bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Judges 21
Judges 21
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
1
ಇಸ್ರಾಯೇಲ್ಯರೆಲ್ಲರೂ ವಿುಚ್ಪೆಯಲ್ಲಿದ್ದಾಗ ತಾವು ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವದಿಲ್ಲವೆಂದು ಆಣೆಯಿಟ್ಟಿದ್ದರು.
2
ಅವರು ಬೇತೇಲಿಗೆ ಬಂದು ಸಾಯಂಕಾಲದವರೆಗೆ ದೇವರ ಮುಂದೆ ಬಿದ್ದುಕೊಂಡು ಗಟ್ಟಿಯಾಗಿ ಅಳುತ್ತಾ -
3
ಯೆಹೋವನೇ, ಇಸ್ರಾಯೇಲ್ಯರ ದೇವರೇ, ನಮ್ಮಲ್ಲಿ ಹೀಗೆ ಯಾಕೆ ಆಯಿತು? ಇಸ್ರಾಯೇಲ್ಯರ ಒಂದು ಕುಲವು ಹಾಳಾಗಿ ಹೋಯಿತಲ್ಲಾ ಎಂದು ಕೂಗಿದರು.
4
ಮರುದಿವಸ ಅವರು ಬೆಳಿಗ್ಗೆ ಎದ್ದು ಯಜ್ಞವೇದಿಯನ್ನು ಕಟ್ಟಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸಿದರು.
5
ಮತ್ತು ಯೆಹೋವನ ಮುಂದೆ ಸಭೆ ನೆರೆದಾಗ ಅದಕ್ಕೆ ಬಾರದೆ ಇದ್ದಂಥ ಇಸ್ರಾಯೇಲ್ಯರು ಯಾರಾರೆಂದು ವಿಚಾರಮಾಡಿದರು. ಯಾಕಂದರೆ ವಿುಚ್ಪೆಯಲ್ಲಿ - ಯೆಹೋವನ ಸನ್ನಿಧಿಗೆ ಬಾರದವರನ್ನು ಕೊಂದೇಹಾಕುವೆವೆಂದು ಆಣೆಯಿಟ್ಟು ಖಂಡಿತ ಪ್ರಮಾಣಮಾಡಿದ್ದರು.
6
ಇಸ್ರಾಯೇಲ್ಯರು ತಮ್ಮ ಬಂಧುಗಳಾದ ಬೆನ್ಯಾಮೀನ್ಯರ ಅವಸ್ಥೆಯನ್ನು ನೆನಸಿ ದುಃಖದಿಂದ - ಅಯ್ಯೋ, ಇಸ್ರಾಯೇಲ್ಯರಾದ ನಮ್ಮಲ್ಲಿ ಒಂದು ಕುಲವು ಕಡಮೆಯಾಯಿತಲ್ಲಾ;
7
ಜೀವದಿಂದುಳಿದವರಿಗೆ ಹೆಂಡತಿಯರನ್ನು ದೊರಕಿಸಿಕೊಡುವದು ಹೇಗೆ? ನಮ್ಮ ಹೆಣ್ಣುಗಳನ್ನು ಅವರಿಗೆ ಕೊಡುವದಿಲ್ಲವೆಂದು ಯೆಹೋವನ ಹೆಸರಿನಲ್ಲಿ ಆಣೆಯಿಟ್ಟೆವಲ್ಲಾ ಎಂದು ಗೋಳಾಡಿದರು.
8
ವಿುಚ್ಪೆಯಲ್ಲಿ ಯೆಹೋವನ ಮುಂದೆ ಸಭೆನೆರೆದಾಗ ಅದಕ್ಕೆ ಬಾರದಿದ್ದ ಇಸ್ರಾಯೇಲ್ಯರು ಯಾರಾದರೂ ಇದ್ದಾರೋ ಎಂದು ವಿಚಾರಿಸುವಲ್ಲಿ ಯಾಬೇಷ್ ಗಿಲ್ಯಾದಿನಿಂದ ಒಬ್ಬನೂ ಬರಲಿಲ್ಲವೆಂದು ಗೊತ್ತಾಯಿತು.
9
ಜನರನ್ನು ಲೆಕ್ಕಿಸಿದಾಗ ಯಾಬೇಷ್ ಗಿಲ್ಯಾದಿನಿಂದ ಯಾರೂ ಬರಲಿಲ್ಲವೆಂಬದು ದೃಢವಾಯಿತು.
