಾಧಾರವಾದ ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿದರು, ನಾನು ನೇವಿುಸಿದ ಸಬ್ಬತ್ ದಿನಗಳನ್ನು ವಿಶೇಷವಾಗಿ ಹೊಲೆಮಾಡಿದರು; ಆಗ ನಾನು ಅವರ ಮೇಲೆ ಅರಣ್ಯದೊಳಗೆ ನನ್ನ ರೋಷಾಗ್ನಿಯನ್ನು ಸುರಿಸಿ ಇವರನ್ನು ಧ್ವಂಸಮಾಡುವೆನು ಅಂದುಕೊಂಡೆನು.
14
ಆದರೂ ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.
15
ಆಮೇಲೆ ಸಕಲದೇಶಶಿರೋಮಣಿಯಾದ ಯಾವ ದೇಶವನ್ನು ಅವರಿಗೆ ವಾಗ್ದಾನ ಮಾಡಿದೆನೋ ಹಾಲೂ ಜೇನೂ ಹರಿಯುವ ಆ ದೇಶಕ್ಕೆ ನಿಮ್ಮನ್ನು ಸೇರಿಸೆನೆಂದು ಅರಣ್ಯದಲ್ಲಿ ಅವರಿಗೆ ಪ್ರಮಾಣ ಮಾಡಿದೆನು;
16
ಏಕಂದರೆ ಅವರ ಹೃದಯವು ತಮ್ಮ ವಿಗ್ರಹಗಳಲ್ಲಿ ಆಸಕ್ತವಾಗಿ ಅವರು ನನ್ನ ಆಜ್ಞಾವಿಧಿಗಳನ್ನು ಅನುಸರಿಸದೆ ನಿರಾಕರಿಸಿ ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆ ಮಾಡಿದವರಾಗಿದ್ದರು.
17
ಆದರೂ ನಾನು ಅವರನ್ನು ನಾಶಮಾಡದ ಹಾಗೆ ನನ್ನ ಕಟಾಕ್ಷವು ಅವರನ್ನು ಉಳಿಸಿತು; ನಾನು ಅವರನ್ನು ಅರಣ್ಯದಲ್ಲಿ ನಿರ್ಮೂಲಮಾಡಲಿಲ್ಲ.
18
ಆಮೇಲೆ ನಾನು ಅರಣ್ಯದಲ್ಲಿ ಅವರ ಸಂತಾನದವರಿಗೆ - ನೀವು ನಿಮ್ಮ ತಂದೆಗಳ ಆಜ್ಞೆಗಳನ್ನು ಅನುಸರಿಸದೆ ಅವರ ವಿಧಿಗಳನ್ನು ಕೈಕೊಳ್ಳದೆ ಅವರ ಬೊಂಬೆಗಳಿಂದ ನಿಮ್ಮನ್ನು ಹೊಲಸುಮಾಡಿಕೊಳ್ಳದೆ ಇರಬೇಕು;
19
ನಾನು ನಿಮ್ಮ ದೇವರಾದ ಯೆಹೋವನು; ನೀವು ನನ್ನ ಆಜ್ಞೆಗಳನ್ನು ಅನುಸರಿಸಿ ನನ್ನ ವಿಧಿಗಳನ್ನು ಕೈಕೊಂಡು ನಡಿಸಿರಿ;
20
ನಾನು ನೇವಿುಸಿದ ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂದು ನೀವು ತಿಳುಕೊಳ್ಳುವಂತೆ ಅವು ನಿಮಗೂ ನನಗೂ ಗುರುತಾಗಿರುವವು ಎಂದು ಹೇಳಿದೆನು.
21
ಆ ಸಂತಾನದವರಾದರೋ ನನ್ನ ಮೇಲೆ ತಿರುಗಿಬಿದ್ದರು; ನನ್ನ ಆಜ್ಞೆಗಳನ್ನು ಅನುಸರಿಸಲಿಲ್ಲ; ಕೈಕೊಂಡವರಿಗೆ ಜೀವಾಧಾರವಾದ ನನ್ನ ವಿಧಿಗಳನ್ನು ಕೈಕೊಂಡು ನಡಿಸಲಿಲ್ಲ; ನಾನು ನೇವಿುಸಿದ ಸಬ್ಬತ್ ದಿನಗಳನ್ನು ಹೊಲೆಮಾಡಿದರು; ಆದದರಿಂದ ನಾನು ಅರಣ್ಯದಲ್ಲಿ ಇವರ ಮೇಲೆ ನನ್ನ ರೋಷಾಗ್ನಿಯನ್ನು ಸುರಿಸಿ ನನ್ನ ಕೋಪವನ್ನು ತೀರಿಸಿಕೊಳ್ಳುವೆನು ಅಂದುಕೊಂಡೆನು.
