bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Hosea 2
Hosea 2
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 3 →
1
ನಿಮ್ಮ ಸಹೋದರರನ್ನು ಅಮ್ಮಿ, ನಿಮ್ಮ ಸಹೋದರಿಯರನ್ನು ರುಹಾಮ ಅನ್ನಿರಿ.
2
ನಿಮ್ಮ ತಾಯಿಯ ಸಂಗಡ ವಾದಿಸಿರಿ, ವಾದಿಸಿರಿ; ಅವಳು ನನ್ನ ಹೆಂಡತಿಯಲ್ಲ. ನಾನು ಅವಳ ಗಂಡನಲ್ಲ; ಅವಳು ಸೂಳೆತನವನ್ನು ತನ್ನ ಮುಖದಿಂದ, ವ್ಯಭಿಚಾರದ ಬೆಡಗನ್ನು ತನ್ನ ಸ್ತನಮಧ್ಯದಿಂದ ತೊಲಗಿಸಲಿ;
3
ಇಲ್ಲವಾದರೆ ನಾನು ಅವಳ ಬಟ್ಟೆಯನ್ನು ಕಿತ್ತು ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸಿಬಿಟ್ಟು ಕಾಡನ್ನಾಗಿ ಮಾಡಿ ಮರುಭೂವಿುಯ ಸ್ಥಿತಿಗೆ ತಂದು ನೀರಡಿಕೆಯಿಂದ ಸಾಯಿಸುವೆನು;
4
ಅವಳ ಮಕ್ಕಳನ್ನೂ ಕರುಣಿಸೆನು, ಅವರು ವ್ಯಭಿಚಾರದಿಂದಾದ ಮಕ್ಕಳಷ್ಟೆ.
5
ಅವರ ತಾಯಿಯು ಸೂಳೆತನ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ; ನನಗೆ ಬೇಕಾದ ಅನ್ನಪಾನಗಳನ್ನೂ ಉಣ್ಣೆನಾರುಗಳನ್ನೂ ತೈಲವನ್ನೂ ಪಾಯಸ ಪಾನಕಗಳನ್ನೂ ನನಗೆ ಕೊಡುವ ನನ್ನ ವಿುಂಡರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.
6
ಹೀಗಿರಲು, ಆಹಾ, ನಾನು ಅವಳ ದಾರಿಗೆ ಮುಳ್ಳುಬೇಲಿ ಹಾಕುವೆನು, ಬೇಕುಬೇಕಾದ ಹಾದಿಗಳನ್ನು ಹಿಡಿಯದಂತೆ ಅವಳಿಗೆ ಅಡ್ಡಗೋಡೆ ಕಟ್ಟುವೆನು.
7
ಅವಳು ತನ್ನ ವಿುಂಡರನ್ನು ಹಿಂದಟ್ಟಿದರೂ ಅವರನ್ನು ಸಂಧಿಸಳು; ಅವರನ್ನು ಹುಡುಕಿದರೂ ಅವರು ಸಿಕ್ಕರು; ಆಗ ಅವಳು - ನನ್ನ ಮದುವೆಯ ಗಂಡನ ಬಳಿಗೆ ಹಿಂದಿರುಗಿ ಹೋಗುವೆನು, ಈಗಿನ ನನ್ನ ಸ್ಥಿತಿಗಿಂತ ಆಗಿನ ಸ್ಥಿತಿಯು ಎಷ್ಟೋ ಲೇಸು ಅಂದುಕೊಳ್ಳುವಳು.
8
ತನ್ನ ಧಾನ್ಯದ್ರಾಕ್ಷಾರಸತೈಲಗಳು ನನ್ನಿಂದ ದೊರೆತವುಗಳೆಂದೂ ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿ ಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.
9
ಆದಕಾರಣ ನಾನು ನನ್ನ ಧಾನ್ಯದ್ರಾಕ್ಷಾರಸಗಳನ್ನು ಆಯಾ ಕಾಲದಲ್ಲಿ ಹಿಂದಕ್ಕೆ ತೆಗೆದುಕೊಳ್ಳುವೆನು, ಅವಳ ಮಾನವನ್ನು ಮರೆಮಾಡುವದಕ್ಕೆ ನಾನು ಕೊಟ್ಟ ಉಣ್ಣೆನಾರುಗಳನ್ನು ಕಿತ್ತುಬಿಡುವೆನು.
10
ಈಗ ಅವಳ ವಿುಂಡರ ಕಣ್ಣೆದುರಿಗೆ ಅವಳ ನಾಚಿಕೆಗೇಡಿತನವನ್ನು ಬೈಲಿಗೆ ತರುವೆನು; ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.
11
ನಾನು ಅವಳ ಉಲ್ಲಾಸ, ಹಬ್ಬ, ಅಮಾವಾಸ್ಯೆ, ಸಬ್ಬತ್ತು, ಮಹೋತ್ಸವ, ಇವುಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
12
ಅವಳು ಯಾವ ಅಂಜೂರ ದ್ರಾಕ್ಷೆಗಳನ್ನು ಇವು ನನ್ನ ವಿುಂಡರಿಂದಾದ ಪ್ರತಿಫಲ ಅಂದುಕೊಂಡಳೋ ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.
