bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Joshua 11
Joshua 11
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 12 →
1
ಹಾಚೋರಿನ ಅರಸನಾದ ಯಾಬೀನನು ಇದನ್ನೆಲ್ಲಾ ಕೇಳಿ ಯೋಬಾಬನೆಂಬ ಮಾದೋನಿನ ಅರಸನು, ಶಿಮ್ರೋನಿನ ಅರಸನು, ಅಕ್ಷಾಫಿನ ಅರಸನು ಇವರನ್ನೂ
2
ಉತ್ತರದಿಕ್ಕಿನ ಪರ್ವತ ಪ್ರದೇಶ, ಕಿನ್ನೆರೋತ್ ಸಮುದ್ರದ ದಕ್ಷಿಣದಲ್ಲಿನ ತಗ್ಗಾದಪ್ರದೇಶ, ಇಳಕಲಿನ ಪ್ರದೇಶ, ದೋರ್ ಊರಿನ ಪಶ್ಚಿಮದಲ್ಲಿದ್ದ ಬೆಟ್ಟದ ಮೇಲಿನ ಪ್ರದೇಶ ಇವುಗಳ ಅರಸರನ್ನೂ
3
ಪೂರ್ವಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಬೆಟ್ಟದ ಮೇಲಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ಮೋನಿನ ಬುಡದಲ್ಲಿ ವಿುಚ್ಪಾ ದೇಶದಲ್ಲಿದ್ದ ಹಿವ್ವಿಯರು ಇವರನ್ನೂ ಕರೇಕಳುಹಿಸಿದನು.
4
ಅವರು ಒಡನೆ ಬಹು ರಥಾಶ್ವಗಳಿಂದ ಕೂಡಿರುವ ತಮ್ಮ ಸರ್ವಸೈನ್ಯಗಳನ್ನು ತೆಗೆದುಕೊಂಡು ಹೊರಟರು. ಆ ಸೈನಿಕರು ಸಮುದ್ರತೀರದ ಮರಳಿನಂತೆ ಅಸಂಖ್ಯರಾಗಿದ್ದರು.
5
ಈ ಎಲ್ಲಾ ಅರಸರು ಕೂಡಿ ಮೇರೋಮ್ ಜಲಾಶಯದ ಬಳಿಯಲ್ಲಿ ಇಸ್ರಾಯೇಲ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ಇಳುಕೊಂಡರು.
6
ಆಗ ಯೆಹೋವನು ಯೆಹೋಶುವನಿಗೆ - ನೀನು ಅವರಿಗೆ ಹೆದರಬೇಡ; ನಾಳೆ ಇಷ್ಟೇ ಹೊತ್ತಿಗೆ ಅವರನ್ನು ಇಸ್ರಾಯೇಲ್ಯರಿಗೆ ಒಪ್ಪಿಸುವೆನು; ಅವರು ಅವರನ್ನು ಹತಿಸಿಬಿಡುವರು. ನೀನು ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯಿದು ರಥಗಳನ್ನು ಸುಟ್ಟುಬಿಡಬೇಕು ಅಂದನು.
7
ಯೆಹೋಶುವನು ತನ್ನ ಎಲ್ಲಾ ಭಟರೊಡನೆ ಹೊರಟುಹೋಗಿ ಮೇರೋಮ್ ಜಲಾಶಯದ ಬಳಿಯಲ್ಲಿದ್ದ ಶತ್ರುಗಳ ಮೇಲೆ ಫಕ್ಕನೆ ಬಿದ್ದನು.
8
ಯೆಹೋವನು ಅವರನ್ನು ಇಸ್ರಾಯೇಲ್ಯರ ಕೈಗೆ ಒಪ್ಪಿಸಿದನು. ಇವರು ಅವರನ್ನು ದೊಡ್ಡ ಚೀದೋನ್, ವಿುಸ್ರೆಫೋತ್ಮಯಿಮ್ ಎಂಬ ಊರುಗಳವರೆಗೂ ಪೂರ್ವದಿಕ್ಕಿನಲ್ಲಿರುವ ವಿುಚ್ಪೆಯ ಬೈಲಿನವರೆಗೂ ಹಿಂದಟ್ಟಿ ಹೊಡೆದರು. ಒಬ್ಬನಾದರೂ ಉಳಿಯದಂತೆ ಎಲ್ಲರನ್ನೂ ಸಂಹರಿಸಿದರು.
