bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Job 3
Job 3
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 4 →
1
ಆಮೇಲೆ ಯೋಬನು ಬಾಯಿ ತೆರೆದು ತನ್ನ ಜನ್ಮದಿವಸವನ್ನು ಶಪಿಸಿ ಇಂತೆಂದನು -
2
ನಾನು ಹುಟ್ಟಿದ ದಿನವು ಹಾಳಾಗಿ ಹೋಗಲಿ,
3
ಗರ್ಭದಲ್ಲಿ ಪುರುಷಾಂಕುರವಾಯಿತೆಂದು ನುಡಿದ ರಾತ್ರಿಯು ನಾಶವಾಗಲಿ;
4
ಆ ದಿವಸವು ಕತ್ತಲೆಯಾಗಲಿ, ಮೇಲಿನಿಂದ ದೇವರು ಅದನ್ನು ಲೆಕ್ಕಿಸದಿರಲಿ, ಅದರ ಮೇಲೆ ಬೆಳಕು ಪ್ರಕಾಶಿಸದಿರಲಿ;
5
ಕತ್ತಲೆಯೂ ಘೋರಾಂಧಕಾರವೂ ಅದನ್ನು ವಶಮಾಡಿಕೊಳ್ಳಲಿ; ಮೋಡವು ಅದನ್ನು ಕವಿಯಲಿ, ಹಗಲನ್ನು ಮುಚ್ಚಿಕೊಳ್ಳುವ ಮೊಬ್ಬು ಅದನ್ನು ಹೆದರಿಸಲಿ;
6
ಕಾರ್ಗತ್ತಲು ಆ ರಾತ್ರಿಯನ್ನು ಹಿಡಿದುಕೊಳ್ಳಲಿ, ಅದು ಮಾಸಗಳ ಲೆಕ್ಕದಲ್ಲಿ ಸೇರದೆ ಸಂವತ್ಸರದ ದಿನಗಳಲ್ಲಿ ಹರ್ಷಿಸದೆ ಇರಲಿ.
7
ಹಾ, ಆ ರಾತ್ರಿಯು ಬಂಜೆಯಾಗಿ ಅದರಲ್ಲಿ ಉತ್ಸಾಹಧ್ವನಿಯು ಉಂಟಾಗದಿರಲಿ.
8
ಘಟಸರ್ಪವನ್ನು ಎಬ್ಬಿಸುವದರಲ್ಲಿಯೂ ದಿನಗಳನ್ನು ಶಪಿಸುವದರಲ್ಲಿಯೂ ಜಾಣರಾದ [ಮಾಂತ್ರಿಕರು] ಅದಕ್ಕೆ ಶಾಪ ಕೊಡಲಿ.
9
ಆ ದಿನದಲ್ಲಿ ಮುಂಜಾನೆಯ ನಕ್ಷತ್ರಗಳೂ ವಿುಣುಕದೆ ಹೋಗಲಿ, ಅದು ಬೆಳಕನ್ನು ಎದುರುನೋಡಿದರೂ ಹೊಂದದಿರಲಿ, ಅರುಣೋದಯವೆಂಬ ರೆಪ್ಪೆ ತೆರೆಯುವದನ್ನು ಅದು ಕಾಣದಿರಲಿ.
10
ಆ ರಾತ್ರಿಯು ನನ್ನ ತಾಯಿಯ ಗರ್ಭ ದ್ವಾರವನ್ನು ಮುಚ್ಚಿ ನನ್ನ ಕಣ್ಣುಗಳಿಗೆ ಶ್ರಮೆಯನ್ನು ಮರೆ ಮಾಡಲಿಲ್ಲವಲ್ಲಾ.
11
ನಾನು ಹುಟ್ಟುವಾಗಲೇ ಏಕೆ ಸಾಯಲಿಲ್ಲ? ಗರ್ಭದಿಂದ ಬಂದಾಗಲೇ ಏಕೆ ಪ್ರಾಣ ಬಿಡಲಿಲ್ಲ?
12
ತಂದೆಯ ತೊಡೆಯು ನನ್ನನ್ನು ಹೊತ್ತದ್ದೇಕೆ? ತಾಯಿಯ ಮೊಲೆಗಳು ಕುಡಿಯಗೊಟ್ಟದ್ದೇಕೆ?
