bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
James 1
James 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 2 →
1
ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದರಿರುವ [ಇಸ್ರಾಯೇಲ್] ಹನ್ನೆರಡು ಕುಲದವರಿಗೆ ಬರೆಯುವದು. ನಿಮಗೆ ಶುಭವಾಗಲಿ.
2
ನನ್ನ ಸಹೋದರರೇ, ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ತಾಳ್ಮೆಯನ್ನುಂಟುಮಾಡುತ್ತದೆಂದು ತಿಳಿದು ನೀವು ನಾನಾವಿಧವಾದ ಕಷ್ಟಗಳಲ್ಲಿ ಬಿದ್ದಿರುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ಎಣಿಸಿರಿ.
4
ಆ ತಾಳ್ಮೆಯು ಸಿದ್ಧಿಗೆ ಬರಲಿ; ಆಗ ನೀವು ಶಿಕ್ಷಿತರೂ ಸರ್ವಸುಗುಣವುಳ್ಳವರೂ ಏನೂ ಕಡಿಮೆಯಿಲ್ಲದವರೂ ಆಗಿರುವಿರಿ.
5
ನಿಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ.
6
ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಟ್ಟು ಕೇಳಿಕೊಳ್ಳಬೇಕು. ಸಂದೇಹಪಡುವವನೋ ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆಯಂತೆ ಅಲೆಯುತ್ತಿರುವನು.
7
ಆ ಮನುಷ್ಯನು ತಾನು ಕರ್ತನಿಂದ ಏನಾದರೂ ಹೊಂದುವೆನೆಂದು ಭಾವಿಸದೆ ಇರಲಿ;
8
ಅವನು ಎರಡು ಮನಸ್ಸುಳ್ಳವನೂ ತನ್ನ ನಡತೆಯಲ್ಲೆಲ್ಲಾ ಚಂಚಲನೂ ಆಗಿದ್ದಾನೆ.
9
ಹೀನಸ್ಥಿತಿಯಲ್ಲಿರುವ ಸಹೋದರನು ತಾನು ಉತ್ತಮಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ;
10
ಐಶ್ವರ್ಯವಂತನಾದ ಸಹೋದರನು ತಾನು ಹೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ. ಯಾಕಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿಹೋಗುವನು.
11
ಸೂರ್ಯನು ಉದಯಿಸಿ ಉಷ್ಣವಾದ ಗಾಳಿ ಬೀಸಿ ಹುಲ್ಲನ್ನು ಬಾಡಿಸಲು ಆ ಹುಲ್ಲಿನ ಹೂವು ಉದುರಿ ಅದರ ರೂಪದ ಸೊಗಸು ಕೆಡುವದಷ್ಟೆ. ಹೀಗೆಯೇ ಐಶ್ವರ್ಯವಂತನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುವನು.
12
ಕಷ್ಟವನ್ನು ಸಹಿಸಿಕೊಳ್ಳುವವನು ಧನ್ಯನು; ಅವನು ಪರಿಶೋಧಿತನಾದ ಮೇಲೆ ಜೀವವೆಂಬ ಜಯಮಾಲೆಯನ್ನು ಹೊಂದುವನು; ಸ್ವಾವಿುಯು ತನ್ನನ್ನು ಪ್ರೀತಿಸುವವರಿಗೆ ಇದನ್ನು ವಾಗ್ದಾನಮಾಡಿದ್ದಾನೆ.
13
ಯಾವನಾದರೂ ಪಾಪಮಾಡುವದಕ್ಕೆ ಪ್ರೇರೇಪಿಸಲ್ಪಡುವಾಗ - ಈ ಪ್ರೇರಣೆಯು ನನಗೆ ದೇವರಿಂದ ಉಂಟಾಯಿತೆಂದು ಹೇಳಬಾರದು. ದೇವರು ಕೆಟ್ಟದ್ದಕ್ಕೇನೂ ಸಂಬಂಧಪಟ್ಟವನಲ್ಲ; ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸುವದಿಲ್ಲ.
14
ಆದರೆ ಪ್ರತಿಯೊಬ್ಬನೂ ತನ್ನಲ್ಲಿರುವ ಆಶಾಪಾಶದಿಂದ ಎಳೆಯಲ್ಪಟ್ಟು ಮರುಳುಗೊಂಡವನಾಗಿ ಪ್ರೇರೇಪಿಸಲ್ಪಡುತ್ತಾನೆ.
