bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Lamentations 3
Lamentations 3
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 4 →
1
ಯೆಹೋವನ ರೌದ್ರದಂಡದ ಪೆಟ್ಟನ್ನು ತಿಂದವನು ನಾನೇ,
2
ಆತನು ನನ್ನನ್ನು ಕರೆದುಕೊಂಡು ಹೋಗಿ ಬೆಳಕಿನಲ್ಲಲ್ಲ, ಕತ್ತಲಲ್ಲೇ ನಡೆಯಮಾಡಿದ್ದಾನೆ,
3
ನಿಶ್ಚಯವಾಗಿ ಪದೇ ಪದೇ ದಿನವೆಲ್ಲಾ ನನ್ನ ಮೇಲೆ ಕೈಮಾಡುತ್ತಾ ಬಂದಿದ್ದಾನೆ.
4
ನನ್ನ ಚರ್ಮಮಾಂಸಗಳನ್ನು ಕಂದಿಸಿ ನನ್ನ ಎಲುಬುಗಳನ್ನು ಮುರಿದಿದ್ದಾನೆ:
5
ನನ್ನ ಸುತ್ತಲು ಶ್ರಮಸಂಕಟಗಳ ದಿಬ್ಬಗಳನ್ನು ಹಾಕಿದ್ದಾನೆ.
6
ಕಾರ್ಗತ್ತಲಲ್ಲಿ ನನ್ನನ್ನು ಇರಿಸಿದ್ದಾನೆ; ಬಹುಕಾಲದ ಹಿಂದೆ ಸತ್ತವರಂತಿದ್ದೇನೆ.
7
ನಾನು ಆಚೆಹೋಗದಂತೆ ನನ್ನ ಸುತ್ತಲು ಗೋಡೆ ಕಟ್ಟಿ ನನಗೆ ಭಾರಿ ಬೇಡಿಹಾಕಿದ್ದಾನೆ.
8
ಇದಲ್ಲದೆ ನಾನು ಮೊರೆಯಿಟ್ಟು ಕೂಗಿಕೊಂಡರೂ ನನ್ನ ಬಿನ್ನಹಕ್ಕೆ ಕಿವಿಗೊಡನು.
9
ನನ್ನ ದಾರಿಗಳಿಗೆ ಅಡ್ಡವಾಗಿ ಕೆತ್ತನೆಯ ಕಲ್ಲಿನ ಗೋಡೆಗಳನ್ನು ಹಾಕಿ ಹಾದಿಗಳನ್ನು ಸುತ್ತುಮಾಡಿದ್ದಾನೆ.
10
ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ.
11
ನಾನು ನಡೆದ ದಾರಿಗಳಿಂದ ನನ್ನನ್ನು ತಪ್ಪಿಸಿ ಸೀಳಿಬಿಟ್ಟು ಹಾಳುಮಾಡಿದ್ದಾನೆ.
12
ತನ್ನ ಬಿಲ್ಲನ್ನು ಬೊಗ್ಗಿಸಿ ಬಾಣಕ್ಕೆ ನನ್ನನ್ನು ಗುರಿಮಾಡಿಕೊಂಡಿದ್ದಾನೆ.
13
ತನ್ನ ಬತ್ತಳಿಕೆಯ ಅಂಬುಗಳಿಂದ ನನ್ನ ಅಂತರಂಗಗಳನ್ನು ಇರಿದಿದ್ದಾನೆ.
14
ನಾನು ಸ್ವಜನರೆಲ್ಲರಿಗೂ ಹಾಸ್ಯಾಸ್ಪದನಾಗಿ ಹಗಲೆಲ್ಲಾ ಅವರ ಗೇಲಿಯ ಹಾಡುಗಳಿಗೆ ಗುರಿಯಾಗಿದ್ದೇನೆ.
15
ಆತನು ನನಗೆ ಕಹಿಯಾದ ಆಹಾರವನ್ನು ಅಡಚಿ ವಿಷಪದಾರ್ಥದಿಂದ ನನ್ನನ್ನು ತಣಿಸಿದ್ದಾನೆ.
