bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Ezra 8
Ezra 8
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 9 →
1
ಅರ್ತಷಸ್ತನ ಆಳಿಕೆಯಲ್ಲಿ ನನ್ನೊಂದಿಗೆ ಬಾಬೆಲಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ -
2
ಫೀನೆಹಾಸನ ಸಂತಾನದವರಲ್ಲಿ ಗೇರ್ಷೋಮ್; ಈತಾಮಾರನ ಸಂತಾನದವರಲ್ಲಿ ದಾನಿಯೇಲ್;
3
ದಾವೀದನ ಸಂತಾನದವರಲ್ಲಿ ಶೆಕನ್ಯನ ಮೊಮ್ಮಗನಾದ ಹಟ್ಟೂಷ್; ಪರೋಷಿನವರಲ್ಲಿ ಜೆಕರ್ಯನೂ ಅವನೊಡನೆ ಅವನ ವಂಶಕ್ಕೆ ಸೇರುವ 150 ಮಂದಿ ಗಂಡಸರೂ,
4
ಪಹತ್ಮೋವಾಬಿನವರಲ್ಲಿ ಜೆರಹ್ಯನ ಮಗನಾದ ಎಲ್ಯೆಹೋವೇನೈಯೂ ಅವನೊಡನೆ 200 ಮಂದಿ ಗಂಡಸರೂ;
5
[ಜತ್ತೂವಿನವರಲ್ಲಿ] ಯಹಜೀಯೇಲನ ಮಗನಾದ ಶೆಕನ್ಯನೂ ಅವನೊಡನೆ 300 ಮಂದಿ ಗಂಡಸರೂ;
6
ಆದೀನನವರಲ್ಲಿ ಯೋನಾತಾನನ ಮಗನಾದ ಎಬೆದನೂ ಅವನೊಡನೆ 50 ಮಂದಿ ಗಂಡಸರೂ;
7
ಏಲಾವಿುನವರಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನೊಡನೆ 70 ಮಂದಿ ಗಂಡಸರೂ;
8
ಶೆಫಟ್ಯನವರಲ್ಲಿ ಮೀಕಾಯೇಲನ ಮಗನಾದ ಜೆಬದ್ಯನೂ ಅವನೊಡನೆ 80 ಮಂದಿ ಗಂಡಸರೂ;
9
ಯೋವಾಬನವರಲ್ಲಿ ಯೆಹೀಯೇಲನ ಮಗನಾದ ಓಬದ್ಯನೂ ಅವನೊಡನೆ 218 ಮಂದಿ ಗಂಡಸರೂ;
10
[ಬಾನೀಯವರಲ್ಲಿ] ಯೋಸಿಫ್ಯನ ಮಗನಾದ ಶೆಲೋಮೀತನೂ ಅವನೊಡನೆ 160 ಮಂದಿ ಗಂಡಸರೂ;
11
ಬೇಬೈಯವರಲ್ಲಿ ಬೇಬೈಯ ಮಗನಾದ ಜೆಕರ್ಯನೂ ಅವನೊಡನೆ 28 ಮಂದಿ ಗಂಡಸರೂ;
12
ಅಜ್ಗಾದನವರಲ್ಲಿ ಹಕ್ಕಾಟಾನನ ಮಗನಾದ ಯೋಹಾನಾನನೂ ಅವನೊಡನೆ 110 ಮಂದಿ ಗಂಡಸರೂ;
13
ಅದೋನೀಕಾವಿುನವರಲ್ಲಿ ಕಡೆಯವರಾದ ಎಲೀಫೆಲೆಟ್, ಎಮೀಯೇಲ್, ಶೆಮಾಯ ಎಂಬ ಹೆಸರುಳ್ಳವರೂ ಅವರೊಡನೆ 60 ಮಂದಿ ಗಂಡಸರೂ;
14
ಬಿಗ್ವೈಯವರಲ್ಲಿ ಜಕ್ಕೂರನ ಮಗನಾದ ಊತೈಯೂ ಅವನೊಡನೆ 70 ಮಂದಿ ಗಂಡಸರೂ;
15
ಅಹವಾ ಪ್ರಾಂತದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯ ಮಾಡಿಕೊಂಡ ಮೇಲೆ ಸಾಧಾರಣಜನರೂ ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂದದರಿಂದ
16
ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ ಪಂಡಿತರಾದ ಯೋಯಾರೀಬ್,
17
ಎಲ್ನಾತಾನ್ ಇವರನ್ನೂ ಕರಿಸಿ ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದಾಸ ವರ್ಗದವರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.
