bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Genesis 29
Genesis 29
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 28
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 30 →
1
ಆಮೇಲೆ ಯಾಕೋಬನು ದಾರಿ ಹಿಡಿದು ಮೂಡಲ ದೇಶದವರ ಸೀಮೆಗೆ ಬಂದನು.
2
ಅಲ್ಲಿಗೆ ಬಂದಾಗ ಅಡವಿಯೊಳಗೆ ಬಾವಿಯನ್ನು ಕಂಡನು. ಬಾವಿಯ ಹತ್ತರ ಮೂರು ಕುರಿಹಿಂಡುಗಳು ಮಲಗಿದ್ದವು. ಕುರಿಗಳನ್ನು ನೀರು ಕುಡಿಸುವದಕ್ಕಾಗಿ ಆ ಬಾವಿಗೆ ಹೊಡಕೊಂಡು ಹೋಗುವ ಪದ್ಧತಿಯಿತ್ತು. ಬಾವಿಯ ಮೇಲೆ ಮುಚ್ಚಿದ್ದ ಕಲ್ಲು ದೊಡ್ಡದಾಗಿತ್ತು.
3
ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಕುರಿಗಳಿಗೆ ನೀರು ಕುಡಿಸಿ ತಿರಿಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುವರು.
4
ಯಾಕೋಬನು ಅವರಿಗೆ - ಅಣ್ಣಂದಿರಾ, ನೀವು ಯಾವ ಊರಿನವರು ಎಂದು ಕೇಳಲು - ನಾವು ಖಾರಾನ್ ಊರಿನವರು ಅಂದರು.
5
ಅವನು ಅವರನ್ನು - ನಾಹೋರನ ಮಗನಾದ ಲಾಬಾನನನ್ನು ಬಲ್ಲಿರಾ ಎಂದು ಕೇಳಿದ್ದಕ್ಕೆ - ಬಲ್ಲೆವು ಅಂದರು.
6
ಅವನಿಗೆ ಕ್ಷೇಮವೋ ಎಂದು ಕೇಳಲು ಅವರು - ಕ್ಷೇಮ; ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.
7
ಯಾಕೋಬನು - ಇನ್ನೂ ಬಹಳ ಹೊತ್ತು ಇದೆ; ಕುರಿಗಳನ್ನು ಕೂಡಿಸುವ ಸಮಯವಾಗಿಲ್ಲ; ನೀರು ಕುಡಿಸಿ ಅವುಗಳನ್ನು ಮೇಯಿಸಿರಿ ಅನ್ನಲು
8
ಅವರು - ಹಿಂಡುಗಳೆಲ್ಲಾ ಕೂಡಿ ಬಂದಾಗ ಕಾಯುವವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆಯುವ ತನಕ ಕುಡಿಸಕೂಡದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ ಅಂದರು.
9
ಅವನು ಅವರೊಂದಿಗೆ ಮಾತಾಡುತ್ತಿರುವಾಗಲೇ ರಾಹೇಲಳು ತನ್ನ ತಂದೆಯ ಕುರಿಗಳನ್ನು ಹೊಡಕೊಂಡು ಬಂದಳು; ಆಕೆಯೇ ಅವುಗಳನ್ನು ಮೇಯಿಸುವವಳಾಗಿದ್ದಳು.
10
ಯಾಕೋಬನು ತನ್ನ ಸೋದರಮಾವನಾದ ಲಾಬಾನನ ಮಗಳಾಗಿರುವ ರಾಹೇಲಳನ್ನೂ ತನ್ನ ಸೋದರಮಾವನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ತನ್ನ ಸೋದರಮಾವನ ಕುರಿಗಳಿಗೆ ನೀರು ಕುಡಿಸಿದನು.
11
ಅವನು ರಾಹೇಲಳಿಗೆ ಮುದ್ದಿಟ್ಟು ಸ್ವರವೆತ್ತಿ ಕಣ್ಣೀರುಸುರಿಸಿ ಆಕೆಗೆ -
12
ನಾನು ನಿನ್ನ ತಂದೆಗೆ ಸೋದರಳಿಯನೂ ರೆಬೆಕ್ಕಳ ಮಗನೂ ಆಗಿದ್ದೇನೆ ಎಂದು ಹೇಳಿದಾಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು.
