bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Leviticus 14
Leviticus 14
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 15 →
1
ಯೆಹೋವನು ಮೋಶೆಗೆ ಹೇಳಿದ್ದೇನಂದರೆ -
2
ಕುಷ್ಠರೋಗಿ ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡಿಸಬೇಕಾದ ಕ್ರಮ ಹೇಗಂದರೆ - ಅವನನ್ನು ಯಾಜಕನಿಗೆ ತೋರಿಸಬೇಕು.
3
ಯಾಜಕನು ಪಾಳೆಯದ ಹೊರಕ್ಕೆ ಹೋಗಿ ಅವನನ್ನು ನೋಡಬೇಕು.
4
ಆಗ ಅವನಲ್ಲಿದ್ದ ಕುಷ್ಠವು ವಾಸಿಯಾಯಿತೆಂದು ಕಂಡರೆ ಶುದ್ಧ ಮಾಡಿಸಿಕೊಳ್ಳುವವನಿಗೋಸ್ಕರ ಸಜೀವವಾದ ಎರಡು ಶುದ್ಧ ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ಗಿಡದ ಬರಲನ್ನೂ ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.
5
ಆ ಪಕ್ಷಿಗಳಲ್ಲಿ ಒಂದನ್ನು ಸೆಲೇ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಿ
6
ಮತ್ತೊಂದು ಪಕ್ಷಿಯನ್ನೂ ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಸೆಲೇ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನೂ ಸಜೀವವಾಗಿಯೇ ಅದ್ದಿ
7
ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿವಿುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.
8
ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರಮಾಡಿಸಿಕೊಂಡು ಸ್ನಾನ ಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.
9
ಏಳನೆಯ ದಿನದಲ್ಲಿ ತನ್ನ ತಲೆಗೂದಲು, ಗಡ್ಡ, ಹುಬ್ಬು, ಮೈಗೂದಲು ಇವುಗಳನ್ನೆಲ್ಲಾ ಕ್ಷೌರಮಾಡಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಜಲಸ್ನಾನಮಾಡಬೇಕು. ಆಗಿನಿಂದ ಶುದ್ಧನಾಗುವನು.
10
ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೇ ಕಲಸಿದ ಒಂಭತ್ತು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.
11
ಶುದ್ಧಿಮಾಡುವ ಯಾಜಕನು ಶುದ್ಧಮಾಡಿಸಿಕೊಳ್ಳುವವನನ್ನು ಇವುಗಳೊಂದಿಗೆ ದೇವದರ್ಶನದ ಗುಡಾರದ ಬಾಗಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಿ
12
ಆ ಟಗರುಗಳಲ್ಲಿ ಒಂದನ್ನೂ ಆ ಸೇರು ಎಣ್ಣೆಯನ್ನೂ ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು; ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
13
ದೋಷಪರಿಹಾರಕಯಜ್ಞಪಶುವನ್ನೂ ಸರ್ವಾಂಗಹೋಮಪಶುವನ್ನೂ ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಯಾಕಂದರೆ ದೋಷಪರಿಹಾರಕಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು.
14
ಆಗ ಯಾಜಕನು ಆ ಪ್ರಾಯಶ್ಚಿತ್ತಯಜ್ಞಪಶುವಿನ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
15
ಆಗ ಯಾಜಕನು ಆ ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯಿದುಕೊಂಡು
16
ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿವಿುಕಿಸಬೇಕು.
17
ಅವನು ತನ್ನ ಕೈಯಲ್ಲಿರುವ ವಿುಕ್ಕ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತ ಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಿ
18
ಕೈಯಲ್ಲಿರುವ ವಿುಕ್ಕ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯಿದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.
19
ಅದಲ್ಲದೆ ಯಾಜಕನು ಶುದ್ಧಮಾಡಿಸಿಕೊಳ್ಳುವವನ ಅಪವಿತ್ರತೆಯನ್ನು ಹೋಗಲಾಡಿಸುವದಕ್ಕೆ [ಆ ಕುರಿಯನ್ನು] ದೋಷಪರಿಹಾರಕ ಯಜ್ಞವಾಗಿ ಸಮರ್ಪಿಸಿ ಅವನ ದೋಷವನ್ನು ಪರಿಹರಿಸುವನು. ಆಮೇಲೆ ಯಾಜಕನು [ಆ ಎರಡನೆಯ ಟಗರು ಮರಿಯನ್ನು] ಸರ್ವಾಂಗಹೋಮಕ್ಕಾಗಿ ವಧಿಸಬೇಕು. ಅವನು ಆ ಸರ್ವಾಂಗಹೋಮವನ್ನೂ ನೈವೇದ್ಯವನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು.
