bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
John 10
John 10
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 11 →
1
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರೀಹಟ್ಟಿಯೊಳಗೆ ಬಾಗಲಿಂದ ಬಾರದೆ ಮತ್ತೆಲ್ಲಿಂದಾದರೂ ಹತ್ತಿಬರುವವನು ಕಳ್ಳನೂ ಸುಲುಕೊಳ್ಳುವವನೂ ಆಗಿದ್ದಾನೆ.
2
ಬಾಗಲಿಂದ ಒಳಗೆ ಬರುವವನು ಆ ಕುರಿಗಳ ಕುರುಬನು.
3
ಬಾಗಲು ಕಾಯುವವನು ಅವನಿಗೆ ಬಾಗಲನ್ನು ತೆರೆಯುತ್ತಾನೆ, ಕುರಿಗಳು ಅವನ ಸ್ವರಕ್ಕೆ ಕಿವಿಗೊಡುತ್ತವೆ.
4
ಅವನು ಸ್ವಂತ ಕುರಿಗಳನ್ನು ಹೆಸರು ಹೇಳಿ ಕರೆದು ಹೊರಗೆ ಬಿಡುತ್ತಾನೆ. ಸ್ವಂತ ಕುರಿಗಳನ್ನೆಲ್ಲಾ ಹೊರಗೆ ಬಿಟ್ಟ ಮೇಲೆ ತಾನು ಅವುಗಳ ಮುಂದೆ ಹೋಗುತ್ತಾನೆ; ಕುರಿಗಳು ಅವನ ಸ್ವರವನ್ನು ತಿಳುಕೊಂಡು ಅವನ ಹಿಂದೆ ಹೋಗುತ್ತವೆ.
5
ಅವು ಅನ್ಯರ ಸ್ವರವನ್ನು ತಿಳಿಯುವದಿಲ್ಲ; ಅನ್ಯನ ಹಿಂದೆ ಹೋಗದೆ ಅವನ ಬಳಿಯಿಂದ ಓಡಿಹೋಗುತ್ತವೆ.
6
ಈ ಉಪಮಾನವನ್ನು ಯೇಸು ಅವರಿಗೆ ಹೇಳಿದನು; ಆದರೂ ಆತನ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.
7
ಆದಕಾರಣ ಯೇಸು ಮತ್ತೂ ಅವರಿಗೆ - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಕುರಿಗಳಿಗೆ ನಾನೇ ಬಾಗಲಾಗಿದ್ದೇನೆ.
8
ನನಗಿಂತ ಮುಂಚೆ ಬಂದವರೆಲ್ಲರು ಕಳ್ಳರೂ ಸುಲುಕೊಳ್ಳುವವರೂ ಆಗಿದ್ದಾರೆ; ಆದರೆ ಕುರಿಗಳು ಅವರಿಗೆ ಕಿವಿಗೊಡಲಿಲ್ಲ.
9
ನಾನೇ ಆ ಬಾಗಲು; ನನ್ನ ಮುಖಾಂತರವಾಗಿ ಯಾವನಾದರೂ ಒಳಗೆ ಹೋದರೆ ಸುರಕ್ಷಿತವಾಗಿದ್ದು ಒಳಗೆ ಹೋಗುವನು, ಹೊರಗೆ ಬರುವನು, ಮೇವನ್ನು ಕಂಡುಕೊಳ್ಳುವನು.
10
ಕಳ್ಳನು ಕದ್ದುಕೊಳ್ಳುವದಕ್ಕೂ ಕೊಯ್ಯುವದಕ್ಕೂ ಹಾಳುಮಾಡುವದಕ್ಕೂ ಬರುತ್ತಾನೆ ಹೊರತು ಮತ್ತಾವದಕ್ಕೂ ಬರುವದಿಲ್ಲ; ನಾನಾದರೋ ಅವುಗಳಿಗೆ ಜೀವವು ಇರಬೇಕೆಂತಲೂ ಅದು ಸಮೃದ್ಧಿಯಾಗಿ ಇರಬೇಕೆಂತಲೂ ಬಂದೆನು.
11
ನಾನೇ ಒಳ್ಳೇ ಕುರುಬನು; ಒಳ್ಳೇ ಕುರುಬನು ತನ್ನ ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.
