bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Leviticus 15
Leviticus 15
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 16 →
1
ಯೆಹೋವನು ಮೋಶೆ ಆರೋನರಿಗೆ ಹೀಗಂದನು -
2
ನೀವು ಇಸ್ರಾಯೇಲ್ಯರಿಗೆ ಆಜ್ಞಾಪಿಸಬೇಕಾದದ್ದೇನಂದರೆ - ಒಬ್ಬನ ರಹಸ್ಯಾಂಗದಲ್ಲಿ ಮೇಹಸ್ರಾವವಾದರೆ ಅದರ ದೆಸೆಯಿಂದ ಅವನು ಅಶುದ್ಧನಾಗುವನು.
3
ಆ ಸ್ರಾವವು ಹರಿಯುತ್ತಿದ್ದರೂ ನಿಂತುಹೋಗಿದ್ದರೂ ಆ ದೇಹಸ್ಥಿತಿಯಿಂದ ಅವನು ಅಶುದ್ಧನು.
4
ಅಂಥವನು ಮಲಗಿರುವ ಪ್ರತಿಯೊಂದು ಹಾಸಿಗೆಯೂ ಕೂತಿರುವ ಪ್ರತಿಯೊಂದು ಆಸನವೂ ಅಶುದ್ಧವು.
5
ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
6
ಸ್ರಾವವುಳ್ಳವನು ಕೂತಿದ್ದ ಆಸನದ ಮೇಲೆ ಕೂತುಕೊಂಡವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
7
ಅವನ ಶರೀರವನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
8
ಶುದ್ಧನಾಗಿರುವವನ ಮೇಲೆ ಸ್ರಾವವುಳ್ಳವನು ಉಗುಳಿದರೆ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
9
ಸ್ರಾವವುಳ್ಳವನು ಕೂತಿದ್ದ ತಡಿಯು ಅಶುದ್ಧವು.
10
ಅವನ ಕೆಳಗಿದ್ದ ಯಾವ ವಸ್ತುವನ್ನಾದರೂ ಮುಟ್ಟಿದವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅಂಥ ವಸ್ತುವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
11
ಸ್ರಾವವುಳ್ಳವನು ಕೈಗಳನ್ನು ತೊಳೆದುಕೊಳ್ಳದೆ ಯಾವನನ್ನು ಮುಟ್ಟಿದರೂ ಆ ಮನುಷ್ಯನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
12
ಸ್ರಾವವುಳ್ಳವನು ಮುಟ್ಟಿದ ಮಣ್ಣಿನ ಪಾತ್ರೆಯನ್ನು ಒಡೆದುಬಿಡಬೇಕು. ಅವನು ಮರದ ಪಾತ್ರೆಯನ್ನು ಮುಟ್ಟಿದರೆ ಅದನ್ನು ನೀರಿನಿಂದ ತೊಳೆಯಬೇಕು.
13
ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ ಅವನು ಶುದ್ಧಮಾಡಿಸಿಕೊಳ್ಳುವದಕ್ಕೆ ಆಗಿನಿಂದ ಏಳು ದಿನಗಳನ್ನು ಲೆಕ್ಕಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸೆಲೇ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.
14
ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.
15
ಯಾಜಕನು ದೋಷಪರಿಹಾರಕಯಜ್ಞಕ್ಕಾಗಿ ಒಂದನ್ನೂ ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವನ ಸ್ರಾವದ ವಿಷಯದಲ್ಲಿ ಯೆಹೋವನ ಸನ್ನಿಧಿಯಲ್ಲಿ ಅವನಿಗೋಸ್ಕರ ದೋಷಪರಿಹಾರ ಮಾಡುವನು.
16
ಒಬ್ಬನಿಗೆ ವೀರ್ಯಸ್ಖಲನವಾದರೆ ಅವನು ಸರ್ವಾಂಗ ಸ್ನಾನಮಾಡಬೇಕು; ಅವನು ಆ ಸಾಯಂಕಾಲದವರೆಗೆ ಅಶುದ್ಧನಾಗಿರುವನು.
17
ಯಾವ ಬಟ್ಟೆಯ ಮೇಲಾಗಲಿ ತೊಗಲಿನ ಮೇಲಾಗಲಿ ವೀರ್ಯವು ಬಿದ್ದರೆ ಅದನ್ನು ನೀರಿನಿಂದ ತೊಳೆಯಬೇಕು. ಅದು ಸಾಯಂಕಾಲದವರೆಗೆ ಅಶುದ್ಧವಾಗಿರುವದು.
18
ಪುರುಷನಿಗೆ ಸ್ತ್ರೀಸಂಗದಿಂದ ವೀರ್ಯಸ್ಖಲನವಾದರೆ ಅವರಿಬ್ಬರೂ ಸ್ನಾನಮಾಡಿಕೊಳ್ಳಬೇಕು; ಅವರು ಸಾಯಂಕಾಲದವರೆಗೆ ಅಶುದ್ಧರಾಗಿರುವರು.
19
ಸ್ತ್ರೀಗೆ ರಕ್ತಸ್ರಾವವಾದರೆ ಅವಳು ಏಳು ದಿನಗಳ ತನಕ ಪ್ರತ್ಯೇಕವಾಗಿರಬೇಕು. ಅವಳನ್ನು ಮುಟ್ಟಿದವರು ಆ ದಿನದ ಸಾಯಂಕಾಲದವರೆಗೆ ಅಶುದ್ಧರಾಗುವರು.