20
ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರಮಾಡಿದಾಗ ಅವನು ಶುದ್ಧನಾಗುವನು.
21
ಅವನು ಅಷ್ಟನ್ನು ಸಮರ್ಪಿಸುವದಕ್ಕೆ ಬಡವನಾಗಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರಮಾಡಿಸಿಕೊಳ್ಳುವದಕ್ಕೋಸ್ಕರ [ಯಾಜಕನ ಕೈಯಿಂದ] ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಮೂರು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತರಬೇಕು.
22
ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಮತ್ತೊಂದನ್ನೂ ಸಮರ್ಪಿಸಬೇಕು.
23
ಅವನು ತನ್ನ ಶುದ್ಧೀಕರಣಕ್ಕೋಸ್ಕರವಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ದೇವದರ್ಶನದ ಗುಡಾರದ ಬಾಗಲಿಗೆ ಯೆಹೋವನ ಸನ್ನಿಧಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.
24
ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನೂ ಆ ಸೇರು ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
25
ಪ್ರಾಯಶ್ಚಿತ್ತಯಜ್ಞದ ಕುರಿಯನ್ನು ವಧಿಸಿದ ನಂತರ ಯಾಜಕನು ಅದರ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಬೇಕು.
26
ಮತ್ತು ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯಿದುಕೊಂಡು
27
ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿವಿುಕಿಸಬೇಕು.
28
ಮತ್ತು ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
29
ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ವಿುಕ್ಕ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
30
ತರುವಾಯ ಅವನು ತನ್ನ ಸ್ಥಿತಿಗೆ ತಕ್ಕಂತೆ ತಂದ ಎರಡು ಬೆಳವಕ್ಕಿಗಳಲ್ಲಿಯಾಗಲಿ ಪಾರಿವಾಳದ ಮರಿಗಳಲ್ಲಿಯಾಗಲಿ
31
ದೋಷಪರಿಹಾರಕಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಒಂದನ್ನೂ ನೈವೇದ್ಯದ್ರವ್ಯವನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.
32
ಶುದ್ಧೀಕರಣಯಜ್ಞಗಳನ್ನು ಮಾಡುವದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ವಿಧಿ.
33
ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನಂದರೆ -
34
ನಿಮಗೆ ಸ್ವದೇಶವಾಗಿರುವದಕ್ಕೋಸ್ಕರ ನಾನು ಕೊಡುವ ಕಾನಾನ್ ದೇಶಕ್ಕೆ ನೀವು ಬಂದ ನಂತರ ಆ ದೇಶದ ಯಾವ ಮನೆಯ ಗೋಡೆಗಳಲ್ಲಿ ನಾನು ಕುಷ್ಠದ ಗುರುತನ್ನು ಉಂಟುಮಾಡುವೆನೋ
35
ಆ ಮನೆಯ ಒಡೆಯನು ಯಾಜಕನ ಬಳಿಗೆ ಬಂದು - ನನ್ನ ಮನೆಯಲ್ಲಿ ಕುಷ್ಠರೋಗದ ಗುರುತು ಉಂಟಾದಂತೆ ತೋರುತ್ತದೆ ಎಂದು ಅವನಿಗೆ ತಿಳಿಸಬೇಕು.
36
ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವದಕ್ಕೆ ಮುಂಚೆ ಆ ಮನೆಯನ್ನು ಬರಿದುಮಾಡಲಾಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾದಾವು. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು.
37
ಅವನು ಮನೆಯ ಗೋಡೆಗಳಲ್ಲಿರುವ ರೋಗದ ಗುರುತುಗಳನ್ನು ನೋಡುವಾಗ ಆ ಗುರುತುಗಳು ಹಸುರಾಗಿ ಅಥವಾ ಕೆಂಪಾಗಿ ಇದ್ದು ಗೋಡೆಯ ಮಟ್ಟಕ್ಕಿಂತ ತಗ್ಗಾಗಿ ತೋರಿದರೆ
38
ಯಾಜಕನು ಹೊರಗೆ ಬಂದು ಆ ಮನೆಯನ್ನು ಏಳು ದಿನಗಳವರೆಗೂ ಮುಚ್ಚಿಸಿಬಿಡಬೇಕು.