16
ನನ್ನ ಹಲ್ಲುಗಳನ್ನು ನುರುಜುಗಲ್ಲಿನಿಂದ ಮುರಿದುಬಿಟ್ಟು ನನ್ನನ್ನು ಬೂದಿಯಲ್ಲಿ ಕುಕ್ಕರಿಸ ಮಾಡಿದ್ದಾನೆ.
17
ನನ್ನನ್ನು ತಳ್ಳಿಹಾಕಿ ಸಮಾಧಾನಕ್ಕೆ ದೂರಮಾಡಿದ್ದೀ; ನಾನು ಸುಖವನ್ನು ಮರೆತುಬಿಟ್ಟು
18
ಅಯ್ಯೋ, ನನ್ನ ಶಕ್ತಿಯು ಹಾಳಾಯಿತು, ಯೆಹೋವನು ನನಗೆ ದಯಪಾಲಿಸಿದ ನಿರೀಕ್ಷೆಯು ವ್ಯರ್ಥ ಅಂದುಕೊಂಡೆನು.
19
ನಾನು ಅಲೆದು ಕಷ್ಟಪಟ್ಟದ್ದನ್ನು ಚಿತ್ತಕ್ಕೆ ತಂದುಕೋ, ಕಹಿಯಾದ ನನ್ನ ಆಹಾರಪಾನಗಳನ್ನು ಜ್ಞಾಪಕ ಮಾಡಿಕೋ,
20
ನನ್ನ ಆತ್ಮವು ಇವುಗಳನ್ನು ನಿತ್ಯವೂ ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಗ್ಗಿದೆ.
21
ಹೀಗಿರಲು ನಾನು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ, ಅದರಿಂದ ನನಗೆ ನಿರೀಕ್ಷೆಯುಂಟಾಗುತ್ತದೆ.
22
ನಾವು ಉಳಿದಿರುವದು ಯೆಹೋವನ ಕರುಣೆಯೇ; ಆತನ ಕೃಪಾವರಗಳು ನಿಂತುಹೋಗವು.
23
ದಿನದಿನವು ಹೊಸಹೊಸದಾಗಿ ಒದಗುತ್ತವೆ; ನಿನ್ನ ಸತ್ಯಸಂಧತೆಯು ದೊಡ್ಡದು.
24
ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.
25
ಯೆಹೋವನು ತನ್ನನ್ನು ನಿರೀಕ್ಷಿಸುವವರಿಗೂ ಹುಡುಕುವವರಿಗೂ ಮಹೋಪಕಾರಿಯಾಗಿದ್ದಾನೆ.
26
ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವದು ಒಳ್ಳೇದು.
27
ಯೌವನದಲ್ಲಿ ನೊಗಹೊರುವದು ಮನುಷ್ಯನಿಗೆ ಲೇಸು.
28
ನನ್ನ ಮೇಲೆ ಇದನ್ನು ಹೇರಿದವನು ಯೆಹೋವನೇ ಎಂದು ಅವನು ಏಕಾಕಿಯಾಗಿ ಕೂತುಬಾಯಿ ಬಿಡದಿರಲಿ.
29
ಒಂದು ವೇಳೆ ಸುಗತಿಯಾದೀತೆಂದು ತನ್ನ ಬಾಯಿಯನ್ನು ದೂಳಿಗೆ ಮುಟ್ಟಿಸಲಿ.
30
ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.
31
ಕರ್ತನು ಸದಾಕಾಲಕ್ಕೂ ಬಿಟ್ಟುಬಿಡುವವನಲ್ಲ;
32
ಆತನು ವ್ಯಥೆಗೊಳಿಸಿದರೇನು, ತನ್ನ ಕೃಪಾತಿಶಯದಿಂದ ಕನಿಕರಿಸುವನು;
33
ನರಜನ್ಮದವರನ್ನು ಬಾಧಿಸಿ ವ್ಯಥೆಗೊಳಿಸುವದು ಆತನಿಗೆ ಇಷ್ಟವಿಲ್ಲ.