13
ಲಾಬಾನನು ತನ್ನ ಸೋದರಳಿಯನು ಬಂದ ವರ್ತಮಾನವನ್ನು ಕೇಳಿದಾಗ ಅವನನ್ನು ಎದುರುಗೊಳ್ಳುವದಕ್ಕೆ ಓಡಿಬಂದು ಅಪ್ಪಿಕೊಂಡು ಮುದ್ದಿಟ್ಟು ತನ್ನ ಮನೆಗೆ ಕರಕೊಂಡು ಬಂದನು. ಯಾಕೋಬನು ಲಾಬಾನನಿಗೆ ಎಲ್ಲಾ ಸಂಗತಿಗಳನ್ನು ತಿಳಿಸಲು
14
ಲಾಬಾನನು ಅವನಿಗೆ - ನಿಜವಾಗಿ ನೀನು ನನ್ನ ರಕ್ತ ಸಂಬಂಧಿಯಾಗಿದ್ದೀ ಎಂದು ಹೇಳಿದನು. ಅವನು ಒಂದು ತಿಂಗಳಿನವರೆಗೂ ಲಾಬಾನನ ಬಳಿಯಲ್ಲಿ ವಾಸಮಾಡಿದನು.
15
ಆಮೇಲೆ ಲಾಬಾನನು ಅವನನ್ನು - ನೀನು ನನ್ನನ್ನು ಸಂಬಂಧಿಯೆಂದು ಸುಮ್ಮನೆ ಸೇವಿಸುವದು ನ್ಯಾಯವೋ? ನಿನ್ನ ಕೆಲಸಕ್ಕಾಗಿ ನಾನು ನಿನಗೆ ಏನು ಕೊಡಲಿ ಎಂದು ಕೇಳಿದನು.
16
ಲಾಬಾನನಿಗೆ ಇಬ್ಬರು ಹೆಣ್ಣುಮಕ್ಕಳಿದ್ದರು; ದೊಡ್ಡವಳ ಹೆಸರು ಲೇಯಾ, ಚಿಕ್ಕವಳ ಹೆಸರು ರಾಹೇಲ್.
17
ಲೇಯಾ ಎಂಬಾಕೆಯ ಕಣ್ಣುಗಳು ಕಾಂತಿಹೀನವಾಗಿದ್ದವು; ರಾಹೇಲಳು ರೂಪವತಿಯೂ ಲಾವಣ್ಯವತಿಯೂ ಆಗಿದ್ದಳು.
18
ಯಾಕೋಬನು ರಾಹೇಲಳನ್ನು ಮೆಚ್ಚಿಕೊಂಡು - ನಿನ್ನ ಕಿರೀ ಮಗಳಾದ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುವೆನು ಎಂದು ಹೇಳಲು
19
ಲಾಬಾನನು - ಆಕೆಯನ್ನು ಬೇರೊಬ್ಬನಿಗೆ ಕೊಡುವದಕ್ಕಿಂತ ನಿನಗೆ ಕೊಡುವದೇ ಉಚಿತ; ನನ್ನ ಬಳಿಯಲ್ಲಿರು ಅಂದನು.
20
ಆದದರಿಂದ ಯಾಕೋಬನು ರಾಹೇಲಳಿಗೋಸ್ಕರ ಏಳು ವರುಷ ಸೇವೆ ಮಾಡಿದನು; ಆದರೂ ಆಕೆಯಲ್ಲಿ ಬಹಳ ಪ್ರೀತಿಯನ್ನಿಟ್ಟಿದ್ದದರಿಂದ ಅದು ಅವನಿಗೆ ಸ್ವಲ್ಪ ದಿವಸದಂತೆ ಕಾಣಿಸಿತು.
21
ತರುವಾಯ ಯಾಕೋಬನು ಲಾಬಾನನಿಗೆ - ಗೊತ್ತುಮಾಡಿದ ಕಾಲವು ಮುಗಿದು ಹೋಯಿತು; ಆಕೆಯನ್ನು ನನ್ನ ಹೆಂಡತಿಯಾಗುವಂತೆ ನನ್ನ ಸ್ವಾಧೀನಕ್ಕೆ ಕೊಡು ಎಂದು ಹೇಳಿದನು.
22
ಆಗ ಲಾಬಾನನು ಆ ಸ್ಥಳದವರೆಲ್ಲರನ್ನು ಕರಸಿ ಔತಣವನ್ನು ಮಾಡಿಸಿದನು.
23
ಸಾಯಂಕಾಲದಲ್ಲಿ ತನ್ನ ಹಿರೀ ಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಕೂಡಿದನು.
24
(ಲಾಬಾನನು ತನ್ನ ಮಗಳಾದ ಲೇಯಳಿಗೆ ಜಿಲ್ಪಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.)
