bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Joshua 15
Joshua 15
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 16 →
1
ಎದೋಮ್ ಸೀಮೆಯೂ ಚಿನ್ ಅರಣ್ಯವೂ ಮೇರೆಯಾಗಿರುವ ಕಾನಾನ್ ದೇಶದ ದಕ್ಷಿಣ ಭಾಗವು ಯೆಹೂದ ಕುಲದ ಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿತು.
2
ಅದರ ದಕ್ಷಿಣದ ಮೇರೆಯು ಲವಣ ಸಮುದ್ರದ ತೆಂಕಣ ಕೊನೆಯಿಂದ ತೊಡಗಿ
3
ಅಕ್ರಬ್ಬೀಮೆಂಬ ಕಣಿವೆಯ ದಕ್ಷಿಣಮಾರ್ಗವಾಗಿ ಚಿನಿಗೆ ಹೋಗುವದು. ಅಲ್ಲಿಂದ ಕಾದೇಶ್ಬರ್ನೇಯದ ದಕ್ಷಿಣಮಾರ್ಗವಾಗಿ ಹೆಚ್ರೋನಿಗೂ ಅಲ್ಲಿಂದ ಏರುತ್ತಾ ಅದ್ದಾರಿಗೂ ಹೋಗಿ ಕರ್ಕದ ಕಡೆಗೆ ತಿರುಗಿಕೊಂಡು
4
ಅಚ್ಮೋನಿನ ಮೇಲೆ ಐಗುಪ್ತದ ಹಳ್ಳಕ್ಕೆ ಬಂದು ಸಮುದ್ರತೀರದಲ್ಲಿ ಮುಗಿಯುವದು. ಇದು ಅದರ ತೆಂಕಣ ಮೇರೆ.
5
ಯೊರ್ದನ್ ಹೊಳೆಯ ಮುಖದಿಂದ ಲವಣಸಮುದ್ರವೆಲ್ಲಾ ಅದರ ಪೂರ್ವದಿಕ್ಕಿನ ಮೇರೆ. ಅದರ ಉತ್ತರದಿಕ್ಕಿನ ಮೇರೆಯು ಯೊರ್ದನ್ ಹೊಳೆ ಲವಣಸಮುದ್ರವನ್ನು ಕೂಡುವ ಸ್ಥಳದಿಂದ ತೊಡಗಿ
6
ಬೇತ್ಹೊಗ್ಲಾ, ಬೇತ್ಅರಾಬದ ಉತ್ತರ ಪ್ರಾಂತ, ರೂಬೇನನ ಮಗನಾದ ಬೋಹನನ ಬಂಡೆ,
7
ಆಕೋರಿನ ತಗ್ಗು ಇವುಗಳ ಮೇಲೆ ದೆಬೀರಿಗೆ ಹೋಗುತ್ತದೆ. ಅದು ಅಲ್ಲಿಂದ ಉತ್ತರಕ್ಕೆ ತಿರುಗಿಕೊಂಡು ಹಳ್ಳದ ದಕ್ಷಿಣದಲ್ಲಿರುವ ಅದುಮೀವಿುಗೆ ಹೋಗುವ ದಾರಿಯ ಎದುರಿನಲ್ಲಿರುವ ಗಿಲ್ಗಾಲ್, ಏನ್ಷೆಮೆಷ್ ಅನ್ನಿಸಿಕೊಳ್ಳುವ ಬುಗ್ಗೆ, ಏನ್ರೋಗೆಲ್ ಇವುಗಳ ಮೇಲೆ ಬೆನ್ಹಿನ್ನೋಮನ ತಗ್ಗಿಗೆ ಹೋಗುತ್ತದೆ.
