bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Ezra 7
Ezra 7
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 8 →
1
ಇದಾದ ಮೇಲೆ ಪಾರಸಿಯ ರಾಜನಾದ ಅರ್ತಷಸ್ತನ ಆಳಿಕೆಯಲ್ಲಿ ಎಜ್ರನು ಬಾಬೆಲಿನಿಂದ ಬಂದನು. ಇವನು ಸೆರಾಯನ ಮಗನು; ಸೆರಾಯನು ಅಜರ್ಯನ ಮಗನು;
2
ಇವನು ಹಿಲ್ಕೀಯನ ಮಗನು; ಇವನು ಶಲ್ಲೂಮನ ಮಗನು; ಇವನು ಚಾದೋಕನ ಮಗನು;
3
ಇವನು ಅಹೀಟೂಬನ ಮಗನು; ಇವನು ಅಮರ್ಯನ ಮಗನು; ಇವನು ಅಜರ್ಯನ ಮಗನು; ಇವನು ಮೆರಾಯೋತನ ಮಗನು;
4
ಇವನು ಜೆರಹ್ಯನ ಮಗನು; ಇವನು ಉಜ್ಜೀಯ ಮಗನು; ಇವನು ಬುಕ್ಕೀಯ ಮಗನು;
5
ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲ್ಲಾಜಾರನ ಮಗನು; ಇವನು ಪ್ರಧಾನ ಯಾಜಕನಾದ ಆರೋನನ ಮಗನು.
6
ಎಜ್ರನು ಇಸ್ರಾಯೇಲ್ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.
7
ಅವನೊಡನೆ ಕೆಲವು ಮಂದಿ ಇಸ್ರಾಯೇಲ್ಯರೂ ಯಾಜಕರೂ ಲೇವಿಯರೂ ಗಾಯಕರೂ ದ್ವಾರಪಾಲಕರೂ ದೇವಸ್ಥಾನದಾಸರೂ ಅರ್ತಷಸ್ತನ ಆಳಿಕೆಯ ಏಳನೆಯ ವರುಷದಲ್ಲಿ ಯೆರೂಸಲೇವಿುಗೆ ಬಂದರು.
8
ಎಜ್ರನು ಆ ಅರಸನ ಆಳಿಕೆಯ ಏಳನೆಯ ವರುಷದಲ್ಲಿ ಐದನೆಯ ತಿಂಗಳಲ್ಲಿ ಯೆರೂಸಲೇಮನ್ನು ಮುಟ್ಟಿದನು.
9
ಅವನು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬಾಬೆಲಿನಿಂದ ಹೊರಟನು; ತನ್ನ ದೇವರ ಕೃಪಾಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇವಿುಗೆ ಸೇರಿದನು.
10
ಅವನು ಯೆಹೋವ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ ಇಸ್ರಾಯೇಲ್ಯರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಲಿಕ್ಕೂ ದೃಢಮಾಡಿಕೊಂಡಿದ್ದನು.
11
ಯಾಜಕನೂ ಶಾಸ್ತ್ರಿಯೂ ಇಸ್ರಾಯೇಲ್ಯರಿಗೆ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು -
12
ರಾಜಾಧಿರಾಜನಾದ ಅರ್ತಷಸ್ತನು ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ಇತ್ಯಾದಿ.
13
ನನ್ನ ರಾಜ್ಯದಲ್ಲಿರುವ ಇಸ್ರಾಯೇಲ್ಯರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸುಳ್ಳವರೆಲ್ಲರೂ ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆಮಾಡುತ್ತೇನೆ.
14
ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇವಿುನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶ ಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ವಿಮರ್ಶೆ ಮಾಡಬೇಕು.
15
ಮತ್ತು ಅರಸನೂ ಅವನ ಮಂತ್ರಿಗಳೂ ಯೆರೂಸಲೇವಿುನಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಿಗೋಸ್ಕರ ಕಾಣಿಕೆಯಾಗಿ ಸಮರ್ಪಿಸಿದ ಬೆಳ್ಳಿ ಬಂಗಾರ,
16
ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, [ಇಸ್ರಾಯೇಲ್] ಸಾಧಾರಣಜನರೂ ಯಾಜಕರೂ ಯೆರೂಸಲೇವಿುನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವೇಚ್ಫೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.
17
ನೀನು ಈ ಹಣದಿಂದ ಹೋರಿ ಟಗರು ಕುರಿ ಇವುಗಳನ್ನೂ ಮತ್ತು ಇವುಗಳೊಡನೆ ಸಮರ್ಪಣೆಯಾಗತಕ್ಕ ಧಾನ್ಯದ್ರವ್ಯಪಾನದ್ರವ್ಯಗಳನ್ನೂ ಕೊಂಡುಕೊಂಡು ಅವುಗಳನ್ನು ಯೆರೂಸಲೇವಿುನಲ್ಲಿರುವ ನಿಮ್ಮ ದೇವರ ಆಲಯದ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.
