bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Judges 19
Judges 19
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 20 →
1
ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿ ಒಬ್ಬಾನೊಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇವಿುನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು.
2
ಈಕೆಯು ಇವನನ್ನು ಬಿಟ್ಟು ಜಾರತ್ವಮಾಡಿ ಯೆಹೂದದ ಬೇತ್ಲೆಹೇವಿುನಲ್ಲಿದ್ದ ತನ್ನ ತೌರಮನೆಗೆ ಹೋಗಿ ಅಲ್ಲಿ ನಾಲ್ಕು ತಿಂಗಳು ಇದ್ದಳು.
3
ಅನಂತರ ಆಕೆಯ ಗಂಡನಾದ ಆ ಲೇವಿಯನು ಆಕೆಯನ್ನು ಪ್ರೀತಿಯಿಂದ ಮಾತಾಡಿಸಿ ತಿರಿಗಿ ಮನೆಗೆ ಕರತರಬೇಕೆಂದು ಒಬ್ಬ ಸೇವಕನನ್ನೂ ಎರಡು ಕತ್ತೆಗಳನ್ನೂ ತೆಗೆದುಕೊಂಡು ಅಲ್ಲಿಗೆ ಹೋದನು. ಆಕೆಯು ಅವನನ್ನು ತನ್ನ ತೌರ ಮನೆಯಲ್ಲಿ ಸೇರಿಸಿಕೊಂಡಳು; ಆಕೆಯ ತಂದೆಯೂ ಅವನನ್ನು ನೋಡಿ ಸಂತೋಷಪಟ್ಟನು.
4
ಆ ಸ್ತ್ರೀಯ ತಂದೆಯಾದ ಅವನ ಮಾವನು ಅವನನ್ನು ಮೂರು ದಿವಸ ಅಲ್ಲೇ ನಿಲ್ಲಿಸಿಕೊಂಡನು; ಅವನೂ ಅವನ ಸೇವಕನೂ ಅನ್ನಪಾನಗಳನ್ನು ತೆಗೆದುಕೊಳ್ಳುತ್ತಾ ಅಲ್ಲಿದ್ದರು.
5
ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ - ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು ಎಂದು ಹೇಳಲು
6
ಅವರಿಬ್ಬರೂ ಕೂತು ಅನ್ನಪಾನಗಳನ್ನು ತೆಗೆದುಕೊಂಡರು. ಊಟವಾದ ಮೇಲೆ ಆ ಸ್ತ್ರೀಯ ತಂದೆಯು ತಿರಿಗಿ ಅವನಿಗೆ - ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇದ್ದು ಸಂತೋಷಪಡು ಎಂದು ಹೇಳಿದರೂ ಅವನು ಹೊರಡುವದಕ್ಕಿದ್ದನು;
7
ಆದರೆ ಅವನ ಮಾವನು ಬಹಳ ಬಲಾತ್ಕಾರಮಾಡಿದ್ದರಿಂದ ಆ ರಾತ್ರಿ ಅಲ್ಲಿ ಇಳುಕೊಂಡನು.
8
ಅವರು ಐದನೆಯ ದಿನ ಬೆಳಿಗ್ಗೆ ಎದ್ದು ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು - ದಯವಿಟ್ಟು ಇಳಿಹೊತ್ತಿನವರೆಗೆ ಇಲ್ಲೇ ಇದ್ದು ಬಲಹೊಂದು ಎಂದು ಅವನನ್ನು ಬೇಡಿಕೊಳ್ಳಲು ತಿರಿಗಿ ಊಟಕ್ಕೆ ನಿಂತನು.
