bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Judges 1
Judges 1
Kannada BSI JV (ಕನ್ನಡ ಸತ್ಯವೇದವು J.V. (BSI))
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 2 →
1
ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು - ಕಾನಾನ್ಯರೊಡನೆ ಯುದ್ಧಮಾಡುವದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ಯೆಹೋವನನ್ನು ಕೇಳಲು
2
ಆತನು ಅವರಿಗೆ - ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ ಅಂದನು.
3
ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ - ಕಾನಾನ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಸ್ತ್ಯಭೂವಿುಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಸ್ತ್ಯ ಭೂವಿುಗೆ ಬರುವೆವು ಎಂದು ಹೇಳಲು
4
ಅವರು ಒಪ್ಪಿ ಯೆಹೂದ್ಯರ ಜೊತೆಯಲ್ಲಿ ಯುದ್ಧಕ್ಕೆ ಹೋದರು. ಆಗ ಯೆಹೋವನು ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಅವರ ಕೈಗೆ ಒಪ್ಪಿಸಿದ್ದರಿಂದ ಅವರು ಅವರಲ್ಲಿ ಹತ್ತು ಸಾವಿರ ಮಂದಿಯನ್ನು ಬೆಜೆಕಿನಲ್ಲಿ ಹತಮಾಡಿದರು.
5
ಅವರು ಅಲ್ಲಿ ಅದೋನೀಬೆಜೆಕನನ್ನು ಸಂಧಿಸಿ ಅವನೊಡನೆ ಯುದ್ಧಮಾಡಿ ಕಾನಾನ್ಯರನ್ನೂ ಪೆರಿಜ್ಜೀಯರನ್ನೂ ಸೋಲಿಸಿದರು.
6
ಅದೋನೀಬೆಜೆಕನು ಓಡಿಹೋಗಲು ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿಬಿಟ್ಟರು.
7
ಆಗ ಅದೋನೀಬೆಜೆಕನು - ನಾನು ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟ ಎಪ್ಪತ್ತು ಮಂದಿ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಚೂರುಗಳನ್ನು ಕೂಡಿಸಿಕೊಂಡು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾನೆ ಅಂದನು. ಅವರು ಅವನನ್ನು ಯೆರೂಸಲೇವಿುಗೆ ತೆಗೆದುಕೊಂಡು ಬರಲು ಅಲ್ಲಿ ಸತ್ತನು.
8
ಯೆಹೂದ್ಯರು ಯೆರೂಸಲೇವಿುನವರೊಡನೆ ಯುದ್ಧಮಾಡಿ ಅದನ್ನು ಹಿಡಿದು ಜನರನ್ನು ಕತ್ತಿಯಿಂದ ಸಂಹರಿಸಿ ಪಟ್ಟಣಕ್ಕೆ ಬೆಂಕಿಹೊತ್ತಿಸಿದರು.
9
ತರುವಾಯ ಅವರು ಹೋಗಿ ಪರ್ವತಪ್ರದೇಶ, ದಕ್ಷಿಣ ಸೀಮೆ, ಇಳಕಲಿನ ಪ್ರದೇಶ ಇವುಗಳಲ್ಲಿದ್ದ ಕಾನಾನ್ಯರೊಡನೆ ಯುದ್ಧಮಾಡಿದರು.
10
ಅವರು ಮುಂಚೆ ಕಿರ್ಯತರ್ಬ ಎಂಬ ಹೆಸರಿದ್ದ ಹೆಬ್ರೋನಿಗೆ ಹೋಗಿ ಅಲ್ಲಿದ್ದ ಕಾನಾನ್ಯರ ಮೇಲೆ ಬಿದ್ದು ಅವರಲ್ಲಿ ಶೇಷೈ, ಅಹೀಮನ್, ತಲ್ಮೈ ಎಂಬವರನ್ನು ಹೊಡೆದು ಬಿಟ್ಟರು.
11
ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮುಂಚೆ ಕಿರ್ಯತ್ಸೇಫೆರ್ ಎಂಬ ಹೆಸರಿತ್ತು.
12
ಕಿರ್ಯತ್ಸೇಫೆರನ್ನು ಹಿಡಿದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಲು
13
ಅವನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನು ಅದನ್ನು ಹಿಡಿದನು. ಆಗ ಕಾಲೇಬನು ತನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಅವನಿಗೆ ಮದುವೆಮಾಡಿಕೊಟ್ಟನು.