18
ಉಳಿದ ಬೆಳ್ಳಿಬಂಗಾರವನ್ನು ನಿಮ್ಮ ದೇವರ ಆಜ್ಞೆಯನ್ನು ಅನುಸರಿಸಿ ನಿನಗೂ ನಿನ್ನ ಸಹೋದರರಿಗೂ ಸರಿತೋರುವಂತೆ ವೆಚ್ಚ ಮಾಡಿರಿ.
19
ನಿನ್ನ ದೇವರ ಆಲಯದ ಆರಾಧನೆಗಾಗಿ ನಿನ್ನ ವಶಕ್ಕೆ ಕೊಡುವ ಸಾಮಾನುಗಳನ್ನು ಯೆರೂಸಲೇವಿುನ ದೇವರ ಸನ್ನಿಧಿಗೆ ತೆಗೆದುಕೊಂಡು ಹೋಗು.
20
ನಿನ್ನ ದೇವರ ಆಲಯಕ್ಕೋಸ್ಕರ ನೀನು ಬೇರೆ ಯಾವದನ್ನಾದರೂ ವೆಚ್ಚಮಾಡಬೇಕಾದರೆ ಅದನ್ನು ರಾಜ ಭಂಡಾರದಿಂದ ತೆಗೆದುಕೊಂಡು ವೆಚ್ಚಮಾಡು.
21
ಅರ್ತಷಸ್ತರಾಜನಾದ ನಾನು ಹೊಳೆಯಾಚೆಯ ಪ್ರಾಂತಗಳ ಭಂಡಾರಮುಖ್ಯಸ್ಥರಿಗೆ ಆಜ್ಞಾಪಿಸುವದು - ಯಾಜಕನೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.
22
ಬೆಳ್ಳಿಯನ್ನು ನೂರು ತಲಾಂತು, ಗೋದಿಯನ್ನು ನೂರು ಕೋರ್, ದ್ರಾಕ್ಷಾರಸವನ್ನು ನೂರು ಬತ್, ಎಣ್ಣೆಯನ್ನು ನೂರು ಬತ್ ಇಷ್ಟರ ಮಟ್ಟಿಗೂ ಕೊಡಬಹುದು; ಉಪ್ಪನ್ನು ಎಷ್ಟು ಬೇಕಾದರೂ ಕೊಡಬಹುದು.
23
ಅರಸನ ಮತ್ತು ಅವನ ಸಂತಾನದವರ ರಾಜ್ಯದ ಮೇಲೆ ದೇವಕೋಪವುಂಟಾಗದ ಹಾಗೆ ನೀವು ಪರಲೋಕ ದೇವರ ಆಜ್ಞಾನುಸಾರ ಬೇಕಾದದ್ದನ್ನೆಲ್ಲಾ ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡಬೇಕು.
24
ಇದಲ್ಲದೆ ಆ ದೇವಾಲಯದ ಯಾಜಕ ಲೇವಿಯ ಗಾಯಕ ದ್ವಾರಪಾಲಕ ದಾಸ ಮುಂತಾದ ಸೇವಕರಲ್ಲಿ ಯಾವನಿಂದಾದರೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬದಾಗಿ ತಿಳಿದಿರಲಿ.
25
ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕನುಸಾರವಾಗಿ ನ್ಯಾಯಾಧೀಶರನ್ನೂ ಪಂಚಾಯತರನ್ನೂ ನೇವಿುಸು. ಅವರು ಹೊಳೆಯಾಚೆಯ ಇಸ್ರಾಯೇಲ್ಯರಲ್ಲಿ ನಿನ್ನ ದೇವರ ಧರ್ಮವನ್ನರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.
26
ನಿನ್ನ ದೇವರ ಧರ್ಮವನ್ನೂ ರಾಜಾಜ್ಞೆಯನ್ನೂ ಕೈಕೊಳ್ಳದವರಿಗೆಲ್ಲಾ ಮರಣದಂಡನೆ, ಗಡಿಪಾರುಮಾಡುವದು, ದಂಡತೆರಿಸುವದು, ಬೇಡಿಹಾಕುವದು ಈ ವಿಧವಾದ ಶಿಕ್ಷೆಯನ್ನು ತಪ್ಪದೆ ವಿಧಿಸಬೇಕು ಎಂಬದೇ.
27
[ಎಜ್ರನು ಹೇಳಿದ್ದು - ] ನಮ್ಮ ಪಿತೃಗಳ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಅರಸನು ಯೆರೂಸಲೇವಿುನಲ್ಲಿರುವ ಯೆಹೋವನ ಆಲಯವನ್ನು ಶೋಭಿಸುವ ಸ್ಥಿತಿಗೆ ತರುವದಕ್ಕೆ ಆತನ ಪ್ರೇರಣೆಯಿಂದಲೇ ಮನಸ್ಸು ಮಾಡಿದ್ದಾನೆ;
28
ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ. ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನಗೆ ದೊರಕಿದ್ದರಿಂದ ನಾನು ಧೈರ್ಯತಂದುಕೊಂಡು ನನ್ನೊಂದಿಗೆ ಪ್ರಯಾಣ ಮಾಡುವದಕ್ಕೆ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು.
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 8 →
All chapters:
1
2
3
4
5
6
7
8
9
10