bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Judges 13
Judges 13
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 14 →
1
ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ ಆತನು ಅವರನ್ನು ನಾಲ್ವತ್ತು ವರುಷಗಳ ತನಕ ಫಿಲಿಷ್ಟಿಯರ ಕೈಗೆ ಒಪ್ಪಿಸಿದನು.
2
ಚೊರ್ಗಾ ಎಂಬ ಊರಲ್ಲಿ ದಾನ್ ಕುಲದವನಾದ ಮಾನೋಹ ಎಂಬ ಒಬ್ಬ ಮನುಷ್ಯನಿದ್ದನು. ಅವನ ಹೆಂಡತಿಯು ಬಂಜೆಯಾಗಿದ್ದದರಿಂದ ಅವನಿಗೆ ಮಕ್ಕಳಿರಲಿಲ್ಲ.
3
ಒಂದಾನೊಂದು ದಿವಸ ಯೆಹೋವನ ದೂತನು ಆಕೆಗೆ ಪ್ರತ್ಯಕ್ಷನಾಗಿ - ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಮಗನನ್ನು ಹೆರುವಿ.
4
ಆದದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧಪದಾರ್ಥವನ್ನೂ ಊಟಮಾಡದಿರು.
5
ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇಬಾರದು; ಅವನು ಹುಟ್ಟಿದಂದಿನಿಂದ ದೇವರಿಗೆ ಪ್ರತಿಷ್ಠಿತನಾಗಿರುವನು; ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವದಕ್ಕೆ ಪ್ರಾರಂಭಿಸುವನು ಅಂದನು.
6
ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ - ಒಬ್ಬ ದೇವಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.
7
ಆದರೆ ನನಗೆ - ನೀನು ಗರ್ಭವತಿಯಾಗಿ ಮಗನನ್ನು ಹೆರುವಿ; ಆದದರಿಂದ ನೀನು ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು, ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಹುಡುಗನು ಹುಟ್ಟಿದಂದಿನಿಂದ ಸಾಯುವವರೆಗೆ ದೇವರಿಗೆ ಪ್ರತಿಷ್ಠಿತನಾಗಿರುವನು ಎಂದು ಹೇಳಿದನು ಅಂದಳು.
8
ಮಾನೋಹನು ಇದನ್ನು ಕೇಳಿ ಯೆಹೋವನಿಗೆ - ಸ್ವಾಮೀ, ದಯವಿರಲಿ; ನೀನು ಕಳುಹಿಸಿದ ದೇವಪುರುಷನು ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿಕ್ಕಿರುವ ಮಗುವಿಗೋಸ್ಕರ ಮಾಡಬೇಕಾದದ್ದನ್ನು ನಮಗೆ ಬೋಧಿಸಲಿ ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದನು;
9
ಆ ಸ್ತ್ರೀಯು ಹೊಲದಲ್ಲಿ ಕೂತಿರುವಾಗ ದೇವದೂತನು ತಿರಿಗಿ ಬಂದನು. ಆಕೆಯ ಗಂಡನಾದ ಮಾನೋಹನು ಅಲ್ಲಿರಲಿಲ್ಲ.
10
ಆದದರಿಂದ ಆಕೆಯು ಬೇಗನೆ ಗಂಡನ ಬಳಿಗೆ ಹೋಗಿ - ಮೊನ್ನೆ ನನಗೆ ಪ್ರತ್ಯಕ್ಷನಾದ ಪುರುಷನು ತಿರಿಗಿ ಬಂದಿದ್ದಾನೆಂದು ತಿಳಿಸಲು
11
ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ - ಮೊನ್ನೆ ಈಕೆಯೊಡನೆ ಮಾತಾಡಿದವನು ನೀನೋ ಎಂದು ಕೇಳಲು
12
ಅವನು - ಹೌದು, ನಾನೇ ಅಂದನು. ಆಗ ಮಾನೋಹನು - ನೀನು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು ಎಂದು ಕೇಳಲು
13
ಯೆಹೋವನ ದೂತನು ಮಾನೋಹನಿಗೆ - ನಾನು ಹೇಳಿದ್ದನ್ನೆಲ್ಲಾ ಈಕೆಯು ಜಾಗರೂಕತೆಯಿಂದ ಕೈಕೊಳ್ಳಲಿ.