34
ಲೋಕದ ಸೆರೆಯವರನ್ನೆಲ್ಲಾ ತುಳಿದುಬಿಡುವದು,
35
ಪರಾತ್ಪರನ ಸಾಕ್ಷಾತ್ತಾಗಿ ನ್ಯಾಯವನ್ನು ತಪ್ಪಿಸುವದು,
36
ವ್ಯಾಜ್ಯವನ್ನು ಅನ್ಯಾಯವಾಗಿ ತೀರಿಸುವದು, ಇವುಗಳನ್ನು ಕರ್ತನು ಲಕ್ಷ್ಯಕ್ಕೆ ತಾರನೇ?
37
ಕರ್ತನ ಅಪ್ಪಣೆಯಿಲ್ಲದೆ ಯಾರ ಮಾತು ಸಾರ್ಥಕವಾದೀತು?
38
ಪರಾತ್ಪರನ ಬಾಯಿಮಾತಿನಿಂದಲೇ ಮೇಲು ಕೇಡುಗಳೆರಡೂ ಸಂಭವಿಸುತ್ತವಲ್ಲಾ.
39
ಮನುಷ್ಯನಿಗೆ ಜೀವವರವಿರಲು ತನ್ನ ಪಾಪದ ಶಿಕ್ಷೆಗಾಗಿ ಗುಣುಗುಟ್ಟುವದೇಕೆ?
40
ನಮ್ಮ ನಡತೆಯನ್ನು ಶೋಧಿಸಿ ಪರೀಕ್ಷಿಸಿ ಯೆಹೋವನ ಕಡೆಗೆ ತಿರುಗಿಕೊಳ್ಳೋಣ.
41
ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕೈಗಳೊಡನೆ ಮನಸ್ಸನ್ನೂ ಎತ್ತಿಕೊಳ್ಳುವ.
42
ನಾವು ಅವಿಧೇಯರಾಗಿ ದ್ರೋಹಮಾಡಿದ್ದೇವೆ; ನೀನು ಕ್ಷವಿುಸಲಿಲ್ಲ.
43
ನೀನು ರೋಷವನ್ನು ಹೊದ್ದುಕೊಂಡು ನಮ್ಮನ್ನು ಹಿಂದಟ್ಟಿದ್ದೀ; ಕನಿಕರಿಸದೆ ಹತಿಸಿದ್ದೀ.
44
ನಮ್ಮ ಪ್ರಾರ್ಥನೆಯು ನಿನಗೆ ಮುಟ್ಟಬಾರದೆಂದು ಮೋಡವನ್ನು ಮರೆಮಾಡಿಕೊಂಡಿದ್ದೀ.
45
ನಮ್ಮನ್ನು ಜನಾಂಗಗಳ ಮಧ್ಯದಲ್ಲಿ ಕಸವನ್ನಾಗಿಯೂ ಹೊಲಸನ್ನಾಗಿಯೂ ಹಾಕಿಬಿಟ್ಟಿದ್ದೀ.
46
ನಮ್ಮ ಶತ್ರುಗಳೆಲ್ಲಾ ನಮ್ಮನ್ನು ನೋಡಿ ಬಾಯಿ ಕಿಸಿದಿದ್ದಾರೆ.
47
ಭಯವೂ ಗುಂಡಿಯೂ ಸಂಹಾರವೂ ಭಂಗವೂ ನಮಗೆ ಕಾದಿವೆ.
48
ಸ್ವಜನರು ನಾಶವಾದಕಾರಣ ನನ್ನ ಕಣ್ಣೀರು ಹೊಳೆಹೊಳೆಯಾಗಿ ಹರಿಯುವದು.
49
ಯೆಹೋವನು ಆಕಾಶದಿಂದ ಕಟಾಕ್ಷಿಸಿ ನೋಡುವ ತನಕ
50
ನನ್ನ ನೇತ್ರವು ನಿರಂತರವಾಗಿ ಅಶ್ರುಧಾರೆಯನ್ನು ಸುರಿಸುವದು, ಎಂದಿಗೂ ಬಿಡದು.
51
ನನ್ನ ಪಟ್ಟಣದ ಯುವತಿಯರಿಗಾಗಿ ಅತ್ತತ್ತು ಕಣ್ಣುರಿಯಿಂದ ಪೀಡಿತನಾಗಿದ್ದೇನೆ.
52
ನಿಷ್ಕಾರಣವೈರಿಗಳು ಪಕ್ಷಿಯನ್ನೋ ಎಂಬಂತೆ ನನ್ನನ್ನು ಆತುರದಿಂದ ಹಿಂದಟ್ಟಿದರು.