20
ಅವಳು ಮುಟ್ಟಾಗಿರುವಾಗ ಯಾವದರ ಮೇಲೆ ಮಲಗಿದರೂ ಕೂತುಕೊಂಡರೂ ಅದು ಅಶುದ್ಧವಾಗಿರುವದು.
21
ಅವಳ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
22
ಅವಳು ಯಾವದರ ಮೇಲೆ ಕೂತಿದ್ದಳೋ ಅದನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
23
ಅವಳು ಮಲಗಿದ್ದ ಹಾಸಿಗೆಯ ಮೇಲಾಗಲಿ ಕೂತಿದ್ದ ಸ್ಥಳದ ಮೇಲಾಗಲಿ ಇದ್ದ ಯಾವದನ್ನಾದರೂ ಮುಟ್ಟಿದವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
24
ಪುರುಷನು ಒಂದು ವೇಳೆ ಅಂಥವಳೊಡನೆ ಸಂಗವಿುಸಿದದರಿಂದ ಅವಳ ರಜಸ್ಸು ಅವನಿಗೆ ತಗಲಿದರೆ ಅವನು ಏಳು ದಿನಗಳ ತನಕ ಅಶುದ್ಧನಾಗಿರುವನು. ಅಷ್ಟರಲ್ಲಿ ಅವನು ಯಾವ ಹಾಸಿಗೆಯ ಮೇಲೆ ಮಲಗಿಕೊಂಡರೂ ಅದು ಅಶುದ್ಧವಾಗಿರುವದು.
25
ಸ್ತ್ರೀಗೆ ಮುಟ್ಟಿನ ಕಾಲದಲ್ಲಿ ಮಾತ್ರವಲ್ಲದೆ ಬೇರೆ ದಿನಗಳಲ್ಲಿಯೂ ರಕ್ತಸ್ರಾವವಾದರೆ ಇಲ್ಲವೆ ಮುಟ್ಟಿನ ಕಾಲಕ್ಕೆ ತಕ್ಕದ್ದಕ್ಕಿಂತ ಹೆಚ್ಚು ದಿನಗಳು ರಕ್ತಸ್ರಾವವಾದರೆ ಅವಳು ತಿಂಗಳಿನ ಮುಟ್ಟಿನಿಂದ ಹೇಗೆ ಅಶುದ್ಧಳೋ ಹಾಗೆಯೇ ಆ ಸ್ರಾವವಾಗುವ ದಿನಗಳಲ್ಲೆಲ್ಲಾ ಅಶುದ್ಧಳಾಗಿರುವಳು.
26
ಆ ಸ್ರಾವವಿರುವ ತನಕ ಅವಳು ಯಾವ ಹಾಸಿಗೆಯ ಮೇಲೆ ಮಲಗಿದರೂ ಅದು ಮುಟ್ಟಿನ ಕಾಲದಲ್ಲಿ ಮಲಗಿದ ಹಾಸಿಗೆಯಂತೆಯೇ ಅಶುದ್ಧವಾಗುವದು. ಅವಳು ಯಾವದರ ಮೇಲೆ ಕೂತುಕೊಂಡರೂ ಅದು ಮುಟ್ಟಿನ ಕಾಲದಲ್ಲಿ ಕೂತುಕೊಂಡ ವಸ್ತುವಿನಂತೆ ಅಶುದ್ಧವಾಗಿರುವದು.
27
ಆ ವಸ್ತುಗಳನ್ನು ಮುಟ್ಟಿದವನು ಅಶುದ್ಧನಾದದರಿಂದ ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು.
28
ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕಿಸಿಕೊಂಡು ತರುವಾಯ ಶುದ್ಧಳಾಗುವಳು.
29
ಎಂಟನೆಯ ದಿನದಲ್ಲಿ ಅವಳು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತರಬೇಕು.
30
ಯಾಜಕನು ದೋಷಪರಿಹಾರಕಯಜ್ಞಕ್ಕಾಗಿ ಒಂದನ್ನೂ ಸರ್ವಾಂಗಹೋಮಕ್ಕಾಗಿ ಇನ್ನೊಂದನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಅವಳ ಸ್ರಾವದಿಂದುಂಟಾದ ಅಪರಿಶುದ್ಧತೆಯ ವಿಷಯವಾಗಿ ಯೆಹೋವನ ಸನ್ನಿಧಿಯಲ್ಲಿ ಅವಳಿಗೋಸ್ಕರ ದೋಷಪರಿಹಾರ ಮಾಡುವನು.
31
ಇಸ್ರಾಯೇಲ್ಯರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.
32
ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,
33
ಮುಟ್ಟಾದ ಸ್ತ್ರೀಯು, ಸ್ರಾವವುಂಟಾಗುವ ಸ್ತ್ರೀಪುರುಷರು, ಅಶುದ್ಧಳಾದ ಸ್ತ್ರೀಯನ್ನು ಸಂಗವಿುಸಿದವನು ಇವರ ವಿಷಯವಾಗಿ ಇದೇ ವಿಧಿ.
← Chapter 14
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 16 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27