bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Judges 9
Judges 9
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 10 →
1
ಯೆರುಬ್ಬಾಳನ ಮಗನಾದ ಅಬೀಮೆಲೆಕನು ಶೆಕೆವಿುಗೆ ಹೋಗಿ ತನ್ನ ಸೋದರ ಮಾವಂದಿರಿಗೂ ತಾಯಿಯ ಬಂಧುಗಳೆಲ್ಲರಿಗೂ ಹೇಳಿದ್ದೇನಂದರೆ -
2
ನೀವು ದಯವಿಟ್ಟು ಶೆಕೆವಿುನ ಹಿರಿಯರನ್ನು ಮಾತಾಡಿಸಿ - ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳು ನಿಮ್ಮನ್ನು ಆಳುವದು ಒಳ್ಳೇದೋ ಅಥವಾ ಒಬ್ಬನೇ ಆಳುವದು ಮೇಲೋ ಎಂದು ಅವರನ್ನು ಕೇಳಿ ನಾನು ಅವರ ರಕ್ತ ಸಂಬಂಧಿಯಾಗಿದ್ದೇನೆಂಬದನ್ನು ಜ್ಞಾಪಕಪಡಿಸಿರಿ ಅಂದನು.
3
ಅವರು ಶೆಕೆವಿುನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು - ಇವನು ನಮ್ಮ ಸಹೋದರನಾಗಿದ್ದಾನಲ್ಲಾ ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವದಕ್ಕೆ ಒಡಂಬಟ್ಟರು.
4
ಮತ್ತು ಅವರು ಬಾಳ್ಬೆರೀತಿನ ದೇವಸ್ಥಾನದಿಂದ ಎಪ್ಪತ್ತು ರೂಪಾಯಿಗಳನ್ನು ಅವನಿಗೆ ಕೊಟ್ಟರು. ಅವನು ಈ ಹಣದಿಂದ ಕೆಲವು ಮಂದಿ ಕಾಕಪೋಕರನ್ನು ಕೂಡಿಸಿ
5
ಅವರ ನಾಯಕನಾಗಿ ಹೊರಟು ಒಫ್ರದಲ್ಲಿದ್ದ ತನ್ನ ತಂದೆಯಾದ ಯೆರುಬ್ಬಾಳನ ಮನೆಗೆ ಹೋಗಿ ಅವನ ಎಪ್ಪತ್ತು ಮಂದಿ ಮಕ್ಕಳನ್ನು ಹಿಡಿದು ಒಂದೇ ಬಂಡೆಯ ಮೇಲೆ ಕೊಲ್ಲಿಸಿದನು. ಆದರೆ ಕಿರಿಯವನಾದ ಯೋತಾಮನೆಂಬವನು ಅಡಗಿಕೊಂಡು ಉಳಿದನು.
6
ತರುವಾಯ ಎಲ್ಲಾ ಶೆಕೆವಿುನವರೂ ವಿುಲ್ಲೋ ಕೋಟೆಯವರೂ ಶೆಕೆವಿುನ ಬಳಿಯಲ್ಲಿ ಜ್ಞಾಪಕಸ್ತಂಭವಿರುವ ಏಲೋನ್ ವೃಕ್ಷದ ಹತ್ತಿರ ಕೂಡಿಬಂದು ಅಬೀಮೆಲೆಕನನ್ನು ತಮ್ಮ ಅರಸನನ್ನಾಗಿ ಏರ್ಪಡಿಸಿಕೊಂಡರು.
7
ಯೋತಾಮನು ಇದನ್ನು ಕೇಳಿ ಗೆರಿಜ್ಜೀಮ್ ಬೆಟ್ಟದ ತುದಿಯಲ್ಲಿ ನಿಂತು ಗಟ್ಟಿಯಾದ ಧ್ವನಿಯಿಂದ - ಶೆಕೆವಿುನವರೇ, ನನ್ನ ಮಾತನ್ನು ಕೇಳಿರಿ; ಆಗ ದೇವರು ನಿಮಗೆ ಕಿವಿಗೊಡುವನು.
