bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Hebrews 8
Hebrews 8
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 9 →
1
ನಾವು ಈಗ ಹೇಳುವ ಸಂಗತಿಗಳಲ್ಲಿ ಮುಖ್ಯವಾದ ಮಾತೇನಂದರೆ - ಪರಲೋಕದೊಳಗೆ ಮಹತ್ವವುಳ್ಳ ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾದಂಥ ಮಹಾಯಾಜಕನು ನಮಗಿದ್ದಾನೆ.
2
ಈತನು ಪವಿತ್ರಸ್ಥಾನದಲ್ಲಿ ಅಂದರೆ ಮನುಷ್ಯನು ಹಾಕದೆ ಕರ್ತನೇ ಹಾಕಿದ ನಿಜವಾದ ದೇವದರ್ಶನಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.
3
ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ ಯಜ್ಞಗಳನ್ನೂ ಸಮರ್ಪಿಸುವದಕ್ಕೆ ನೇಮಕವಾಗಿರುತ್ತಾನಷ್ಟೆ; ಆದದರಿಂದ ಸಮರ್ಪಿಸುವದಕ್ಕೆ ಈ ಮಹಾಯಾಜಕನಿಗೂ ಏನಾದರೂ ಇರಬೇಕು.
4
ಈತನು ಇನ್ನೂ ಭೂವಿುಯ ಮೇಲೆ ಇದ್ದದ್ದೇ ಆದರೆ ಯಾಜಕನಾಗಿರುತ್ತಿರಲಿಲ್ಲ; ಯಾಕಂದರೆ ಧರ್ಮನಿಯಮದ ಪ್ರಕಾರ ಕಾಣಿಕೆಗಳನ್ನು ಸಮರ್ಪಿಸುವವರು ಇದ್ದೇ ಇರುತ್ತಾರೆ;
5
ಅವರು ಪರಲೋಕದಲ್ಲಿರುವ ದೇವಾಲಯದ ಪ್ರತಿರೂಪವೂ ಛಾಯೆಯೂ ಆಗಿರುವ ಆಲಯದಲ್ಲಿ ಯಾಜಕತ್ವವನ್ನು ನಡಿಸುವವರು. ಮೋಶೆಯು ದೇವದರ್ಶನಗುಡಾರವನ್ನು ಮಾಡುವದಕ್ಕಿದ್ದಾಗ ಬೆಟ್ಟದಲ್ಲಿ ನಾನು ನಿನಗೆ ತೋರಿಸಿದ ಮಾದರಿಯ ಪ್ರಕಾರವೇ ಎಲ್ಲವನ್ನು ಮಾಡಿಸಬೇಕು ಎಂಬ ದೈವೋಕ್ತಿಯು ಅವನಿಗೆ ಉಂಟಾಯಿತಲ್ಲಾ.
6
ಆದರೆ ಯೇಸು ಅದಕ್ಕಿಂತ ಶ್ರೇಷ್ಠವಾದ ಯಾಜಕೋದ್ಯೋಗವನ್ನು ಹೊಂದಿದವನಾಗಿದ್ದಾನೆ; ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.
7
ಆ ಮೊದಲನೆಯ ಒಡಂಬಡಿಕೆಯು ದೋಷವಿಲ್ಲದ್ದಾಗಿದ್ದರೆ ಎರಡನೆಯ ಒಡಂಬಡಿಕೆಗೆ ಅವಕಾಶವು ಇರುತ್ತಿರಲಿಲ್ಲ.
8
ಆದರೆ ದೇವರು ಆ ಒಡಂಬಡಿಕೆಗೆ ಸೇರಿದವರ ಮೇಲೆ ತಪ್ಪುಹೊರಿಸಿ ಹೀಗೆಂದನು - ಇಗೋ, ನಾನು ಇಸ್ರಾಯೇಲ್ವಂಶದವರೊಂದಿಗೂ ಯೆಹೂದವಂಶದವರೊಂದಿಗೂ ಹೊಸದಾಗಿರುವ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವ ದಿನಗಳು ಬರುವವು ಎಂದು ಕರ್ತನು ಹೇಳುತ್ತಾನೆ;
9
ಈ ಒಡಂಬಡಿಕೆಯು ನಾನು ಇವರ ಪಿತೃಗಳನ್ನು ಕೈಹಿಡಿದು ಐಗುಪ್ತದೇಶದೊಳಗಿಂದ ಕರಕೊಂಡು ಬಂದ ಕಾಲದಲ್ಲಿ ಅವರ ಸಂಗಡ ಮಾಡಿಕೊಂಡ ಒಡಂಬಡಿಕೆಯಂಥದಲ್ಲ; ಅವರು ನನ್ನ ಒಡಂಬಡಿಕೆಯಲ್ಲಿ ಸ್ಥಿರವಾಗಿ ನಿಲ್ಲಲಿಲ್ಲವಾದದರಿಂದ ನಾನು ಅವರ ಚಿಂತೆಯನ್ನು ಬಿಟ್ಟೆನೆಂದು ಕರ್ತನು ಹೇಳುತ್ತಾನೆ.
10
ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;
11
ಒಂದೇ ಊರಿನವರೂ ಅಣ್ಣತಮ್ಮಂದಿರೂ ಒಬ್ಬರಿಗೊಬ್ಬರು - ಕರ್ತನ ಜ್ಞಾನವನ್ನು ಪಡೆಯಿರಿ ಎಂದು ಬೋಧಿಸಬೇಕಾಗಿರುವದಿಲ್ಲ; ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ನನ್ನ ಜ್ಞಾನವನ್ನು ಪಡೆದಿರುವರು;
12
ನಾನು ಅವರ ದುಷ್ಕೃತ್ಯಗಳ ವಿಷಯವಾಗಿ ಕ್ಷಮೆಯುಳ್ಳವನಾಗಿರುವೆನು, ಅವರ ಪಾಪಗಳನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯುತ್ತಾನೆ.
13
ಇಲ್ಲಿ ಹೊಸ ಒಡಂಬಡಿಕೆಯೆಂದು ಹೇಳಿದ್ದರಲ್ಲಿ ಮೊದಲಿದ್ದದ್ದನ್ನು ಹಳೇದಾಗಿ ಮಾಡಿದ್ದಾನೆ. ಆದರೆ ಹಳೇದಾಗುತ್ತಾ ಮುದಿಯಾಗುವಂಥದಕ್ಕೆ ಅಂತ್ಯವು ಸಮೀಪವಾಗಿದೆ.
← Chapter 7
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 9 →
All chapters:
1
2
3
4
5
6
7
8
9
10
11
12
13