bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
John 7
John 7
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 8 →
1
ಈ ಸಂಗತಿಗಳಾದ ಮೇಲೆ ಯೇಸು ಗಲಿಲಾಯದಲ್ಲಿ ಸಂಚಾರಮಾಡುತ್ತಿದ್ದನು; ಯೆಹೂದ್ಯರು ಆತನನ್ನು ಕೊಲ್ಲುವ ಪ್ರಯತ್ನದಲ್ಲಿದ್ದದರಿಂದ ಆತನಿಗೆ ಯೂದಾಯದಲ್ಲಿ ಸಂಚಾರಮಾಡುವ ಮನಸ್ಸಿರಲಿಲ್ಲ.
2
ಪರ್ಣಶಾಲೆಗಳ ಹಬ್ಬವೆಂಬ ಯೆಹೂದ್ಯರದೊಂದು ಜಾತ್ರೆಯು ಸಮೀಪವಾದಾಗ
3
ಆತನ ತಮ್ಮಂದಿರು ಆತನಿಗೆ - ನೀನು ಮಾಡುವ ಕಾರ್ಯಗಳನ್ನು ನಿನ್ನ ಶಿಷ್ಯರು ಸಹ ನೋಡುವಂತೆ ಇಲ್ಲಿಂದ ಹೊರಟು ಯೂದಾಯಕ್ಕೆ ಹೋಗು;
4
ಪ್ರಸಿದ್ಧಿಗೆ ಬರಬೇಕೆಂದಿರುವ ಯಾವನಾದರೂ ತಾನು ಮಾಡುವದನ್ನು ಮರೆಯಲ್ಲಿ ಮಾಡುವದಿಲ್ಲವಲ್ಲಾ; ನೀನು ಇಂಥ ಕಾರ್ಯಗಳನ್ನು ಮಾಡುವವನಾದ್ದರಿಂದ ಲೋಕಕ್ಕೆ ತಿಳಿಯಪಡಿಸಿಕೋ ಎಂದು ಹೇಳಿದರು.
5
ಯಾಕಂದರೆ ಆತನ ಸಹೋದರರು ಸಹ ಆತನನ್ನು ನಂಬದೆ ಇದ್ದರು.
6
ಯೇಸು ಅವರಿಗೆ - ನನ್ನ ಸಮಯವು ಇನ್ನೂ ಬಂದಿಲ್ಲ; ನಿಮ್ಮ ಸಮಯವು ಯಾವಾಗಲೂ ಸಿದ್ಧವಾಗಿದೆ.
7
ಲೋಕವು ನಿಮ್ಮನ್ನು ಹಗೆಮಾಡಲಾರದು; ಆದರೆ ನಾನು ಅದರ ಕ್ರಿಯೆಗಳು ಕೆಟ್ಟವುಗಳೆಂದು ಸಾಕ್ಷಿಹೇಳುವದರಿಂದ ನನ್ನನ್ನು ಹಗೆಮಾಡುತ್ತದೆ.
8
ನೀವೇ ಜಾತ್ರೆಗೆ ಹೋಗಿರಿ; ನನ್ನ ಸಮಯವು ಇನ್ನೂ ಒದಗದೆ ಇರುವದರಿಂದ ನಾನು ಈ ಜಾತ್ರೆಗೆ ಈಗ ಹೋಗುವದಿಲ್ಲವೆಂದು ಹೇಳಿದನು.
9
ಇದನ್ನು ಹೇಳಿ ಗಲಿಲಾಯದಲ್ಲಿಯೇ ನಿಂತನು.
10
ಆದರೆ ಆತನ ಸಹೋದರರು ಜಾತ್ರೆಗೆ ಹೋದ ಮೇಲೆ ಆತನು ಸಹ ಹೋದನು; ಜನರಿಗೆ ಕಾಣುವಂತೆ ಹೋಗದೆ ಮರೆಯಾಗಿ ಹೋದನು.
11
ಜಾತ್ರೆಯಲ್ಲಿ ಯೆಹೂದ್ಯರು - ಅವನು ಎಲ್ಲಿದ್ದಾನೆಂದು ಆತನನ್ನು ಹುಡುಕುತ್ತಿದ್ದರು.