15
ಆಮೇಲೆ ಆಶೆಯು ಬಸುರಾಗಿ ಪಾಪವನ್ನು ಹೆರುತ್ತದೆ; ಪಾಪವು ತುಂಬಾ ಬೆಳೆದು ಮರಣವನ್ನು ಹಡೆಯುತ್ತದೆ.
16
ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.
17
ಎಲ್ಲಾ ಒಳ್ಳೇ ದಾನಗಳೂ ಕುಂದಿಲ್ಲದ ಎಲ್ಲಾ ವರಗಳೂ ಮೇಲಣಿಂದ ಸಕಲವಿಧವಾದ ಬೆಳಕಿಗೂ ಮೂಲಕಾರಣನಾದವನಿಂದ ಇಳಿದುಬರುತ್ತವೆ. ಆತನಲ್ಲಿ ಚಂಚಲತ್ವವೇನೂ ಇಲ್ಲ, ವ್ಯತ್ಯಾಸದ ಸೂಚನೆಯೂ ಇಲ್ಲ.
18
ಆತನು ತನ್ನ ಸುಚಿತ್ತದ ಪ್ರಕಾರ ಸತ್ಯಬೋಧನೆಯ ವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಆತನ ಸೃಷ್ಟಿಗಳಲ್ಲಿ ಪ್ರಥಮಫಲದಂತಾದೆವು.
19
ನನ್ನ ಪ್ರಿಯ ಸಹೋದರರೇ, ನೀವು ಬಲ್ಲವರು. ಆದರೆ ಪ್ರತಿಯೊಬ್ಬನು ಕಿವಿಗೊಡುವದರಲ್ಲಿ ತೀವ್ರವಾಗಿಯೂ ಮಾತಾಡುವದರಲ್ಲಿ ನಿಧಾನವಾಗಿಯೂ ಇರಲಿ. ಕೋಪಿಸುವದರಲ್ಲಿಯೂ ನಿಧಾನವಾಗಿರಲಿ;
20
ಮನುಷ್ಯನ ಕೋಪವು ದೇವರಿಗೆ ಮೆಚ್ಚಿಕೆಯಾಗಿರುವ ನೀತಿಗೆ ಅನುಕೂಲವಾಗುವದಿಲ್ಲ.
21
ಆದಕಾರಣ ಎಲ್ಲಾ ನೀಚತನವನ್ನೂ ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ವಾಕ್ಯಕ್ಕೆ ನಮ್ರತೆಯಿಂದ ಎಡೆಗೊಡಿರಿ; ಅದು ನಿಮ್ಮ ಆತ್ಮಗಳನ್ನು ರಕ್ಷಿಸುವದಕ್ಕೆ ಸಾಮರ್ಥ್ಯವುಳ್ಳದ್ದಾಗಿದೆ.
22
ವಾಕ್ಯದ ಪ್ರಕಾರ ನಡೆಯುವವರಾಗಿರಿ; ಅದನ್ನು ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಬೇಡಿರಿ.
23
ಯಾವನಾದರೂ ವಾಕ್ಯವನ್ನು ಕೇಳುವವನಾದರೂ ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಹುಟ್ಟು ಮುಖವನ್ನು ನೋಡಿದ ಮನುಷ್ಯನಂತಿರುವನು;
24
ಇವನು ತನ್ನನ್ನು ನೋಡಿಕೊಂಡು ಹೋಗಿ ತಾನು ಹೀಗಿದ್ದೇನೆಂಬದನ್ನು ಆ ಕ್ಷಣವೇ ಮರೆತುಬಿಡುವನು.
25
ಆದರೆ ಬಿಡುಗಡೆಯನ್ನುಂಟುಮಾಡುವ ಸರ್ವೋತ್ತಮ ಧರ್ಮಪ್ರಮಾಣವನ್ನು ಲಕ್ಷ್ಯಕೊಟ್ಟು ನೋಡಿ ಇನ್ನೂ ನೋಡುತ್ತಲೇ ಇರುವವನು ವಾಕ್ಯವನ್ನು ಕೇಳಿ ಮರೆತು ಹೋಗುವವನಾಗಿರದೆ ಅದರ ಪ್ರಕಾರ ನಡೆಯುವವನಾಗಿದ್ದು ತನ್ನ ನಡತೆಯಿಂದ ಧನ್ಯನಾಗುವನು.
26
ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನವಾಗಿದೆ.
27
ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
Jump to:
Chapter 1
Chapter 2
Chapter 3
Chapter 4
Chapter 5
Chapter 2 →
All chapters:
1
2
3
4
5