8
ಮರಗಳು ತಮಗೋಸ್ಕರ ಒಬ್ಬ ಅರಸನನ್ನು ಅಭಿಷೇಕಿಸಬೇಕೆಂದು ಹೊರಟು ಎಣ್ಣೆಯ ಮರದ ಬಳಿಗೆ ಬಂದು - ನೀನು ಬಂದು ನಮಗೆ ಅರಸನಾಗು ಅಂದವು.
9
ಆಗ ಅದು ಅವುಗಳಿಗೆ - ನನ್ನಲ್ಲಿರುವ ಎಣ್ಣೆಗೋಸ್ಕರ ದೇವತೆಗಳೂ ಮನುಷ್ಯರೂ ನನ್ನನ್ನು ಘನಪಡಿಸುತ್ತಾರೆ; ಇದನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು.
10
ತರುವಾಯ ಅವು ಅಂಜೂರ ಗಿಡದ ಬಳಿಗೆ ಹೋಗಿ ಅದಕ್ಕೆ - ನೀನು ಬಂದು ನಮ್ಮ ಅರಸನಾಗು ಅನ್ನಲು
11
ಅದು - ನಾನು ನನ್ನ ಶ್ರೇಷ್ಠವಾದ ಮಧುರಫಲ ದಾನವನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು.
12
ಅನಂತರ ಅವು ದ್ರಾಕ್ಷಾಲತೆಯ ಬಳಿಗೆ ಹೋಗಿ - ನೀನು ಬಂದು ನಮ್ಮ ಅರಸನಾಗು ಎನ್ನಲು
13
ಅದು ಅವುಗಳಿಗೆ - ನಾನು ನನ್ನ ರಸದಿಂದ ದೇವತೆಗಳಿಗೂ ಮನುಷ್ಯರಿಗೂ ಆನಂದಕೊಡುವದನ್ನು ಬಿಟ್ಟು ಮರಗಳ ಮೇಲೆ ಓಲಾಡುವದಕ್ಕೆ ಬರಬೇಕೋ ಅಂದಿತು.
14
ಕಡೆಗೆ ಎಲ್ಲಾ ಮರಗಳು ಮುಳ್ಳುಗಿಡದ ಬಳಿಗೆ ಹೋಗಿ - ನೀನು ಬಂದು ನಮ್ಮ ಅರಸನಾಗು ಅನ್ನಲು
15
ಅದು - ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರುವೃಕ್ಷಗಳನ್ನು ದಹಸಿಬಿಡುವದು ಎಂದಿತು.
16
ನೀವು ಅಬೀಮೆಲೆಕನನ್ನು ಅರಸನನ್ನಾಗಿ ಮಾಡಿದ್ದು ನ್ಯಾಯವೋ? ಅದು ಧರ್ಮಕಾರ್ಯವೋ? ಯೆರುಬ್ಬಾಳನು ನಿಮಗೆ ಮಾಡಿದ ಉಪಕಾರಕ್ಕೋಸ್ಕರ ನೀವು ಅವನಿಗೂ ಅವನ ಮನೆಯವರಿಗೂ ಪ್ರತ್ಯುಪಕಾರಮಾಡಿದಿರೋ?
17
ನನ್ನ ತಂದೆಯು ತನ್ನ ಜೀವದ ಆಶೆಯನ್ನು ತೊರೆದು ಹೋರಾಡಿ ನಿಮ್ಮನ್ನು ವಿುದ್ಯಾನ್ಯರ ಕೈಯಿಂದ ಬಿಡಿಸಿದನಲ್ಲಾ.
18
ಆದರೆ ನೀವು ಈಗ ನನ್ನ ತಂದೆಯ ಮನೆಗೆ ವಿರೋಧವಾಗಿ ನಿಂತು ಅವನ ಎಪ್ಪತ್ತು ಮಂದಿ ಮಕ್ಕಳನ್ನು ಒಂದೇ ಬಂಡೆಯ ಮೇಲೆ ವಧಿಸಿ ಅವನ ದಾಸಿಯ ಮಗನಾದ ಅಬೀಮೆಲೆಕನನ್ನು ನಮ್ಮ ಬಂಧುವೆಂದು ಹೇಳಿ ಶೆಕೆವಿುನ ಅರಸನನ್ನಾಗಿ ಮಾಡಿಕೊಂಡಿದ್ದೀರಿ.