12
ಮತ್ತು ಜನರ ಗುಂಪುಗಳಲ್ಲಿ ಆತನ ವಿಷಯವಾಗಿ ಬಹಳ ಗುಜುಗುಜು ಮಾತು ನಡೆಯುತ್ತಿತ್ತು. ಕೆಲವರು - ಆತನು ಒಳ್ಳೆಯವನು ಅಂದರು; ಇನ್ನು ಕೆಲವರು - ಅಲ್ಲ, ಜನರನ್ನು ತಪ್ಪಾದ ಮಾರ್ಗಕ್ಕೆ ಎಳೆಯುತ್ತಾನೆ ಅಂದರು.
13
ಆದರೂ ಯೆಹೂದ್ಯರ ಭಯದಿಂದ ಯಾರೂ ಆತನ ವಿಷಯದಲ್ಲಿ ಧಾರಾಳವಾಗಿ ಮಾತಾಡಲಿಲ್ಲ.
14
ಜಾತ್ರೆಯ ಮಧ್ಯಕಾಲದಲ್ಲಿ ಯೇಸು ದೇವಾಲಯಕ್ಕೆ ಹೋಗಿ ಬೋಧಿಸುತ್ತಿದ್ದನು.
15
ಯೆಹೂದ್ಯರು ಅದಕ್ಕೆ ಆಶ್ಚರ್ಯಪಟ್ಟು - ವಿದ್ಯಾಭ್ಯಾಸ ಮಾಡದಿರುವ ಈತನಿಗೆ ಶಾಸ್ತ್ರಗಳು ತಿಳಿದಿರುವದು ಹೇಗೆ ಎಂದು ಹೇಳುತ್ತಿದ್ದರು.
16
ಅದಕ್ಕೆ ಯೇಸು - ನಾನು ಹೇಳುವ ಬೋಧನೆಯು ನನ್ನದಲ್ಲ, ನನ್ನನ್ನು ಕಳುಹಿಸಿದಾತನದು.
17
ಆತನ ಚಿತ್ತದಂತೆ ನಡೆಯುವದಕ್ಕೆ ಯಾರಿಗೆ ಮನಸ್ಸದೆಯೋ ಅವರಿಗೆ ಈ ಬೋಧನೆಯು ದೇವರಿಂದ ಬಂದದ್ದೋ ನಾನೇ ಕಲ್ಪಿಸಿ ಹೇಳಿದ್ದೋ ಗೊತ್ತಾಗುವದು.
18
ಕಲ್ಪಿಸಿ ಹೇಳುವವನು ತನಗೆ ಮಾನ ಬರಬೇಕೆಂದು ಅಪೇಕ್ಷಿಸುತ್ತಾನೆ; ತನ್ನನ್ನು ಕಳುಹಿಸಿದವನಿಗೆ ಮಾನಬರಬೇಕೆಂದು ಅಪೇಕ್ಷಿಸುವವನು ಸತ್ಯವಂತನು, ಅಧರ್ಮವು ಅವನಲ್ಲಿ ಇಲ್ಲ.
19
ಮೋಶೆಯು ನಿಮಗೆ ಧರ್ಮಶಾಸ್ತ್ರವನ್ನು ಕೊಟ್ಟಿದ್ದರೂ ನಿಮ್ಮಲ್ಲಿ ಒಬ್ಬನಾದರೂ ಧರ್ಮಶಾಸ್ತ್ರದಂತೆ ನಡೆಯುವದಿಲ್ಲವಲ್ಲಾ; ಯಾಕೆ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ? ಎಂದು ಹೇಳಿದನು.
20
ಅದಕ್ಕೆ ಆ ಜನರು - ನಿನಗೆ ದೆವ್ವ ಹಿಡಿದದೆ; ಯಾರು ನಿನ್ನನ್ನು ಕೊಲ್ಲುವದಕ್ಕೆ ನೋಡುತ್ತಾರೆ? ಅಂದರು.
21
ಯೇಸು ಅವರಿಗೆ - ಒಂದೇ ಕ್ರಿಯೆಯನ್ನು ಮಾಡಿದೆನು; ಅದಕ್ಕೆ ನೀವೆಲ್ಲರು ಬೆರಗಾಗಿದ್ದೀರಿ.