12
ಕೂಲಿಯಾಳು ಕುರುಬನೂ ಕುರಿಗಳ ಒಡೆಯನೂ ಆಗಿರದೆ ತೋಳ ಬರುವದನ್ನು ಕಾಣುತ್ತಲೇ ಕುರಿಗಳನ್ನು ಬಿಟ್ಟು ಓಡಿಹೋಗುತ್ತಾನೆ; ತೋಳವು ಅವುಗಳನ್ನು ಹಿಡುಕೊಂಡು ಹಿಂಡನ್ನು ಚದರಿಸುತ್ತದೆ.
13
ಅವನು ಕೂಲಿಯಾಳು; ಕುರಿಗಳ ಚಿಂತೆ ಅವನಿಗಿಲ್ಲ.
14
ನಾನೇ ಒಳ್ಳೇ ಕುರುಬನು; ತಂದೆಯು ನನ್ನನ್ನು ನಾನು ತಂದೆಯನ್ನು ತಿಳಿದಿರುವಂತೆಯೇ ನಾನು ನನ್ನ ಕುರಿಗಳನ್ನು ತಿಳಿದಿದ್ದೇನೆ; ನನ್ನ ಕುರಿಗಳು ನನ್ನನ್ನು ತಿಳಿದವೆ; ಮತ್ತು ಕುರಿಗಳಿಗೋಸ್ಕರ ನನ್ನ ಪ್ರಾಣವನ್ನು ಕೊಡುತ್ತೇನೆ.
16
ಇದಲ್ಲದೆ ಈ ಹಟ್ಟಿಗೆ ಸೇರದಿರುವ ಇನ್ನು ಬೇರೆ ಕುರಿಗಳು ನನಗೆ ಅವೆ, ಅವುಗಳನ್ನೂ ನಾನು ತರಬೇಕು; ಅವು ನನ್ನ ಸ್ವರಕ್ಕೆ ಕಿವಿಗೊಡುವವು; ಆಗ ಒಂದೇ ಹಿಂಡು ಆಗುವದು, ಒಬ್ಬನೇ ಕುರುಬನಿರುವನು.
17
ನಾನು ತಿರಿಗಿ ಪಡಕೊಳ್ಳುತ್ತೇನೆಂದು ನನ್ನ ಪ್ರಾಣವನ್ನು ಕೊಡುತ್ತೇನೆ; ಅದರ ನಿವಿುತ್ತವಾಗಿ ತಂದೆಯು ನನ್ನನ್ನು ಪ್ರೀತಿಸುತ್ತಾನೆ.
18
ನನ್ನ ಪ್ರಾಣವನ್ನು ಯಾರೂ ನನ್ನಿಂದ ತೆಗೆಯರು, ನನ್ನಷ್ಟಕ್ಕೆ ನಾನೇ ಅದನ್ನು ಕೊಡುತ್ತೇನೆ; ಅದನ್ನು ಕೊಡುವದಕ್ಕೆ ನನಗೆ ಅಧಿಕಾರ ಉಂಟು, ಅದನ್ನು ತಿರಿಗಿ ಪಡಕೊಳ್ಳುವದಕ್ಕೆ ನನಗೆ ಅಧಿಕಾರ ಉಂಟು; ಈ ಅಪ್ಪಣೆಯನ್ನು ನನ್ನ ತಂದೆಯಿಂದ ಹೊಂದಿದ್ದೇನೆ ಅಂದನು.
19
ಈ ಮಾತುಗಳ ದೆಸೆಯಿಂದ ಯೆಹೂದ್ಯರಲ್ಲಿ ತಿರಿಗಿ ಭೇದವಾಯಿತು.
20
ಅವರಲ್ಲಿ ಅನೇಕರು - ಅವನಿಗೆ ದೆವ್ವಹಿಡಿದದೆ, ಹುಚ್ಚುಹಿಡಿದದೆ, ಯಾಕೆ ಅವನ ಮಾತು ಕೇಳುತ್ತೀರಿ? ಅಂದರು.
21
ಮತ್ತು ಕೆಲವರು - ಇವು ದೆವ್ವಹಿಡಿದವನ ಮಾತುಗಳಲ್ಲ; ದೆವ್ವವು ಕುರುಡರಿಗೆ ಕಣ್ಣುಕೊಡಬಲ್ಲದೇ? ಅಂದರು.
