bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Joshua 20
Joshua 20
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 21 →
1
ತರುವಾಯ ಯೆಹೋವನು ಯೆಹೋಶುವನನ್ನು ಕುರಿತು -
2
ನೀನು ಇಸ್ರಾಯೇಲ್ಯರಿಗೆ - ನಾನು ಮೋಶೆಯ ಮೂಲಕ ಆಜ್ಞಾಪಿಸಿದಂತೆ ನೀವು ನಿಮಗೋಸ್ಕರ ಕೆಲವು ಆಶ್ರಯನಗರಗಳನ್ನು ಗೊತ್ತು ಮಾಡಿಕೊಳ್ಳಿರಿ.
3
ನಿಮ್ಮಲ್ಲಿ ತಿಳಿಯದೆ ಅಕಸ್ಮಾತ್ತಾಗಿ ನರಹತ್ಯ ಮಾಡಿದವನು ಅಲ್ಲಿಗೆ ಓಡಿಹೋಗಲಿ. ಹತವಾದವನ ಸಮೀಪಬಂಧುವು ಮುಯ್ಯಿತೀರಿಸದಂತೆ ಅವು ನಿಮಗೆ ಆಶ್ರಯಸ್ಥಾನಗಳಾಗುವವು.
4
ಅಂಥ ಪಟ್ಟಣಕ್ಕೆ ಓಡಿಹೋದವನು ಮೊದಲು ಊರಬಾಗಲಲ್ಲೇ ನಿಂತುಕೊಂಡು ಅಲ್ಲಿನ ಹಿರಿಯರಿಗೆ ತನ್ನ ಸಂಗತಿಯನ್ನು ತಿಳಿಯಪಡಿಸಲಿ. ಅವರು ಅವನನ್ನು ಊರೊಳಗೆ ಸೇರಿಸಿಕೊಂಡು ಅವನ ವಾಸಕ್ಕೆ ಸ್ಥಳಕೊಡಲಿ.
5
ಹತವಾದವನ ಸಮೀಪಬಂಧುವು ಕೊಂದವನನ್ನು ಹಿಂದಟ್ಟಿಕೊಂಡು ಅಲ್ಲಿಗೆ ಬಂದರೆ ಅವರು ಅವನನ್ನು ಅವನ ಕೈಗೆ ಒಪ್ಪಿಸಬಾರದು. ಯಾಕಂದರೆ ಅವನು ನೆರೆಯವನನ್ನು ಪೂರ್ವದ್ವೇಷವೇನೂ ಇಲ್ಲದೆ ಅಕಸ್ಮಾತ್ತಾಗಿ ಕೊಂದನು.
6
ಒಂದು ಸಭೆಯನ್ನು ಸೇರಿಸಿ ಅಂಥವನನ್ನು ವಿಚಾರಿಸಬೇಕು; ಮತ್ತು ಅವನು ಆಗಿನ ಮಹಾಯಾಜಕನ ಜೀವಮಾನವೆಲ್ಲಾ ಅದೇ ಪಟ್ಟಣದಲ್ಲಿರಬೇಕು. ಆಮೇಲೆ ತಾನು ಬಿಟ್ಟುಬಂದ ಪಟ್ಟಣದಲ್ಲಿರುವ ಮನೆಗೆ ಹಿಂದಿರುಗಿ ಹೋಗಬಹುದು ಎಂದು ಹೇಳು ಅಂದನು.
7
ಇಸ್ರಾಯೇಲ್ಯರು ನಫ್ತಾಲಿಕುಲದವರ ಪರ್ವತಪ್ರದೇಶವಾದ ಗಲಿಲಾಯ ಪ್ರಾಂತದಲ್ಲಿ ಕೆದೆಷ್, ಎಫ್ರಾಯೀಮ್ ಪರ್ವತಪ್ರದೇಶದಲ್ಲಿ ಶೆಕೆಮ್, ಯೆಹೂದ್ಯರ ಬೆಟ್ಟದ ಸೀಮೆಯಲ್ಲಿ ಹೆಬ್ರೋನ್ ಅನ್ನಿಸಿಕೊಳ್ಳುವ ಕಿರ್ಯತರ್ಬ ಎಂಬೀ ಪಟ್ಟಣಗಳನ್ನು ನೇವಿುಸಿದರು.
8
ಮತ್ತು ಯೆರಿಕೋವಿನ ಪೂರ್ವದಲ್ಲಿರುವ ಯೊರ್ದನಿನ ಆಚೆಯಲ್ಲಿ ರೂಬೇನ್ಯರ ಬೆಟ್ಟದ ಮೇಲಿನ ಅರಣ್ಯ ಪ್ರದೇಶದಲ್ಲಿರುವ ಬೆಚೆರ್, ಗಾದ್ಯರಿಗೆ ಸೇರಿದ ಗಿಲ್ಯಾದ್ ಪ್ರಾಂತದ ರಾಮೋತ್, ಮನಸ್ಸೆಯವರಿಗೆ ಸೇರಿದ ಬಾಷಾನಿನಲ್ಲಿರುವ ಗೋಲಾನ್ ಎಂಬ ಪಟ್ಟಣಗಳನ್ನೂ ನೇವಿುಸಿದರು.
9
ಎಲ್ಲಾ ಇಸ್ರಾಯೇಲ್ಯರಲ್ಲಿಯೂ ಅವರ ಮಧ್ಯದಲ್ಲಿರುವ ಪರದೇಶಿಗಳಲ್ಲಿಯೂ ಬೇರೊಬ್ಬನನ್ನು ಅಕಸ್ಮಾತ್ತಾಗಿ ಕೊಂದವನು ಓಡಿಹೋಗಿ ತಾನು ನ್ಯಾಯಸಭೆಯ ಮುಂದೆ ನಿಲ್ಲುವವರೆಗೆ ಹತವಾದವನ ಸಮೀಪಬಂಧುವಿಗೆ ತಪ್ಪಿಸಿಕೊಳ್ಳುವದಕ್ಕೋಸ್ಕರ ನೇಮಕವಾದ ಪಟ್ಟಣಗಳು ಇವೇ.
← Chapter 19
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 21 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24