9
ಯೆಹೋಶುವನು ಯೆಹೋವನ ಅಪ್ಪಣೆಗನುಸಾರವಾಗಿ ಅವರ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯಿದು ರಥಗಳನ್ನು ಸುಟ್ಟುಬಿಟ್ಟನು.
10
ಕೂಡಲೆ ಯೆಹೋಶುವನು ಹಿಂದಿರುಗಿ ಹಾಚೋರನ್ನೂ ಅದರ ಅರಸನನ್ನೂ ಕತ್ತಿಯಿಂದ ಸಂಹರಿಸಿದನು. ಹಾಚೋರೆಂಬದು ಪೂರ್ವಕಾಲದಲ್ಲಿ ಆ ಎಲ್ಲಾ ರಾಜ್ಯಗಳಲ್ಲಿ ಶ್ರೇಷ್ಠವಾಗಿತ್ತು.
11
ಇಸ್ರಾಯೇಲ್ಯರು ಅದರಲ್ಲಿದ್ದ ಎಲ್ಲಾ ಜನರನ್ನು ಕತ್ತಿಯಿಂದ ಸಂಹರಿಸಿ ಹಾಚೋರ್ ಪಟ್ಟಣವನ್ನು ಸುಟ್ಟುಬಿಟ್ಟರು. ಒಂದು ಪ್ರಾಣಿಯಾದರೂ ಉಳಿಯಲಿಲ್ಲ.
12
ಮತ್ತು ಯೆಹೋಶುವನು ಆ ಬೇರೆ ಅರಸರನ್ನೂ ಅವರ ಎಲ್ಲಾ ಪಟ್ಟಣಗಳನ್ನೂ ಹಿಡಿದು ಯೆಹೋವನ ಸೇವಕನಾದ ಮೋಶೆಯ ಆಜ್ಞೆಯಂತೆ ಅವರನ್ನು ಕತ್ತಿಯಿಂದ ಸಂಹರಿಸಿದನು.
13
ಯೆಹೋಶುವನು ಸುಟ್ಟ ಹಾಚೋರ್ ಹೊರತು ಇಸ್ರಾಯೇಲ್ಯರು ದಿನ್ನೆಯ ಮೇಲಣ ಬೇರೆ ಯಾವ ಪಟ್ಟಣವನ್ನೂ ಸುಡಲಿಲ್ಲ.
14
ಇಸ್ರಾಯೇಲ್ಯರು ಅವುಗಳಲ್ಲಿದ್ದ ಪಶುಗಳನ್ನೂ ವಸ್ತುಗಳನ್ನೂ ಕೊಳ್ಳೆ ಹಿಡಿದರು. ಆದರೆ ಜನರೆಲ್ಲರನ್ನೂ ಕತ್ತಿಯಿಂದ ಹೊಡೆದು ನಿರ್ಮೂಲಮಾಡಿದರು. ಒಂದು ಪ್ರಾಣಿಯನ್ನೂ ಉಳಿಸಲಿಲ್ಲ.
15
ಯೆಹೋವನ ಸೇವಕನಾದ ಮೋಶೆಯು ದೇವರು ತನಗೆ ಹೇಳಿದ್ದನ್ನೆಲ್ಲಾ ಯೆಹೋಶುವನಿಗೆ ಹೇಳಿದ್ದನು. ಯೆಹೋಶುವನು ಅದರಂತೆಯೇ ಮಾಡಿದನು; ಯೆಹೋವನು ಮೋಶೆಯ ಮೂಲಕ ಆಜ್ಞಾಪಿಸಿದ್ದರಲ್ಲಿ ಅವನು ಒಂದನ್ನೂ ಮೀರಲಿಲ್ಲ.
