bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Joshua 10
Joshua 10
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 11 →
1
ಯೆಹೋಶುವನು ಯೆರಿಕೋವನ್ನೂ ಅದರ ಅರಸನನ್ನೂ ಹೇಗೋ ಹಾಗೆಯೇ ಆಯಿ ಎಂಬ ಪಟ್ಟಣವನ್ನೂ ಅದರ ಅರಸನನ್ನೂ ತೆಗೆದುಕೊಂಡು ಸಂಹರಿಸಿ ಬಿಟ್ಟನೆಂಬದನ್ನೂ
2
ಆಯಿ ಎಂಬ ಊರಿಗಿಂತ ದೊಡ್ಡದೂ ಒಂದು ರಾಜಧಾನಿಯಷ್ಟು ಶ್ರೇಷ್ಠವೂ ಆಗಿರುವ ಗಿಬ್ಯೋನ್ ಪಟ್ಟಣದಲ್ಲಿರುವ ಜನರು ತಾವೆಲ್ಲರೂ ಯುದ್ಧವೀರರಾಗಿದ್ದರೂ ಇಸ್ರಾಯೇಲ್ಯರ ಮಧ್ಯದಲ್ಲಿ ಜೀವದಿಂದುಳಿಯುವದಕ್ಕೋಸ್ಕರ ಅವರ ಸಂಗಡ ಒಡಂಬಡಿಕೆ ಮಾಡಿಕೊಂಡರೆಂಬದನ್ನೂ ಯೆರೂಸಲೇವಿುನ ಅರಸನಾದ ಅದೋನೀಚೆದೆಕನು ಕೇಳಿ ಬಹಳವಾಗಿ ಭಯಪಟ್ಟು
3
ಹೆಬ್ರೋನಿನ ಅರಸನಾದ ಹೋಹಾಮ್, ಯರ್ಮೂತಿನ ಅರಸನಾದ ಪಿರಾಮ್, ಲಾಕೀಷಿನ ಅರಸನಾದ ಯಾಫೀಯ, ಎಗ್ಲೋನಿನ ಅರಸನಾದ ದೆಬೀರ್ ಇವರ ಬಳಿಗೆ ದೂತರನ್ನು ಕಳುಹಿಸಿ -
4
ನೀವು ಬಂದು ನನಗೆ ಸಹಾಯ ಮಾಡಿರಿ; ನಾವು ಯೆಹೋಶುವನ ಸಂಗಡಲೂ ಇಸ್ರಾಯೇಲ್ಯರ ಸಂಗಡಲೂ ಒಡಂಬಡಿಕೆಮಾಡಿಕೊಂಡ ಗಿಬ್ಯೋನ್ಯರನ್ನು ಸೋಲಿಸೋಣ ಎಂದು ಹೇಳಿಸಿದನು.
5
ಆಗ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದು ಮಂದಿ ಅಮೋರಿಯ ರಾಜರು ದಂಡೆತ್ತಿ ಕೂಡಿಬಂದು ಗಿಬ್ಯೋನಿಗೆ ಮುತ್ತಿಗೆಹಾಕಿ ಯುದ್ಧಮಾಡಿದರು.
6
ಗಿಬ್ಯೋನ್ಯರು ಗಿಲ್ಗಾಲಿನಲ್ಲಿದ್ದ ಯೆಹೋಶುವನ ಪಾಳೆಯಕ್ಕೆ ದೂತರನ್ನು ಕಳುಹಿಸಿ - ನಿನ್ನ ಸೇವಕರನ್ನು ಕೈಬಿಡಬೇಡ; ಬೇಗ ಬಂದು ಸಹಾಯಮಾಡು; ನಮಗೆ ವಿರೋಧವಾಗಿ ಕೂಡಿ ಬಂದಿರುವ ಈ ಬೆಟ್ಟದ ಸೀಮೆಯ ಎಲ್ಲಾ ಅಮೋರಿಯ ರಾಜರಿಂದ ನಮ್ಮನ್ನು ತಪ್ಪಿಸು ಎಂದು ಬೇಡಿಕೊಂಡರು.
7
ಆಗ ಯೆಹೋಶುವನು ಎಲ್ಲಾ ಭಟರ ಮತ್ತು ಯುದ್ಧವೀರರ ಸಹಿತವಾಗಿ ಗಿಲ್ಗಾಲಿನಿಂದ ಹೊರಟನು.
