bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Judges 11
Judges 11
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 12 →
1
ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರವಿುಯಾಗಿದ್ದನು. ಅವನು ಗಿಲ್ಯಾದನಿಗೆ ಒಬ್ಬ ಸೂಳೆಯಲ್ಲಿ ಹುಟ್ಟಿದವನು.
2
ಗಿಲ್ಯಾದನಿಗೆ ಹೆಂಡತಿಯಲ್ಲಿಯೂ ಮಕ್ಕಳು ಹುಟ್ಟಿದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ - ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
3
ಅವನು ತನ್ನ ಸಹೋದರರನ್ನು ಬಿಟ್ಟು ಟೋಬ್ ದೇಶಕ್ಕೆ ಹೋಗಲು ಅಲ್ಲಿನ ಕಾಕಪೋಕರು ಕೂಡಿ ಅವನನ್ನು ಹಿಂಬಾಲಿಸಿದರು.
4
ಇಸ್ರಾಯೇಲ್ಯರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಸ್ವಲ್ಪದಿನಗಳಾದ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.
5
ಆಗ ಗಿಲ್ಯಾದಿನ ಹಿರಿಯರು ಯೆಪ್ತಾಹನನ್ನು ಟೋಬ್ದೇಶದಿಂದ ಕರೆದುಕೊಂಡು ಬರುವದಕ್ಕಾಗಿ ಅಲ್ಲಿಗೆ ಹೋಗಿ ಅವನಿಗೆ -
6
ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು ಎಂದು ಬೇಡಿಕೊಂಡರು.
7
ಅವನು ಅವರಿಗೆ - ನನ್ನನ್ನು ಹಗೆಮಾಡಿ ನನ್ನ ತಂದೆಯ ಮನೆಯಿಂದ ಅಟ್ಟಿಬಿಟ್ಟವರು ನೀವೇ ಅಲ್ಲವೋ? ನಿಮಗೆ ಕಷ್ಟ ಬಂದಾಗ ನನ್ನ ಬಳಿಗೆ ಯಾಕೆ ಬಂದಿರಿ ಅನ್ನಲು
8
ಅವರು - ಆದದರಿಂದಲೇ ಈಗ ತಿರಿಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವಿಯಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ಶಿರಸ್ಸಾಗಿರುವಿ ಎಂದು ಹೇಳಿದರು.
9
ಆಗ ಯೆಪ್ತಾಹನು ಅವರಿಗೆ - ನೀವು ನನ್ನನ್ನು ಅಮ್ಮೋನಿಯರೊಡನೆ ಯುದ್ಧಮಾಡುವದಕ್ಕೋಸ್ಕರ ಕರೆದುಕೊಂಡು ಹೋಗುವಲ್ಲಿ ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿಕೊಟ್ಟರೆ ನಿಜವಾಗಿ ನನ್ನನ್ನು ಅಧಿಪತಿಯನ್ನಾಗಿ ಮಾಡುವಿರೋ ಎಂದು ಕೇಳಲು
10
ಅವರು ಅವನಿಗೆ - ಹಾಗೆಯೇ ಮಾಡುವೆವು; ಉಭಯತರ ಮಾತುಗಳಿಗೆ ಯೆಹೋವನೇ ಸಾಕ್ಷಿ ಎಂದು ಉತ್ತರಕೊಟ್ಟರು.
11
ಆಗ ಯೆಪ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು; ಜನರು ಅವನನ್ನು ಅಧಿಪತಿಯನ್ನಾಗಿಯೂ ನಾಯಕನನ್ನಾಗಿಯೂ ನೇವಿುಸಿದರು. ಮತ್ತು ಯೆಪ್ತಾಹನು ತನ್ನ ಸಂಗತಿಗಳನ್ನೆಲ್ಲಾ ವಿುಚ್ಪೆಯಲ್ಲಿ ಯೆಹೋವನ ಮುಂದೆ ಅರಿಕೆಮಾಡಿದನು.
12
ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನನ್ನು - ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವದಕ್ಕೇನು ಕಾರಣ ಎಂದು ಕೇಳಿದನು.