8
ಅಲ್ಲಿಂದ ಅದು ಯೆರೂಸಲೇಮ್ ಪಟ್ಟಣವು ಕಟ್ಟಲ್ಪಟ್ಟಿರುವ ಯೆಬೂಸಿಯರ ಬೆಟ್ಟದ ದಕ್ಷಿಣಮಾರ್ಗವಾಗಿ ಹಿನ್ನೋಮ್ ತಗ್ಗಿನ ಪಶ್ಚಿಮದಲ್ಲಿಯೂ ರೆಫಾಯೀಮ್ ತಗ್ಗಿನ ಉತ್ತರದಲ್ಲಿಯೂ ಇರುವ ಬೆಟ್ಟದ ತುದಿಗೆ ಹೋಗುತ್ತದೆ.
9
ಅದು ಆ ಬೆಟ್ಟದ ತುದಿಯಿಂದ ಮುಂದೆ ನೆಫ್ತೋಹ ಬುಗ್ಗೆ, ಎಫ್ರೋನ್ ಬೆಟ್ಟದ ಪಟ್ಟಣಗಳು ಇವುಗಳ ಮೇಲೆ ಕಿರ್ಯತ್ಯಾರೀಮ್ ಅನ್ನಿಸಿಕೊಳ್ಳುವ ಬಾಲಾ ಎಂಬ ಊರಿಗೆ ಹೋಗುತ್ತದೆ.
10
ಅಲ್ಲಿಂದ ಪಶ್ಚಿಮದಲ್ಲಿರುವ ಸೇಯೀರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಅನ್ನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು
11
ಅಲ್ಲಿಂದ ಉತ್ತರದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡದ ಮೇಲೆ ಯಬ್ನೇಲಿಗೆ ಹೋಗಿ ಸಮುದ್ರತೀರದಲ್ಲಿ ಮುಗಿಯುವದು.
12
ಮಹಾಸಾಗರದ ತೀರವೇ ಪಶ್ಚಿಮ ಮೇರೆಯು. ಯೆಹೂದ ಗೋತ್ರಗಳ ದೇಶದ ಸುತ್ತಣ ಮೇರೆಗಳು ಇವೇ.
13
ಯೆಹೋಶುವನು ಯೆಹೋವನ ಅಪ್ಪಣೆಯಂತೆ ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಮಧ್ಯದಲ್ಲಿಯೇ ಅನಾಕನ ತಂದೆಯಾದ ಅರ್ಬನ ಪಟ್ಟಣವಾಗಿದ್ದ ಹೆಬ್ರೋನನ್ನು ಕೊಟ್ಟನು.
14
ಕಾಲೇಬನು ಶೇಷೈ, ಅಹೀಮನ್, ತಲ್ಮೈ ಎಂಬ ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಹೊರಡಿಸಿಬಿಟ್ಟನು.
15
ಅನಂತರ ಅವನು ಹೊರಟು ಕಿರ್ಯತ್ಸೇಫೆರ್ ಅನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧಮಾಡಿದನು.
16
ಅವನು - ಕಿರ್ಯತ್ಸೇಫೆರನ್ನು ಹಿಡಿದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿ ಕೊಡುತ್ತೇನೆ ಅಂದನು.
17
ಕೆನಜನ ಮಗನೂ ಕಾಲೇಬನ ತಮ್ಮನೂ ಆದ ಒತ್ನೀಯೇಲನು ಅದನ್ನು ತೆಗೆದುಕೊಳ್ಳಲು ಅವನಿಗೆ ತನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿಕೊಟ್ಟನು.
18
ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಭೂವಿುಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯ ಮೇಲಿಂದ ಇಳಿದಳು. ಕಾಲೇಬನು ನಿನಗೇನು ಬೇಕೆಂದು ಆಕೆಯನ್ನು ಕೇಳಲು ಆಕೆಯು -
19
ನನಗೊಂದು ದಾನ ಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ; ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.