22
ಆದರೂ ನಾನು ಯಾವ ಜನಾಂಗಗಳ ಮುಂದೆ ಅವರನ್ನು ಪಾರುಮಾಡಿದೆನೋ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗಬಾರದೆಂದು ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡು ಕೈಯನ್ನು ಹಿಂದಕ್ಕೆ ತೆಗೆದುಕೊಂಡೆನು.
23
ಆಮೇಲೆ ಅವರು ನನ್ನ ಆಜ್ಞೆಗಳನ್ನು ಕೈಕೊಳ್ಳದೆ ನನ್ನ ವಿಧಿಗಳನ್ನು ನಿರಾಕರಿಸಿ ನಾನು ನೇವಿುಸಿದ ಸಬ್ಬತ್ದಿನಗಳನ್ನು ಹೊಲೆಮಾಡಿ ತಮ್ಮ ಪಿತೃಗಳ ಬೊಂಬೆಗಳ ಮೇಲೆ ಕಣ್ಣುಹಾಕಿದ್ದರಿಂದ
24
ನಾನು ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ ದೇಶದೇಶಗಳಿಗೆ ತೂರಿಬಿಡುವೆನು ಎಂದು ಅರಣ್ಯದಲ್ಲಿ ಅವರಿಗೆ ಪ್ರಮಾಣಮಾಡಿದೆನು.
25
ಇದಲ್ಲದೆ ನಾನೇ ಯೆಹೋವನು ಎಂದು ಅವರು ತಿಳುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ಆಜ್ಞೆಗಳನ್ನೂ ಜೀವಾಧಾರವಲ್ಲದ ವಿಧಿಗಳನ್ನೂ ನೇವಿುಸಿ
26
ಅವರು ತಮ್ಮ ಚೊಚ್ಚಲು ಮಕ್ಕಳನ್ನು ಆಹುತಿಕೊಟ್ಟು ಅರ್ಪಿಸುತ್ತಿದ್ದ ಬಲಿಗಳಿಂದಲೇ ಅವರನ್ನು ಹೊಲೆಗೆಡಿಸಿ ಕೇವಲ ದುರವಸ್ಥೆಗೆ ತಂದೆನು.
27
ಹೀಗಿರಲು, ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಈ ಮಾತನ್ನು ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳು ಇನ್ನೂ ಒಂದು ದ್ರೋಹವನ್ನು ಮಾಡಿ ನನ್ನನ್ನು ದೂಷಿಸಿದ್ದಾರೆ.
28
ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.
29
ನೀವು ಹೋಗುವ ಬಾ-ಮಾ [ಎಂಬ ಪೂಜಾಸ್ಥಾನ] ಏನು ಸ್ಥಾನ? (ಇಂದಿನವರೆಗೂ ಇಂಥಾ ಪೂಜಾಸ್ಥಾನಗಳಿಗೆ ಬಾಮಾ ಎಂಬದು ಹೆಸರು).
30
ಇಸ್ರಾಯೇಲ್ ವಂಶದವರಿಗೆ ಹೀಗೆ ಹೇಳು - ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಿಮ್ಮ ಪಿತೃಗಳಂತೆ ನಿಮ್ಮನ್ನು ನೀವೇ ಹೊಲಸುಮಾಡಿಕೊಳ್ಳುತ್ತೀರೋ? ಅವರು ಪೂಜಿಸುತ್ತಿದ್ದ ಅಸಹ್ಯವಸ್ತುಗಳನ್ನು ನೀವೂ ಪೂಜಿಸಿ ದೇವದ್ರೋಹಮಾಡುತ್ತೀರೋ?
31
ನೀವು ಬಲಿಯರ್ಪಿಸುತ್ತಾ ನಿಮ್ಮ ಮಕ್ಕಳನ್ನು ಆಹುತಿಕೊಟ್ಟು ಇಂದಿನವರೆಗೂ ನಿಮ್ಮನ್ನು ಅಶುದ್ಧಮಾಡಿಕೊಳ್ಳುತ್ತಿದ್ದೀರೋ? ಇಸ್ರಾಯೇಲ್ ವಂಶದವರೇ, ನಾನು ನಿಮ್ಮಂಥವರಿಗೆ ದೈವೋತ್ತರವನ್ನು ದಯಪಾಲಿಸಬಹುದೋ? ನನ್ನ ಜೀವದಾಣೆ, ನಿಮಗೆ ದೈವೋತ್ತರವನ್ನು ದಯಪಾಲಿಸೆನು; ಇದು ಕರ್ತನಾದ ಯೆಹೋವನ ನುಡಿ.