13
ಆ ಅರಸನು ದೂತರಿಗೆ - ಇಸ್ರಾಯೇಲ್ಯರು ಐಗುಪ್ತದಿಂದ ಬಂದಾಗ ಅರ್ನೋನಿನಿಂದ ಯಬ್ಬೋಕ್, ಯೊರ್ದನ್ ಹೊಳೆಗಳವರೆಗೂ ಇದ್ದ ನನ್ನ ದೇಶವನ್ನು ಕಸಕೊಂಡರಲ್ಲಾ; ನೀನು ಈಗ ಅದನ್ನು ಸಮಾಧಾನದಿಂದ ಹಿಂದಕ್ಕೆ ಕೊಡು ಎಂದು ಹೇಳಿ ಕಳುಹಿಸಿದನು.
14
ಯೆಪ್ತಾಹನು ಇನ್ನೊಂದು ಸಾರಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ
15
ಅವನಿಗೆ - ಯೆಪ್ತಾಹನಾದ ನನ್ನ ಮಾತನ್ನು ಕೇಳು; ಇಸ್ರಾಯೇಲ್ಯರು ಮೋವಾಬ್ಯರ ಮತ್ತು ಅಮ್ಮೋನಿಯರ ದೇಶವನ್ನು ತೆಗೆದುಕೊಳ್ಳಲೇ ಇಲ್ಲ.
16
ಅವರು ಐಗುಪ್ತವನ್ನು ಬಿಟ್ಟನಂತರ ಅರಣ್ಯದಲ್ಲಿ ಸಂಚರಿಸಿ ಕೆಂಪುಸಮುದ್ರಕ್ಕೂ ಅನಂತರ ಕಾದೇಶಿಗೂ ಬಂದರು.
17
ಅವರು ಅಲ್ಲಿಂದ ಎದೋಮ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಿ - ನಿನ್ನ ದೇಶವನ್ನು ದಾಟಿಹೋಗುವದಕ್ಕೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳಲು ಅವನು ಒಪ್ಪಿಕೊಳ್ಳಲಿಲ್ಲ. ತರುವಾಯ ಮೋವಾಬ್ಯರ ಅರಸನ ಬಳಿಗೆ ದೂತರನ್ನು ಕಳುಹಿಸಲು ಅವನೂ ಒಪ್ಪಿಕೊಳ್ಳಲಿಲ್ಲ; ಆದದರಿಂದ ಅವರು ಕಾದೇಶಿನಲ್ಲಿಯೇ ನಿಂತರು.
18
ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್ ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳುಕೊಂಡರು; ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.
19
ತರುವಾಯ ಅವರು ಹೆಷ್ಬೋನನ್ನು ರಾಜಧಾನಿಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ - ನಿನ್ನ ದೇಶವನ್ನು ದಾಟಿ ನಮ್ಮ ಸ್ಥಳಕ್ಕೆ ಹೋಗುವದಕ್ಕೆ ಅಪ್ಪಣೆಕೊಡು ಎಂದು ಅವನನ್ನು ಬೇಡಿಕೊಂಡರು.
20
ಆದರೆ ಸೀಹೋನನು ಅವರನ್ನು ನಂಬದವನಾಗಿ ತನ್ನ ಸೀಮೆಯನ್ನು ದಾಟಿಹೋಗುವದಕ್ಕೆ ಅಪ್ಪಣೆಕೊಡದೆ ತನ್ನ ಜನರನ್ನು ಕೂಡಿಸಿಕೊಂಡು ಯಹಚಕ್ಕೆ ಬಂದು ಅವರೊಡನೆ ಯುದ್ಧಮಾಡಿದನು.
21
ಇಸ್ರಾಯೇಲ್ಯರ ದೇವರಾದ ಯೆಹೋವನು ಸೀಹೋನನನ್ನೂ ಅವನ ಜನರೆಲ್ಲರನ್ನೂ ಇಸ್ರಾಯೇಲ್ಯರ ಕೈಗೆ ಒಪ್ಪಿಸಿದ್ದರಿಂದ ಅವರು ಈ ದೇಶದ ನಿವಾಸಿಗಳಾದ ಅಮೋರಿಯರನ್ನು ಹೊಡೆದು ಅವರ ದೇಶವನ್ನೆಲ್ಲಾ ಸ್ವತಂತ್ರಿಸಿಕೊಂಡರು.
22
ಹೀಗೆ ಇಸ್ರಾಯೇಲ್ಯರು ಅರ್ನೋನಿನಿಂದ ಯಬ್ಬೋಕಿನವರೆಗೂ ಅರಣ್ಯದಿಂದ ಯೊರ್ದನಿನವರೆಗೂ ಇದ್ದ ಅಮೋರಿಯರ ಪ್ರಾಂತವನ್ನೆಲ್ಲಾ ವಶಮಾಡಿಕೊಂಡರು.