19
ನೀವು ಈಗ ಯೆರುಬ್ಬಾಳನಿಗೂ ಅವನ ಮನೆಯವರಿಗೂ ಮಾಡಿದ್ದು ನ್ಯಾಯವೂ ಧರ್ಮವೂ ಆಗಿದ್ದರೆ ಅಬೀಮೆಲೆಕನಲ್ಲಿ ಆನಂದಿಸಿರಿ; ಅವನು ನಿಮ್ಮಲ್ಲಿ ಆನಂದಿಸಲಿ.
20
ಇಲ್ಲವಾದರೆ ಅಬೀಮೆಲೆಕನಿಂದ ಬೆಂಕಿಹೊರಟು ಶೆಕೆವಿುನವರನ್ನೂ ವಿುಲ್ಲೋ ಕೋಟೆಯವರನ್ನೂ ದಹಿಸಿ ಬಿಡಲಿ; ಶೆಕೆವಿುನವರಿಂದಲೂ ವಿುಲ್ಲೋ ಕೋಟೆಯವರಿಂದಲೂ ಬೆಂಕಿಹೊರಟು ಅಬೀಮೆಲೆಕನನ್ನು ದಹಿಸಿ ಬಿಡಲಿ.
21
ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಗೆ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.
22
ಅಬೀಮೆಲೆಕನು ಇಸ್ರಾಯೇಲ್ಯರನ್ನು ಮೂರು ವರುಷ ಆಳಿದ ನಂತರ
23
ಯೆಹೋವನು ಅವನಿಗೂ ಶೆಕೆವಿುನ ಹಿರಿಯರಿಗೂ ವೈಮನಸ್ಯ ಹುಟ್ಟುವಂತೆ ಮಾಡಿದನು. ಅವರು ಅವನಿಗೆ ದ್ರೋಹಮಾಡಿದರು.
24
ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳನ್ನು ಕ್ರೂರತನದಿಂದ ಕೊಂದುಹಾಕಿದ ರಕ್ತಾಪರಾಧಫಲವು ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ ಆ ಕೃತ್ಯದಲ್ಲಿ ಅವನಿಗೆ ಸಹಾಯಕರಾಗಿದ್ದ ಶೆಕೆವಿುನವರ ಮೇಲೆಯೂ ಬರುವದಕ್ಕೆ ಮಾರ್ಗವಾಯಿತು.
25
ಶೆಕೆವಿುನವರು ಅಬೀಮೆಲೆಕನಿಗೆ ವಿರೋಧವಾಗಿ ಪರ್ವತಶಿಖರಗಳಲ್ಲಿ ಹೊಂಚುಗಾರರನ್ನಿಟ್ಟರು. ಇವರು ಆ ದಾರಿಗಳಲ್ಲಿ ಸಂಚರಿಸುವ ಪ್ರಯಾಣಿಕರನ್ನು ಸುಲುಕೊಳ್ಳುತ್ತಿದ್ದರು. ಈ ವರ್ತಮಾನವು ಅಬೀಮೆಲೆಕನಿಗೆ ಮುಟ್ಟಿತು.
26
ಅದೇ ಸಮಯದಲ್ಲಿ ಎಬೆದನ ಮಗನಾದ ಗಾಳನೆಂಬವನು ತನ್ನ ಬಂಧುಗಳೊಡನೆ ಶೆಕೆವಿುಗೆ ಬಂದನು. ಶೆಕೆವಿುನ ಹಿರಿಯರು ಅವನಲ್ಲಿ ಭರವಸವಿಟ್ಟರು.
