bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Judges 4
Judges 4
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 5 →
1
ಏಹೂದನು ಮರಣಹೊಂದಿದನಂತರ ಇಸ್ರಾಯೇಲ್ಯರು ತಿರಿಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದದರಿಂದ
2
ಆತನು ಅವರನ್ನು ಹಾಚೋರಿನಲ್ಲಿ ಆಳುತ್ತಿದ್ದ ಕಾನಾನ್ಯರಾಜನಾದ ಯಾಬೀನನಿಗೆ ಮಾರಿಬಿಟ್ಟನು. ಮ್ಲೇಚ್ಫರ ಹರೋಷೆತ್ ಎಂಬ ಪಟ್ಟಣದಲ್ಲಿ ವಾಸವಾಗಿದ್ದ ಸೀಸೆರನು ಅವನ ಸೇನಾಪತಿಯಾಗಿದ್ದನು.
3
ಒಂಭೈನೂರು ಕಬ್ಬಿಣದ ರಥಗಳುಳ್ಳ ಇವನು ಇಸ್ರಾಯೇಲ್ಯರನ್ನು ಇಪ್ಪತ್ತು ವರುಷಗಳ ತನಕ ಬಲವಾಗಿ ಬಾಧಿಸುತ್ತಿರಲು ಅವರು ಯೆಹೋವನಿಗೆ ಮೊರೆಯಿಟ್ಟರು.
4
ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲ್ಯರಲ್ಲಿ ನ್ಯಾಯತೀರಿಸುತ್ತಿದ್ದಳು.
5
ಆಕೆಯು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿ ರಾಮಕ್ಕೂ ಬೇತೇಲಿಗೂ ಮಧ್ಯದಲ್ಲಿರುವ ದೆಬೋರಳ ಖರ್ಜೂರವೃಕ್ಷವೆಂದು ಹೆಸರುಗೊಂಡ ಮರದ ಕೆಳಗೆ ಆಸೀನಳಾಗಿರುವಲ್ಲಿ ಇಸ್ರಾಯೇಲ್ಯರು ನ್ಯಾಯ ನಿರ್ಣಯಕ್ಕೋಸ್ಕರ ಆಕೆಯ ಬಳಿಗೆ ಬರುತ್ತಿದ್ದರು.
6
ಆಕೆಯು ನಫ್ತಾಲಿ ದೇಶದ ಕೆದೆಷ್ ಊರಿನಲ್ಲಿದ್ದ ಅಬೀನೋವಮನ ಮಗನಾದ ಬಾರಾಕನನ್ನು ಕರೇಕಳುಹಿಸಿ ಅವನಿಗೆ - ನಿಶ್ಚಯವಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನಿನಗೆ - ಎದ್ದು ನಫ್ತಾಲಿ ಜೆಬುಲೂನ್ ಕುಲಗಳಿಂದ ಹತ್ತು ಸಾವಿರ ಜನರನ್ನು ಕೂಡಿಸಿಕೊಂಡು ತಾಬೋರ್ ಬೆಟ್ಟಕ್ಕೆ ಹೋಗು;
7
ನಾನು ಯಾಬೀನನ ಸೇನಾಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ ಅಂದಳು.
8
ಬಾರಾಕನು ಆಕೆಗೆ - ನೀನು ನನ್ನ ಸಂಗಡ ಬರುವದಾದರೆ ಹೋಗುವೆನು; ಇಲ್ಲವಾದರೆ ಹೋಗುವದಿಲ್ಲ ಅನ್ನಲು
9
ಆಕೆಯು - ನಾನು ಹೇಗೂ ನಿನ್ನ ಸಂಗಡ ಬರುವೆನು; ಆದರೆ ಈ ಯುದ್ಧಪ್ರಯಾಣದಲ್ಲುಂಟಾಗುವ ಮಾನವು ನಿನಗಲ್ಲ. ಯೆಹೋವನು ಸೀಸೆರನನ್ನು ಒಬ್ಬ ಸ್ತ್ರೀಗೆ ಒಪ್ಪಿಸಿಕೊಡುವನು ಎಂದು ಹೇಳಿ ಎದ್ದು ಬಾರಾಕನೊಡನೆ ಕೆದೆಷಿಗೆ ಹೋದಳು.