18
ನಮ್ಮ ದೇವರ ಕೃಪಾಹಸ್ತಪಾಲನೆಯು ನಮಗೆ ದೊರಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಮಂದಿಯನ್ನೂ ಮೆರಾರೀಯರಲ್ಲಿ ಹಷಬ್ಯನನ್ನೂ
19
ಅವನೊಡನೆ ಯೆಶಾಯನನ್ನೂ ಅವರ ಪುತ್ರಭ್ರಾತೃಗಳಲ್ಲಿ ಇಪ್ಪತ್ತು ಮಂದಿಯನ್ನೂ ದಾವೀದನೂ ಅವನ ಸರದಾರರೂ
20
ಲೇವಿಯರ ಸಹಾಯಕ್ಕಾಗಿ ಕೊಟ್ಟ ದೇವಸ್ಥಾನದಾಸರಲ್ಲಿ ಇನ್ನೂರಿಪ್ಪತ್ತು ಮಂದಿಯನ್ನೂ ನಮ್ಮ ಬಳಿಗೆ ಕರಕೊಂಡು ಬಂದರು. ಇವರೆಲ್ಲರ ಹೆಸರುಗಳು ಪಟ್ಟಿಯಲ್ಲಿದ್ದವು.
21
ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ - ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಂಡು ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲಾ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೇಳಿಕೊಳ್ಳಬೇಕೆಂದು ಪ್ರಕಟಿಸಿದೆನು.
22
ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವದು; ಆತನ ಬಲವಾದ ರೌದ್ರಕ್ಕೆ ಆತನನ್ನು ತೊರೆದುಬಿಟ್ಟವರೆಲ್ಲರೂ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವದಕ್ಕೋಸ್ಕರ ಸೈನ್ಯವನ್ನೂ ಅಶ್ವಬಲವನ್ನೂ ಕೇಳಿಕೊಳ್ಳುವದಕ್ಕೆ ನಾಚಿಕೊಂಡಿದ್ದೆನು.
23
ನಾವು ಈ ಕಾರಣದಿಂದ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಲು ಆತನು ನಮಗೆ ಪ್ರಸನ್ನನಾದನು.
24
ಅನಂತರ ನಾನು ಯಾಜಕರ ಮುಖ್ಯಸ್ಥರಿಂದ ಶೇರೇಬ್ಯ, ಹಷಬ್ಯ ಇವರನ್ನೂ ಇವರ ಸಹೋದರರಲ್ಲಿ ಹತ್ತು ಮಂದಿಯನ್ನೂ ಆರಿಸಿಕೊಂಡು
25
ಅರಸನಿಂದಲೂ ಅವನ ಮಂತ್ರಿಗಳಿಂದಲೂ ಸರದಾರರಿಂದಲೂ ಅಲ್ಲಿದ್ದ ಎಲ್ಲಾ ಇಸ್ರಾಯೇಲ್ಯರಿಂದಲೂ ನಮ್ಮ ದೇವರ ಆಲಯಕ್ಕೋಸ್ಕರ ಕಾಣಿಕೆಯಾಗಿ ಕೊಡಲ್ಪಟ್ಟ ಬೆಳ್ಳಿಬಂಗಾರವನ್ನೂ ಸಾಮಾನುಗಳನ್ನೂ ತೂಕಮಾಡಿ ಅವರಿಗೆ ಒಪ್ಪಿಸಿದೆನು.
26
ಅವರ ಕೈಯಲ್ಲಿ ಕೊಟ್ಟ ಸಾಮಾನುಗಳ ತೂಕ - ಬೆಳ್ಳಿಯು ಆರುನೂರೈವತ್ತು ತಲಾಂತು, ಬೆಳ್ಳಿಯ ಸಾಮನುಗಳು ನೂರು ತಲಾಂತು, ಬಂಗಾರವು ನೂರು ತಲಾಂತು,
27
ಬಂಗಾರದ ಇಪ್ಪತ್ತು ಬಟ್ಟಲುಗಳು ಪ್ರತಿಯೊಂದೂ ಸಾವಿರ ಪವನು; ಇವುಗಳಲ್ಲದೆ ಶ್ರೇಷ್ಠವಾದ ಶುಭ್ರತಾಮ್ರದ ಎರಡು ಪಾತ್ರೆಗಳಿದ್ದವು.