23
ಇಸ್ರಾಯೇಲ್ದೇವರಾದ ಯೆಹೋವನು ಈ ದೇಶವನ್ನು ಅಮೋರಿಯರಿಂದ ತೆಗೆದು ತನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಕೊಟ್ಟ ಮೇಲೆ ನೀನು ಅದನ್ನು ತೆಗೆದುಕೊಳ್ಳುವದು ಹೇಗೆ?
24
ನಿನ್ನ ದೇವನಾದ ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವದನ್ನು ನಾವು ಸ್ವತಂತ್ರಿಸಿಕೊಳ್ಳುವದು ನ್ಯಾಯವಾಗಿದೆ.
25
ಚಿಪ್ಪೋರನ ಮಗನೂ ಮೋವಾಬ್ಯರ ಅರಸನೂ ಆದ ಬಾಲಾಕನಿಗಿಂತ ನೀನು ಹೆಚ್ಚಿನವನೋ? ಅವನು ಇಸ್ರಾಯೇಲ್ಯರೊಡನೆ ಎಂದಾದರೂ ವಿವಾದಮಾಡಿದನೋ? ಅಥವಾ ಅವರಿಗೆ ವಿರೋಧವಾಗಿ ಯುದ್ಧಕ್ಕೆ ಬಂದನೋ?
26
ಇಸ್ರಾಯೇಲ್ಯರು ಮುನ್ನೂರು ವರುಷಗಳಿಂದ ಹೆಷ್ಬೋನ್, ಅರೋಯೇರ್ ಎಂಬ ಪಟ್ಟಣಗಳಲ್ಲಿಯೂ ಅವುಗಳ ಗ್ರಾಮಗಳಲ್ಲಿಯೂ ಅರ್ನೋನ್ ತೀರದ ಎಲ್ಲಾ ಪಟ್ಟಣಗಳಲ್ಲಿಯೂ ವಾಸಿಸುತ್ತಿದ್ದಾರಲ್ಲಾ; ಇಷ್ಟು ದಿವಸಗಳವರೆಗೆ ನೀನು ಅದನ್ನು ಬಿಡಿಸಿಕೊಳ್ಳದೆ ಇದ್ದದ್ದೇಕೆ?
27
ನಾನು ನಿನಗೆ ಯಾವ ಅನ್ಯಾಯವನ್ನೂ ಮಾಡಲಿಲ್ಲ. ನೀನು ಈಗ ನನಗೆ ವಿರೋಧವಾಗಿ ಯುದ್ಧಕ್ಕೆ ಬಂದದರಿಂದ ನೀನೇ ಅನ್ಯಾಯಮಾಡಿದ ಹಾಗಾಯಿತು. ನ್ಯಾಯಸ್ಥಾಪಕನಾದ ಯೆಹೋವನೇ ಈ ಹೊತ್ತು ಇಸ್ರಾಯೇಲ್ಯರಿಗೂ ಅಮ್ಮೋನಿಯರಿಗೂ ಮಧ್ಯದಲ್ಲಿ ನ್ಯಾಯತೀರಿಸಲಿ ಎಂದು ಹೇಳಿಸಿದನು.
28
ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ.
29
ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರಿಗಿ ಗಿಲ್ಯಾದಿನ ವಿುಚ್ಪೆಗೆ ಬಂದು ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.
30
ಇದಲ್ಲದೆ ಅವನು ಯೆಹೋವನಿಗೆ - ನೀನು ಅಮ್ಮೋನಿಯರನ್ನು ನನ್ನ ಕೈಗೆ ಒಪ್ಪಿಸುವದಾದರೆ
31
ನಾನು ಸುರಕ್ಷಿತನಾಗಿ ಮನೆಗೆ ಮುಟ್ಟಿದಾಗ ನನ್ನನ್ನು ಎದುರುಗೊಳ್ಳುವದಕ್ಕಾಗಿ ನನ್ನ ಮನೆಯ ಬಾಗಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಹೋಮಮಾಡುವೆನು ಎಂದು ಹರಕೆಮಾಡಿದನು.
32
ಯೆಪ್ತಾಹನು ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಕ್ಕೆ ಹೋಗಲು ಯೆಹೋವನು ಅವರನ್ನು ಅವನ ಕೈಗೆ ಒಪ್ಪಿಸಿದನು.