27
ಆ ಊರಿನವರು ಒಂದಾನೊಂದು ದಿವಸ ತಮ್ಮ ದ್ರಾಕ್ಷಾಫಲಗಳನ್ನು ಕೊಯಿದು ಆಲೆಗಳಲ್ಲಿ ರಸತೆಗೆದು ತಮ್ಮ ದೇವರ ಗುಡಿಗೆ ಹೋಗಿ ಹಬ್ಬಮಾಡಿ ಉಂಡು ಕುಡಿದು ಅಬೀಮೆಲೆಕನನ್ನು ಶಪಿಸಿದರು.
28
ಎಬೆದನ ಮಗನಾದ ಗಾಳನೂ ಅವರ ಸಂಗಡ ಕೂಡಿಕೊಂಡು - ಅಬೀಮೆಲೆಕನು ಎಷ್ಟರವನು? ಶೆಕೆವಿುನವರಾದ ನಾವು ಎಷ್ಟರವರು? ನಾವು ಅಬೀಮೆಲೆಕನನ್ನು ಯಾಕೆ ಸೇವಿಸಬೇಕು? ಅವನು ಯೆರುಬ್ಬಾಳನ ಮಗನಲ್ಲವೋ? ಅವನ ಪುರಾಧಿಕಾರಿಯು ಜೆಬುಲನಲ್ಲವೋ? ನಾವು ಅವನನ್ನು ಯಾಕೆ ಸೇವಿಸಬೇಕು? ಶೆಕೆಮನ ತಂದೆಯಾದ ಹಮೋರನ ವಂಶದವರನ್ನೇ ಸೇವಿಸುವಾ.
29
ಈ ಜನರ ಮೇಲೆ ನನಗೆ ಅಧಿಕಾರವಿದ್ದರೆ ಅಬೀಮೆಲೆಕನನ್ನು ಓಡಿಸಿ ಬಿಡುತ್ತಿದ್ದೆನು ಎಂದು ಹೇಳಿ - ಎಲಾ, ಅಬೀಮೆಲೆಕನೇ, ಸೈನ್ಯವನ್ನು ತೆಗೆದುಕೊಂಡು ನನ್ನೊಡನೆ ಯುದ್ಧಕ್ಕೆ ಬಾ ಎಂದು ಕೊಚ್ಚಿಕೊಂಡನು.
30
ಪುರಾಧಿಕಾರಿಯಾದ ಜೆಬುಲನು ಎಬೆದನ ಮಗನಾದ ಗಾಳನ ಮಾತುಗಳನ್ನು ಕೇಳಿ ರೇಗಿದವನಾಗಿ ಯಾರಿಗೂ ತಿಳಿಯದಂತೆ ಅಬೀಮೆಲೆಕನ ಬಳಿಗೆ ದೂತರನ್ನು ಕಳುಹಿಸಿ -
31
ಇಗೋ, ಎಬೆದನ ಮಗನಾದ ಗಾಳನೂ ಅವನ ಬಂಧುಗಳೂ ಇಲ್ಲಿಗೆ ಬಂದು ಶೆಕೆವಿುನವರೆಲ್ಲರನ್ನೂ ನಿನಗೆ ವಿರೋಧವಾಗಿ ಹುರಿದುಂಬಿಸುತ್ತಿದ್ದಾರೆ.
32
ಆದದರಿಂದ ನೀನು ಈ ರಾತ್ರಿಯಲ್ಲೇ ಸೈನ್ಯವನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚುಹಾಕಿಕೊಂಡಿರು.
33
ಸೂರ್ಯನು ಉದಯಿಸುತ್ತಲೇ ಎದ್ದು ಪಟ್ಟಣದ ಮೇಲೆ ಬೀಳು; ಅವನೂ ಅವನ ಜೊತೆಯಲ್ಲಿರುವವರೂ ನಿನಗೆ ವಿರೋಧವಾಗಿ ಹೊರಟು ಬಂದಾಗ ನಿನಗೆ ಅನುಕೂಲ ತೋರಿದ ಹಾಗೆ ಮಾಡು ಎಂದು ಹೇಳಿಸಿದನು.