14
ಆಕೆಯು ಬರುತ್ತಿರುವಾಗ ತನ್ನ ತಂದೆಯ ಹತ್ತಿರ ಭೂವಿುಯನ್ನು ಕೇಳಬೇಕೆಂದು ಗಂಡನನ್ನು ಪ್ರೇರೇಪಿಸಿ ತಾನು ಕತ್ತೆಯಿಂದ ಇಳಿದಳು. ಕಾಲೇಬನು ನಿನಗೇನು ಬೇಕೆಂದು ಆಕೆಯನ್ನು ಕೇಳಲು
15
ಆಕೆಯು - ನನಗೊಂದು ದಾನಕೊಡಬೇಕು; ನನ್ನನ್ನು ಬೆಗ್ಗಾಡಿಗೆ ಕೊಟ್ಟುಬಿಟ್ಟಿಯಲ್ಲಾ, ಬುಗ್ಗೆಗಳಿರುವ ಸ್ಥಳವನ್ನು ನನಗೆ ಕೊಡು ಅಂದಳು. ಆಗ ಅವನು ಆಕೆಗೆ ಮೇಲಣ ಮತ್ತು ಕೆಳಗಣ ಬುಗ್ಗೆಗಳನ್ನು ಕೊಟ್ಟನು.
16
ಕೇನ್ಯನೂ ಮೋಶೆಯ ಮಾವನೂ ಆದ [ಹೋಬಾಬನ] ವಂಶದವರು ಖರ್ಜೂರ ನಗರದಿಂದ ಹೊರಟು ಯೆಹೂದ್ಯರ ಜೊತೆಯಲ್ಲಿ ಅರಾದಿನ ದಕ್ಷಿಣದಲ್ಲಿರುವ ಯೆಹೂದ ಅರಣ್ಯಕ್ಕೆ ಬಂದು ಅಲ್ಲಿನ ಜನರ ಸಂಗಡ ವಾಸಮಾಡಿದರು.
17
ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ ಆ ಪಟ್ಟಣವನ್ನು ಹಾಳುಮಾಡಿ ಅದನ್ನು ಹೊರ್ಮಾ ಎಂದು ಕರೆದರು.
18
ಅನಂತರ ಅವರು ಗಾಜಾ, ಅಷ್ಕೆಲೋನ್, ಎಕ್ರೋನ್ ಎಂಬ ಪಟ್ಟಣಗಳನ್ನೂ ಅವುಗಳ ಮೇರೆಗಳನ್ನೂ ಸ್ವಾಧೀನಮಾಡಿಕೊಂಡರು.
19
ಯೆಹೋವನು ಯೆಹೂದ್ಯರ ಸಂಗಡ ಇದ್ದದರಿಂದ ಅವರು ಪರ್ವತಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣದ ರಥಗಳಿದ್ದದರಿಂದ ಅವರನ್ನು ಹೊರಡಿಸುವದು ಆಗಲಿಲ್ಲ.
20
ಮೋಶೆ ಆಜ್ಞಾಪಿಸಿದಂತೆ ಅವರು ಕಾಲೇಬನಿಗೆ ಹೆಬ್ರೋನ್ ಪಟ್ಟಣವನ್ನು ಕೊಟ್ಟರು; ಅವನು ಅನಾಕನ ಮೂರು ಮಂದಿ ಮಕ್ಕಳನ್ನು ಅಲ್ಲಿಂದ ಅಟ್ಟಿಬಿಟ್ಟನು.
21
ಯೆರೂಸಲೇವಿುನಲ್ಲಿದ್ದ ಯೆಬೂಸಿಯರನ್ನು ಹೊರಡಿಸುವದು ಬೆನ್ಯಾಮೀನ್ಯರಿಂದ ಆಗದೆ ಹೋಯಿತು. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇವಿುನಲ್ಲಿಯೇ ವಾಸವಾಗಿದ್ದಾರೆ.
22
ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.
23
ಅವರು ಲೂಜ್ ಅನ್ನಿಸಿಕೊಳ್ಳುತ್ತಿದ್ದ ಬೇತೇಲ್ ಊರನ್ನು ಸಂಚರಿಸಿನೋಡುವದಕ್ಕೆ ಗೂಢಚಾರರನ್ನು ಕಳುಹಿಸಿದರು.
24
ಅವರು ಆ ಊರೊಳಗಿಂದ ಬರುವ ಒಬ್ಬ ಮನುಷ್ಯನನ್ನು ಕಂಡು ಅವನಿಗೆ - ದಯವಿಟ್ಟು ಪಟ್ಟಣದೊಳಗೆ ನುಗ್ಗಬಹುದಾದ ದಾರಿಯನ್ನು ನಮಗೆ ತೋರಿಸು; ನಾವೂ ನಿನಗೆ ದಯೆ ತೋರಿಸುವೆವು ಎಂದು ಹೇಳಲು ಅವನು ಅಂಥ ದಾರಿಯನ್ನು ತೋರಿಸಿದನು.
25
ಆಗ ಅವರು ಆ ಪಟ್ಟಣವನ್ನು ಕತ್ತಿಯಿಂದ ಸಂಹರಿಸಿದರು. ಆದರೆ ಆ ಮನುಷ್ಯನನ್ನೂ ಅವನ ಕುಟುಂಬವನ್ನೂ ಕಳುಹಿಸಿಬಿಟ್ಟರು.