8
ಯೆಹೋವನು ಯೆಹೋಶುವನಿಗೆ - ಅವರಿಗೆ ಹೆದರಬೇಡ; ಅವರನ್ನು ನಿನ್ನ ಕೈಗೆ ಒಪ್ಪಿಸಿದ್ದೇನೆ. ಅವರಲ್ಲಿ ಒಬ್ಬನೂ ನಿನ್ನ ಮುಂದೆ ನಿಲ್ಲುವದಿಲ್ಲ ಎಂದು ಹೇಳಿದನು.
9
ಯೆಹೋಶುವನು ಗಿಲ್ಗಾಲ್ ಬಿಟ್ಟು ರಾತ್ರಿಯೆಲ್ಲಾ ಪ್ರಯಾಣಮಾಡಿ ತಟ್ಟನೆ ಅವರ ಮೇಲೆ ಬಿದ್ದನು.
10
ಯೆಹೋವನು ಇಸ್ರಾಯೇಲ್ಯರ ಮುಂದೆ ಅವರನ್ನು ಕಳವಳಗೊಳಿಸಿದ್ದರಿಂದ ಯೆಹೋಶುವನು ಅವರನ್ನು ಗಿಬ್ಯೋನಿನ ಹತ್ತಿರ ಪೂರ್ಣವಾಗಿ ಸೋಲಿಸಿ ಬೇತ್ಹೋರೋನ್ ಎಂಬ ಗಟ್ಟದ ದಾರಿಯಲ್ಲಿ ಅಜೇಕ, ಮಕ್ಕೇದ ಎಂಬ ಊರುಗಳವರೆಗೂ ಅವರನ್ನು ಹಿಂದಟ್ಟಿ ಸಂಹರಿಸಿದನು.
11
ಅವರು ಇಸ್ರಾಯೇಲ್ಯರಿಗೆ ಬೆಂಗೊಟ್ಟು ಬೇತ್ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಯೆಹೋವನು ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿ ಅನೇಕರನ್ನು ಸಾಯಿಸಿದನು. ಇಸ್ರಾಯೇಲ್ಯರ ಕತ್ತಿಯಿಂದ ಸಂಹೃತರಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚು ಮಂದಿ.
12
ಯೆಹೋವನು ಅಮೋರಿಯರನ್ನು ಇಸ್ರಾಯೇಲ್ಯರಿಗೆ ಒಪ್ಪಿಸಿದ ದಿನದಲ್ಲಿ ಯೆಹೋಶುವನು ಯೆಹೋವನಿಗೆ ಒಂದು ವಿಜ್ಞಾಪನೆ ಮಾಡಿದನು. ಸೂರ್ಯನೇ, ನೀನು ಗಿಬ್ಯೋನಿನಲ್ಲಿಯೂ ಚಂದ್ರನೇ, ನೀನು ಅಯ್ಯಾಲೋನ್ ತಗ್ಗಿನಲ್ಲಿಯೂ ನಿಲ್ಲಿರಿ! ಎಂದು ಇಸ್ರಾಯೇಲ್ಯರ ಸಮಕ್ಷದಲ್ಲಿ ಆಜ್ಞಾಪಿಸಲು
13
ಇಸ್ರಾಯೇಲ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವವರೆಗೆ ಸೂರ್ಯಚಂದ್ರರು ಹಾಗೆಯೇ ನಿಂತರು. ಈ ಮಾತು ಯಾಷಾರ್ಗ್ರಂಥದಲ್ಲಿ ಬರೆದದೆಯಲ್ಲಾ! ಹೀಗೆ ಸೂರ್ಯನು ಮುಣುಗಲಿಕ್ಕೆ ಆತುರಪಡದೆ ಹೆಚ್ಚುಕಡಿಮೆ ಒಂದು ದಿವಸ ಪೂರ್ತಿ ಆಕಾಶ ಮಧ್ಯದಲ್ಲಿಯೇ ನಿಂತನು.
14
ಯೆಹೋವನು ಈ ಪ್ರಕಾರ ಒಬ್ಬ ಮನುಷ್ಯನ ಮಾತಿಗೆ ಕಿವಿಗೊಟ್ಟ ದಿವಸವು ಅದಕ್ಕಿಂತ ಹಿಂದೆಯೂ ಮುಂದೆಯೂ ಇಲ್ಲವೇ ಇಲ್ಲ. ಯೆಹೋವನು ತಾನೇ ಇಸ್ರಾಯೇಲ್ಯರಿಗೋಸ್ಕರ ಯುದ್ಧಮಾಡುತ್ತಾ ಇದ್ದನು.
