bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Habakkuk 1
Habakkuk 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 2 →
1
ಪ್ರವಾದಿಯಾದ ಹಬಕ್ಕೂಕನಿಗೆ ಕಂಡುಬಂದ ದೈವೋಕ್ತಿ.
2
ಯೆಹೋವನೇ, ನಾನು ಮೊರೆಯಿಡುತ್ತಿದ್ದರೂ ನೀನು ಎಷ್ಟು ಕಾಲ ಕೇಳದೇ ಇರುವಿ? ಹಿಂಸೆ, ಹಿಂಸೆ ಎಂದು ನಿನ್ನನ್ನು ಕೂಗಿಕೊಂಡರೂ ರಕ್ಷಿಸದೆ ಇರುವಿ.
3
ಕೇಡನ್ನು ನನ್ನ ಕಣ್ಣಿಗೆ ಏಕೆ ಬೀಳಿಸುತ್ತಿದ್ದೀ? ಕಷ್ಟವನ್ನೇಕೆ ನನಗೆ ತೋರಿಸುತ್ತಿದ್ದೀ? ಹಿಂಸೆಬಾಧೆಗಳು ನನ್ನ ಕಣ್ಣೆದುರಿಗೆ ಇದ್ದೇ ಇವೆ; ಜಗಳವಾಗುತ್ತಿದೆ, ವ್ಯಾಜ್ಯವೇಳುತ್ತಿದೆ.
4
ಹೀಗಿರಲು ಧರ್ಮೋಪದೇಶವು ಜಡವಾಗಿದೆ, ನ್ಯಾಯವು ಎಂದಿಗೂ ಸಾಗದು; ದುಷ್ಟನು ಶಿಷ್ಟನನ್ನು ಸುತ್ತಿಕೊಂಡಿದ್ದಾನೆ, ಆದದರಿಂದ ಸಾಗುವ ನ್ಯಾಯವು ವಕ್ರವೇ.
5
ಜನಾಂಗಗಳ ಮಧ್ಯೆ ನಡೆಯುವದನ್ನು ನೋಡಿರಿ, ದೃಷ್ಟಿಯಿಡಿರಿ, ಬೆರಗಾಗಿರಿ; ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು, ಅದು ನಿಮಗೆ ತಿಳಿಯಲ್ಪಟ್ಟರೂ ನೀವು ಅದನ್ನು ನಂಬುವದಿಲ್ಲ.
6
ಇಗೋ, ತೀಕ್ಷ್ಣವೂ ತೀವ್ರವೂ ಆದ ಕಸ್ದೀಯ ಜನಾಂಗವನ್ನು ಎಬ್ಬಿಸುತ್ತಿದ್ದೇನೆ; ಆ ಜನರು ತಮ್ಮದಲ್ಲದ ಸಂಸ್ಥಾನಗಳನ್ನು ವಶಮಾಡಿಕೊಳ್ಳುವ ಹಾಗೆ ಲೋಕದಲ್ಲೆಲ್ಲಾ ಸಂಚರಿಸುವರು.
7
ಅವರು ಕ್ರೂರರು, ಭಯಂಕರರು; ಅವರ ಅಧಿಕಾರವೂ ಗೌರವವೂ ಅವರಿಂದಲೇ ಹೊರಡುವವು.
8
ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅವರ ಸವಾರರು ಕುದುರೆಗಳನ್ನು ಕುಣಿದಾಡಿಸುವರು; ದೂರದಿಂದ ಹತ್ತಿಕೊಂಡು ಬರುವರು; ಕೊಳ್ಳೆಗೆ ಆತುರಪಡುವ ಹದ್ದಿನಂತೆ ಹಾರಾಡುವರು.
9
ಎಲ್ಲರೂ ಬಾಧಿಸಲು ಮುಖವನ್ನು ಮುಂದಕ್ಕೆ ಚಾಚಿಕೊಂಡು ನುಗ್ಗುವರು; ಜನರನ್ನು ಉಸುಬಿನಂತೆ ಲೆಕ್ಕವಿಲ್ಲದಷ್ಟು ಸೆರೆಹಿಡಿದು ಗುಂಪುಕೂಡಿಸುವರು.