9
ಅನಂತರ ಅವನೂ ಅವನ ಉಪಪತ್ನಿಯೂ ಸೇವಕನೂ ಹೋಗುವದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ - ಹೊತ್ತು ಹೋಯಿತು; ಸಂಜೆಯಾಯಿತು. ದಯವಿಟ್ಟು ಈ ಹೊತ್ತಿನ ರಾತ್ರಿ ಇಲ್ಲೇ ಇರು; ನೋಡು, ಸಾಯಂಕಾಲವಾಯಿತು. ಈ ರಾತ್ರಿ ಇಲ್ಲಿದ್ದು ನಮ್ಮೊಡನೆ ಸಂತೋಷಪಡು; ನಾಳೆ ಬೆಳಿಗ್ಗೆ ಎದ್ದು ನಿನ್ನ ಮನೆಗೆ ಹೋಗಬಹುದು ಎಂದು ಬೇಡಿಕೊಂಡರೂ
10
ಆ ಮನುಷ್ಯನು ಒಪ್ಪದೆ ತನ್ನ ಎರಡು ಕತ್ತೆಗಳಿಗೆ ತಡಿಹಾಕಿಸಿ ಉಪಪತ್ನಿಯನ್ನು ಕರೆದುಕೊಂಡು ಹೊರಟನು.
11
ಅವರು ಯೆಬೂಸಿಯರ ಊರಾದ ಯೆರೂಸಲೇವಿುನ ಸಮೀಪಕ್ಕೆ ಬಂದಾಗ ಹೊತ್ತು ಮುಣುಗುವ ಕಾಲವಾದದರಿಂದ ಸೇವಕನು ದಣಿಗೆ - ದಯವಿಟ್ಟು ಬಾ; ನಾವು ಯೆಬೂಸಿಯರ ಈ ಪಟ್ಟಣಕ್ಕೆ ಹೋಗಿ ಅಲ್ಲಿ ರಾತ್ರಿಯನ್ನು ಕಳೆಯೋಣ ಅಂದನು.
12
ಆಗ ದಣಿಯು - ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ ಅಂದನು.
13
ಅವನು ತಿರಿಗಿ ತನ್ನ ಆಳಿಗೆ - ನಾವು ಬೇಗನೆ ಹೋಗಿ ಮುಂದಿರುವ ಗಿಬೆಯದಲ್ಲಾಗಲಿ ರಾಮದಲ್ಲಾಗಲಿ ಇಳುಕೊಳ್ಳೋಣ ಬಾ ಅಂದನು.
14
ಹೀಗೆ ಅವರು ಮುಂದೆ ಸಾಗಿ ಬೆನ್ಯಾಮೀನ್ಯರ ಗಿಬೆಯ ಊರಿನ ಸಮೀಪಕ್ಕೆ ಬಂದಾಗ ಸೂರ್ಯನು ಮುಣುಗಿದನು.
15
ಆದದರಿಂದ ಅವರು ಇಳುಕೊಳ್ಳುವದಕ್ಕೋಸ್ಕರ ಗಿಬೆಯಕ್ಕೆ ಹೋಗಿ ಯಾರೂ ಮನೆಯಲ್ಲಿ ಸೇರಿಸಿಕೊಳ್ಳದ್ದರಿಂದ ಸಂತೇ ಬೀದಿಯಲ್ಲಿ ಕೂತುಕೊಂಡರು.
16
ಅಷ್ಟರಲ್ಲಿ ಎಫ್ರಾಯೀಮ್ ಪರ್ವತ ಪ್ರದೇಶಕ್ಕೆ ಸೇರಿದವನೂ ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸಿಸುವವನೂ ಆಗಿದ್ದ ಒಬ್ಬಾನೊಬ್ಬ ಮುದುಕನು ಸಾಯಂಕಾಲವಾದದರಿಂದ ಕೆಲಸವನ್ನು ಬಿಟ್ಟು ಹೊಲದಿಂದ ಮನೆಗೆ ಬರುತ್ತಿದ್ದನು.