15
ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಗಿಲ್ಗಾಲಿನ ಪಾಳೆಯಕ್ಕೆ ಹಿಂದಿರುಗಿದನು.
16
ಆ ಐದು ಮಂದಿ ಅರಸರು ಓಡಿಹೋಗಿ ಮಕ್ಕೇದದ ಗುಹೆಯಲ್ಲಿ ಅಡಗಿಕೊಂಡರು.
17
ಜನರು ಯೆಹೋಶುವನಿಗೆ - ಆ ಐದು ಮಂದಿ ನಮಗೆ ಸಿಕ್ಕಿದರು; ಅವರು ಮಕ್ಕೇದದ ಗವಿಯಲ್ಲಿ ಅಡಗಿಕೊಂಡಿದ್ದಾರೆ ಎಂದು ತಿಳಿಸಿದಾಗ
18
ಅವನು ಅವರಿಗೆ - ಗವಿಯ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿ ಕಾಯುವದಕ್ಕೆ ಕೆಲವರನ್ನಿಡಿರಿ.
19
ನೀವಾದರೋ ಅಲ್ಲೇ ನಿಂತುಕೊಳ್ಳಬೇಡಿರಿ; ಬೇಗನೆ ಹಿಂದಟ್ಟಿ ಹಿಂದಾದ ವೈರಿಗಳನ್ನು ಹತಮಾಡುತ್ತಾ ಹೋಗಿರಿ; ಅವರನ್ನು ಅವರ ಪಟ್ಟಣಗಳಲ್ಲಿ ಸೇರಗೊಡಿಸಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ ಅಂದನು.
20
ಈ ಪ್ರಕಾರ ಯೆಹೋಶುವನೂ ಇಸ್ರಾಯೇಲ್ಯರೂ ಅವರನ್ನು ಸಂಪೂರ್ಣವಾಗಿ ಸೋಲಿಸಿ ಸಂಹರಿಸಿಬಿಟ್ಟರು. ಸ್ವಲ್ಪ ಜನರು ಮಾತ್ರ ತಪ್ಪಿಸಿಕೊಂಡು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸೇರಿಕೊಂಡರು.
21
ಇಸ್ರಾಯೇಲ್ಯರಾದರೋ ಮಕ್ಕೇದದಲ್ಲಿ ಇಳುಕೊಂಡಿದ್ದ ಯೆಹೋಶುವನ ಬಳಿಗೆ ಸುರಕ್ಷಿತವಾಗಿ ಬಂದರು. ಇಸ್ರಾಯೇಲ್ಯರಿಗೆ ವಿರೋಧವಾಗಿ ಒಬ್ಬನೂ ತನ್ನ ನಾಲಿಗೆಯನ್ನು ಎತ್ತಲಿಲ್ಲ.
22
ಅನಂತರ ಯೆಹೋಶುವನು ಜನರಿಗೆ - ನೀವು ಗವಿಯ ಬಾಯನ್ನು ತೆರೆದು ಆ ಐದು ಮಂದಿ ಅರಸರನ್ನು ನನ್ನ ಬಳಿಗೆ ತನ್ನಿರಿ ಅನ್ನಲು
23
ಅವರು ಹೋಗಿ ಯೆರೂಸಲೇಮ್, ಹೆಬ್ರೋನ್, ಯರ್ಮೂತ್, ಲಾಕೀಷ್, ಎಗ್ಲೋನ್ ಎಂಬ ಪಟ್ಟಣಗಳ ಐದುಮಂದಿ ಅರಸರನ್ನು ಗವಿಯಿಂದ ಹೊರಗೆ ಅವನ ಬಳಿಗೆ ತಂದರು.
24
ಅವರನ್ನು ತನ್ನ ಬಳಿಗೆ ತಂದಮೇಲೆ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರನ್ನು ಕರಿಸಿ ತನ್ನ ಜೊತೆಯಲ್ಲಿ ಬಂದಿದ್ದ ಸೈನ್ಯಾಧಿಪತಿಗಳಿಗೆ - ಹತ್ತಿರ ಬಂದು ಈ ಅರಸರ ಕೊರಳಿನ ಮೇಲೆ ಪಾದಗಳನ್ನಿಡಿರಿ ಎಂದು ಹೇಳಲು ಅವರು ಹತ್ತಿರ ಬಂದು ಅವರ ಕುತ್ತಿಗೆಯ ಮೇಲೆ ಕಾಲಿಟ್ಟರು.