22
ಮೋಶೆಯು ನಿಮಗೆ ಸುನ್ನತಿಯೆಂಬ ಸಂಸ್ಕಾರವನ್ನು ನೇವಿುಸಿದನು. ಅದು ಮೋಶೆಯಿಂದ ಬಂದದ್ದೆಂದು ನಾನು ಹೇಳುವದಿಲ್ಲ, ಮೂಲಪುರುಷರ ಕಾಲದಿಂದ ಬಂದದ್ದು. ಮತ್ತು ಆ ಸುನ್ನತಿಯನ್ನು ಸಬ್ಬತ್ದಿನದಲ್ಲಿಯೂ ಮಾಡುತ್ತೀರಿ.
23
ಮೋಶೆಯ ನೇಮವನ್ನು ಮೀರಬಾರದೆಂದು ಒಬ್ಬನು ಸಬ್ಬತ್ದಿನದಲ್ಲಿ ಸುನ್ನತಿಮಾಡಿಸಿಕೊಳ್ಳುವದಾದರೆ ನಾನು ಸಬ್ಬತ್ದಿನದಲ್ಲಿ ಒಬ್ಬ ಮನುಷ್ಯನನ್ನು ಸಂಪೂರ್ಣವಾಗಿ ಸ್ವಸ್ಥಮಾಡಿದ್ದಕ್ಕೆ ನನ್ನ ಮೇಲೆ ಕೋಪಗೊಳ್ಳುತ್ತೀರೋ?
24
ಕಣ್ಣಿಗೆ ತೋರಿದ್ದರ ಮೇಲೆ ತೀರ್ಪುಮಾಡಬೇಡಿರಿ; ನ್ಯಾಯವಾದ ತೀರ್ಪುಮಾಡಿರಿ ಎಂದು ಹೇಳಿದನು.
25
ಯೆರೂಸಲೇವಿುನವರಲ್ಲಿ ಕೆಲವರು - ಇವನನ್ನಲ್ಲವೇ ಅವರು ಕೊಲ್ಲಬೇಕೆಂದಿರುವದು?
26
ನೋಡಿರಿ, ಇವನು ಧಾರಾಳವಾಗಿ ಮಾತಾಡುತ್ತಾನೆ, ಅವರು ಅವನಿಗೆ ಏನೂ ಹೇಳುವದಿಲ್ಲ. ಹಿರೀಸಭೆಯವರು ಇವನೇ ಬರಬೇಕಾದ ಕ್ರಿಸ್ತನೆಂದು ನಿಶ್ಚಯಮಾಡಿಕೊಂಡಿದ್ದಾರೇನೋ?
27
ಆದರೂ ಇವನು ಎಲ್ಲಿಯವನೆಂದು ಬಲ್ಲೆವು; ಕ್ರಿಸ್ತನು ಬರುವಾಗ ಅವನು ಎಲ್ಲಿಯವನೋ ಒಬ್ಬರಿಗೂ ತಿಳಿಯುವದಿಲ್ಲವೆಂದು ಮಾತಾಡಿಕೊಳ್ಳುತ್ತಿದ್ದರು.
28
ಯೇಸು ಇದನ್ನು ತಿಳಿದು ದೇವಾಲಯದಲ್ಲಿ ಉಪದೇಶ ಮಾಡುವಾಗ - ನನ್ನನ್ನು ಬಲ್ಲಿರಿ, ನಾನು ಎಲ್ಲಿಯವನೆಂದು ಬಲ್ಲಿರಿ ನಿಜವೇ. ಆದರೂ ನಾನು ನನ್ನಷ್ಟಕ್ಕೆ ಬಂದವನಲ್ಲ, ನನ್ನನ್ನು ಕಳುಹಿಸಿದಾತನು ನಿಜವಾದವನು; ನೀವು ಆತನನ್ನು ಅರಿತವರಲ್ಲ.
29
ನಾನು ಆತನನ್ನು ಬಲ್ಲೆನು; ಆತನ ಕಡೆಯಿಂದ ಬಂದವನಾದದರಿಂದಲೂ ನನ್ನನ್ನು ಆತನೇ ಕಳುಹಿಸಿದ್ದರಿಂದಲೂ ಆತನನ್ನು ಬಲ್ಲೆನೆಂದು ಕೂಗಿ ಹೇಳಿದನು.