17
ಈ ಮುದುಕನು ಬೀದಿಯಲ್ಲಿ ಕೂತಿದ್ದ ಆ ದಾರಿಗನನ್ನು ಕಂಡು - ಎಲ್ಲಿಂದ ಬಂದಿ? ಎಲ್ಲಿಗೆ ಹೋಗುತ್ತೀ ಎಂದು ಕೇಳಲು
18
ಅವನು ಇವನಿಗೆ - ನಾವು ಯೆಹೂದದ ಬೇತ್ಲೆಹೇವಿುನಿಂದ ಎಫ್ರಾಯೀಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿರುವ ನಮ್ಮ ವಾಸಸ್ಥಳಕ್ಕೆ ಹೋಗುತ್ತಿದ್ದೇವೆ. ನಾನು ಅಲ್ಲಿಂದ ಯೆಹೂದದ ಬೇತ್ಲೆಹೇವಿುಗೆ ಹೋಗಿದ್ದೆನು; ಈಗ ತಿರಿಗಿ ಯೆಹೋವನ ಮಂದಿರಕ್ಕೆ ಹೋಗುತ್ತೇನೆ. ಇಲ್ಲಿ ಯಾರೂ ನಮ್ಮನ್ನು ತಮ್ಮ ಮನೆಗೆ ಕರಕೊಂಡು ಹೋಗಲಿಲ್ಲ.
19
ನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ ದ್ರಾಕ್ಷಾರಸವೂ ಇರುತ್ತವೆ; ನಮಗೆ ಹೆಚ್ಚು ಏನೂ ಬೇಕಾಗಿರುವದಿಲ್ಲ ಎಂದು ಹೇಳಿದನು.
20
ಆಗ ಆ ಮುದುಕನು - ನಿನಗೆ ಶುಭವಾಗಲಿ; ನಿನಗೆ ಏನಾದರೂ ಕಡಿಮೆಯಾದರೆ ಅದನ್ನು ನೋಡಿಕೊಳ್ಳುತ್ತೇನೆ;
21
ಈ ಬೀದಿಯಲ್ಲಿ ರಾತ್ರಿ ಕಳೆಯಬೇಡ, ನನ್ನ ಮನೆಗೆ ಬಾ ಎಂದು ಹೇಳಿ ಅವನನ್ನು ಕರಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು.
22
ಅವರು ಭೋಜನದಿಂದ ತೃಪ್ತಿಪಡುವಷ್ಟರಲ್ಲಿ ಆ ಊರಲ್ಲಿದ್ದ ನೀಚಜನರು ಬಂದು ಆ ಮನೆಯನ್ನು ಸುತ್ತಿಕೊಂಡು ಕದಗಳನ್ನು ಬಡಿದು ಮನೆಯ ಯಜಮಾನನಾದ ಮುದುಕನಿಗೆ - ನಿನ್ನ ಮನೆಗೆ ಬಂದಿರುವಂಥ ಮನುಷ್ಯನನ್ನು ಹೊರಗೆ ತೆಗೆದುಕೊಂಡು ಬಾ; ಅವನೊಡನೆ ನಮಗೆ ಸಂಗಮವಾಗಬೇಕು ಎಂದು ಕೂಗಿದರು.
23
ಆಗ ಆ ಮುದುಕನು ಹೊರಗೆ ಹೋಗಿ ಅವರಿಗೆ - ಸಹೋದರರೇ, ಇಂಥ ದುಷ್ಟತನವನ್ನು ನಡಿಸಬೇಡಿರಿ; ಅವನು ಆಶ್ರಯಕ್ಕಾಗಿ ನನ್ನ ಮನೆಗೆ ಬಂದಿದ್ದಾನೆ; ನೀವು ಇಂಥ ಹುಚ್ಚುತನವನ್ನು ಮಾಡಬೇಡಿರಿ.
24
ಇನ್ನೂ ಮದುವೆಯಾಗದಂಥ ನನ್ನ ಮಗಳನ್ನೂ ಅವನ ಉಪಪತ್ನಿಯನ್ನೂ ಹೊರಗೆ ತರುತ್ತೇನೆ; ಅವರನ್ನು ಭಂಗಪಡಿಸಿರಿ; ನಿಮ್ಮ ಮನಸ್ಸಿಗೆ ಬಂದ ಹಾಗೆ ಅವರಿಗೆ ಮಾಡಿರಿ. ಈ ಮನುಷ್ಯನಿಗೆ ಮಾತ್ರ ಅಂಥ ದುಷ್ಕೃತ್ಯವನ್ನು ಮಾಡಬೇಡಿರಿ ಅಂದನು.