10
ಮತ್ತು ಬಾರಾಕನು ಜೆಬೂಲೂನ್ಯರನ್ನೂ ನಫ್ತಾಲ್ಯರನ್ನೂ ಕೆದೆಷಿಗೆ ಕರಿಸಿದನು; ಅವರಲ್ಲಿ ಹತ್ತು ಸಾವಿರ ಮಂದಿ ಅವನ ಹೆಜ್ಜೆ ಹಿಡಿದು ಯುದ್ಧಕ್ಕೆ ಹೋದರು; ದೆಬೋರಳೂ ಹೋದಳು.
11
(ಕೇನ್ಯನಾದ ಹೆಬೆರನು ಮೋಶೆಯ ಮಾವನಾದ ಹೋಬಾಬನ ವಂಶದ ಉಳಿದ ಕೇನ್ಯರನ್ನು ಅಗಲಿ ಕೆದೆಷಿನ ಹತ್ತಿರ ಇರುವ ಚಾನನ್ನೀಮೆಂಬ ಊರಿನ ಏಲೋನ್ ವೃಕ್ಷದವರೆಗೆ ಬಂದು ಅಲ್ಲಿ ಗುಡಾರಹಾಕಿಕೊಂಡಿದ್ದನು.)
12
ಅಬೀನೋವಮನ ಮಗನಾದ ಬಾರಾಕನು ತಾಬೋರ್ ಬೆಟ್ಟವನ್ನೇರಿ ಬಂದಿದ್ದಾನೆಂಬ ವರ್ತಮಾನವು ಸೀಸೆರನಿಗೆ ಮುಟ್ಟಿದಾಗ
13
ಅವನು ತನ್ನ ಒಂಭೈನೂರು ಕಬ್ಬಿಣದ ರಥಗಳನ್ನೂ ಎಲ್ಲಾ ಸೈನ್ಯವನ್ನೂ ತೆಗೆದುಕೊಂಡು ಮ್ಲೇಚ್ಫರ ಹರೋಷೆತಿನಿಂದ ಕೀಷೋನ್ ಹಳ್ಳಕ್ಕೆ ಬಂದನು.
14
ಆಗ ದೆಬೋರಳು ಬಾರಾಕನಿಗೆ - ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇದೇ; ನಿಶ್ಚಯವಾಗಿ ಆತನು ತಾನೇ ನಿನ್ನ ಮುಂದಾಗಿ ಯುದ್ಧಕ್ಕೆ ಹೊರಡುವನು ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದಿಳಿದನು.
15
ಯೆಹೋವನು ಸೀಸೆರನನ್ನೂ ಅವನ ಎಲ್ಲಾ ಸೈನ್ಯರಥಗಳನ್ನೂ ಬಾರಾಕನ ಮುಂದೆ ಗಲಿಬಿಲಿಪಡಿಸಿ ಕತ್ತಿಗೆ ಬಲಿಕೊಟ್ಟನು. ಸೀಸೆರನು ರಥದಿಂದ ಹಾರಿ ಓಡಿಹೋದನು.
16
ಬಾರಾಕನು ಅವನ ಸೈನ್ಯರಥಗಳನ್ನು ಮ್ಲೇಚ್ಫರ ಹರೋಷೆತಿನವರೆಗೂ ಹಿಂದಟ್ಟಿದನು. ಸೀಸೆರನ ಸೈನ್ಯದವರೆಲ್ಲಾ ಕತ್ತಿಯಿಂದ ಹತರಾದರು; ಒಬ್ಬನೂ ಉಳಿಯಲಿಲ್ಲ.
17
ಹಾಚೋರಿನ ಅರಸನಾದ ಯಾಬೀನನಿಗೂ ಕೇನ್ಯನಾದ ಹೆಬೆರನ ಮನೆಯವರಿಗೂ ಸಮಾಧಾನವಿದ್ದದರಿಂದ ಸೀಸೆರನು ಕಾಲುನಡೆಯಾಗಿ ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳ ಗುಡಾರದ ಕಡೆಗೆ ಹೋದನು.