34
ಅಬೀಮೆಲೆಕನೂ ಅವನ ಜನರೂ ರಾತ್ರಿಯಲ್ಲೇ ಹೊರಟು ಬಂದು ನಾಲ್ಕು ಗುಂಪಾಗಿ ಶೆಕೆವಿುನವರನ್ನು ಹೊಂಚಿ ಕಾಯುತ್ತಿದ್ದರು.
35
ಎಬೆದನ ಮಗನಾದ ಗಾಳನು ಹೊರಗೆ ಹೋಗಿ ಊರುಬಾಗಲಲ್ಲಿ ನಿಂತುಕೊಂಡಾಗ ಅಬೀಮೆಲೆಕನೂ ಅವನ ಜನರೂ ತಾವು ಹೊಂಚಿನೋಡುತ್ತಿದ್ದ ಸ್ಥಳದಿಂದ ಎದ್ದು ಬಂದರು.
36
ಗಾಳನು ಅವರನ್ನು ಕಂಡು ಜೆಬುಲನಿಗೆ - ಇಗೋ, ಬೆಟ್ಟದ ಮೇಲಣಿಂದ ಜನರು ಬರುತ್ತಿದ್ದಾರೆ ಎಂದು ಹೇಳಲು ಜೆಬುಲನು ಅವನಿಗೆ - ನೀನು ಬೆಟ್ಟದ ನೆರಳನ್ನು ನೋಡಿ ಜನರೆಂದು ಭಾವಿಸುತ್ತೀ ಅನ್ನಲು
37
ಅವನು ತಿರಿಗಿ - ನೋಡು, ದೇಶನಾಭಿಗಿರಿಯಿಂದ ಜನರು ಬರುತ್ತಿದ್ದಾರೆ; ಕಣಿಹೇಳುವವರ ಮರದ ಮಾರ್ಗವಾಗಿ ಇನ್ನೊಂದು ಗುಂಪು ಬರುತ್ತಿದೆ ಅಂದನು.
38
ಆಗ ಜೆಬುಲನು ಅವನಿಗೆ - ಈಗ ನಿನ್ನ ಬಾಯೆಲ್ಲಿದೆ? ಅಬೀಮೆಲೆಕನು ಎಷ್ಟರವನು? ನಾವು ಅವನನ್ನು ಯಾಕೆ ಸೇವಿಸಬೇಕು ಎಂದು ಕೊಚ್ಚಿಕೊಂಡಿಯಲ್ಲಾ; ಅವರು ನೀನು ತಿರಸ್ಕರಿಸಿದ ಜನರಲ್ಲವೋ? ಹಾಗಾದರೆ ಹೋಗಿ ಅವರೊಡನೆ ಯುದ್ಧಮಾಡು, ನೋಡೋಣ ಎಂದು ಹೇಳಿದನು.
39
ಗಾಳನು ಶೆಕೆವಿುನವರ ನಾಯಕನಾಗಿ ಹೊರಟು ಅಬೀಮೆಲೆಕನೊಡನೆ ಕಾದಿದನು.
40
ಆದರೆ ಅಬೀಮೆಲೆಕನಿಗೆ ಬೆನ್ನುತೋರಿಸಿ ಓಡಿಹೋಗಬೇಕಾಗಲು ಅವನು ಇವನನ್ನು ಹಿಂದಟ್ಟಿದನು. ಊರುಬಾಗಲಿನವರೆಗೆ ಅನೇಕ ಮಂದಿ ಹತರಾಗಿ ಬಿದ್ದರು.
41
ಅನಂತರ ಅಬೀಮೆಲೆಕನು ಹೋಗಿ ಅರೂಮದಲ್ಲಿ ವಾಸಿಸಿದನು. ಇತ್ತ ಜೆಬುಲನು ಗಾಳನನ್ನೂ ಅವನ ಬಂಧುಗಳನ್ನೂ ಶೆಕೆವಿುನಿಂದ ಅಟ್ಟಿಬಿಟ್ಟನು.