30
ಇದಕ್ಕಾಗಿ ಆತನನ್ನು ಹಿಡಿಯುವದಕ್ಕೆ ನೋಡುತ್ತಿದ್ದರು; ಆದರೆ ಆತನ ಕಾಲ ಇನ್ನೂ ಬಾರದೆ ಇದ್ದಕಾರಣ ಯಾರೂ ಆತನ ಮೇಲೆ ಕೈಹಾಕಲಿಲ್ಲ.
31
ಜನರಲ್ಲಿ ಅನೇಕರು ಆತನನ್ನು ನಂಬಿ - ಕ್ರಿಸ್ತನು ಬಂದಾಗ ಈತನು ಮಾಡಿದ್ದಕ್ಕಿಂತ ಹೆಚ್ಚು ಸೂಚಕಕಾರ್ಯಗಳನ್ನು ಮಾಡಾನೋ ಎಂದು ಹೇಳಿದರು.
32
ಜನರು ಆತನ ವಿಷಯವಾಗಿ ಗುಜುಗುಜು ಆಡಿದ ಈ ಮಾತುಗಳನ್ನು ಫರಿಸಾಯರು ಕೇಳಲು ಮಹಾಯಾಜಕರೂ ಫರಿಸಾಯರೂ ಆತನನ್ನು ಹಿಡಿಯುವದಕ್ಕೆ ಓಲೇಕಾರರನ್ನು ಕಳುಹಿಸಿದರು.
33
ಆಗ ಯೇಸು - ಇನ್ನು ಸ್ವಲ್ಪಕಾಲ ನಾನು ನಿಮ್ಮಲ್ಲಿ ಇದ್ದು ಆಮೇಲೆ ನನ್ನನ್ನು ಕಳುಹಿಸಿದಾತನ ಬಳಿಗೆ ಹೊರಟು ಹೋಗುತ್ತೇನೆ.
34
ನೀವು ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ, ನಾನು ಇರುವಲ್ಲಿಗೆ ನೀವು ಬರಲಾರಿರಿ ಅಂದನು.
35
ಅದಕ್ಕೆ ಯೆಹೂದ್ಯರು - ಇವನು ನಮಗೆ ಸಿಕ್ಕದ ಹಾಗೆ ಎಲ್ಲಿ ಹೋಗಬೇಕೆಂದಿರುತ್ತಾನೆ? ಗ್ರೀಕರೊಳಗೆ ಚದರಿಕೊಂಡಿರುವ ನಮ್ಮವರ ಬಳಿಗೆ ಹೋಗಿ ಆ ಗ್ರೀಕರಿಗೆ ಉಪದೇಶ ಮಾಡಬೇಕೆಂದಿರುತ್ತಾನೋ?
36
ನನ್ನನ್ನು ಹುಡುಕುವಿರಿ, ಆದರೆ ನನ್ನನ್ನು ಕಂಡುಕೊಳ್ಳದೆ ಹೋಗುವಿರಿ, ನಾನು ಇರುವಲ್ಲಿಗೆ ನೀವು ಬರಲಾರಿರಿ ಎಂದು ಅವನು ಹೇಳಿದ ಮಾತು ಏನಿದ್ದೀತು? ಎಂಬದಾಗಿ ತಮ್ಮತಮ್ಮೊಳಗೆ ಮಾತಾಡಿಕೊಂಡರು.
37
ಆ ಜಾತ್ರೆಯ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು - ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.
38
ನನ್ನನ್ನು ನಂಬಿದವನ ಹೊಟ್ಟೆಯೊಳಗಿಂದ ಶಾಸ್ತ್ರದಲ್ಲಿ ಹೇಳಿರುವ ಪ್ರಕಾರ ಜೀವಕರವಾದ ನೀರಿನ ಹೊಳೆಗಳು ಹರಿಯುವವು ಎಂದು ಕೂಗಿ ಹೇಳಿದನು.
39
ಇದನ್ನು ಯೇಸು ತನ್ನನ್ನು ನಂಬಿದವರು ಹೊಂದಲಿರುವ ಪವಿತ್ರಾತ್ಮವರವನ್ನು ಕುರಿತು ಹೇಳಿದನು; ಆತನು ಇನ್ನೂ ತನ್ನ ಮಹಿಮೆಯ ಪದವಿಯನ್ನು ಹೊಂದದೆ ಇದ್ದಕಾರಣ ಪವಿತ್ರಾತ್ಮವರವು ಇನ್ನೂ ಬಂದಿದ್ದಿಲ್ಲ.