16
ಈ ಪ್ರಕಾರ ಬೆಟ್ಟದ ಮೇಲಿನ ಪ್ರದೇಶ, ದಕ್ಷಿಣ ಪ್ರಾಂತ, ಗೋಷೆನ್ ಸೀಮೆ, ಇಳಕಲಿನ ಪ್ರದೇಶ, ತಗ್ಗಾದ ಪ್ರದೇಶ, ಇಸ್ರಾಯೇಲ್ ಸೀಮೆಯ ಪರ್ವತ ಪ್ರಾಂತ್ಯ, ಅದಕ್ಕೆ ಸೇರಿದ ಇಳಕಲಿನ ಪ್ರದೇಶ ಇವುಗಳೆಲ್ಲಾ ಯೆಹೋಶುವನಿಗೆ ಸ್ವಾಧೀನವಾದವು.
17
ಅವನು ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಬೆಟ್ಟದಿಂದ ಹೆರ್ಮೋನಿನ ಬುಡದಲ್ಲಿ ಲೆಬನೋನ್ ತಗ್ಗಿನಲ್ಲಿರುವ ಬಾಲ್ಗಾದ್ ಪಟ್ಟಣದವರೆಗೂ ಇರುವ ಪ್ರದೇಶವನ್ನೆಲ್ಲಾ ತೆಗೆದುಕೊಂಡು ಅದರ ಎಲ್ಲಾ ಅರಸರನ್ನು ಹಿಡಿದು ಸಂಹರಿಸಿಬಿಟ್ಟನು.
18
ಯೆಹೋಶುವನು ಈ ಎಲ್ಲಾ ಅರಸರೊಡನೆ ಬಹು ದಿನಗಳವರೆಗೂ ಯುದ್ಧಮಾಡಿದನು.
19
ಗಿಬ್ಯೋನಿನ ನಿವಾಸಿಗಳಾದ ಹಿವ್ವಿಯರು ಹೊರತು ಯಾವ ಪಟ್ಟಣದವರೂ ಇಸ್ರಾಯೇಲ್ಯರೊಡನೆ ಒಪ್ಪಂದ ಮಾಡಿಕೊಳ್ಳಲಿಲ್ಲ. ಎಲ್ಲರನ್ನೂ ಯುದ್ಧದಿಂದ ವಶಮಾಡಿಕೊಳ್ಳಬೇಕಾಯಿತು.
20
ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಅವರೆಲ್ಲರನ್ನೂ ಕರುಣೆಯಿಲ್ಲದೆ ಸಂಹರಿಸಿಬಿಡುವ ಹಾಗೆ ಆತನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದನು.
21
ಅದೇ ಕಾಲದಲ್ಲಿ ಯೆಹೋಶುವನು ಹೆಬ್ರೋನ್, ದೆಬೀರ್, ಅನಾಬ್ ಎಂಬ ಊರುಗಳಲ್ಲಿಯೂ ಯೆಹೂದ ಮತ್ತು ಇಸ್ರಾಯೇಲ್ ಪ್ರಾಂತಗಳ ಬೆಟ್ಟಗಳಲ್ಲಿಯೂ ಇದ್ದ ಉನ್ನತಪುರುಷರನ್ನು ನಾಶಮಾಡಿ ಅವರ ಪಟ್ಟಣಗಳನ್ನು ಹಾಳುಮಾಡಿದನು.
22
ಇಸ್ರಾಯೇಲ್ಯರ ಪ್ರಾಂತ್ಯದಲ್ಲಿ ಅಂಥವರು ಯಾರೂ ಉಳಿಯಲಿಲ್ಲ. ಆದರೆ ಗಾಜಾ, ಗತೂರು, ಅಷ್ಡೋದ್ ಎಂಬ ಊರುಗಳಲ್ಲಿ ಮಾತ್ರ ಕೆಲವರು ಉಳಿದರು.
23
ಯೆಹೋವನು ಮೋಶೆಯ ಮೂಲಕ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವನು ಹಿಡಿದುಕೊಂಡು ಇಸ್ರಾಯೇಲ್ ಕುಲಭಾಗಗಳಿಗನುಸಾರವಾಗಿ ಹಂಚಿಕೊಟ್ಟನು. ಯುದ್ಧವು ನಿಂತು ದೇಶದಲ್ಲೆಲ್ಲಾ ಸಮಾಧಾನವುಂಟಾಯಿತು.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 12 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24