42
ಮರುದಿವಸ ಜನರು ಬೈಲಿಗೆ ಹೊರಟು ಬಂದರು;
43
ಇದು ಅಬೀಮೆಲೆಕನಿಗೆ ಗೊತ್ತಿದ್ದದರಿಂದ ಅವನು ತನ್ನ ಜನರನ್ನು ಮೂರು ಗುಂಪು ಮಾಡಿ ಅವರನ್ನು ತೆಗೆದುಕೊಂಡು ಬಂದು ಹೊಲಗಳಲ್ಲಿ ಹೊಂಚಿ ನೋಡುತ್ತಿದ್ದನು. ಜನರು ಪಟ್ಟಣದಿಂದ ಹೊರಟು ಬರುವದನ್ನು ಇವನು ಕಾಣುತ್ತಲೆ ಅಲ್ಲಿಂದ ಎದ್ದು ಅವರನ್ನು ಹೊಡೆದನು.
44
ಅಬೀಮೆಲೆಕನೂ ಅವನ ಸಂಗಡ ಇದ್ದ ಗುಂಪಿನವರೂ ಓಡಿ ಬಂದು ಊರು ಬಾಗಲಲ್ಲಿ ನಿಂತರು; ಉಳಿದ ಎರಡು ಗುಂಪಿನವರು ಬೈಲಿನಲ್ಲಿದ್ದ ಶೆಕೆವಿುನವರ ಮೇಲೆ ಬಿದ್ದು ಅವರನ್ನು ಹತಮಾಡಿದರು.
45
ಅಬೀಮೆಲೆಕನು ಆ ದಿವಸವೆಲ್ಲಾ ಯುದ್ಧಮಾಡಿ ಪಟ್ಟಣವನ್ನು ಸ್ವಾಧೀನಮಾಡಿಕೊಂಡು ಅದರ ಜನರನ್ನೆಲ್ಲಾ ಸಂಹರಿಸಿ ಊರನ್ನು ಕೆಡವಿಬಿಟ್ಟು ಅಲ್ಲಿ ಉಪ್ಪನ್ನು ಎರಚಿಬಿಟ್ಟನು.
46
ಶೆಕೆವಿುನ ಕೋಟೆಯವರು ಇದನ್ನು ಕೇಳಿ ಏಲ್ಬೆರೀತೆಂಬ ದೇವರ ಗುಡಿಯ ನೆಲಮನೆಯಲ್ಲಿ ಅಡಗಿಕೊಂಡರು.
47
ಕೋಟೆಯವರೆಲ್ಲರೂ ಅಲ್ಲಿ ಅಡಗಿಕೊಂಡಿದ್ದಾರೆಂಬದು ಅಬೀಮೆಲೆಕನಿಗೆ ಗೊತ್ತಾದಾಗ
48
ಅವನು ಕೊಡಲಿಯನ್ನು ತೆಗೆದುಕೊಂಡು ತನ್ನ ಜನರೆಲ್ಲರೊಡನೆ ಚಲ್ಮೊನ್ ಗುಡ್ಡವನ್ನೇರಿ ತನ್ನವರಿಗೆ - ನಾನು ಮಾಡುವಂತೆಯೇ ನೀವೂ ತೀವ್ರವಾಗಿ ಮಾಡಿರಿ ಎಂದು ಹೇಳಿ ತಾನು ಒಂದು ಮರದ ಕೊಂಬೆಯನ್ನು ಕಡಿದು ಹೆಗಲ ಮೇಲೆ ಹೊತ್ತುಕೊಳ್ಳಲು
49
ಅವರೂ ಅದರಂತೆಯೇ ಮಾಡಿ ಅವನ ಹಿಂದೆ ಹೋಗಿ ಆ ಕೊಂಬೆಗಳನ್ನು ಅವರಿದ್ದ ನೆಲಮನೆಯ ಸುತ್ತಲೂ ಹಾಕಿ ಬೆಂಕಿಹೊತ್ತಿಸಿ ಅದನ್ನು ಸುಟ್ಟುಬಿಟ್ಟರು. ಹೀಗೆ ಶೆಕೆಮ್ಕೋಟೆಯವರೆಲ್ಲರೂ ಸತ್ತರು. ಅವರು ಸ್ತ್ರೀಪುರುಷರೆಲ್ಲಾ ಸುಮಾರು ಸಾವಿರ ಜನರಿದ್ದರು.
