bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Ezra 1
Ezra 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 2 →
1
ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ ಪತ್ರಗಳಿಂದಲೂ -
2
ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ - ಪರಲೋಕದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನೂ ಕೊಟ್ಟು ತನಗೋಸ್ಕರ ಯೆಹೂದ ದೇಶದ ಯೆರೂಸಲೇವಿುನಲ್ಲಿ ಆಲಯವನ್ನು ಕಟ್ಟಿಸಬೇಕು ಎಂದು ಆಜ್ಞಾಪಿಸಿದ್ದಾನೆ.
3
ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಯೆಹೂದದೇಶದ ಯೆರೂಸಲೇವಿುಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ; ಅವರ ದೇವರು ಅವರ ಸಂಗಡ ಇರಲಿ.
4
ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇವಿುನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯಮಾಡಲಿ ಎಂದು ಪ್ರಕಟಿಸಿದನು.
5
ಆಗ ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಪ್ರಧಾನರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ದೇವಪ್ರೇರಣೆಗೆ ಒಳಗಾದವರೆಲ್ಲರೂ ಯೆರೂಸಲೇವಿುನಲ್ಲಿ ಯೆಹೋವನಿಗೋಸ್ಕರ ಆಲಯಕಟ್ಟುವದಕ್ಕಾಗಿ ಹೊರಟುಹೋದರು.
6
ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.
7
ನೆಬೂಕದ್ನೆಚ್ಚರನು ಯೆರೂಸಲೇವಿುನಿಂದ ಕೊಳ್ಳೆಯಾಗಿ ತಂದು ತನ್ನ ದೇವರ ಗುಡಿಯಲ್ಲಿಟ್ಟಿದ್ದ ಯೆಹೋವನ ಆಲಯದ ಸಾಮಾನುಗಳನ್ನು ಪಾರಸಿಯ ರಾಜನಾದ ಕೋರೆಷನು
8
ಅಲ್ಲಿಂದ ತೆಗಿಸಿ ಖಜಾನದಾರನಾದ ವಿುತ್ರದಾತನಿಗೆ ಒಪ್ಪಿಸಿದನು; ಇವನು ಅವುಗಳನ್ನು ಯೆಹೂದ ಪ್ರಭುವಾಗಿರುವ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು.
9
ಆ ಸಾಮಾನುಗಳ ಲೆಕ್ಕ - ಬಂಗಾರದ ಬೋಗುಣಿಗಳು ಮೂವತ್ತು; ಬೆಳ್ಳಿಯ ಬೋಗುಣಿಗಳು ಒಂದು ಸಾವಿರ; ಕತ್ತಿಗಳು ಇಪ್ಪತ್ತೊಂಭತ್ತು;
10
ಚಿನ್ನದ ಬಟ್ಟಲುಗಳು ಮೂವತ್ತು; ಎರಡನೆಯ ತರಗತಿಯ ಬೆಳ್ಳೀ ಬಟ್ಟಲುಗಳು ನಾನೂರ ಹತ್ತು; ಇತರ ಪಾತ್ರೆಗಳು ಒಂದು ಸಾವಿರ.
11
ಬೆಳ್ಳಿ ಬಂಗಾರದ ಎಲ್ಲಾ ಸಾಮಾನುಗಳ ಒಟ್ಟು ಸಂಖ್ಯೆಯು ಐದು ಸಾವಿರದ ನಾನೂರು. ಶೆಷ್ಬಚ್ಚರನು ಸೆರೆಯಲ್ಲಿದ್ದವರನ್ನು ಬಾಬೆಲಿನಿಂದ ಯೆರೂಸಲೇವಿುಗೆ ಕರಕೊಂಡು ಬಂದಾಗ ಈ ಎಲ್ಲಾ ಸಾಮಾನುಗಳನ್ನು ತೆಗೆದುಕೊಂಡು ಬಂದನು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 2 →
All chapters:
1
2
3
4
5
6
7
8
9
10