25
ಆದರೆ ಅವರು ಆ ಮುದುಕನಿಗೆ ಕಿವಿಗೊಡಲೊಲ್ಲದೆ ಹೋದದರಿಂದ ಆ ಮನುಷ್ಯನು ತನ್ನ ಉಪಪತ್ನಿಯನ್ನು ಹೊರಗೆ ಅವರ ಮಧ್ಯಕ್ಕೆ ಕಳುಹಿಸಿಬಿಟ್ಟನು. ಅವರು ಆಕೆಯನ್ನು ಕೆಡಿಸಿ ರಾತ್ರಿಯಲ್ಲೆಲ್ಲಾ ಬಹುಕ್ರೂರತನದಿಂದ ನಡಿಸಿ ಕೋಳಿಕೂಗುವ ಹೊತ್ತಾಗಲು ಬಿಟ್ಟು ಹೋದರು.
26
ಆ ಸ್ತ್ರೀಯು ಸೂರ್ಯೋದಯಕ್ಕೆ ಮುಂಚೆಯೇ ಬಂದು ತನ್ನ ಯಜಮಾನನು ಇಳುಕೊಂಡಿದ್ದ ಮನೆಯ ಬಾಗಲಲ್ಲಿ ಬಿದ್ದವಳು ಬೆಳಗಾದರೂ ಏಳಲೇ ಇಲ್ಲ.
27
ಆಕೆಯ ಪತಿಯು ಬೆಳಿಗ್ಗೆ ಎದ್ದು ಹೊರಡುವದಕ್ಕೆ ಸಿದ್ಧನಾಗಿ ಬಾಗಲನ್ನು ತೆರೆಯಲು ತನ್ನ ಉಪಪತ್ನಿಯು ಬಾಗಲ ಮುಂದೆ ಬಿದ್ದಿರುವದನ್ನೂ ಆಕೆಯ ಕೈಗಳು ಹೊಸ್ತಲಿನ ಮೇಲಿರುವದನ್ನೂ ಕಂಡನು.
28
ಅವನು - ಏಳು, ಹೋಗೋಣ ಎಂದು ಆಕೆಯನ್ನು ಕರೆಯಲು ಪ್ರತ್ಯುತ್ತರವೇ ಇಲ್ಲ. ಆಗ ಅವನು ಆಕೆಯ ಶವವನ್ನು ಕತ್ತೆಯ ಮೇಲೆ ಹಾಕಿಕೊಂಡು ಸ್ವಸ್ಥಳಕ್ಕೆ ಹೋದನು.
29
ಅವನು ಮನೆ ಸೇರಿದ ಮೇಲೆ ಒಂದು ಕತ್ತಿಯನ್ನು ತೆಗೆದುಕೊಂಡು ತನ್ನ ಉಪಪತ್ನಿಯ ಶವವನ್ನು ಎಲುಬುಗಳ ಸಹಿತವಾಗಿ ಹನ್ನೆರಡು ತುಂಡುಮಾಡಿ ಅವುಗಳನ್ನು ಇಸ್ರಾಯೇಲ್ಯರ ಎಲ್ಲಾ ಪ್ರಾಂತಗಳಿಗೆ ಕಳುಹಿಸಿದನು.
30
ಅವುಗಳನ್ನು ಕಂಡವರೆಲ್ಲರೂ - ಇಸ್ರಾಯೇಲ್ಯರು ಐಗುಪ್ತವನ್ನು ಬಿಟ್ಟು ಬಂದ ದಿವಸ ಮೊದಲುಗೊಂಡು ಈ ದಿವಸದವರೆಗೆ ಇಂಥ ಕೃತ್ಯವು ನಡೆಯಲೂ ಇಲ್ಲ. ನಾವು ಅದನ್ನು ನೋಡಿಯೂ ಇಲ್ಲ. ಈ ಸಂಗತಿಯನ್ನು ಮನಸ್ಸಿಗೆ ತಂದು ವಿಚಾರಿಸತಕ್ಕದ್ದು ಅಂದುಕೊಂಡರು.
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 20 →
All chapters:
1
2
3
4
5
6
7
8
9
10
11
12
13
14
15
16
17
18
19
20
21