20
ಯೆಹೂದಕುಲದ ಗೋತ್ರಗಳಿಗೆ ಸಿಕ್ಕಿದ ಸ್ವಾಸ್ತ್ಯದ ವಿವರ -
21
ಎದೋಮ್ ಪ್ರಾಂತವು ಮೇರೆಯಾಗಿರುವ ದಕ್ಷಿಣ ಭಾಗದಲ್ಲಿ ಕಬ್ಜೇಲ್, ಏದೆರ್, ಯಾಗೂರ್,
22
ಕೀನಾ, ದೀಮೋನಾ, ಅದಾದಾ, ಕೆದೆಷ್,
24
ಹಾಚೋರ್, ಇತ್ನಾನ್, ಜೀಫ್, ಟೆಲೆಮ್, ಬೆಯಾಲೋತ್,
25
ಹಾಚೋರ್ಹದತ್ತಾ, ಹಾಚೋರ್ ಎಂಬುವ
26
ಕಿರ್ಯೋತ್ ಹೆಚ್ರೋನ್, ಅಮಾಮ್, ಶೆಮ,
27
ಮೋಲಾದಾ, ಹಚರ್ಗದ್ದಾ, ಹೆಷ್ಮೋನ್, ಬೇತ್ಪೆಲೆಟ್,
28
ಹಚರ್ಷೂವಾಲ್, ಬೇರ್ಷೆಬ, ಬಿಜ್ಯೋತ್ಯಾ,
29
ಬಾಲಾ, ಇಯ್ಯೀಮ್, ಎಚೆಮ್, ಎಲ್ಟೋಲದ್,
31
ಕೆಸೀಲ್, ಹೊರ್ಮಾ, ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,
32
ಲೆಬಾವೋತ್, ಶಿಲ್ಹೀಮ್, ಅಯಿನ್, ರಿಮ್ಮೋನ್ ಎಂಬ ಇಪ್ಪತ್ತೊಂಭತ್ತು ಪಟ್ಟಣಗಳೂ ಅವುಗಳಿಗೆ ಸೇರಿದ ಗ್ರಾಮಗಳೂ;
33
ಇಳಕಲಿನ ಪ್ರದೇಶದಲ್ಲಿ
34
ಎಷ್ಟಾವೋಲ್, ಚೊರ್ಗಾ, ಅಶ್ನಾ, ಜನೋಹ, ಏಂಗನ್ನೀಮ್,
35
ತಪ್ಪೂಹ, ಏನಾಮ್, ಯರ್ಮೂತ್,
36
ಅದುಲ್ಲಾಮ್, ಸೋಕೋ, ಅಜೇಕಾ, ಶಾರಯಿಮ್, ಅದೀತಯಿಮ್, ಗೆದೇರಾ, ಗೆದೆರೋತಯಿಮ್ ಎಂಬ ಹದಿನಾಲ್ಕು ಪಟ್ಟಣಗಳೂ ಅವುಗಳ ಗ್ರಾಮಗಳೂ;
37
ಚೆನಾನ್, ಹದಾಷಾ, ವಿುಗ್ದಲ್ಗಾದ್, ದಿಲಾನ್,
39
ವಿುಚ್ವೆ, ಯೊಕ್ತೇಲ್, ಲಾಕೀಷ್, ಬೊಚ್ಕತ್,
40
ಎಗ್ಲೋನ್, ಕಬ್ಬೋನ್, ಲಹ್ಮಾಸ್, ಕಿತ್ಲೀಷ್,
41
ಗೆದೇರೋತ್, ಬೇತ್ದಾಗೋನ್, ನಾಮಾ, ಮಕ್ಕೇದಾ ಎಂಬ ಹದಿನಾರು ಪಟ್ಟಣಗಳೂ ಅವುಗಳ ಗ್ರಾಮಗಳೂ;
42
ಲಿಬ್ನಾ, ಎತೆರ್, ಆಷಾನ್, ಇಪ್ತಾಹ,
44
ಅಶ್ನಾ, ನೆಚೀಬ್, ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಭತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ;
45
ಎಕ್ರೋನ್ ಸಂಸ್ಥಾನವೂ ಅದಕ್ಕೆ ಸೇರಿದ ಗ್ರಾಮನಗರಗಳೂ;
46