39
ಏಳನೆಯ ದಿನದಲ್ಲಿ ಯಾಜಕನು ಬಂದು ನೋಡುವಾಗ ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ
40
ಆ ಗುರುತುಗಳು ಇರುವ ಕಲ್ಲುಗಳನ್ನು ತೆಗಿಸಿಬಿಟ್ಟು ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಿಬಿಡಬೇಕು.
41
ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗಡೆಯನ್ನೆಲ್ಲಾ ಗೀಚಿಸಿ ಗೀಚಿದ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.
42
ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.
43
ಅವನು ಆ ಕಲ್ಲುಗಳನ್ನು ತೆಗಿಸಿ ಮನೆಯ ಗೋಡೆಗಳನ್ನು ಗೀಚಿಸಿ ಗಿಲಾವು ಮಾಡಿಸಿದ ಮೇಲೆ ಆ ರೋಗದ ಗುರುತು ತಿರಿಗಿ ಕಾಣಬಂದರೆ ಯಾಜಕನು ಬಂದು ನೋಡಬೇಕು.
44
ಆ ಗುರುತು ಮನೆಯ ಗೋಡೆಗಳಲ್ಲಿ ಹಬ್ಬಿಕೊಂಡಿದ್ದರೆ ಅದು ಪ್ರಾಣಹಾನಿಕರವಾದ ಕುಷ್ಠವೇ; ಆ ಮನೆ ಅಶುದ್ಧವಾಗಿರುವದು.
45
ಅವನು ಆ ಮನೆಯನ್ನು ಕೆಡಹಿಸಿ ಅದರ ಎಲ್ಲಾ ಕಲ್ಲುಗಳನ್ನೂ ತೊಲೆಗಳನ್ನೂ ಮಣ್ಣನ್ನೂ ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಿಬಿಡಬೇಕು.
46
ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
47
ಆ ಮನೆಯಲ್ಲಿ ಮಲಗಿಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅಲ್ಲಿ ಊಟಮಾಡಿದವನೂ ಬಟ್ಟೆಗಳನ್ನು ಒಗೆದುಕೊಳ್ಳಬೇಕು.
48
ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು.
49
ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ಗಿಡದ ಬರಲನ್ನೂ ತೆಗೆದುಕೊಂಡು
50
ಒಂದು ಪಕ್ಷಿಯನ್ನು ಸೆಲೇ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಿ
51
ಆ ದೇವದಾರಿನ ಕಟ್ಟಿಗೆಯನ್ನೂ ಹಿಸ್ಸೋಪಿನ ಬರಲನ್ನೂ ರಕ್ತವರ್ಣವುಳ್ಳ ದಾರವನ್ನೂ ಸಜೀವವಾದ ಮತ್ತೊಂದು ಪಕ್ಷಿಯನ್ನೂ ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಸೆಲೇ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.
52
ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಶುದ್ಧಿಮಾಡುವನು.
53
ಅವನು ಆ ಜೀವವುಳ್ಳ ಪಕ್ಷಿಯನ್ನು ಊರ ಹೊರಕ್ಕೆ ಅಡವಿಯ ಕಡೆಗೆ ಬಿಟ್ಟುಬಿಡಬೇಕು. ಹೀಗೆ ಅವನು ಆ ಮನೆಗೋಸ್ಕರ ದೋಷಪರಿಹಾರಮಾಡಿದಾಗ ಅದು ಶುದ್ಧವಾಗಿರುವದು.
54
ನಾನಾ ವಿಧವಾದ ಕುಷ್ಠರೋಗದ ಗುರುತುಗಳು ಅಂದರೆ ಕೂದಲು ಬೆಳೆಯದ ದದ್ದು,
55
ಬಟ್ಟೆಯಲ್ಲಿ ಅಥವಾ ಮನೆಯ ಗೋಡೆಯಲ್ಲಿ ಕಾಣಿಸುವ ಕುಷ್ಠರೋಗದ ಗುರುತು,
56
ಶರೀರದ ಚರ್ಮದ ಮೇಲೆ ಉಂಟಾಗುವ ಬಾವು, ಗುಳ್ಳೆ, ಹೊಳೆಯುವ ಕಲೆ
57
ಇವುಗಳಲ್ಲಿ ಶುದ್ಧಾಶುದ್ಧ ಭೇದವನ್ನು ತಿಳಿಸುವ ವಿಧಿ ಇದೇ.
← Chapter 13
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 15 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27