bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Hebrews 5
Hebrews 5
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 6 →
1
ಪ್ರತಿಯೊಬ್ಬ ಮಹಾಯಾಜಕನು ಮನುಷ್ಯರೊಳಗಿಂದ ಆರಿಸಲ್ಪಟ್ಟವನಾಗಿದ್ದು ಮನುಷ್ಯರಿಗೋಸ್ಕರ ದೇವರ ಕಾರ್ಯಗಳನ್ನು ಜರಗಿಸುವದಕ್ಕಾಗಿ ನೇವಿುಸಲ್ಪಡುತ್ತಾನಲ್ಲಾ. ಅವನು ಅವರಿಗೋಸ್ಕರ ಕಾಣಿಕೆಗಳನ್ನೂ ಪಾಪನಿವಾರಣಕ್ಕಾಗಿ ಯಜ್ಞಗಳನ್ನೂ ಸಮರ್ಪಿಸಬೇಕು.
2
ತಾನೂ ಬಲಹೀನನಾಗಿರುವದರಿಂದ ಅವನು ಜ್ಞಾನವಿಲ್ಲದವರನ್ನೂ ಮಾರ್ಗತಪ್ಪಿ ನಡೆಯುವವರನ್ನೂ ತಾಳ್ಮೆಯಿಂದ ಸಹಿಸಿಕೊಳ್ಳುವದಕ್ಕೆ ಶಕ್ತನಾಗಿರುವನು.
3
ಆ ಬಲಹೀನತೆಯ ಕಾರಣದಿಂದ ಅವನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪನಿವಾರಣಾರ್ಥವಾಗಿ ಯಜ್ಞಗಳನ್ನು ಮಾಡಬೇಕಾದವನಾಗಿದ್ದಾನೆ.
4
ಇದಲ್ಲದೆ ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವವನ್ನು ವಹಿಸಿಕೊಳ್ಳದೆ ದೇವರಿಂದ ನೇವಿುಸಲ್ಪಟ್ಟು ವಹಿಸಿಕೊಳ್ಳುತ್ತಾನೆ; ಆರೋನನು ಸಹ ದೇವರಿಂದಲೇ ನೇವಿುಸಲ್ಪಟ್ಟು ಆ ಗೌರವವನ್ನು ವಹಿಸಿಕೊಂಡನಲ್ಲಾ.
5
ಹಾಗೆಯೇ ಕ್ರಿಸ್ತನು ಸಹ ತನ್ನನ್ನು ಘನಪಡಿಸಿಕೊಂಡು ತನ್ನನ್ನು ತಾನೇ ಮಹಾಯಾಜಕನನ್ನಾಗಿ ಮಾಡಿಕೊಳ್ಳಲಿಲ್ಲ; ಆದರೆ - ನನಗೆ ನೀನು ಮಗನು; ನಾನೇ ಈಹೊತ್ತು ನಿನ್ನನ್ನು ಪಡೆದಿದ್ದೇನೆ
6
ಎಂದು ಹೇಳಿದಾತನೇ ಈ ಗೌರವವನ್ನು ಆತನಿಗೆ ಕೊಟ್ಟನು. ಆತನು ಇನ್ನೊಂದು ಸ್ಥಳದಲ್ಲಿ - ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹದ ಯಾಜಕನು ಎಂದು ಹೇಳುತ್ತಾನೆ.
7
ಕ್ರಿಸ್ತನು ತಾನು ಭೂಲೋಕದಲ್ಲಿದ್ದಾಗ ಮರಣಕ್ಕೆ ತಪ್ಪಿಸಿ ಕಾಪಾಡ ಶಕ್ತನಾಗಿರುವಾತನಿಗೆ ಬಲವಾಗಿ ಕೂಗುತ್ತಾ ಕಣ್ಣೀರನ್ನು ಸುರಿಸುತ್ತಾ ಪ್ರಾರ್ಥನೆ ವಿಜ್ಞಾಪನೆಗಳನ್ನು ಸಮರ್ಪಿಸಿ ದೇವರ ಮೇಲಣ ಭಯಭಕ್ತಿಯ ನಿವಿುತ್ತ ಕೇಳಲ್ಪಟ್ಟನು.
8
ಹೀಗೆ ಆತನು ಮಗನಾಗಿದ್ದರೂ ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡನು.
9
ಇದಲ್ಲದೆ ಆತನು ಸಿದ್ಧಿಗೆ ಬಂದು ದೇವರಿಂದ ಮೆಲ್ಕಿಜೆದೇಕನ ತರಹದ ಮಹಾಯಾಜಕನೆನಿಸಿಕೊಂಡವನಾಗಿ ತನಗೆ ವಿಧೇಯರಾಗಿರುವವರೆಲ್ಲರಿಗೂ ನಿರಂತರವಾದ ರಕ್ಷಣೆಗೆ ಕಾರಣನಾದನು.
11
ಈ ವಿಷಯದಲ್ಲಿ ನಾವು ಹೇಳಬೇಕಾದ ಮಾತು ಬಹಳ ಉಂಟು, ಆದರೆ ನಿಮ್ಮ ಕಿವಿಗಳು ಮಂದವಾದದರಿಂದ ಅದನ್ನು ವಿವರಿಸುವದು ಕಷ್ಟವಾಗಿದೆ.
12
ಕಾಲವನ್ನು ನೋಡಿದರೆ ನೀವು ಇಷ್ಟರೊಳಗೆ ಬೋಧಕರಾಗಿರಬೇಕಾಗಿದ್ದರೂ ಒಬ್ಬನು ನಿಮಗೆ ದೈವೋಕ್ತಿಗಳ ಮೂಲಪಾಠಗಳನ್ನು ತಿರಿಗಿ ಕಲಿಸಿಕೊಡಬೇಕಾಗಿದೆ; ನೀವು ಹಾಲು ಕುಡಿಯತಕ್ಕವರೇ ಹೊರತು ಗಟ್ಟಿಯಾದ ಆಹಾರವನ್ನು ತಿನ್ನತಕ್ಕವರಲ್ಲ.
13
ಹಾಲು ಬೇಕಾದವನು ಕೂಸಿನಂತಿದ್ದು ನೀತಿವಾಕ್ಯದಲ್ಲಿ ಅನುಭವವಿಲ್ಲದವನಾಗಿದ್ದಾನೆ.
14
ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೋಸ್ಕರ ಅಂದರೆ ಜ್ಞಾನೇಂದ್ರಿಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಇದು ಒಳ್ಳೇದು ಅದು ಕೆಟ್ಟದ್ದು ಎಂಬ ಭೇದವನ್ನು ತಿಳಿದವರಿಗೋಸ್ಕರವಾಗಿದೆ.
← Chapter 4
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 6 →
All chapters:
1
2
3
4
5
6
7
8
9
10
11
12
13