32
ನಾವು ಜನಾಂಗಗಳಂತೆ, ಅನ್ಯದೇಶಗಳವರಂತೆ ಮರಕಲ್ಲುಗಳ ಬೊಂಬೆಗಳನ್ನು ಭಜಿಸುವೆವು ಎಂದು ನಿಮ್ಮ ಮನಸ್ಸಿನಲ್ಲಿ ಹುಟ್ಟುವ ಯೋಚನೆಯು ಎಷ್ಟುಮಾತ್ರವೂ ಸಾಗದು.
33
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮ ಮೇಲೆ ದೊರೆತನ ಮಾಡುವೆನು;
34
ಹೌದು, ನಾನು ಶಿಕ್ಷಾಹಸ್ತವನ್ನೆತ್ತಿ ಭುಜಪರಾಕ್ರಮವನ್ನು ತೋರಿಸಿ ರೋಷಾಗ್ನಿಯನ್ನು ಸುರಿಸುತ್ತಾ ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ
35
ದೇಶಗಳಿಂದ ನಿಮ್ಮನ್ನು ಕೂಡಿಸಿ ಜನಾಂಗಗಳ ಮಧ್ಯದ ಅರಣ್ಯಕ್ಕೆ ಕರತಂದು ಅಲ್ಲೇ ಮುಖಾಮುಖಿಯಾಗಿ ನಿಮ್ಮೊಂದಿಗೆ ವಾದಿಸುವೆನು.
36
ನಾನು ಐಗುಪ್ತದ ಅರಣ್ಯದಲ್ಲಿ ನಿಮ್ಮ ಪಿತೃಗಳ ಸಂಗಡ ವಾದಿಸಿದಂತೆ ನಿಮ್ಮ ಸಂಗಡಲೂ ವಾದಿಸುವೆನು; ಇದು ಕರ್ತನಾದ ಯೆಹೋವನ ನುಡಿ.
37
ನಾನು ನಿಮ್ಮನ್ನು ಲೆಕ್ಕಿಸುವಂತೆ ಕೋಲಿನ ಕೆಳಗೆ ಹೋಗಮಾಡಿ ಒಡಂಬಡಿಕೆಯ ಕಟ್ಟಿನಿಂದ ಬಂಧಿಸಿ ನನಗೆ ತಿರುಗಿಬಿದ್ದು
38
ದ್ರೋಹಿಗಳಾದವರನ್ನು ನಿಮ್ಮೊಳಗಿಂದ ಗುಡಿಸಿಬಿಡುವೆನು; ಅವರು ಪ್ರವಾಸಿಗಳಾಗಿದ್ದ ದೇಶದಿಂದ ನಾನು ಅವರನ್ನು ಪಾರುಮಾಡಿದರೂ ಅವರು ಇಸ್ರಾಯೇಲ್ ದೇಶಕ್ಕೆ ಸೇರುವದೇ ಇಲ್ಲ; ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.
39
ಇಸ್ರಾಯೇಲ್ ವಂಶದವರೇ, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಹೋಗಿರಿ, ನಿಮ್ಮ ಬೊಂಬೆಗಳನ್ನು ಸೇವಿಸಿಕೊಳ್ಳಿರಿ; ಮುಂದಂತು ನನ್ನ ಮಾತನ್ನು ಕೇಳೇ ಕೇಳುವಿರಿ, ಇನ್ನು ಮೇಲೆ ನನ್ನ ಪರಿಶುದ್ಧನಾಮವನ್ನು ನಿಮ್ಮ ಬಲಿಗಳಿಂದಲೂ ಬೊಂಬೆಗಳಿಂದಲೂ ನೀವು ಅಪಕೀರ್ತಿಗೆ ಗುರಿಮಾಡುವದೇ ಇಲ್ಲ.
40
ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ದೇಶದಲ್ಲಿ ಇಸ್ರಾಯೇಲ್ ವಂಶದವರೆಲ್ಲರೂ ನನ್ನ ಪರಿಶುದ್ಧವಾದ ಬೆಟ್ಟದಲ್ಲಿ, ಇಸ್ರಾಯೇಲಿನ ಪರ್ವತಾಗ್ರದಲ್ಲಿ ನನ್ನನ್ನು ಸೇವಿಸುವರು; ಅಲ್ಲೇ ಅವರಿಗೆ ಪ್ರಸನ್ನನಾಗುವೆನು, ಅಲ್ಲೇ ನಿಮ್ಮ ಕಾಣಿಕೆಗಳನ್ನೂ ಉತ್ತಮ ನೈವೇದ್ಯಗಳನ್ನೂ ಮೀಸಲಾದದೆಲ್ಲವನ್ನೂ ಬರಮಾಡಿಕೊಳ್ಳುವೆನು.