40
ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿ - ನಿಜವಾಗಿ ಈತನು ಬರಬೇಕಾದ ಪ್ರವಾದಿ ಅಂದರು;
41
ಮತ್ತು ಕೆಲವರು - ಈತನು ಬರಬೇಕಾದ ಕ್ರಿಸ್ತನು ಅಂದರು.
42
ಇನ್ನೂ ಕೆಲವರು - ಕ್ರಿಸ್ತನು ಗಲಿಲಾಯದಿಂದ ಬರುವದು ಹೇಗೆ? ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬದಾಗಿ ಶಾಸ್ತ್ರದಲ್ಲಿ ಉಂಟಲ್ಲವೇ ಎಂದು ಹೇಳಿದರು.
43
ಹೀಗೆ ಜನರಲ್ಲಿ ಆತನನ್ನು ಕುರಿತು ಭೇದ ಉಂಟಾಯಿತು.
44
ಅವರಲ್ಲಿ ಕೆಲವರು ಆತನನ್ನು ಹಿಡಿಯಬೇಕೆಂದಿದ್ದರೂ ಒಬ್ಬರೂ ಆತನ ಮೇಲೆ ಕೈಹಾಕಲಿಲ್ಲ.
45
ಬಳಿಕ ಆ ಓಲೇಕಾರರು ಮಹಾಯಾಜಕರ ಮತ್ತು ಫರಿಸಾಯರ ಬಳಿಗೆ ಬಂದಾಗ ಇವರು - ನೀವು ಯಾಕೆ ಅವನನ್ನು ಹಿಡತರಲಿಲ್ಲ? ಎಂದು ಅವರನ್ನು ಕೇಳಿದ್ದಕ್ಕೆ
46
ಆ ಓಲೇಕಾರರು - ಈ ಮನುಷ್ಯನು ಮಾತಾಡುವ ರೀತಿಯಲ್ಲಿ ಯಾರೂ ಎಂದೂ ಮಾತಾಡಿದ್ದಿಲ್ಲ ಎಂದು ಉತ್ತರಕೊಟ್ಟರು.
47
ಅದಕ್ಕೆ ಫರಿಸಾಯರು - ನೀವೂ ಮರುಳಾದಿರಾ?
48
ಹಿರೀಸಭೆಯವರಲ್ಲಿಯಾಗಲಿ ಫರಿಸಾಯರಲ್ಲಿಯಾಗಲಿ ಯಾರಾದರೂ ಅವನನ್ನು ನಂಬಿದ್ದಾರೋ?
49
ಧರ್ಮಶಾಸ್ತ್ರವನ್ನರಿಯದಂಥ ಈ ಹಿಂಡು ಶಾಪಗ್ರಸ್ತವಾದದ್ದೇ ಅಂದರು.
50
ಮುಂಚೆ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಅವರಲ್ಲಿ ಒಬ್ಬನಾಗಿದ್ದನು;
51
ಅವನು ಅವರಿಗೆ - ನಮ್ಮ ಧರ್ಮಶಾಸ್ತ್ರವು ಮೊದಲು ಒಬ್ಬನನ್ನು ವಿಚಾರಿಸಿ ಅವನು ಮಾಡುವದೇನೆಂದು ತಿಳುಕೊಳ್ಳದೆ ಅವನ ವಿಷಯವಾಗಿ ತೀರ್ಪುಮಾಡುವದುಂಟೇ? ಎಂದು ಹೇಳಿದ್ದಕ್ಕೆ
52
ಅವರು - ನೀನೂ ಗಲಿಲಾಯದವನೋ? ಗಲಿಲಾಯದಲ್ಲಿ ಪ್ರವಾದಿ ಹುಟ್ಟುವದೇ ಇಲ್ಲ, ವಿಚಾರಿಸಿ ನೋಡು ಅಂದರು.
53
[ಎಲ್ಲರು ತಮ್ಮ ತಮ್ಮ ಮನೆಗೆ ಹೋದರು.
← Chapter 6
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 8 →
All chapters:
1
2
3
4
5
6
7
8
9
10
11
12
13
14
15
16
17
18
19
20
21