bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Leviticus 16
Leviticus 16
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 17 →
1
ಆರೋನನ ಇಬ್ಬರು ಮಕ್ಕಳು ಯೆಹೋವನ ಸನ್ನಿಧಿಗೆ ಬಂದು ನಾಶವಾದ ಮೇಲೆ
2
ಯೆಹೋವನು ಮೋಶೆಯ ಸಂಗಡ ಮಾತಾಡಿ ಹೇಳಿದ್ದೇನಂದರೆ - ನಿನ್ನ ಅಣ್ಣನಾದ ಆರೋನನು ಮನಸ್ಸಿಗೆ ಬಂದಾಗೆಲ್ಲಾ ತೆರೆಯನ್ನು ದಾಟಿ ಮಹಾಪವಿತ್ರಸ್ಥಾನದೊಳಕ್ಕೆ ಮಂಜೂಷದ ಮೇಲಣ ಕೃಪಾಸನದ ಹತ್ತಿರಕ್ಕೆ ಬರಬಾರದೆಂದು ಅವನಿಗೆ ಹೇಳು. ನಾನು ಕೃಪಾಸನದ ಮೇಲೆ ಮೇಘದಲ್ಲಿ ಕಾಣಿಸಿಕೊಳ್ಳುವದರಿಂದ ಅವನು ನಾಶವಾದಾನು.
3
ಆರೋನನು ಮಹಾಪವಿತ್ರಸ್ಥಾನದೊಳಗೆ ಬರುವಾಗ ಮುಂದೆ ಹೇಳುವ ರೀತಿಯಾಗಿ ಬರಬೇಕು. ಅವನು ದೋಷಪರಿಹಾರಕಯಜ್ಞಕ್ಕಾಗಿ ಹೋರಿಯನ್ನೂ ಸರ್ವಾಂಗಹೋಮಕ್ಕಾಗಿ ಟಗರನ್ನೂ ತರಬೇಕು.
4
ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಮುಂಡಾಸವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವದಕ್ಕೆ ಮುಂಚೆ ಸ್ನಾನಮಾಡಬೇಕು.
5
ಇಸ್ರಾಯೇಲ್ಯರ ಜನಸಮೂಹದಿಂದ ದೋಷಪರಿಹಾರಕಯಜ್ಞಕ್ಕಾಗಿ ಎರಡು ಹೋತಗಳನ್ನೂ ಸರ್ವಾಂಗಹೋಮಕ್ಕಾಗಿ ಒಂದು ಟಗರನ್ನೂ ತೆಗೆದುಕೊಂಡು ಬರಬೇಕು.
6
ಆರೋನನು ತನಗೋಸ್ಕರವಾಗಿ ತಂದ ಹೋರಿಯನ್ನು ಸಮರ್ಪಿಸಿ ತನಗೋಸ್ಕರವೂ ತನ್ನ ಮನೆತನದವರಿಗೋಸ್ಕರವೂ ದೋಷಪರಿಹಾರ ಮಾಡಬೇಕು.
7
ಆ ಎರಡು ಹೋತಗಳನ್ನು ಅವನು ದೇವದರ್ಶನದ ಗುಡಾರದ ಬಾಗಲಲ್ಲಿ ಯೆಹೋವನ ಸನ್ನಿಧಿಯಲ್ಲಿ ನಿಲ್ಲಿಸಬೇಕು.
8
ಆಗ ಅವನು ಆ ಹೋತಗಳ ವಿಷಯವಾಗಿ ಯೆಹೋವನಿಗೋಸ್ಕರವೆಂದೂ ಅಜಾಜೇಲನಿಗೋಸ್ಕರವೆಂದೂ ಚೀಟುಗಳನ್ನು ಬರೆದುಹಾಕಬೇಕು.
9
ಯಾವ ಹೋತ ಯೆಹೋವನದೆಂದು ಗೊತ್ತಾಗುವದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞರೂಪವಾಗಿ ಸಮರ್ಪಿಸಬೇಕು.
10
ಯಾವ ಹೋತ ಅಜಾಜೇಲನದೆಂದು ಗೊತ್ತಾಗುವದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ ಅದರ ಮೇಲೆ ದೋಷಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.