18
ಯಾಯೇಲಳು ಹೊರಗೆ ಹೋಗಿ ಸೀಸೆರನನ್ನು ಎದುರುಗೊಂಡು ಅವನಿಗೆ - ಸ್ವಾಮೀ, ಒಳಗೆ ಬನ್ನಿರಿ; ಹೆದರಬೇಡಿರಿ, ನಮ್ಮಲ್ಲಿ ಬನ್ನಿರಿ ಅನ್ನಲು ಅವನು ಗುಡಾರದೊಳಗೆ ಹೋದನು. ಆಗ ಆಕೆಯು ಅವನನ್ನು ಕಂಬಳಿಯಿಂದ ಮುಚ್ಚಿದಳು.
19
ಅವನು ಆಕೆಗೆ - ದಯವಿಟ್ಟು ಸ್ವಲ್ಪ ನೀರನ್ನು ಕೊಡು, ನನಗೆ ಬಹಳ ದಾಹವಾಗಿದೆ ಅಂದನು;
20
ಆಕೆಯು ಬುದ್ದಲಿಯನ್ನು ಬಿಚ್ಚಿ ಹಾಲನ್ನು ಕುಡಿಯಕೊಟ್ಟು ಅವನನ್ನು ತಿರಿಗಿ ಮುಚ್ಚಿದಳು. ಅವನು ಆಕೆಗೆ - ನೀನು ಗುಡಾರದ ಬಾಗಲಲ್ಲೇ ನಿಂತಿರು; ಯಾರಾದರೂ ಬಂದು ಇಲ್ಲಿ ಒಬ್ಬ ಮನುಷ್ಯನಿರುತ್ತಾನೋ ಎಂದು ವಿಚಾರಿಸಿದರೆ ಇಲ್ಲ ಅನ್ನು ಎಂದು ಹೇಳಿದನು.
21
ಹೆಬೆರನ ಹೆಂಡತಿಯಾದ ಯಾಯೇಲಳು ಕೈಯಲ್ಲಿ ಗುಡಾರದ ಗೂಟವನ್ನೂ ಒಂದು ಕೊಡತಿಯನ್ನೂ ತೆಗೆದುಕೊಂಡು ಅವನು ಆಯಾಸದಿಂದ ಗಾಢನಿದ್ರೆಯಲ್ಲಿದ್ದಾಗ ಮೆಲ್ಲಗೆ ಹತ್ತಿರ ಹೋಗಿ ಅವನ ಕಣತಲೆಯಲ್ಲಿ ಆ ಗೂಟವನ್ನು ಹೊಡೆದು ನೆಲಕ್ಕೆ ನಾಟಿಸಿದಳು; ಅವನು ಸತ್ತನು.
22
ಅದೇ ಕ್ಷಣದಲ್ಲಿ ಸೀಸೆರನನ್ನು ಹಿಂದಟ್ಟುತ್ತಿದ್ದ ಬಾರಾಕನು ಅಲ್ಲಿ ಬಂದನು. ಯಾಯೇಲಳು ಹೊರಗೆ ಹೋಗಿ ಅವನನ್ನು ಎದುರುಗೊಂಡು - ಬಾ, ನೀನು ಹುಡುಕುವ ಮನುಷ್ಯನನ್ನು ತೋರಿಸುತ್ತೇನೆಂದು ಹೇಳಲು ಅವನು ಒಳಗೆ ಹೋಗಿ ಸೀಸೆರನು ಸತ್ತು ಬಿದ್ದದ್ದನ್ನು ಕಂಡನು. ಅವನ ತಲೆಯಲ್ಲಿ ಗೂಟವು ಜಡಿಯಲ್ಪಟ್ಟಿತ್ತು.
23
ಆ ದಿನದಲ್ಲಿ ದೇವರು ಕಾನಾನ್ಯರಾಜನಾದ ಯಾಬೀನನನ್ನು ಇಸ್ರಾಯೇಲ್ಯರ ಮುಂದೆ ತಗ್ಗಿಸಿದನು.
24
ಇಸ್ರಾಯೇಲ್ಯರ ಹಸ್ತವು ಹೆಚ್ಚು ಹೆಚ್ಚು ಬಲಗೊಂಡದರಿಂದ ಕಾನಾನ್ಯರ ಅರಸನಾದ ಯಾಬೀನನು ಪೂರ್ಣವಾಗಿ ಸೋತು ನಿರ್ನಾಮವಾದನು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 5 →
All chapters:
1
2
3
4
5
6
7
8
9
10
11
12
13
14
15
16
17
18
19
20
21