ಎಕ್ರೋನಿನಿಂದ ಸಮುದ್ರದವರೆಗೆ ಅಷ್ಡೋದಿನ ಬಳಿಯಲ್ಲಿರುವ ಸಮಸ್ತಗ್ರಾಮಗಳು;
47
ಅಷ್ಡೋದ್ ಸಂಸ್ಥಾನವೂ ಅದರ ಗ್ರಾಮನಗರಗಳೂ; ಗಾಜಾ ಸಂಸ್ಥಾನವೂ ಐಗುಪ್ತಹಳ್ಳದ ಉತ್ತರದಲ್ಲಿ ಮತ್ತು ಮಹಾಸಾಗರತೀರದಲ್ಲಿ ಇರುವ ಅದರ ಎಲ್ಲಾ ಗ್ರಾಮ ನಗರಗಳೂ;
48
ಬೆಟ್ಟದ ಮೇಲಿನ ಪ್ರದೇಶದಲ್ಲಿರುವ ಶಾಮೀರ್, ಯತ್ತೀರ್, ಸೋಕೋ,
49
ದನ್ನಾ, ದೆಬೀರ್ ಎಂಬ ಕಿರ್ಯತ್ಸನ್ನಾ,
51
ಅನಾಬ್, ಎಷ್ಟೆಮೋ, ಆನೀಮ್, ಗೋಷೆನ್,
52
ಹೋಲೋನ್, ಗಿಲೋ ಎಂಬ ಹನ್ನೊಂದು ಪಟ್ಟಣಗಳೂ ಅವುಗಳ ಗ್ರಾಮಗಳೂ; ಅರಬ್, ದೂಮಾ,
53
ಎಷಾನ್, ಯಾನೂಮ್, ಬೇತ್ತಪ್ಪೂಹ, ಅಫೇಕಾ, ಹುಮ್ಟಾ, ಹೆಬ್ರೋನೆಂಬ ಕಿರ್ಯತ್ಅರ್ಬ, ಚೀಯೋರ್ ಎಂಬ ಒಂಭತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ;
55
ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,
56
ಇಜ್ರೇಲ್, ಯೊಗ್ದೆಯಾಮ್, ಜನೋಹ, ಕಯಿನ್, ಗಿಬೆಯಾ, ತಿಮ್ನಾ ಎಂಬ ಹತ್ತು ಪಟ್ಟಣಗಳೂ ಅವುಗಳ ಗ್ರಾಮಗಳೂ;
58
ಹಲ್ಹೂಲ್, ಬೇತ್ಚೂರ್, ಗೆದೋರ್, ಮಾರಾತ್,
59
ಬೇತನೋತ್, ಎಲ್ಟೆಕೋನ್ ಎಂಬ ಆರು ಪಟ್ಟಣಗಳೂ ಅವುಗಳ ಗ್ರಾಮಗಳೂ;
60
ಕಿರ್ಯತ್ಯಾರೀಮ್ ಅನ್ನಿಸಿಕೊಳ್ಳುವ ಕಿರ್ಯತ್ ಬಾಳ್, ರಬ್ಬಾ ಎಂಬ ಎರಡು ಪಟ್ಟಣಗಳೂ ಅವುಗಳ ಗ್ರಾಮಗಳೂ;
61
ಅರಣ್ಯದಲ್ಲಿರುವ ಬೇತ್ಅರಾಬಾ, ವಿುದ್ದೀನ್, ಸೆಕಾಕಾ,
62
ನಿಬ್ಷಾನ್, ಉಪ್ಪಿನಪಟ್ಟಣ, ಏಂಗೆದೀ ಎಂಬ ಆರು ಪಟ್ಟಣಗಳೂ ಅವುಗಳ ಗ್ರಾಮಗಳೂ;
63
ಯೆರೂಸಲೇವಿುನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸುವದು ಯೆಹೂದಕುಲದವರಿಂದ ಆಗದೆ ಹೋಯಿತು. ಆದದರಿಂದ ಅವರು ಇಂದಿನವರೆಗೂ ಯೆಹೂದಕುಲದವರೊಡನೆ ಯೆರೂಸಲೇವಿುನಲ್ಲೇ ವಾಸವಾಗಿದ್ದಾರೆ.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24