11
ಆರೋನನು ತನಗೋಸ್ಕರವಾದ ದೋಷಪರಿಹಾರಕಯಜ್ಞದ ಹೋರಿಯನ್ನು ಸಮರ್ಪಿಸಿ ತನಗೋಸ್ಕರವೂ ತನ್ನ ಮನೆತನದವರಿಗೋಸ್ಕರವೂ ದೋಷಪರಿಹಾರವನ್ನು ಮಾಡಬೇಕು.
12
ಅವನು ತನಗೋಸ್ಕರವಾದ ಹೋರಿಯನ್ನು ವಧಿಸಿದ ಮೇಲೆ ಯೆಹೋವನ ಸನ್ನಿಧಿಯಲ್ಲಿರುವ ವೇದಿಯಿಂದ ಕೆಂಡಗಳನ್ನು ಧೂಪಾರತಿಯಲ್ಲಿ ತುಂಬಿಸಿ ಪರಿಮಳಧೂಪದ್ರವ್ಯದ ಚೂರ್ಣದಲ್ಲಿ ಎರಡು ಹಿಡಿ ತೆಗೆದುಕೊಂಡು ತೆರೆಯನ್ನು ದಾಟಿ
13
ಆ ಧೂಪವನ್ನು ಯೆಹೋವನ ಸನ್ನಿಧಿಯಲ್ಲಿಯೇ ಕೆಂಡಗಳ ಮೇಲೆ ಹಾಕಬೇಕು. ಅವನಿಗೆ ಪ್ರಾಣನಷ್ಟವಾಗದಂತೆ ಧೂಪದ ಹೊಗೆ ಮೇಘದೋಪಾದಿಯಲ್ಲಿ ಆಜ್ಞಾಶಾಸನಗಳ ಮೇಲಣ ಕೃಪಾಸನವನ್ನು ಮುಚ್ಚುವದು.
14
ಆಗ ಆ ಹೋರಿಯ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಕೃಪಾಸನದ ಪೂರ್ವಭಾಗದ ಮೇಲೆ ಬೆರಳಿನಿಂದ ಚಿವಿುಕಿಸಿ ಕೃಪಾಸನದ ಎದುರಾಗಿಯೂ ಏಳು ಬಾರಿ ಚಿವಿುಕಿಸಬೇಕು.
15
ತರುವಾಯ ಅವನು ಜನರಿಗೋಸ್ಕರವಾದ ದೋಷಪರಿಹಾರಕಯಜ್ಞದ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿವಿುಕಿಸಬೇಕು.
16
ಹೀಗೆ ಇಸ್ರಾಯೇಲ್ಯರು ನಾನಾ ವಿಧವಾದ ಅಪರಿಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೋಸ್ಕರವೂ ಹಾಗೆಯೇ ದೋಷಪರಿಹಾರ ಮಾಡುವನು.
17
ಅವನು ದೋಷಪರಿಹಾರಮಾಡುವದಕ್ಕಾಗಿ ಮಹಾಪವಿತ್ರಸ್ಥಾನದೊಳಗೆ ಹೋಗಿ ಹೊರಗೆ ಬರುವ ತನಕ ಯಾರೂ ದೇವದರ್ಶನದ ಗುಡಾರದಲ್ಲಿ ಹೋಗಕೂಡದು. ಹಾಗೆ ತನಗೋಸ್ಕರವಾಗಿಯೂ ತನ್ನ ಮನೆತನದವರಿಗೋಸ್ಕರವಾಗಿಯೂ ಇಸ್ರಾಯೇಲ್ಯರ ಎಲ್ಲಾ ಜನಸಮೂಹಕ್ಕೋಸ್ಕರವಾಗಿಯೂ ದೋಷಪರಿಹಾರಮಾಡುವನು.
18
ತರುವಾಯ ಅವನು ಹೊರಗೆ ಬಂದು ಯೆಹೋವನ ಸನ್ನಿಧಿಯಲ್ಲಿರುವ ಯಜ್ಞವೇದಿಯ ಬಳಿಗೆ ಹೋಗಿ ಅದಕ್ಕಾಗಿ ದೋಷಪರಿಹಾರ ಮಾಡಬೇಕು. ಆ ಹೋರಿಯ ರಕ್ತದಲ್ಲಿಯೂ ಆ ಹೋತನ ರಕ್ತದಲ್ಲಿಯೂ ಸ್ವಲ್ಪ ಸ್ವಲ್ಪ ತೆಗೆದುಕೊಂಡು ವೇದಿಯ ಕೊಂಬುಗಳಿಗೆ ಸುತ್ತಲೂ ಹಚ್ಚಬೇಕು.