33
ಅವನು ಅವರನ್ನು ಸೋಲಿಸಿ ಅರೋಯೇರಿನಿಂದ ವಿುನ್ನೀತಿನ ದಾರಿಯವರೆಗೂ ಆಬೇಲ್ ಕೆರಾಮೀವಿುನವರೆಗೂ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿಬಿಟ್ಟನು. ಹೀಗೆ ದೊಡ್ಡ ಜಯವಾಗಿ ಅಮ್ಮೋನಿಯರು ಇಸ್ರಾಯೇಲ್ಯರ ಮುಂದೆ ತಗ್ಗಿಸಲ್ಪಟ್ಟರು.
34
ಯೆಪ್ತಾಹನು ವಿುಚ್ಪೆಯಲ್ಲಿದ್ದ ತನ್ನ ಮನೆಯನ್ನು ಸಮೀಪಿಸಿದಾಗ ಅವನ ಮಗಳು ದಮ್ಮಡಿಬಡಿಯುತ್ತಾ ನಾಟ್ಯವಾಡುತ್ತಾ ಅವನನ್ನು ಎದುರುಗೊಳ್ಳುವದಕ್ಕಾಗಿ ಬಂದಳು. ಆಕೆಯು ಅವನ ಒಬ್ಬಳೇ ಮಗಳು. ಆಕೆಯ ಹೊರತು ಅವನಿಗೆ ಬೇರೆ ಗಂಡು ಹೆಣ್ಣು ಮಕ್ಕಳೇ ಇರಲಿಲ್ಲ.
35
ಆಕೆಯನ್ನು ಕಾಣುತ್ತಲೆ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು - ಅಯ್ಯೋ ನನ್ನ ಮಗಳೇ, ಮಗಳೇ, ನೀನು ನನ್ನನ್ನು ಕುಗ್ಗಿಸೇ ಬಿಟ್ಟಿಯಲ್ಲಾ; ನನಗೆ ಮಹಾಸಂಕಟವನ್ನುಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾರೆನು ಎಂದು ಕೂಗಿಕೊಳ್ಳಲು
36
ಆಕೆಯು ಅವನಿಗೆ - ನನ್ನ ತಂದೆಯೇ, ನೀನು ಬಾಯ್ದೆರೆದು ಯೆಹೋವನಿಗೆ ಹರಕೆ ಮಾಡಿದ ಮೇಲೆ ಆತನು ನಿನ್ನ ಶತ್ರುಗಳಾದ ಅಮ್ಮೋನಿಯರಿಗೆ ಮುಯ್ಯಿತೀರಿಸಿದದರಿಂದ ನಿನ್ನ ಬಾಯಿಂದ ಹೊರಟದ್ದನ್ನೇ ನೆರವೇರಿಸು ಅಂದಳು.
37
ಆಕೆಯು ತಿರಿಗಿ ತನ್ನ ತಂದೆಗೆ - ನನ್ನ ಬಿನ್ನಹವನ್ನು ಲಾಲಿಸು; ಎರಡು ತಿಂಗಳುಗಳವರೆಗೆ ನನ್ನನ್ನು ಬಿಡು. ನಾನು ನನ್ನ ಗೆಳತಿಯರೊಡನೆ ಬೆಟ್ಟದ ಪ್ರದೇಶಗಳಿಗೆ ಹೋಗಿ ನನ್ನ ಕನ್ಯಾವಸ್ಥೆಗೋಸ್ಕರ ಗೋಳಾಡುವೆನು ಅನ್ನಲು ಅವನು -
38
ಎರಡು ತಿಂಗಳ ತನಕ ಹೋಗಿ ಬಾ ಎಂದು ಕಳುಹಿಸಿದನು. ಆಕೆಯು ಸಖಿಯರ ಸಹಿತವಾಗಿ ಬೆಟ್ಟದ ಪ್ರದೇಶಗಳಿಗೆ ಹೋಗಿ ತನ್ನ ಕನ್ಯಾವಸ್ಥೆಗೋಸ್ಕರ ಗೋಳಾಡಿದಳು.
39
ಎರಡು ತಿಂಗಳು ಕಳೆದನಂತರ ಆಕೆಯು ತಿರಿಗಿ ತಂದೆಯ ಹತ್ತಿರ ಬರಲು ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆಯು ಪುರುಷನನ್ನರಿಯದವಳು.
40
ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರುಷದಲ್ಲಿಯೂ ನಾಲ್ಕು ದಿವಸ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.
← Chapter 10
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 12 →
All chapters:
1
2
3
4
5
6
7
8
9
10
11
12
13
14
15
16
17
18
19
20
21