28
ಅವು ಬಂಗಾರದಷ್ಟು ಬೆಲೆಯುಳ್ಳವುಗಳು. ನಾನು ಅವರಿಗೆ - ನೀವು ಯೆಹೋವನ ಸ್ವಕೀಯರು; ಆ ಪಾತ್ರೆಗಳೂ ದೇವರ ವಸ್ತುಗಳು; ಆ ಬೆಳ್ಳಿಬಂಗಾರವೂ ನಿಮ್ಮ ಪಿತೃಗಳ ದೇವರಾದ ಯೆಹೋವನಿಗೋಸ್ಕರ ಸಮರ್ಪಿತವಾದ ಕಾಣಿಕೆಯು.
29
ಆದದರಿಂದ ನೀವು ಜಾಗರೂಕರಾಗಿದ್ದು ಯೆರೂಸಲೇವಿುನಲ್ಲಿರುವ ಯಾಜಕರ ಮತ್ತು ಲೇವಿಯರ ಪ್ರಧಾನರ ಮುಂದೆಯೂ ಇಸ್ರಾಯೇಲ್ ಗೋತ್ರಪ್ರಧಾನರ ಮುಂದೆಯೂ ಇವುಗಳನ್ನು ತೂಕಮಾಡಿ ಯೆಹೋವನ ಆಲಯದ ಕೊಠಡಿಗಳಲ್ಲಿಡುವವರೆಗೂ ಕಾಯಿರಿ ಅಂದೆನು.
30
ಆ ಯಾಜಕರೂ ಲೇವಿಯರೂ ಯೆರೂಸಲೇವಿುನ ದೇವಾಲಯಕ್ಕೆ ಮುಟ್ಟಿಸುವದಕ್ಕೋಸ್ಕರ ಬೆಳ್ಳಿ ಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿಸಿ ತಮ್ಮ ವಶದಲ್ಲಿಟ್ಟುಕೊಂಡರು.
31
ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇವಿುಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.
32
ನಾವು ಯೆರೂಸಲೇಮನ್ನು ಸೇರಿ ಮೂರು ದಿವಸ ವಿಶ್ರವಿುಸಿಕೊಂಡೆವು.
33
ನಾಲ್ಕನೆಯ ದಿನ ನಮ್ಮ ದೇವರ ಆಲಯದಲ್ಲಿ ಊರೀಯನ ಮಗನಾದ ಮೆರೇಮೋತ್ ಎಂಬ ಯಾಜಕನಿಗೆ ಬೆಳ್ಳಿಬಂಗಾರವನ್ನೂ ಉಪಕರಣಗಳನ್ನೂ ತೂಕಮಾಡಿ ಒಂದೊಂದಾಗಿ ಎಣಿಸಿಕೊಟ್ಟೆವು. ಫೀನೆಹಾಸನ ವಂಶದವನಾದ ಎಲ್ಲಾಜಾರ್, ಯೇಷೂವನ ಮಗನಾದ ಯೋಜಾಬಾದ್, ಬಿನ್ನೂಯನ ಮಗನಾದ ನೋವದ್ಯ ಎಂಬ ಲೇವಿಯರು ಅವನ ಜೊತೆಯಲ್ಲಿದ್ದರು.
34
ಆಗಲೇ ಎಲ್ಲವುಗಳ ತೂಕವು ಲಿಖಿತವಾಯಿತು.
35
ದೇಶಾಂತರದ ಸೆರೆಯಿಂದ ತಿರಿಗಿ ಬಂದವರು ಇಸ್ರಾಯೇಲ್ದೇವರಿಗೆ ತೊಂಭತ್ತಾರು ಟಗರುಗಳನ್ನೂ ಎಪ್ಪತ್ತೇಳು ಕುರಿ ಮರಿಗಳನ್ನೂ ಸಮಸ್ತ ಇಸ್ರಾಯೇಲ್ಯರ ನಿವಿುತ್ತವಾಗಿ ಹನ್ನೆರಡು ಹೋರಿಗಳನ್ನೂ ದೋಷಪರಿಹಾರಾರ್ಥವಾಗಿ ಹನ್ನೆರಡು ಹೋತಗಳನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು. ಇವೆಲ್ಲಾ ಯೆಹೋವನಿಗೆ ಸರ್ವಾಂಗ ಹೋಮವೇ.
36
ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ಹೊಳೆಯಾಚೆಯ ಪ್ರದೇಶಾಧಿಪತಿಗಳಿಗೂ ಒಪ್ಪಿಸಿದರು. ಇವರು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 9 →
All chapters:
1
2
3
4
5
6
7
8
9
10