19
ಅವನು ಆ ರಕ್ತದಲ್ಲಿ ಸ್ವಲ್ಪವನ್ನು ಅದರ ಮೇಲೆ ಏಳು ಸಾರಿ ಬೆರಳಿನಿಂದ ಚಿವಿುಕಿಸಿ ಇಸ್ರಾಯೇಲ್ಯರಿಂದ ಅದಕ್ಕುಂಟಾದ ಅಶುದ್ಧತ್ವವನ್ನು ಹೋಗಲಾಡಿಸಿ ಅದನ್ನು ಪರಿಶುದ್ಧಪಡಿಸಬೇಕು.
20
ಆರೋನನು ಮಹಾಪವಿತ್ರಸ್ಥಾನ, ದೇವದರ್ಶನದ ಗುಡಾರ, ವೇದಿ ಇವುಗಳಿಗೋಸ್ಕರ ದೋಷಪರಿಹಾರಮಾಡಿ ಮುಗಿಸಿದ ಮೇಲೆ ಆ ಸಜೀವವಾದ ಹೋತವನ್ನು ತರಿಸಿ
21
ಅದರ ತಲೆಯ ಮೇಲೆ ಎರಡು ಕೈಗಳನ್ನೂ ಇಟ್ಟು ಇಸ್ರಾಯೇಲ್ಯರ ಎಲ್ಲಾ ಪಾಪಗಳನ್ನೂ ದ್ರೋಹಗಳನ್ನೂ ಅಪರಾಧಗಳನ್ನೂ ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.
22
ಆ ಹೋತ ಅವರ ಎಲ್ಲಾ ಪಾಪಗಳನ್ನೂ ತನ್ನ ಮೇಲೆ ಹೊತ್ತುಕೊಂಡು ದುರ್ಗಮವಾದ ಪ್ರದೇಶಕ್ಕೆ ಒಯ್ಯುವಂತೆ ಆ ಮನುಷ್ಯನು ಅದನ್ನು ಅರಣ್ಯಕ್ಕೆ ತೆಗೆದುಕೊಂಡುಹೋಗಿ ಅಲ್ಲೇ ಬಿಟ್ಟುಬಿಡಬೇಕು.
23
ತರುವಾಯ ಆರೋನನು ದೇವದರ್ಶನದ ಗುಡಾರದೊಳಗೆ ಬಂದು ತಾನು ಮಹಾಪವಿತ್ರಸ್ಥಾನದೊಳಗೆ ಹೋಗುವದಕ್ಕಾಗಿ ಧರಿಸಿಕೊಂಡಿದ್ದ ನಾರುಮಡಿಗಳನ್ನು ತೆಗೆದು ಅಲ್ಲೇ ಇಟ್ಟುಬಿಟ್ಟು ಪ್ರಾಕಾರದಲ್ಲಿ ಸ್ನಾನಮಾಡಿ ತನ್ನ ವಸ್ತ್ರಗಳನ್ನು ಧರಿಸಿಕೊಳ್ಳಬೇಕು.
24
ಆಗ ಅವನು ಹೊರಗೆ ಬಂದು ತನಗೋಸ್ಕರವೂ ಜನಸಮೂಹಕ್ಕೋಸ್ಕರವೂ ಸರ್ವಾಂಗಹೋಮಗಳನ್ನು ಸಮರ್ಪಿಸಿ ತನಗೋಸ್ಕರವಾಗಿಯೂ ಜನರಿಗೋಸ್ಕರವಾಗಿಯೂ ದೋಷಪರಿಹಾರಮಾಡಬೇಕು.
25
ಅವನು ದೋಷಪರಿಹಾರಕಯಜ್ಞ ಪಶುಗಳ ಕೊಬ್ಬನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು.
26
ಅಜಾಜೇಲನಿಗೆ ಹೋತವನ್ನು ಬಿಟ್ಟು ಬಂದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಿಯೇ ಪಾಳೆಯಕ್ಕೆ ಬರಬೇಕು.
