bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Ezra 9
Ezra 9
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 10 →
1
ಇದಾದನಂತರ ಪ್ರಧಾನಪುರುಷರು ನನ್ನ ಬಳಿಗೆ ಬಂದು - ಇಸ್ರಾಯೇಲ್ಯರಲ್ಲಿ ಸಾಧಾರಣಜನರೂ ಯಾಜಕರೂ ಲೇವಿಯರೂ ಕಾನಾನ್ಯರು, ಹಿತ್ತಿಯರು, ಪೆರಿಜ್ಜೀಯರು, ಯೆಬೂಸಿಯರು, ಅಮ್ಮೋನಿಯರು, ಮೋವಾಬ್ಯರು, ಐಗುಪ್ತ್ಯರು, ಅಮೋರಿಯರು ಎಂಬ ಅನ್ಯದೇಶಗಳವರ ಬಳಕೆಯನ್ನು ತೊರೆಯದೆ ಅವರ ಅಸಹ್ಯಕಾರ್ಯಗಳನ್ನು ಅನುಸರಿಸಿ
2
ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಗಳನ್ನು ತೆಗೆದುಕೊಂಡದರಿಂದ ದೇವಕುಲವು ಅನ್ಯದೇಶಗಳವರೊಡನೆ ವಿುಶ್ರವಾಯಿತು. ಪ್ರಭುಗಳೂ ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು ಎಂದು ತಿಳಿಸಿದರು.
3
ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು ಸ್ತಬ್ಧನಾಗಿ ಕೂತುಕೊಂಡೆನು.
4
ಇಸ್ರಾಯೇಲ್ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು. ನಾನು ಸಂಧ್ಯಾನೈವೇದ್ಯಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕೂತುಕೊಂಡಿದ್ದೆನು;
5
ಆಮೇಲೆ ದೇಹದಂಡನೆಮಾಡುವದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನಂದರೆ -
6
ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ; ನಿನ್ನ ಕಡೆಗೆ ಮುಖವನ್ನೆತ್ತುವದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದವು. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಯಿತು.
7
ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿಯಾದೆವು.
8
ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವವನ್ನು ಅನುಗ್ರಹಿಸಿದ್ದಾನೆ.
9
ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ತಿರಿಗಿ ಕಟ್ಟಿ ಭದ್ರಪಡಿಸುವದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪಾರಸಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.
10
ಇಷ್ಟು ಉಪಕಾರವನ್ನು ಪಡೆದ ನಾವು ಏನು ಅರಿಕೆ ಮಾಡಿಕೊಳ್ಳೋಣ! ನಮ್ಮ ದೇವರೇ, ನಿನ್ನ ಆಜ್ಞೆಗಳನ್ನು ಉಲ್ಲಂಘಿಸಿದ್ದೇವಕಟಾ!
11
ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ - ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಯಿತು. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ.
12
ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ತ್ಯವನ್ನಾಗಿ ಬಿಡುವಿರಿ ಎಂದು ಹೇಳಿದಿಯಲ್ಲಾ.
13
ನಮ್ಮ ದುಷ್ಕರ್ಮಮಹಾಪರಾಧಗಳ ನಿವಿುತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ ನಮ್ಮಲ್ಲಿ ಇಷ್ಟು ಮಂದಿಯನ್ನು ಉಳಿಸಿದಿ;
14
ಹೀಗಿರುವಲ್ಲಿ ನಾವು ತಿರಿಗಿ ನಿನ್ನ ಆಜ್ಞೆಗಳನ್ನು ಮೀರಿ ವಿಗ್ರಹಾರಾಧಕರಾದ ಈ ಜನರ ಸಂಗಡ ಬೀಗತನ ಮಾಡುವದು ಯೋಗ್ಯವೋ? ಹಾಗೆ ಮಾಡಿದರೆ ನೀನು ನಮ್ಮ ಮೇಲೆ ರೌದ್ರಾವೇಶವುಳ್ಳವನಾಗಿ ಯಾರೂ ತಪ್ಪಿಸಿಕೊಂಡು ಉಳಿಯದಂತೆ ನಮ್ಮನ್ನು ಮುಗಿಸಿ ಬಿಡುವಿಯಲ್ಲವೋ?
15
ಯೆಹೋವನೇ, ಇಸ್ರಾಯೇಲ್ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿವಿುತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು ಎಂಬದೇ.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 10 →
All chapters:
1
2
3
4
5
6
7
8
9
10