10
ಆಗ ಅವರು ತಮ್ಮಲ್ಲಿಂದ ಹನ್ನೆರಡು ಸಾವಿರ ಮಂದಿ ಪರಾಕ್ರಮಶಾಲಿಗಳನ್ನು ಆರಿಸಿಕೊಂಡು ಅವರಿಗೆ - ನೀವು ಯಾಬೇಷ್ ಗಿಲ್ಯಾದಿಗೆ ಹೋಗಿ ಎಲ್ಲಾ ನಿವಾಸಿಗಳನ್ನೂ ಸ್ತ್ರೀಯರನ್ನೂ ಚಿಕ್ಕ ಮಕ್ಕಳನ್ನೂ ಬಿಡದೆ ಸಂಹರಿಸಬೇಕು;
11
ಹೇಗೂ ಗಂಡಾದದ್ದೆಲ್ಲವನ್ನೂ ಮದುವೆಯಾದ ಸ್ತ್ರೀಯರನ್ನೂ ನಿರ್ಮೂಲಮಾಡುವದು ನಿಮ್ಮ ಕೆಲಸ ಎಂದು ಆಜ್ಞಾಪಿಸಿ ಕಳುಹಿಸಿದರು.
12
ಯಾಬೇಷ್ ಗಿಲ್ಯಾದಿನಲ್ಲಿ ಇನ್ನೂ ಮದುವೆಯಾಗದಿದ್ದ ನಾನೂರು ಮಂದಿ ಯುವತಿಯರಿದ್ದರು. ಪಟ್ಟಣವನ್ನು ಸಂಹರಿಸುವದಕ್ಕೆ ಹೋದವರು ಇವರನ್ನು ಉಳಿಸಿ ಕಾನಾನ್ ದೇಶದ ಶೀಲೋವಿನಲ್ಲಿದ್ದ ಪಾಳೆಯಕ್ಕೆ ತೆಗೆದುಕೊಂಡು ಬಂದರು.
13
ಅನಂತರ ಸರ್ವಸಭೆಯವರು ರಿಮ್ಮೋನ್ ಗಿರಿಯಲ್ಲಿದ್ದ ಬೆನ್ಯಾಮೀನ್ಯರ ಬಳಿಗೆ ದೂತರನ್ನು ಕಳುಹಿಸಿ ಅವರಲ್ಲಿ ಸಮಾಧಾನವಾಕ್ಯವನ್ನು ಪ್ರಕಟಿಸಲು ಅವರು ತಿರಿಗಿ ಬಂದರು.
14
ಇಸ್ರಾಯೇಲ್ಯರು ತಾವು ಯಾಬೇಷ್ ಗಿಲ್ಯಾದಿನಿಂದ ಉಳಿಸಿ ತಂದ ಕನ್ಯೆಯರನ್ನು ಅವರಿಗೆ ಮದುವೆಮಾಡಿಕೊಟ್ಟರು; ಅವರು ಸಾಲಲಿಲ್ಲ.
15
ಯೆಹೋವನು ನಮ್ಮಲ್ಲಿ ಒಂದು ಲೋಪವನ್ನುಂಟು ಮಾಡಿದ್ದಾನೆಂದು ಇಸ್ರಾಯೇಲ್ಯರು ಬೆನ್ಯಾಮೀನ್ಯರ ವಿಷಯದಲ್ಲಿ ದುಃಖಪಟ್ಟರು.
16
ಸಭೆಯ ಹಿರಿಯರು - ಉಳಿದಿರುವ ಬೆನ್ಯಾಮೀನ್ಯರಿಗೋಸ್ಕರ ಹೆಂಡತಿಯರನ್ನು ದೊರಕಿಸುವದು ಹೇಗೆ? ಅವರ ಸ್ತ್ರೀಯರೆಲ್ಲಾ ಸಂಹೃತರಾದರಲ್ಲಾ.
17
ಇಸ್ರಾಯೇಲ್ಯರ ಒಂದು ಪೂರ್ಣ ಕುಲವು ಅಳಿದುಹೋಗಬಾರದು; ತಪ್ಪಿಸಿಕೊಂಡು ಉಳಿದಿರುವ ಬೆನ್ಯಾಮೀನ್ಯರಿಗೆ ಬಾಧ್ಯಸ್ಥರು ಹುಟ್ಟಬೇಕಲ್ಲಾ.