10
ಅರಸರನ್ನು ಧಿಕ್ಕರಿಸುವರು; ಸರದಾರರು ಅವರ ಹಾಸ್ಯಕ್ಕೆ ಗುರಿಯಾಗುವರು. ಒಂದೊಂದು ಕೋಟೆಯನ್ನೂ ತಾತ್ಸಾರಮಾಡಿ ದೂಳದಿಬ್ಬಹಾಕಿ ಆಕ್ರವಿುಸುವರು.
11
ಕೂಡಲೆ ಬಿರುಗಾಳಿಯಂತೆ ಬೀಸುತ್ತಾ ಹಾದುಹೋಗುವರು; ಸ್ವಬಲವೇ ದೇವರು ಎನ್ನುವ ಅಪರಾಧಕ್ಕೆ ಒಳಗಾಗುವರು.
12
ನನ್ನ ದೇವರಾದ ಯೆಹೋವನೇ, ನನ್ನ ಸದಮಲಸ್ವಾವಿುಯೇ, ನೀನು ಅನಾದಿಯಿಂದಿದ್ದೀಯಲ್ಲಾ; ನಾವು ಸಾಯೆವು. ಯೆಹೋವನೇ, [ನಮ್ಮ] ನ್ಯಾಯತೀರ್ಪಿಗಾಗಿ ಅವರನ್ನು ನೇವಿುಸಿದ್ದೀ; ಶರಣನೇ, [ನಮ್ಮ] ಶಿಕ್ಷೆಗಾಗಿ ಅವರನ್ನು ನಿಲ್ಲಿಸಿದ್ದೀ.
13
ಕೇಡನ್ನು ನೋಡಲಾರದ ಅತಿಪವಿತ್ರ ದೃಷ್ಟಿಯುಳ್ಳವನೇ, ಕೆಡುಕನ್ನು ಕಟಾಕ್ಷಿಸಲಾರದವನೇ, ಏಕೆ ಕೆಡುಕರನ್ನು ಕಟಾಕ್ಷಿಸುತ್ತೀ? ದುಷ್ಟನು ತನಗಿಂತ ಯೋಗ್ಯನನ್ನು ನುಂಗಿಬಿಡುವಾಗ ಏಕೆ ಸುಮ್ಮನಿದ್ದೀ?
14
ಮನುಷ್ಯರನ್ನು ಸಮುದ್ರದ ಮೀನುಗಳ ಸ್ಥಿತಿಗೆ ಏಕೆ ತಂದಿದ್ದೀ, ನಾಯಕನಿಲ್ಲದ ಕ್ರಿವಿುಕೀಟಗಳ ಗತಿಗೆ ಏಕೆ ಬರಮಾಡಿದ್ದೀ?
15
ಆಹಾ, ಅವರನ್ನೆಲ್ಲಾ ತನ್ನ ಗಾಳದಿಂದ ಮೇಲಕ್ಕೆಳೆಯುತ್ತಾನೆ, ತನ್ನ ಬಲೆಯಿಂದ ಬಾಚುತ್ತಾನೆ, ತನ್ನ ಜಾಲದಲ್ಲಿ ಗುಡ್ಡೆ ಮಾಡುತ್ತಾನೆ; ಇದಕ್ಕೆ ಹಿಗ್ಗುತ್ತಾನೆ, ಹೆಚ್ಚಳಪಡುತ್ತಾನೆ;
16
ತನ್ನ ಬಲೆಗೆ ಬಲಿಕೊಡುತ್ತಾನೆ, ತನ್ನ ಜಾಲಕ್ಕೆ ಧೂಪಹಾಕುತ್ತಾನೆ; ಅವುಗಳ ಮೂಲಕವೇ ಅವನ ಭೋಜನವು ಪುಷ್ಟಿ, ಅವನ ಆಹಾರವು ರುಚಿ.
17
ಹೀಗಿರಲು ತನ್ನ ಬಲೆಗೆ ಸಿಕ್ಕಿದ್ದನ್ನು ಅವನು ನಿತ್ಯವೂ ಈಚೆಗೆ ಸುರಿಯುತ್ತಿರಲೋ, ಜನಾಂಗಗಳನ್ನು ಕರುಣಿಸದೆ ಸದಾ ಸಂಹರಿಸುತ್ತಿರಬೇಕೋ?
Jump to:
Chapter 1
Chapter 2
Chapter 3
Chapter 2 →
All chapters:
1
2
3