26
ಅವನು ಹಿತ್ತಿಯರ ದೇಶಕ್ಕೆ ಹೋಗಿ ಒಂದು ಪಟ್ಟಣವನ್ನು ಕಟ್ಟಿಕೊಂಡು ಅದಕ್ಕೆ ಲೂಜೆಂದು ಹೆಸರಿಟ್ಟನು; ಅದಕ್ಕೆ ಇಂದಿನವರೆಗೂ ಅದೇ ಹೆಸರಿರುತ್ತದೆ.
27
ಮನಸ್ಸೆಯವರು ಬೇತ್ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ. ಆದದರಿಂದ ಕಾನಾನ್ಯರು ಆ ಪ್ರಾಂತಗಳಲ್ಲೇ ವಾಸಿಸುವದಕ್ಕೆ ದೃಢಮಾಡಿದರು.
28
ಇಸ್ರಾಯೇಲ್ಯರು ಬಲಗೊಂಡ ಮೇಲೆ ಅವರನ್ನು ದಾಸತ್ವಕ್ಕೆ ಹಚ್ಚಿದರೇ ಹೊರತು ಅಲ್ಲಿಂದ ಅಟ್ಟಿಬಿಡಲಿಲ್ಲ.
29
ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದದರಿಂದ ಅವರು ಅವರ ಮಧ್ಯದಲ್ಲೇ ವಾಸಿಸುವವರಾದರು.
30
ಜೆಬುಲೂನ್ಯರು ಕಿಟ್ರೋನ್, ನಹಲೋಲ್ ಎಂಬ ಪಟ್ಟಣಗಳ ನಿವಾಸಿಗಳನ್ನು ಅಟ್ಟಿಬಿಡಲಿಲ್ಲ. ಆದರೆ ಆ ಕಾನಾನ್ಯರು ಅವರಿಗೆ ದಾಸರಾಗಿ ಅವರ ಮಧ್ಯದಲ್ಲೇ ವಾಸಮಾಡುವವರಾದರು.
31
ಆಶೇರ್ಯರು ಅಕ್ಕೋ, ಚೀದೋನ್, ಅಹ್ಲಾಬ್, ಅಕ್ಜೀಬ್, ಹೆಲ್ಬಾ, ಅಫೀಕ್, ರೆಹೋಬ್ ಎಂಬ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಲಿಲ್ಲ;
32
ಅವರು ಆ ದೇಶದ ಕಾನಾನ್ಯರನ್ನು ಹೊರಡಿಸದೆ ಅವರ ಮಧ್ಯದಲ್ಲೇ ವಾಸಮಾಡಿದರು.
33
ನಫ್ತಾಲ್ಯರು ಬೇತ್ಷೆಮೆಷ್, ಬೇತನಾತ್ ಎಂಬ ಊರುಗಳನ್ನು ಸ್ವತಂತ್ರಿಸಿಕೊಳ್ಳದೆ ಅಲ್ಲಿಯ ನಿವಾಸಿಗಳಾದ ಕಾನಾನ್ಯರ ಮಧ್ಯದಲ್ಲೇ ವಾಸಮಾಡಿದರು. ಮತ್ತು ಆ ಬೇತ್ಷೆಮೆಷ್ ಬೇತನಾತ್ ಊರುಗಳ ಜನರು ಅವರಿಗೆ ದಾಸರಾದರು.
34
ಇದಲ್ಲದೆ ಅಮೋರಿಯರು ದಾನ್ ಕುಲದವರನ್ನು ತಗ್ಗಿನ ಪ್ರದೇಶಕ್ಕೆ ಇಳಿಯಗೊಡದೆ ಹಿಂದಟ್ಟಿ ಬೆಟ್ಟಗಳಿಗೆ ಓಡಿಸಿಬಿಟ್ಟರು.
35
ಹೀಗೆ ಅಮೋರಿಯರು ಹರ್ಹೆರೆಸ್, ಅಯ್ಯಾಲೋನ್, ಶಾಲ್ಬೀಮ್ ಎಂಬ ಊರುಗಳಲ್ಲೇ ವಾಸಿಸ ದೃಢಮಾಡಿದರು. ಆದರೆ ಯೋಸೇಫ್ಯರ ಹಸ್ತವು ಭಾರವಾದ ಮೇಲೆ ಅವರಿಗೆ ದಾಸರಾದರು.
36
ಅಮೋರಿಯರ ಮೇರೆಯು ಅಕ್ರಬ್ಬೀಮ್ ಕಣಿವೆಯಲ್ಲಿರುವ ಬಂಡೆಯಿಂದ ಮೇಲಕ್ಕೆ ವಿಸ್ತರಿಸಿಕೊಂಡಿರುವದು.
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 2 →
All chapters:
1
2
3
4
5
6
7
8
9
10
11
12
13
14
15
16
17
18
19
20
21