bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Hosea 1
Hosea 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 2 →
1
ಯೆಹೂದದ ಅರಸನಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ, ಇವರ ಕಾಲದಲ್ಲಿ, ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಬೆಯೇರಿಯ ಮಗನಾದ ಹೋಶೇಯನಿಗೆ ಯೆಹೋವನು ದಯಪಾಲಿಸಿದ ವಾಕ್ಯವು.
2
ಯೆಹೋವನು ಹೋಶೇಯನ ಸಂಗಡ ಮೊದಲು ಮಾತಾಡಿದಾಗ ಆತನು ಅವನಿಗೆ - ನೀನು ಹೋಗಿ ವ್ಯಭಿಚಾರಿಣಿಯನ್ನು ಮದುವೆಮಾಡಿಕೊಂಡು ವ್ಯಭಿಚಾರದಿಂದಾಗುವ ಮಕ್ಕಳನ್ನು ಸೇರಿಸಿಕೋ; ದೇಶವು ನನ್ನನ್ನು ಬಿಟ್ಟು ಅಧಿಕ ವ್ಯಭಿಚಾರವನ್ನು ನಡಿಸುತ್ತದೆಂಬದಕ್ಕೆ ಇದು ದೃಷ್ಟಾಂತವಾಗಿರಲಿ ಎಂದು ಹೇಳಿದನು.
3
ಅದರಂತೆ ಹೋಶೇಯನು ಹೋಗಿ ದಿಬ್ಲಯಿಮನ ಮಗಳಾದ ಗೋಮೆರಳನ್ನು ಮದುವೆಯಾದನು. ಅವಳು ಗರ್ಭಿಣಿಯಾಗಿ ಅವನಿಗೆ ಗಂಡು ಮಗುವನ್ನು ಹೆತ್ತಾಗ
4
ಯೆಹೋವನು ಅವನನ್ನು ಕುರಿತು - ಈ ಮಗುವಿಗೆ ಇಜ್ರೇಲ್ ಎಂಬ ಹೆಸರಿಡು; ಇಜ್ರೇಲಿನಲ್ಲಿ ಸುರಿಸಿದ ರಕ್ತಕ್ಕೆ ಪ್ರತಿಯಾಗಿ ಸ್ವಲ್ಪ ಕಾಲದೊಳಗೆ ನಾನು ಯೇಹುವಂಶದವರಿಗೆ ಮುಯ್ಯಿತೀರಿಸಿ ಇಸ್ರಾಯೇಲ್ಜನಾಂಗವನ್ನು ನಿರ್ನಾಮಮಾಡುವೆನು;
5
ಆ ದಿನದಲ್ಲಿ ನಾನು ಇಜ್ರೇಲ್ ತಗ್ಗಿನೊಳಗೆ ಇಸ್ರಾಯೇಲಿನ ಬಿಲ್ಲನ್ನು ಮುರಿದುಬಿಡುವೆನು ಅಂದನು.
6
ಅವಳು ಪುನಃ ಗರ್ಭಿಣಿಯಾಗಿ ಹೆಣ್ಣುಮಗುವನ್ನು ಹೆತ್ತಾಗ ಯೆಹೋವನು ಹೋಶೇಯನನ್ನು ಕುರಿತು - ಈ ಮಗುವಿಗೆ ಲೋರುಹಾಮ ಎಂಬ ಹೆಸರಿಡು; ಏಕಂದರೆ ನಾನು ಇಸ್ರಾಯೇಲ್ ವಂಶದವರಲ್ಲಿ ಇನ್ನು ವಾತ್ಸಲ್ಯವಿಡುವದಿಲ್ಲ, ಅವರನ್ನು ಎಷ್ಟು ಮಾತ್ರವೂ ಕ್ಷವಿುಸುವದಿಲ್ಲ.
7
ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.
8
ಆ ಕೂಸು ಮೊಲೆಬಿಟ್ಟ ಮೇಲೆ ಅವಳು ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತಳು.
9
ಆಗ ಯೆಹೋವನು - ಈ ಮಗುವಿಗೆ ಲೋ ಅಮ್ಮಿ ಎಂಬ ಹೆಸರಿಡು; ಏಕಂದರೆ ನೀವು ನನ್ನ ಪ್ರಜೆಯಲ್ಲ, ನಾನು ಇನ್ನು ನಿಮ್ಮ ದೇವರಲ್ಲ ಅಂದನು.
10
ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.
11
ಯೆಹೂದ್ಯರೂ ಇಸ್ರಾಯೇಲ್ಯರೂ ಒಟ್ಟುಗೂಡಿ ಒಬ್ಬನನ್ನೇ ಶಿರಸ್ಸನ್ನಾಗಿ ಮಾಡಿಕೊಂಡು ದೇಶದೊಳಗಿಂದ ಹೊರಡುವರು; ಇಜ್ರೇಲಿನ ಸುದಿನವು ಅತಿವಿಶೇಷವಾದದ್ದು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 2 →
All chapters:
1
2
3
4
5
6
7
8
9
10
11
12
13
14