25
ಬೆಳಿಗ್ಗೆ ಆಕೆ ಲೇಯಳೆಂದು ಯಾಕೋಬನಿಗೆ ತಿಳಿದು ಬರಲು ಅವನು
26
ಲಾಬಾನನಿಗೆ - ಇದೇನು ನೀನು ನನಗೆ ಮಾಡಿದ್ದು? ರಾಹೇಲಳಿಗೋಸ್ಕರ ನಿನಗೆ ಸೇವೆಮಾಡಿದೆನಲ್ಲಾ; ಯಾಕೆ ನನಗೆ ಮೋಸಮಾಡಿದಿ ಎಂದು ಕೇಳಿದ್ದಕ್ಕೆ ಲಾಬಾನನು - ಹಿರೀಮಗಳಿಗಿಂತ ಮೊದಲು ಕಿರೀ ಮಗಳನ್ನು ಮದುವೆಮಾಡಿಸಿಕೊಡುವದು ನಮ್ಮ ದೇಶದ ಪದ್ಧತಿಯಲ್ಲ.
27
ಆಕೆಯ [ಮದುವೆಯ] ವಾರವನ್ನು ಪೂರೈಸು; ಅನಂತರ ಈ ನನ್ನ ಕಿರೀ ಮಗಳನ್ನೂ ನಿನಗೆ ಕೊಡುತ್ತೇನೆ; ಈಕೆಗೋಸ್ಕರ ನೀನು ಇನ್ನೂ ಏಳು ವರುಷ ಸೇವೆಮಾಡು ಅಂದನು.
28
ಯಾಕೋಬನು ಅದಕ್ಕೆ ಒಪ್ಪಿ ಹಿರಿಯವಳ [ಮದುವೆಯ] ವಾರವನ್ನು ತೀರಿಸಿದನು. ಆಗ ಲಾಬಾನನು ತನ್ನ ಮಗಳಾದ ರಾಹೇಲಳನ್ನು
29
ಯಾಕೋಬನಿಗೆ ಹೆಂಡತಿಯಾಗಿ ಕೊಟ್ಟು ಆಕೆಗೆ ಬಿಲ್ಹಾ ಎಂಬ ಒಬ್ಬ ದಾಸಿಯನ್ನು ಕೊಟ್ಟನು.
30
ಯಾಕೋಬನು ರಾಹೇಲಳನ್ನೂ ಕೂಡಿ ಆಕೆಯನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸಿದನು. ಆಕೆಗೋಸ್ಕರ ಲಾಬಾನನ ಬಳಿಯಲ್ಲಿ ಇನ್ನೂ ಏಳುವರುಷ ಸೇವೆ ಮಾಡಿದನು.
31
ಲೇಯಳು ಯಾಕೋಬನಿಗೆ ಅಲಕ್ಷ್ಯವಾದಳೆಂದು ಯೆಹೋವನು ನೋಡಿ ಆಕೆಯನ್ನು ಬಸುರಾಗುವಂತೆ ಮಾಡಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.
32
ಲೇಯಳು ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ಯೆಹೋವನು ನನ್ನ ವ್ಯಥೆಯನ್ನು ನೋಡಿದ್ದಾನೆ; ಇನ್ನು ಮುಂದೆ ನನ್ನ ಗಂಡನು ನನ್ನನ್ನು ಪ್ರೀತಿಸುವನು ಎಂದು ಹೇಳಿ ಅದಕ್ಕೆ ರೂಬೇನೆಂದು ಹೆಸರಿಟ್ಟಳು.
33
ಆಕೆ ತಿರಿಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು - ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಈ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ಸಿಮೆಯೋನ್ ಎಂದು ಹೆಸರಿಟ್ಟಳು.
34
ಆಕೆಯು ತಿರಿಗಿ ಗರ್ಭಧರಿಸಿ ಗಂಡುಮಗುವನ್ನು ಹೆತ್ತು - ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು; ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ ಎಂದು ಹೇಳಿ ಅದಕ್ಕೆ ಲೇವಿಯೆಂದು ಹೆಸರಿಟ್ಟಳು.
35
ಆಕೆಯು ತಿರಿಗಿ ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು - ಈಗ ಯೆಹೋವನಿಗೆ ಉಪಕಾರಸ್ತುತಿ ಮಾಡುವೆನು ಎಂದು ಹೇಳಿ ಅದಕ್ಕೆ ಯೆಹೂದಾ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಗರ್ಭಧಾರಣೆಯಾಗುವದು ತಡವಾಯಿತು.
← Chapter 28
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 43
Chapter 44
Chapter 45
Chapter 46
Chapter 47
Chapter 48
Chapter 49
Chapter 50
Chapter 30 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42
43
44
45
46
47
48
49
50