bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Joshua 12
Joshua 12
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 13 →
1
ಇಸ್ರಾಯೇಲ್ಯರು ಯೊರ್ದನ್ ಹೊಳೆಯ ಪೂರ್ವದಿಕ್ಕಿನಲ್ಲಿ ಅರ್ನೋನ್ ತಗ್ಗು ಮೊದಲುಗೊಂಡು ಹೆರ್ಮೋನ್ ಪರ್ವತದವರೆಗಿದ್ದ ಪ್ರದೇಶವನ್ನೂ ತಗ್ಗಾದ ಪ್ರದೇಶದ ಪೂರ್ವಭಾಗವನ್ನೂ ಸ್ವಾಧೀನ ಮಾಡಿಕೊಂಡು ಅವುಗಳಲ್ಲಿದ್ದ ಅರಸರನ್ನು ಸಂಹರಿಸಿದರು.
2
[ಅವರಲ್ಲಿ ಮೊದಲನೆಯವನು] ಹೆಷ್ಬೋನಿನಲ್ಲಿದ್ದ ಅಮೋರಿಯರ ಅರಸನಾದ ಸೀಹೋನ್ ಎಂಬವನು. ಅರ್ನೋನ್ ತಗ್ಗಿನ ಅಂಚಿನಲ್ಲಿರುವ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇರುವ ಪಟ್ಟಣವು ಇವುಗಳು ಮೊದಲುಗೊಂಡು ಅಮ್ಮೋನಿಯರ ಮೇರೆಯಾಗಿರುವ ಯಬ್ಬೋಕ್ ಹೊಳೆಯವರೆಗಿರುವ ಗಿಲ್ಯಾದಿನ ಅರ್ಧ ಪ್ರಾಂತವು,
3
ಯೊರ್ದನ್ ಹೊಳೆಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಇವೇ ಅವನ ರಾಜ್ಯ.
4
ಅಷ್ಟರೋತ್, ಎದ್ರೈ ಎಂಬ ಊರುಗಳಲ್ಲಿ ವಾಸವಾಗಿದ್ದ ರೆಫಾಯರ ವಂಶಸ್ಥನೂ ಬಾಷಾನಿನ ಅರಸನೂ ಆದ ಓಗನು [ಎರಡನೆಯವನು].
5
ಹೆರ್ಮೋನ್ ಬೆಟ್ಟದ ಮೇಲಿನ ಸೀಮೆ, ಸಲ್ಕಾ ಪಟ್ಟಣವು, ಗೆಷೂರ್ಯರ ಮತ್ತು ಮಾಕತೀಯರ ಮೇರೆಯವರೆಗಿದ್ದ ಬಾಷಾನ್ ಸೀಮೆ, ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯವರೆಗಿದ್ದ ಗಿಲ್ಯಾದಿನ ಅರ್ಧಪ್ರಾಂತವು ಇವೇ ಇವನ ರಾಜ್ಯ.
6
ಯೆಹೋವನ ಸೇವಕನಾದ ಮೋಶೆಯು ಇಸ್ರಾಯೇಲ್ಯರ ಸಹಿತವಾಗಿ ಆ ಇಬ್ಬರನ್ನೂ ಸೋಲಿಸಿ ಅವರ ರಾಜ್ಯಗಳನ್ನು ರೂಬೇನ್ಯರಿಗೂ ಗಾದ್ಯರಿಗೂ ಮನಸ್ಸೆಕುಲದ ಅರ್ಧ ಜನರಿಗೂ ಸ್ವಾಸ್ತ್ಯವಾಗಿ ಕೊಟ್ಟನು.