50
ಅನಂತರ ಅಬೀಮೆಲೆಕನು ತೇಬೇಚಿಗೆ ಹೋಗಿ ಮುತ್ತಿಗೆಹಾಕಿ ಅದನ್ನು ಹಿಡಿದನು.
51
ಆ ಊರಿನ ಮಧ್ಯದಲ್ಲಿ ಒಂದು ಭದ್ರವಾದ ಬುರುಜು ಇತ್ತು; ಊರಿನ ಸ್ತ್ರೀಪುರುಷರೆಲ್ಲರೂ ಓಡಿಹೋಗಿ ಅದರೊಳಗೆ ಹೊಕ್ಕು ಬಾಗಲನ್ನು ಮುಚ್ಚಿಕೊಂಡು ಮೇಲೆ ಹತ್ತಿದರು.
52
ಅಬೀಮೆಲೆಕನು ಅಲ್ಲಿಗೆ ಬಂದು ಯುದ್ಧಮಾಡುತ್ತಾ ಬುರುಜಿನ ಬಾಗಲಿಗೆ ಬೆಂಕಿ ಹೊತ್ತಿಸಬೇಕೆಂದು ಅದರ ಸಮೀಪಕ್ಕೆ ಹೋಗಲು
53
ಒಬ್ಬ ಸ್ತ್ರೀಯು ಮೇಲಣಿಂದ ಒಂದು ಬೀಸುವ ಕಲ್ಲನ್ನು ಬೀಳಿಸಿ ಅವನ ತಲೆಬುರುಡೆಯನ್ನು ಒಡೆದುಬಿಟ್ಟಳು.
54
ಅವನು ಕೂಡಲೆ ತನ್ನ ಆಯುಧವಾಹಕನನ್ನು ಕರೆದು ಅವನಿಗೆ - ಕತ್ತಿಯನ್ನು ಹಿರಿದು ನನ್ನನ್ನು ಕೊಲ್ಲು; ಇಲ್ಲವಾದರೆ ಹೆಂಗಸಿನ ಕೈಯಿಂದ ಸತ್ತನೆಂದು ಹೇಳಾರು ಎಂದನ್ನಲು ಆ ಪ್ರಾಯಸ್ಥನು ಅವನನ್ನು ತಿವಿದು ಕೊಂದು ಹಾಕಿದನು.
55
ಅಬೀಮೆಲೆಕನು ಸತ್ತು ಹೋದದ್ದನ್ನು ಕಂಡು ಇಸ್ರಾಯೇಲ್ಯರು ತಮ್ಮ ತಮ್ಮ ಸ್ಥಳಗಳಿಗೆ ಹಿಂದಿರುಗಿದರು.
56
ಎಪ್ಪತ್ತು ಮಂದಿ ಸಹೋದರರನ್ನು ಕೊಂದುಹಾಕಿ ತನ್ನ ತಂದೆಗೆ ದ್ರೋಹಿಯಾದ ಅಬೀಮೆಲೆಕನಿಗೆ ದೇವರು ಈ ರೀತಿಯಾಗಿ ಮುಯ್ಯಿತೀರಿಸಿದನು.
57
ಶೆಕೆವಿುನವರಿಗಾದರೋ ಅವರ ದುಷ್ಟತ್ವವು ಅವರ ತಲೆಯ ಮೇಲೆಯೇ ಬರಮಾಡಿದನು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನು ಇವರ ವಿಷಯದಲ್ಲಿ ನುಡಿದ ಶಾಪವು ನೆರವೇರಿತು.
← Chapter 8
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 10 →
All chapters:
1
2
3
4
5
6
7
8
9
10
11
12
13
14
15
16
17
18
19
20
21