53
ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲು ಮುಚ್ಚಿ ನನ್ನ ಪ್ರಾಣವನ್ನು ಕಳೆದುಬಿಟ್ಟರು.
54
ಪ್ರವಾಹವು ನನ್ನನ್ನು ಮುಣುಗಿಸಿತು; ಆಗ ಸತ್ತೆ ಅಂದುಕೊಂಡೆನು.
55
ಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು.
56
ನೀನು ನನ್ನ ಧ್ವನಿಯನ್ನು ಕೇಳಿದಿ; (ನನ್ನ ನಿಟ್ಟುಸುರಿಗೂ ಮೊರೆಗೂ ಕಿವಿಯನ್ನು ಮರೆಮಾಡಿಕೊಳ್ಳಬೇಡ!)
57
ನಾನು ನಿನ್ನನ್ನು ಕೂಗಿಕೊಂಡಾಗ ನನ್ನ ಸಮೀಪಕ್ಕೆ ಬಂದು ಭಯಪಡಬೇಡ ಎಂದು ಹೇಳಿದಿ.
58
ಕರ್ತನೇ, ನೀನು ನನ್ನ ವ್ಯಾಜ್ಯಗಳನ್ನು ನಡಿಸಿ ನನ್ನ ಪ್ರಾಣವನ್ನು ಉಳಿಸಿದ್ದೀ.
59
ಯೆಹೋವನೇ, ನನಗಾದ ಅನ್ಯಾಯವನ್ನು ನೋಡಿದ್ದೀ, ನನಗೆ ನ್ಯಾಯತೀರಿಸು.
60
ನನ್ನ ವೈರಿಗಳು ನನ್ನ ಮೇಲೆ ತೀರಿಸಿದ ಹಗೆಯನ್ನೂ ಕಲ್ಪಿಸಿಕೊಂಡ ಯುಕ್ತಿಗಳನ್ನೂ ನೋಡಿದ್ದೀಯಲ್ಲಾ.
61
ಯೆಹೋವನೇ, ಅವರ ದೂಷಣೆಯೂ ನನಗೆ ವಿರುದ್ಧವಾಗಿ ಅವರು ಕಲ್ಪಿಸಿದ ಕುಯುಕ್ತಿಗಳೂ
62
ನನ್ನ ಹಾನಿಗಾಗಿ ನಿತ್ಯ ನಡಿಸುತ್ತಿರುವ ತಂತ್ರೋಪಾಯವೂ ನನ್ನ ಎದುರಾಳಿಗಳ ನಿಂದೆಯೂ ನಿನ್ನ ಕಿವಿಗೆ ಬಿದ್ದಿವೆಯಷ್ಟೆ.
63
ಅವರು ಕೂತುಕೊಳ್ಳಲಿ, ಏಳಲಿ, ನೋಡುತ್ತಲೇ ಇರು; ಅವರ ಗೇಲಿಯ ಹಾಡಿಗೆ ಗುರಿಯಾಗಿದ್ದೇನೆ.
64
ಯೆಹೋವನೇ, ಅವರ ದುಷ್ಕೃತ್ಯಗಳಿಗೆ ಸರಿಯಾದ ಪ್ರತಿಫಲವನ್ನು ನೀನು ಅವರಿಗೆ ಕೊಡುವಿ;
65
ಅವರ ಮನಸ್ಸನ್ನು ಮಂಕುಮಾಡುವಿ, ಅವರಿಗೆ ನಿನ್ನ ಶಾಪವು ತಗಲಲಿ!
66
ನೀನು ಕೋಪಗೊಂಡು ಅವರನ್ನು ಹಿಂದಟ್ಟಿ ಅವರು ನಿನ್ನ ಕೈಕೆಲಸವಾಗಿರುವ ಆಕಾಶದ ಕೆಳಗೆ ಉಳಿಯದಂತೆ ಅಳಿಸಿಬಿಡುವಿ.
← Chapter 2
Jump to:
Chapter 1
Chapter 2
Chapter 3
Chapter 4
Chapter 5
Chapter 4 →
All chapters:
1
2
3
4
5