7
ಯೆಹೋಶುವನು ಇಸ್ರಾಯೇಲ್ಯರ ಸಹಿತವಾಗಿ ಯೊರ್ದನ್ ಹೊಳೆಯ ಪಶ್ಚಿಮದಲ್ಲಿ ಲೆಬನೋನ್ ತಗ್ಗಿನಲ್ಲಿದ್ದ ಬಾಲ್ಗಾದಿನಿಂದ ಸೇಯೀರಿನ ದಾರಿಯಲ್ಲಿದ್ದ ಹಾಲಾಕ್ ಪರ್ವತದವರೆಗೂ ವಿಸ್ತರಿಸಿಕೊಂಡಿದ್ದ ಬೆಟ್ಟದ ಮೇಲಿನ ಪ್ರದೇಶ,
8
ಇಳಕಲಿನ ಪ್ರದೇಶ, ತಗ್ಗಾದ ಪ್ರದೇಶ, ಬೆಟ್ಟಗಳ ಬುಡದಲ್ಲಿರುವ ಸೀಮೆ, ಅರಣ್ಯ, ದಕ್ಷಿಣಪ್ರಾಂತ್ಯ ಇವುಗಳಲ್ಲಿ ಆಳುತ್ತಿದ್ದ ಹಿತ್ತಿಯ ಅಮೋರಿಯ ಕಾನಾನ್ ಪೆರಿಜ್ಜೀಯ ಹಿವ್ವಿಯ ಯೆಬೂಸಿಯ ಅರಸರನ್ನು ಸೋಲಿಸಿ ಅವರ ದೇಶಗಳನ್ನು ಇಸ್ರಾಯೇಲ್ ಕುಲಭಾಗಗಳಿಗೆ ಸ್ವಾಸ್ತ್ಯವಾಗಿ ಕೊಟ್ಟನು. ಆ ಅರಸರ ಪಟ್ಟಿಯು ಹೇಗಂದರೆ -
9
ಯೆರಿಕೋವಿನ ಅರಸನು 1; ಬೇತೇಲಿನ ಹತ್ತಿರವಿರುವ ಆಯಿ ಎಂಬ ಊರಿನ ಅರಸನು 1;
10
ಯೆರೂಸಲೇವಿುನ ಅರಸನು 1; ಹೆಬ್ರೋನಿನ ಅರಸನು 1;
11
ಯರ್ಮೂತಿನ ಅರಸನು 1; ಲಾಕೀಷಿನ ಅರಸನು 1; ಎಗ್ಲೋನಿನ ಅರಸನು 1; ಗೆಜೆರಿನ ಅರಸನು 1;
12
ದೆಬೀರಿನ ಅರಸನು 1; ಗೆದೆರಿನ ಅರಸನು 1;
14
ಹೊರ್ಮದ ಅರಸನು 1; ಅರಾದಿನ ಅರಸನು 1;
15
ಲಿಬ್ನದ ಅರಸನು 1; ಅದುಲ್ಲಾಮದ ಅರಸನು 1;
16
ಮಕ್ಕೇದದ ಅರಸನು 1; ಬೇತೇಲಿನ ಅರಸನು 1;
17
ತಪ್ಪೂಹದ ಅರಸನು 1; ಹೇಫೆರಿನ ಅರಸನು 1;
18
ಅಫೇಕದ ಅರಸನು 1, ಲಷ್ಷಾರೋನಿನ ಅರಸನು 1;
19
ಮಾದೋನಿನ ಅರಸನು 1; ಹಾಚೋರಿನ ಅರಸನು 1;
20
ಶಿಮ್ರೋನ್ಮೆರೋನಿನ ಅರಸನು 1; ಅಕ್ಷಾಫಿನ ಅರಸನು 1;
21
ತಾನಕದ ಅರಸನು 1; ಮೆಗಿದ್ದೋವಿನ ಅರಸನು 1;
22
ಕೆದೆಷಿನ ಅರಸನು 1; ಕರ್ಮೆಲ್ ಬೆಟ್ಟದ ಯೊಕ್ನೆಯಾಮದ ಅರಸನು 1;
23
ದೋರ್ ಬೆಟ್ಟದ ಮೇಲಿರುವ ದೋರಿನ ಅರಸನು 1; ಗಿಲ್ಗಾಲಿನವರ ಅರಸನು 1;
24
ತಿರ್ಚದ ಅರಸನು 1; ಒಟ್ಟು ಅರಸರು 31 ಮಂದಿ.
← Chapter 11
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 13 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24