25
ಆಗ ಅವನು ಅವರಿಗೆ - ಅಂಜಬೇಡಿರಿ, ಕಳವಳಗೊಳ್ಳಬೇಡಿರಿ; ಸ್ಥಿರಚಿತ್ತರಾಗಿರ್ರಿ, ಧೈರ್ಯದಿಂದಿರ್ರಿ. ನಿಮ್ಮೊಡನೆ ಯುದ್ಧಕ್ಕೆ ಬರುವ ಎಲ್ಲಾ ವೈರಿಗಳಿಗೂ ಯೆಹೋವನು ಹೀಗೆಯೇ ಮಾಡುವನು ಎಂದು ಹೇಳಿದನಂತರ
26
ಆ ಅರಸರನ್ನು ಕೊಲ್ಲಿಸಿ ಐದು ಮರಗಳಿಗೆ ನೇತುಹಾಕಿಸಿದನು. ಅವರ ಶವಗಳು ಸಾಯಂಕಾಲದವರೆಗೂ ಅಲ್ಲೇ ತೂಗಾಡುತ್ತಿದ್ದವು.
27
ಸೂರ್ಯಾಸ್ತಮಾನದ ಹೊತ್ತಿಗೆ ಜನರು ಯೆಹೋಶುವನ ಅಪ್ಪಣೆಯಂತೆ ಅವುಗಳನ್ನು ಮರಗಳಿಂದ ಕೆಳಗಿಳಿಸಿ ಅವರು ಅಡಗಿಕೊಂಡಿದ್ದ ಗವಿಯಲ್ಲಿಯೇ ಹಾಕಿ ಅದರ ಬಾಯಿಗೆ ದೊಡ್ಡ ಕಲ್ಲುಗಳನ್ನು ಹೊರಳಿಸಿದರು. ಆ ಕಲ್ಲುಗಳು ಇಂದಿನವರೆಗೂ ಅಲ್ಲೇ ಇರುತ್ತವೆ.
28
ಅದೇ ದಿವಸ ಯೆಹೋಶುವನು ಮಕ್ಕೇದ ಊರನ್ನು ಹಿಡಿದುಕೊಂಡು ಅದನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ. ಯೆರಿಕೋವಿನ ಅರಸನಿಗೆ ಮಾಡಿದಂತೆ ಇದರ ಅರಸನಿಗೂ ಮಾಡಿದನು.
29
ಯೆಹೋಶುವನು ಜನರೆಲ್ಲರ ಸಹಿತವಾಗಿ ಮಕ್ಕೇದದಿಂದ ಲಿಬ್ನಕ್ಕೆ ಹೋಗಿ ಅಲ್ಲಿಯವರೊಡನೆ ಯುದ್ಧ ಮಾಡಿದನು.
30
ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈಗೆ ಕೊಟ್ಟನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇದರ ಅರಸನಿಗೂ ಆಯಿತು.
31
ಅಲ್ಲಿಂದ ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಲಾಕೀಷಿಗೆ ಹೋಗಿ ಮುತ್ತಿಗೆಹಾಕಿ ಯುದ್ಧಮಾಡಿದನು.
32
ಯೆಹೋವನು ಅದನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದದರಿಂದ ಅವರು ಅದನ್ನು ಎರಡನೆಯ ದಿನದಲ್ಲಿ ಸ್ವಾಧೀನಮಾಡಿಕೊಂಡು ಅದನ್ನೂ ಅದರ ಜನರನ್ನೂ ಸಂಹರಿಸಿಬಿಟ್ಟರು. ಲಿಬ್ನದವರಿಗಾದ ಗತಿಯೇ ಇವರಿಗೂ ಆಯಿತು.
33
ಇದಲ್ಲದೆ ಯೆಹೋಶುವನು ಲಾಕೀಷಿನವರ ಸಹಾಯಕ್ಕೆ ಬಂದ ಗೆಜೆರಿನ ಅರಸನಾದ ಹೋರಾಮನನ್ನೂ ಅವನ ಪ್ರಜೆಗಳೆಲ್ಲರನ್ನೂ ಹೊಡೆದುಹಾಕಿದನು; ಒಬ್ಬನೂ ಉಳಿಯಲಿಲ್ಲ.
34
ತರುವಾಯ ಯೆಹೋಶುವನು ಲಾಕೀಷನ್ನು ಬಿಟ್ಟು ಇಸ್ರಾಯೇಲ್ಯರೆಲ್ಲರ ಸಹಿತವಾಗಿ ಎಗ್ಲೋನಿಗೆ ಬಂದು ಮುತ್ತಿಗೆಹಾಕಿ ಯುದ್ಧಮಾಡಿದನು.