14
ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ ಅಂದನು.
15
ಮತ್ತು ಮಾನೋಹನು ಯೆಹೋವನ ದೂತನನ್ನು - ನಾವು ನಿನಗೋಸ್ಕರ ಒಂದು ಹೋತಮರಿಯನ್ನು ಪಕ್ವಮಾಡಿ ತರುವವರೆಗೂ ದಯವಿಟ್ಟು ಇಲ್ಲೇ ನಿಲ್ಲಬೇಕೆಂದು ಬೇಡಿಕೊಳ್ಳಲು
16
ಅವನು - ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು ಅಂದನು. ಅವನು ಯೆಹೋವನ ದೂತನೆಂಬದು ಮಾನೋಹನಿಗೆ ಗೊತ್ತಿದ್ದಿಲ್ಲ.
17
ಆದದರಿಂದ ಅವನು ಆ ದೂತನನ್ನು - ನೀನು ಹೇಳಿದ್ದು ನೆರವೇರಿದಾಗ ನಿನ್ನನ್ನು ಸನ್ಮಾನಿಸಬೇಕೆಂದಿರುತ್ತೇವೆ, ನಿನ್ನ ಹೆಸರೇನು ಎಂದು ಕೇಳಿದನು.
18
ಯೆಹೋವನ ದೂತನು - ನನ್ನ ಹೆಸರನ್ನು ಕೇಳುವದೇಕೆ? ಅದು ಆಶ್ಚರ್ಯಕರವಾದದ್ದು ಅಂದನು.
19
ಮಾನೋಹನು ಹೋತಮರಿಯನ್ನೂ ಧಾನ್ಯದ್ರವ್ಯವನ್ನೂ ತಂದು ಬಂಡೆಯ ಮೇಲಿಟ್ಟು ಯೆಹೋವನಿಗೆ ಸಮರ್ಪಿಸಿದನು. ಮಾನೋಹನೂ ಅವನ ಹೆಂಡತಿಯೂ ನೋಡುತ್ತಿರುವಾಗಲೇ ಯೆಹೋವನ ದೂತನು ಆಶ್ಚರ್ಯವನ್ನು ನಡಿಸಿದನು.
20
ಏನಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿ ಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲ ಬಿದ್ದರು.
21
ಯೆಹೋವನ ದೂತನು ಮಾನೋಹನಿಗೂ ಅವನ ಹೆಂಡತಿಗೂ ತಿರಿಗಿ ಕಾಣಿಸಲಿಲ್ಲ; ಆಗ ಮಾನೋಹನು ಆತನು ಯೆಹೋವನ ದೂತನೆಂದು ತಿಳಿದು ತನ್ನ ಹೆಂಡತಿಗೆ -
22
ನಾವು ಸಾಯಬೇಕು. ದೇವರನ್ನು ಕಣ್ಣಾರೆ ಕಂಡೆವಲ್ಲಾ ಅನ್ನಲು
23
ಆಕೆಯು ಅವನಿಗೆ - ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿದ್ದಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿದ್ದಿಲ್ಲ, ಹೇಳುತ್ತಿದ್ದಿಲ್ಲ ಅಂದಳು.
24
ಆ ಸ್ತ್ರೀಯು ಮಗನನ್ನು ಹೆತ್ತು ಅವನಿಗೆ ಸಂಸೋನನೆಂದು ಹೆಸರಿಟ್ಟಳು. ಹುಡುಗನು ದೊಡ್ಡವನಾದನು. ಯೆಹೋವನ ಆಶೀರ್ವಾದವು ಅವನ ಮೇಲಿತ್ತು.
25
ಇದಲ್ಲದೆ ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸಹತ್ತಿತು.
← Chapter 12
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 14 →
All chapters:
1
2
3
4
5
6
7
8
9
10
11
12
13
14
15
16
17
18
19
20
21