22
ಆ ಕಾಲದಲ್ಲಿ ದೇವಾಲಯಪ್ರತಿಷ್ಠೆಯ ಹಬ್ಬವು ಯೆರೂಸಲೇವಿುನಲ್ಲಿ ನಡೆಯಿತು; ಆಗ ಚಳಿಕಾಲವಾಗಿತ್ತು.
23
ಯೇಸು ದೇವಾಲಯದೊಳಗೆ ಸೊಲೊಮೋನನ ಮಂಟಪದಲ್ಲಿ ತಿರುಗಾಡುತ್ತಾ ಇರುವಾಗ ಯೆಹೂದ್ಯರು ಆತನನ್ನು ಸುತ್ತಿಕೊಂಡು -
24
ಇನ್ನು ಎಷ್ಟು ಕಾಲ ನಮ್ಮಲ್ಲಿ ಅನುಮಾನ ಹುಟ್ಟಿಸುತ್ತೀ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು ಅಂದರು.
25
ಅದಕ್ಕೆ ಯೇಸು - ನಿಮಗೆ ಹೇಳಿದೆನು, ಆದರೆ ನೀವು ನಂಬದೆ ಇದ್ದೀರಿ; ನನ್ನ ತಂದೆಯ ಹೆಸರಿನಲ್ಲಿ ನಾನು ಮಾಡುವ ಕ್ರಿಯೆಗಳೇ ನನಗೆ ಸಾಕ್ಷಿಯಾಗಿವೆ.
26
ಆದರೂ ನೀವು ನನ್ನ ಕುರಿಗಳಿಗೆ ಸೇರಿದವರಲ್ಲವಾದದರಿಂದ ನಂಬದೆ ಇದ್ದೀರಿ.
27
ನನ್ನ ಕುರಿಗಳು ನನ್ನ ಸ್ವರಕ್ಕೆ ಕಿವಿಗೊಡುತ್ತವೆ; ನಾನು ಅವುಗಳನ್ನು ಬಲ್ಲೆನು; ಅವು ನನ್ನ ಹಿಂದೆ ಬರುತ್ತವೆ.
28
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದೇ ಇಲ್ಲ; ಅವುಗಳನ್ನು ಯಾರೂ ನನ್ನ ಕೈಯೊಳಗಿಂದ ಕಸಕೊಳ್ಳರು.
29
ನನ್ನ ತಂದೆಯು ನನಗೆ ಕೊಟ್ಟದ್ದು ಎಲ್ಲಾದ್ದಕ್ಕಿಂತ ದೊಡ್ಡದು; ಅದನ್ನು ತಂದೆಯ ಕೈಯೊಳಗಿಂದ ಯಾರೂ ಕಸಕೊಳ್ಳಲಾರರು.
30
ನಾನೂ ತಂದೆಯೂ ಒಂದಾಗಿದ್ದೇವೆ ಅಂದನು.
31
ಯೆಹೂದ್ಯರು ಆತನನ್ನು ಹೊಡೆದು ಕೊಲ್ಲಬೇಕೆಂದು ತಿರಿಗಿ ಕಲ್ಲುಗಳನ್ನು ತೆಗೆದುಕೊಂಡು ಬರಲು
32
ಯೇಸು ಅವರನ್ನು - ತಂದೆಯ ಕಡೆಯಿಂದ ಅನೇಕ ಒಳ್ಳೇ ಕ್ರಿಯೆಗಳನ್ನು ನಿಮಗೆ ತೋರಿಸಿದೆನು; ಅವುಗಳಲ್ಲಿ ಯಾವ ಕ್ರಿಯೆಯ ದೆಸೆಯಿಂದ ನನ್ನ ಮೇಲೆ ಕಲ್ಲೆಸೆಯುತ್ತೀರಿ ಎಂದು ಕೇಳಿದ್ದಕ್ಕೆ
33
ಯೆಹೂದ್ಯರು - ನಾವು ನಿನ್ನ ಮೇಲೆ ಕಲ್ಲೆಸೆಯುವದು ಒಳ್ಳೇ ಕಾರ್ಯದ ದೆಸೆಯಿಂದಲ್ಲ, ದೇವದೂಷಣೆಯ ದೆಸೆಯಿಂದಲೂ ನೀನು ಮನುಷ್ಯನಾಗಿದ್ದು ನಿನ್ನನ್ನು ನೀನೇ ದೇವರನ್ನಾಗಿ ಮಾಡಿಕೊಳ್ಳುವದರ ದೆಸೆಯಿಂದಲೂ ನಿನ್ನ ಮೇಲೆ ಕಲ್ಲೆಸೆಯುತ್ತೇವೆ ಅಂದರು.