35
ಅವರು ಅದೇ ದಿನದಲ್ಲಿ ಅದನ್ನು ಹಿಡಿದು ಲಾಕೀಷಿನಲ್ಲಿ ಮಾಡಿದಂತೆಯೇ ಅದನ್ನೂ ಅದರ ಜನರೆಲ್ಲರನ್ನೂ ಕತ್ತಿಯಿಂದ ಸಂಹರಿಸಿಬಿಟ್ಟರು.
36
ಅನಂತರ ಯೆಹೋಶುವನೂ ಇಸ್ರಾಯೇಲ್ಯರೂ ಎಗ್ಲೋನನ್ನು ಬಿಟ್ಟು ಹೆಬ್ರೋನಿಗೆ ಹೋಗಿ ಅದಕ್ಕೆ ವಿರೋಧವಾಗಿ ಯುದ್ಧಮಾಡಿ
37
ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಎಗ್ಲೋನಿನಲ್ಲಿ ಹೇಗೋ ಹಾಗೆಯೇ ಇಲ್ಲಿಯೂ ಒಬ್ಬನನ್ನೂ ಉಳಿಸಲಿಲ್ಲ; ಪಟ್ಟಣವನ್ನೂ ಜನರನ್ನೂ ನಾಶಮಾಡಿದರು.
38
ಅಲ್ಲಿಂದ ಯೆಹೋಶುವನೂ ಎಲ್ಲಾ ಇಸ್ರಾಯೇಲ್ಯರೂ ದೆಬೀರಿಗೆ ಬಂದು ಅಲ್ಲಿಯವರೊಡನೆ ಯುದ್ಧಮಾಡಿ
39
ಅದನ್ನೂ ಅದಕ್ಕೆ ಸೇರಿದ ಊರುಗಳನ್ನೂ ಹಿಡಿದುಕೊಂಡು ಅದರ ರಾಜಪ್ರಜೆಗಳೆಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಒಬ್ಬನನ್ನೂ ಉಳಿಸಲಿಲ್ಲ. ಹೆಬ್ರೋನಿಗೂ ಅದರ ಅರಸನಿಗೂ ಲಿಬ್ನಕ್ಕೂ ಅದರ ಅರಸನಿಗೂ ಆದ ಗತಿಯೇ ದೆಬೀರಿಗೂ ಅದರ ಅರಸನಿಗೂ ಆಯಿತು.
40
ಹೀಗೆ ಯೆಹೋಶುವನು ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ, ಇಳಕಲಿನ ಪ್ರದೇಶ, ಬೆಟ್ಟಗಳ ಬುಡದ ಪ್ರದೇಶ ಇವುಗಳನ್ನು ಸ್ವತಂತ್ರಿಸಿಕೊಂಡು ಇವುಗಳ ರಾಜಪ್ರಜೆಗಳನ್ನು ಸಂಹರಿಸಿಬಿಟ್ಟನು. ಒಬ್ಬನನ್ನೂ ಉಳಿಸಲಿಲ್ಲ. ಇಸ್ರಾಯೇಲ್ ದೇವರಾದ ಯೆಹೋವನ ಆಜ್ಞೆಯಂತೆ ಜೀವವಿರುವದೆಲ್ಲವನ್ನೂ ಸಂಹರಿಸಿದನು.
41
ಕಾದೇಶ್ ಬರ್ನೇಯದಿಂದ ಗಾಜಾ ಊರಿನವರೆಗೂ ಗೋಷೆನ್ ಪ್ರಾಂತದಿಂದ ಗಿಬ್ಯೋನಿನವರೆಗೂ ಎಲ್ಲರನ್ನೂ ಸೋಲಿಸಿದನು.
42
ಇಸ್ರಾಯೇಲ್ ದೇವರಾದ ಯೆಹೋವನು ಅವರ ಪಕ್ಷದಲ್ಲಿ ಯುದ್ಧಮಾಡಿದ್ದರಿಂದ ಯೆಹೋಶುವನು ಈ ಎಲ್ಲಾ ರಾಜರನ್ನೂ ರಾಜ್ಯಗಳನ್ನೂ ಏಕಕಾಲದಲ್ಲಿಯೇ ವಶಮಾಡಿಕೊಂಡನು.
43
ತರುವಾಯ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.
← Chapter 9
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 11 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24