27
ದೋಷಪರಿಹಾರಕಯಜ್ಞಪಶುಗಳಾದ ಹೋರಿಹೋತಗಳ ರಕ್ತವನ್ನು ಮಹಾಪವಿತ್ರಸ್ಥಾನದಲ್ಲಿ ದೋಷಪರಿಹಾರ ಮಾಡುವದಕ್ಕಾಗಿ ತಂದ ಮೇಲೆ ಅವುಗಳ ಶರೀರಗಳನ್ನು ಪಾಳೆಯದ ಆಚೆಗೆ ತೆಗೆದುಕೊಂಡು ಹೋಗಿ ಚರ್ಮಮಾಂಸ ಕಲ್ಮಷಗಳೆಲ್ಲವನ್ನೂ ಬೆಂಕಿಯಿಂದ ಸುಡಿಸಿಬಿಡಬೇಕು.
28
ಅವುಗಳನ್ನು ಸುಟ್ಟವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಿಯೇ ಪಾಳೆಯದೊಳಗೆ ಬರಬೇಕು.
29
ಇದು ನಿಮಗೆ ಶಾಶ್ವತವಾದ ನಿಯಮ; ಯಾವದಂದರೆ ಸ್ವದೇಶಸ್ಥರಾದ ನೀವೂ ನಿಮ್ಮಲ್ಲಿ ಇಳುಕೊಂಡಿರುವ ಅನ್ಯದೇಶದವರೂ ಎಲ್ಲರೂ ಏಳನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಸಕಲ ವಿಧವಾದ ಕೆಲಸಗಳನ್ನೂ ಬಿಟ್ಟು [ಉಪವಾಸಮಾಡಿ] ಪ್ರಾಣವನ್ನು ಕುಂದಿಸಿಕೊಳ್ಳಬೇಕು.
30
ಯಾಕಂದರೆ ನೀವು ಪರಿಶುದ್ಧರಾಗುವದಕ್ಕಾಗಿ ಈ ದಿನದಲ್ಲಿ ನಿಮಗೋಸ್ಕರ ದೋಷಪರಿಹಾರವಾಗುವದು, ಯೆಹೋವನ ದೃಷ್ಟಿಯಲ್ಲಿ ನಿಮ್ಮ ಎಲ್ಲಾ ದೋಷಗಳು ನಿವಾರಣೆಯಾಗುವವು.
31
ಇದು ನಿಮಗೆ ಸಂಪೂರ್ಣವಾಗಿ ಕೆಲಸವನ್ನು ನಿಲ್ಲಿಸಬೇಕಾದ ಸಬ್ಬತ್ ದಿನವಾಗಿರಬೇಕು; ಇದರಲ್ಲಿ ನೀವು ಉಪವಾಸವಾಗಿರಬೇಕು; ಇದೇ ನಿಮಗೆ ಶಾಶ್ವತ ನಿಯಮ.
32
[ಆರೋನನ ವಂಶದವರಲ್ಲಿ] ಯಾವನಿಗೆ ಪಿತೃಸ್ಥಾನದಲ್ಲಿ ಮಹಾಯಾಜಕನ ಉದ್ಯೋಗವನ್ನು ನಡಿಸುವದಕ್ಕೆ ಪಟ್ಟಾಭಿಷೇಕವಾಗುವದೋ ಅವನೇ ಈ ದೋಷಪರಿಹಾರಕಾರ್ಯವನ್ನು ಆಚರಿಸಬೇಕು;
33
ಅವನೇ ಆ ನಾರುಮಡಿಗಳನ್ನು ಧರಿಸಿಕೊಂಡು ಪರಿಶುದ್ಧವಾದ ದೇವಸ್ಥಾನ, ದೇವದರ್ಶನದ ಗುಡಾರ, ಯಜ್ಞವೇದಿ, ಯಾಜಕರು, ಜನಸಮೂಹದವರು ಈ ಎಲ್ಲರಿಗೋಸ್ಕರ ದೋಷಪರಿಹಾರವನ್ನು ಮಾಡಬೇಕು.
34
ಇಸ್ರಾಯೇಲ್ಯರ ಎಲ್ಲಾ ದೋಷಗಳನ್ನು ನಿವಾರಣೆಮಾಡುವದಕ್ಕಾಗಿ ಅವರಿಗೋಸ್ಕರ ವರುಷಕ್ಕೆ ಒಂದಾವರ್ತಿ ದೋಷಪರಿಹಾರವನ್ನು ಮಾಡಬೇಕೆಂಬದೇ ನಿಮಗೆ ಶಾಶ್ವತನಿಯಮ. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಆರೋನನು ಮಾಡಿದನು.
← Chapter 15
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 17 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27