18
ಬೆನ್ಯಾಮೀನ್ಯರಿಗೆ ತಮ್ಮ ಹೆಣ್ಣುಗಳನ್ನು ಕೊಡುವ ಇಸ್ರಾಯೇಲ್ಯರು ಶಾಪಗ್ರಸ್ತರಾಗಲಿ ಎಂದು ಆಣೆಯಿಟ್ಟುಕೊಂಡಿದ್ದೇವಾದದರಿಂದ ನಾವು ಅವರಿಗೆ ನಮ್ಮ ಹೆಣ್ಣುಗಳನ್ನು ಕೊಡುವದಕ್ಕಾಗುವದಿಲ್ಲ ಎಂದು ಮಾತಾಡಿಕೊಳ್ಳುತ್ತಿರುವಾಗ
19
ಶೀಲೋವಿನಲ್ಲಿ ವರ್ಷ ವರ್ಷ ಯೆಹೋವನ ಉತ್ಸವ ನಡೆಯುತ್ತದೆಂಬದು ಅವರಿಗೆ ನೆನಪಿಗೆ ಬಂದಿತು. (ಶೀಲೋ ಎಂಬದು ಬೇತೇಲಿನ ಉತ್ತರಕ್ಕೂ ಬೇತೇಲಿನಿಂದ ಶೆಕೆವಿುಗೆ ಹೋಗುವ ರಾಜಮಾರ್ಗದ ಪೂರ್ವಕ್ಕೂ ಲೆಬೋನದ ದಕ್ಷಿಣಕ್ಕೂ ಇರುತ್ತದೆ.)
20
ಆಗ ಅವರು ಬೆನ್ಯಾಮೀನ್ಯರನ್ನು ಕರೆದು ಅವರಿಗೆ - ಇಗೋ, ನೀವು ದ್ರಾಕ್ಷೇ ತೋಟಗಳಲ್ಲಿ ಅಡಗಿಕೊಳ್ಳಿರಿ;
21
ಶೀಲೋವಿನ ಕನ್ಯೆಯರು ಹೊರಗೆ ಬಂದು ನಾಟ್ಯವಾಡುವಾಗ ನೀವು ತೋಟಗಳಿಂದ ಹೊರಗೆ ಬಂದು ಪ್ರತಿಯೊಬ್ಬನು ತನತನಗೆ ಶೀಲೋವಿನ ಕನ್ನಿಕೆಗಳಿಂದ ಒಬ್ಬಳನ್ನು ಹೆಂಡತಿಯಾಗಿ ತೆಗೆದುಕೊಂಡು ನಿಮ್ಮ ಸೀಮೆಗೆ ಓಡಿ ಹೋಗಿರಿ.
22
ಅವರ ತಂದೆಗಳೂ ಅಣ್ಣತಮ್ಮಂದಿರೂ ನಮ್ಮ ಹತ್ತಿರ ದೂರು ತಂದರೆ ನಾವು ಅವರಿಗೆ - ನಮ್ಮನ್ನು ನೋಡಿ ಅವರಿಗೆ ಕೃಪೆತೋರಿಸಿರಿ; ಯುದ್ಧದಿಂದ ಪ್ರತಿಯೊಬ್ಬನಿಗೆ ಹೆಣ್ಣನ್ನು ದೊರಕಿಸುವದು ನಮ್ಮಿಂದಾಗಲಿಲ್ಲವಲ್ಲಾ; ಮತ್ತು ನಿಮ್ಮ ಹೆಣ್ಣುಮಕ್ಕಳನ್ನು ನೀವೇ ಕೊಡಲಿಲ್ಲವಾದದರಿಂದ ನೀವು ನಿರಪರಾಧಿಗಳು ಎಂದು ಹೇಳಿ ಸಮಾಧಾನಪಡಿಸುವೆವು ಅಂದರು.
23
ಅದರಂತೆಯೇ ಬೆನ್ಯಾಮೀನ್ಯರು ನಾಟ್ಯವಾಡುವದಕ್ಕೋಸ್ಕರ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಸ್ತ್ಯಭೂವಿುಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು.
24
ಅನಂತರ ಇಸ್ರಾಯೇಲ್ಯರು ತಮ್ಮ ತಮ್ಮ ಕುಲಗೋತ್ರಗಳಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.
25
ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ; ಪ್ರತಿಯೊಬ್ಬನೂ ತನ್ನ ಮನಸ್ಸಿಗೆ ಬಂದಂತೆ ನಡೆಯುತ್ತಿದ್ದನು.
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
All chapters:
1
2
3
4
5
6
7
8
9
10
11
12
13
14
15
16
17
18
19
20
21