13
ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಸಿಂಗರಿಸಿಕೊಂಡು ವಿುಂಡರ ಹಿಂದೆಹೋಗಿ ಬಾಳ್ದೇವತೆಗಳ ಉತ್ಸವದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು; ಇದು ಯೆಹೋವನ ನುಡಿ.
14
ಆಹಾ, ನಾನು ಅವಳನ್ನು ಒಲಿಸಿ ಅಡವಿಗೆ ಕರಕೊಂಡು ಹೋಗಿ ಅವಳೊಂದಿಗೆ ಹೃದಯಂಗಮವಾಗಿ ಮಾತಾಡುವೆನು.
15
ಅವಳ ದ್ರಾಕ್ಷೆಯ ತೋಟಗಳನ್ನು ಅಲ್ಲಿರುವಾಗಲೇ ಅವಳಿಗೆ ಹಿಂದಕ್ಕೆ ಕೊಡುವೆನು; ಆಕೋರಿನ ತಗ್ಗನ್ನೇ ಅವಳ ಸುಖನಿರೀಕ್ಷೆಗೆ ದ್ವಾರವನ್ನಾಗಿ ಮಾಡುವೆನು; ಯೌವನದಲ್ಲಿ, ಐಗುಪ್ತ ದೇಶದೊಳಗಿಂದ ಹೊರಟುಬಂದ ದಿನದಲ್ಲಿ ಇದ್ದಂತೆ ಅಲ್ಲಿ ಒಲುಮೆಯಿಂದಿರುವಳು.
16
ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನೀನು ನನ್ನನ್ನು ಇನ್ನು ಬಾಳೀ ಅನ್ನದೆ ಈಶೀ ಅನ್ನುವಿ.
17
ನಾನು ಬಾಳ್ದೇವತೆಗಳ ಹೆಸರುಗಳನ್ನು ನಿನ್ನ ಬಾಯೊಳಗಿಂದ ತೊಲಗಿಸುವೆನು; ಅವುಗಳನ್ನು ಇನ್ನು ಎತ್ತದಿರುವಿ.
18
ಆ ಕಾಲದಲ್ಲಿ ನಾನು ನನ್ನ ಜನರಿಗಾಗಿ ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ನೆಲದ ಕ್ರಿವಿುಕೀಟಗಳಿಗೂ ನಿಬಂಧನೆಮಾಡಿ ವಿಧಿಸಿ ಬಿಲ್ಲುಕತ್ತಿಕಾಳಗಗಳನ್ನು ದೇಶದಲ್ಲಿ ನಿಲ್ಲದಂತೆ ಧ್ವಂಸಪಡಿಸಿ ನನ್ನ ಜನರು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
19
ನಾನು ನಿನ್ನನ್ನು ಶಾಶ್ವತವಾಗಿ ವರಿಸುವೆನು; ಹೌದು, ನೀತಿನ್ಯಾಯ ಪ್ರೀತಿದಯೆಗಳಿಂದ ನಿನ್ನನ್ನು ವರಿಸುವೆನು.
20
ನಾನು ನಿನ್ನನ್ನು ನಂಬಿಕೆಯಿಂದ ವರಿಸಲು ನೀನು ಯೆಹೋವನಾದ ನನ್ನನ್ನು ತಿಳಿದುಕೊಳ್ಳುವಿ.
21
ಯೆಹೋವನು ಇಂತೆನ್ನುತ್ತಾನೆ - ಆ ಕಾಲದಲ್ಲಿ ನಾನು ಒಲುಮೆ ತೋರಿಸುವೆನು; ಬೇಡುವ ಆಕಾಶಕ್ಕೆ ನಾನು ಒಲಿಯಲು ಬೇಡುವ ಭೂವಿುಗೆ ಅದು ಒಲಿಯುವದು.
22
ಬೇಡುವ ಧಾನ್ಯದ್ರಾಕ್ಷಾರಸತೈಲಗಳಿಗೆ ಭೂವಿುಯು ಒಲಿಯುವದು, ಬೇಡುವ ಇಜ್ರೇಲಿಗೆ ಅವು ಒಲಿಯುವವು.
23
ನಾನು ದೇಶದಲ್ಲಿ ಇಜ್ರೇಲನ್ನು ನನಗಾಗಿ ಬಿತ್ತಿಕೊಳ್ಳುವೆನು; ಲೋರುಹಾಮಳಿಗೆ ವಾತ್ಸಲ್ಯವನ್ನು ತೋರಿಸುವೆನು; ಲೋ ಅವ್ಮಿುಗೆ ನೀನು ನನ್ನ ಪ್ರಜೆಯೇ ಎಂದು ಹೇಳುವೆನು; ಅವರು ನನ್ನನ್ನು ನನ್ನ ದೇವರೇ ಎಂದು ಭಜಿಸುವರು.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 3 →
All chapters:
1
2
3
4
5
6
7
8
9
10
11
12
13
14