bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Jonah 4
Jonah 4
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 3
Jump to:
Chapter 1
Chapter 2
Chapter 3
Chapter 4
1
ಇದರಿಂದ ಯೋನನಿಗೆ ಬಹು ಕರಕರೆಯಾಯಿತು;
2
ಅವನು ಸಿಟ್ಟುಗೊಂಡು - ಯೆಹೋವಾ, ಲಾಲಿಸು, ನಾನು ಸ್ವದೇಶದಲ್ಲಿರುವಾಗಲೇ ಹೀಗಾಗುವದೆಂದು ಹೇಳಿದೆನಷ್ಟೆ; ನೀನು ದಯೆಯೂ ಕನಿಕರವೂ ದೀರ್ಘಶಾಂತಿಯೂ ಮಹಾಕೃಪೆಯೂ ಉಳ್ಳ ದೇವರು, ಮಾಡಬೇಕೆಂದಿದ್ದ ಕೇಡಿಗೆ ಮನಮರುಗುವವನು ಎಂದು ನಾನು ತಿಳಿದೇ ತಾರ್ಷೀಷಿಗೆ ಓಡಿ ಹೋಗಲು ತ್ವರೆಪಟ್ಟೆನು.
3
ಈಗ, ಯೆಹೋವನೇ, ನನ್ನ ಪ್ರಾಣವನ್ನು ತೆಗೆ; ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ವಿಜ್ಞಾಪಿಸಿಕೊಂಡನು.
4
ಅದಕ್ಕೆ ಯೆಹೋವನು - ನೀನು ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಿದನು.
5
ಅನಂತರ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಲಲ್ಲಿ ಒಂದು ಗುಡಿಸಲನ್ನು ಮಾಡಿಕೊಂಡು ಪಟ್ಟಣವು ಏನಾಗುವದೋ ಎಂದು ನೋಡುತ್ತಾ ಅದರ ನೆರಳಿನಲ್ಲಿ ಕೂತುಕೊಂಡಿದ್ದನು.
6
ಆಗ ದೇವರಾದ ಯೆಹೋವನು ಯೋನನ ಮೇಲ್ಗಡೆ ಒಂದು ಸೋರೆಗಿಡವು ಹಬ್ಬಿ ಅವನ ತಲೆಗೆ ನೆರಳಾಗಿ ಅವನ ಕರಕರೆಯನ್ನು ತಪ್ಪಿಸುವಂತೆ ಏರ್ಪಡಿಸಿದನು. ಆ ಸೋರೆಗಿಡದಿಂದ ಯೋನನಿಗೆ ಬಹು ಸಂತೋಷವಾಯಿತು.
7
ಮಾರಣೆಯ ಅರುಣೋದಯದಲ್ಲಿ ದೇವರು ಒಂದು ಹುಳಕ್ಕೆ ಅಪ್ಪಣೆಮಾಡಿದನು; ಅದು ಸೋರೆಗಿಡವನ್ನು ಹೊಡೆಯಲು ಒಣಗಿ ಹೋಯಿತು.
8
ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.
9
ಆಗ ದೇವರು ಯೋನನನ್ನು - ನೀನು ಸೋರೆಗಿಡಕ್ಕಾಗಿ ಸಿಟ್ಟುಗೊಳ್ಳುವದು ಸರಿಯೋ ಎಂದು ಕೇಳಲು ಯೋನನು - ಮರಣವಾಗುವಷ್ಟು ಸಿಟ್ಟುಗೊಳ್ಳುವದು ಸರಿಯೇ ಎಂದು ಉತ್ತರಕೊಟ್ಟನು.
10
ಅದಕ್ಕೆ ಯೆಹೋವನು - ನೀನು ಆ ಸೋರೆಗಿಡಕ್ಕಾಗಿ ಕಷ್ಟಪಡಲಿಲ್ಲ, ಬೆಳೆಯಿಸಲಿಲ್ಲ; ಅದು ಒಂದು ರಾತ್ರಿಯಲ್ಲಿ ಹುಟ್ಟಿ ಒಂದು ರಾತ್ರಿಯಲ್ಲಿ ನಾಶವಾಯಿತು;
11
ಇಂಥ ಗಿಡಕ್ಕಾಗಿ ನೀನು ಕನಿಕರಪಟ್ಟಿರುವಲ್ಲಿ ಎಡಗೈ ಬಲಗೈ ತಿಳಿಯದ ಒಂದು ಲಕ್ಷ ಇಪ್ಪತ್ತು ಸಾವಿರ ನರಪ್ರಾಣಿಗಳೂ ಬಹು ಪಶುಗಳೂ ಉಳ್ಳ ಆ ದೊಡ್ಡ ಪಟ್ಟಣವಾದ ನಿನೆವೆಗಾಗಿ ನಾನು ಕನಿಕರಪಡಬಾರದೋ ಅಂದನು.
← Chapter 3
Jump to:
Chapter 1
Chapter 2
Chapter 3
Chapter 4
All chapters:
1
2
3
4