34
ಅದಕ್ಕೆ ಯೇಸು - ನೀವು ದೇವರುಗಳೇ ಎಂದು ನಾನು ಹೇಳಿದೆನು ಎಂಬದಾಗಿ ನಿಮ್ಮ ಧರ್ಮಶಾಸ್ತ್ರದಲ್ಲಿ ಬರೆದದೆಯಲ್ಲಾ; ಶಾಸ್ತ್ರವು ಸುಳ್ಳಾಗಲಾರದಷ್ಟೆ;
35
ಹಾಗಾದರೆ ದೇವರ ವಾಕ್ಯವನ್ನು ಹೊಂದಿದವರನ್ನು ದೇವರುಗಳೆಂದು ಆತನು ಹೇಳಿರುವಲ್ಲಿ
36
ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ನಾನು ದೇವರ ಮಗನಾಗಿದ್ದೇನೆಂದು ಹೇಳಿದ್ದಕ್ಕೆ ನೀನು ದೇವದೂಷಣೆ ಮಾಡುತ್ತೀ ಅನ್ನುತ್ತೀರೋ?
37
ನಾನು ನನ್ನ ತಂದೆಯ ಕ್ರಿಯೆಗಳನ್ನು ಮಾಡದಿದ್ದರೆ ನನ್ನ ಮಾತನ್ನು ನಂಬಬೇಡಿರಿ;
38
ಮಾಡಿದರೆ ನನ್ನ ಮಾತನ್ನು ನಂಬದೆ ಇದ್ದರೂ ಆ ಕ್ರಿಯೆಗಳ ಸಾಕ್ಷಿಯನ್ನಾದರೂ ನಂಬಿರಿ; ಆಗ ನನ್ನಲ್ಲಿ ತಂದೆಯು ಇದ್ದಾನೆಂತಲೂ ತಂದೆಯಲ್ಲಿ ನಾನು ಇದ್ದೇನೆಂತಲೂ ನೀವು ತಿಳುಕೊಂಡು ಮನನಮಾಡಿಕೊಳ್ಳುವಿರಿ ಅಂದನು.
39
ಅವರು ತಿರಿಗಿ ಆತನನ್ನು ಹಿಡಿಯುವದಕ್ಕೆ ನೋಡಿದರು; ಆದರೆ ಅವರ ಕೈಗೆ ತಪ್ಪಿಸಿಕೊಂಡು ಹೋದನು.
40
ಆಮೇಲೆ ಆತನು ಯೊರ್ದನ್ಹೊಳೆಯ ಆಚೆ ಯೋಹಾನನು ಮೊದಲು ಸ್ನಾನಮಾಡಿಸುತ್ತಿದ್ದ ಸ್ಥಳಕ್ಕೆ ತಿರಿಗಿ ಹೋಗಿ ಅಲ್ಲಿ ಇದ್ದನು.
41
ಅನೇಕರು ಆತನ ಬಳಿಗೆ ಬಂದು - ಯೋಹಾನನು ಒಂದು ಸೂಚಕಕಾರ್ಯವನ್ನೂ ಮಾಡಲಿಲ್ಲ; ಆದರೆ ಈತನ ವಿಷಯವಾಗಿ ಯೋಹಾನನು ಹೇಳಿದ್ದೆಲ್ಲಾ ನಿಜವಾಗಿತ್ತು ಎಂದು ಮಾತಾಡುತ್ತಿದ್ದರು.
42
ಅಲ್ಲಿ ಅನೇಕರು ಆತನನ್ನು ನಂಬಿದರು.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 11 →
All chapters:
1
2
3
4
5
6
7
8
9
10
11
12
13
14
15
16
17
18
19
20
21