13
ಹಾಗಿಲ್ಲದಿದ್ದರೆ ನಾನು ಮಲಗಿ ಸುಮ್ಮನಿದ್ದು ನಿದ್ರೆಮಾಡುತ್ತಿದ್ದೆನು;
14
ಭೂಲೋಕದಲ್ಲಿ ಹಾಳುಬಿದ್ದ ಪಟ್ಟಣಗಳನ್ನು ತಮಗಾಗಿ ಕಟ್ಟಿಸಿಕೊಂಡ ಅರಸರೊಂದಿಗೂ ಮಂತ್ರಿಗಳೊಡನೆಯೂ
15
ಬಂಗಾರವನ್ನು ಕೂಡಿಸಿಟ್ಟು ತಮ್ಮ ಮನೆಗಳನ್ನು ಬೆಳ್ಳಿಯಿಂದ ತುಂಬಿಸಿದ ಅಧಿಪತಿಗಳ ಸಂಗಡಲೂ ವಿಶ್ರವಿುಸಿಕೊಳ್ಳುತ್ತಿದ್ದೆನು.
16
ಒಂದು ವೇಳೆ ನಾನು ಗರ್ಭಸ್ರಾವವಾಗಿ ಬಿದ್ದ ಹೂಳಿಟ್ಟ ಪಿಂಡದಂತೆಯಾಗಲಿ ಬೆಳಕನ್ನೇ ಕಾಣದೆ ಸತ್ತ ಕೂಸುಗಳಂತೆಯಾಗಲಿ ಆಗಿದ್ದರೆ ಜನ್ಮವಿಲ್ಲದೆ ಇರುತ್ತಿದ್ದೆನು.
17
ಅಲ್ಲಿ ದುಷ್ಟರ ಆಗ್ರಹವು ಅಣಗಿ ಹೋಗುವದು, ದಣಿದವರು ದಣುವಾರಿಸಿಕೊಳ್ಳುವರು.
18
ಸೆರೆಯಾದವರು ಬಾಧಿಸುವ ಅಧಿಕಾರಿಯ ಧ್ವನಿಯನ್ನೇ ಕೇಳದೆ ಗುಂಪುಗುಂಪಾಗಿ ವಿಶ್ರವಿುಸಿಕೊಳ್ಳುವರು.
19
ಅಲ್ಲಿ ದೊಡ್ಡವರು, ಚಿಕ್ಕವರು ಎಂಬ ಭೇದವಿಲ್ಲಾ, ಆಳು, ಒಡೆಯ ಎಂಬ ಕಟ್ಟಳೆಯೂ ಇಲ್ಲ.
20
ಕಷ್ಟದಲ್ಲಿರುವವನಿಗೆ ಬೆಳಕನ್ನು ಮನನೊಂದವರಿಗೆ ಜೀವವನ್ನು ಕೊಡುವದೇಕೆ?
21
ಅವರು ನಿಕ್ಷೇಪಕ್ಕಾಗಿ ಅಗೆಯುವ ಆಶೆಗಿಂತಲೂ ಹೆಚ್ಚಾದ ಆಶೆಯಿಂದ ಮರಣವನ್ನು ಹಾರೈಸಿ ಹುಡುಕಿದರೂ ಅದು ದೊರೆಯದು.
22
ಸಮಾಧಿಗೆ ಸೇರುವಾಗ ಬಹಳವಾಗಿ ಹರ್ಷಿಸಿ ಉಲ್ಲಾಸಪಡುತ್ತಾರೆ.
23
ದೇವರು ಒಬ್ಬನ ಸುತ್ತಲೂ ಬೇಲಿ ಹಾಕಿ ದಾರಿಕಟ್ಟಿದ ಮೇಲೆ [ಅವನಿಗೆ ಏಕೆ ಬೆಳಕನ್ನು ಕೊಡುತ್ತಾನೆ?]
24
ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ.
25
ನನಗೆ ಭಯವು ಹುಟ್ಟಿದೊಡನೆಯೇ ಆಪತ್ತು ಸಂಭವಿಸುವದು. ನಾನು ಯಾವದಕ್ಕೆ ಹೆದರುತ್ತೇನೋ ಅದು ತಪ್ಪದೆ ಬರುವದು.
26
ನನಗೆ ಯಾವ ಶಾಂತಿಯೂ ವಿಶ್ರಾಂತಿಯೂ ಉಪಶಮನವೂ ಇರುವದಿಲ್ಲ; ಯಾವಾಗಲೂ ಕಳವಳವೇ.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 28
Chapter 29
Chapter 30
Chapter 31
Chapter 32
Chapter 33
Chapter 34
Chapter 35
Chapter 36
Chapter 37
Chapter 38
Chapter 39
Chapter 40
Chapter 41
Chapter 42
Chapter 4 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27
28
29
30
31
32
33
34
35
36
37
38
39
40
41
42