41
ನಾನು ನಿಮ್ಮನ್ನು ಜನಾಂಗಗಳೊಳಗಿಂದ ಪಾರುಮಾಡಿ ನೀವು ಚದರಿಹೋಗಿರುವ ದೇಶಗಳಿಂದ ತಂದು ಕೂಡಿಸುವಾಗ ನಿಮ್ಮ ಸುಗಂಧಹೋಮವನ್ನು ಆಘ್ರಾಣಿಸಿ ನಿಮಗೆ ಪ್ರಸನ್ನನಾಗುವೆನು; ಸಕಲ ಜನಾಂಗಗಳೆದುರಿಗೆ ನಿಮ್ಮ ರಕ್ಷಣೆಯ ಮೂಲಕ ನನ್ನ ಗೌರವವನ್ನು ಕಾಪಾಡಿಕೊಳ್ಳುವೆನು.
42
ನಾನು ಪ್ರಮಾಣಮಾಡಿ ನಿಮ್ಮ ಪಿತೃಗಳಿಗೆ ಯಾವ ದೇಶವನ್ನು ಕೊಟ್ಟೆನೋ ಆ ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ಬರಮಾಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.
43
ನೀವು ನಿಮ್ಮನ್ನು ಹೊಲಸುಮಾಡಿಕೊಂಡಿರುವ ನಿಮ್ಮ ನಡತೆಯನ್ನೂ ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು ನೀವು ನಡಿಸಿರುವ ಸಕಲ ದುಷ್ಕೃತ್ಯಗಳ ನಿವಿುತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.
44
ಇಸ್ರಾಯೇಲ್ ವಂಶದವರೇ, ನಿಮ್ಮ ದುರ್ನಡತೆಗೂ ದುಷ್ಕೃತ್ಯಗಳಿಗೂ ತಕ್ಕ ಹಾಗೆ ನಾನು ನಿಮ್ಮನ್ನು ದಂಡಿಸದೆ ನನ್ನ ಹೆಸರಿನ ನಿವಿುತ್ತವೇ ನಾನು ನಿಮ್ಮನ್ನು ಸಹಿಸಿಕೊಂಡಿರುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು; ಇದು ಕರ್ತನಾದ ಯೆಹೋವನ ನುಡಿ.
45
ಆಮೇಲೆ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು -
46
ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತಾಡುತ್ತಾ ದಕ್ಷಿಣಸೀಮೆಯ ವನದ ಪ್ರಸ್ತಾಪವನ್ನೆತ್ತಿ ಆ ವನಕ್ಕೆ ಹೀಗೆ ಸಾರಿ ಹೇಳು -
47
ಯೆಹೋವನ ಮಾತನ್ನು ಕೇಳು, ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನೊಳಗೆ ಬೆಂಕಿಯನ್ನು ಹೊತ್ತಿಸುವೆನು, ಅದು ನಿನ್ನಲ್ಲಿನ ಎಲ್ಲಾ ಹಸುರುಮರಗಳನ್ನೂ ಒಣಮರಗಳನ್ನೂ ನುಂಗಿಬಿಡುವದು; ಧಗಧಗಿಸುವ ಉರಿಯು ಆರದೆ ತೆಂಕಲಿಂದ ಬಡಗಲವರೆಗೆ ಎಲ್ಲರ ಮುಖಗಳನ್ನು ಕಂದಿಸುವದು.
48
ಅದನ್ನು ಹೊತ್ತಿಸಿದವನು ಯೆಹೋವನಾದ ನಾನೇ ಎಂಬದು ಸಕಲನರಪ್ರಾಣಿಗಳಿಗೂ ಗೋಚರವಾಗುವದು; ಅದು ಆರಿಹೋಗದು.
49
ಆಗ ನಾನು - ಅಯ್ಯೋ, ಕರ್ತನಾದ ಯೆಹೋವನೇ, ಇವನು ಒಗಟುಗಾರನಲ್ಲವೆ ಎಂದು ಈ ಜನರು ನನ್ನ ವಿಷಯವಾಗಿ ಅಂದುಕೊಳ್ಳುತ್ತಾರೆ ಎಂಬದಾಗಿ ಅರಿಕೆಮಾಡಿದೆನು.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48