bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Leviticus 21
Leviticus 21
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 22 →
1
ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನ ಮಕ್ಕಳಾದ ಯಾಜಕರಿಗೆ ಹೀಗೆ ಆಜ್ಞಾಪಿಸಬೇಕು - ಕುಲದಲ್ಲಿ ಸತ್ತವರಿಗೋಸ್ಕರ ಯಾವ ಯಾಜಕನೂ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು.
2
(ಆದರೂ ಸಮೀಪ ರಕ್ತಸಂಬಂಧಿಗಳಾದ ತಾಯಿ, ತಂದೆ, ಮಕ್ಕಳು, ಅಣ್ಣತಮ್ಮಂದಿರು ಇವರಿಗೋಸ್ಕರ ಈ ವಿಧಿ ಇರುವದಿಲ್ಲ.
3
ಇದಲ್ಲದೆ ಕನ್ನಿಕೆಯಾಗಿರುವ ತಂಗಿ ಇನ್ನೂ ಮದುವೆಯಾಗದೆ ಅವನ ಆಶ್ರಯದಲ್ಲಿರುವದರಿಂದ ಅವಳಿಗೋಸ್ಕರ ಅವನು ಅಪವಿತ್ರ ಮಾಡಿಕೊಳ್ಳಬಹುದು.)
4
ಅವನು ಕುಲದಲ್ಲಿ ನಾಯಕನಾಗಿರುವದರಿಂದ ತನ್ನನ್ನು ಅಪವಿತ್ರಮಾಡಿಕೊಳ್ಳಕೂಡದು; ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು.
5
ಅವರು ತಲೆಬೋಳಿಸಿಕೊಳ್ಳಬಾರದು; ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯ ಮಾಡಿಕೊಳ್ಳಬಾರದು.
6
ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವದರಿಂದ ಪವಿತ್ರರಾಗಿರಬೇಕು.
7
ಯಾಜಕರು ತಮ್ಮ ದೇವರಿಗೆ ಮೀಸಲಾದವರಾಗಿರುವದರಿಂದ ವೇಶ್ಯಾ ಸ್ತ್ರೀಯನ್ನಾಗಲಿ ಮಾನವನ್ನು ಭಂಗಪಡಿಸಿಕೊಂಡ ಸ್ತ್ರೀಯನ್ನಾಗಲಿ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಹೆಂಡತಿಯನ್ನಾಗಿ ತೆಗೆದುಕೊಳ್ಳಬಾರದು.
8
ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.
9
ಯಾಜಕನ ಮಗಳು ಸೂಳೆತನದಿಂದ ನಿಂದೆಗೆ ಒಳಗಾದರೆ ತನ್ನ ತಂದೆಯನ್ನೂ ನಿಂದೆಗೆ ಒಳಪಡಿಸಿದವಳಾದಳು; ಅವಳನ್ನು ಬೆಂಕಿಯಿಂದ ಸುಟ್ಟು ಬಿಡಬೇಕು.
10
ಯಾಜಕರಲ್ಲಿ ಪ್ರಧಾನನು ಅಂದರೆ ಯಾವನು ತೈಲಾಭಿಷೇಕಹೊಂದಿ ದೀಕ್ಷಾವಸ್ತ್ರಗಳನ್ನು ಧರಿಸಿ ಪಟ್ಟಕ್ಕೆ ಬರುವನೋ ಅವನು [ದುಃಖಸೂಚನೆಗಾಗಿ] ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು.
11
ಅವನು ಶವವಿರುವ ಯಾವ ಸ್ಥಳಕ್ಕೂ ಹೋಗಬಾರದು. ತಂದೆತಾಯಿಗಳ ಮರಣದ ನಿವಿುತ್ತ ತನ್ನನ್ನು ಅಪವಿತ್ರಮಾಡಿಕೊಳ್ಳಬಾರದು.
12
ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವಿಸುವ ದೇವರ ಮಂದಿರದ ಗೌರವಕ್ಕೆ ಕುಂದುಬರುವದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ; ನಾನು ಯೆಹೋವನು.
13
ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮದುವೆ ಮಾಡಿಕೊಳ್ಳಬೇಕೇ ಹೊರತು
14
ವಿಧವೆಯನ್ನಾಗಲಿ ಗಂಡನಿಂದ ಬಿಡಲ್ಪಟ್ಟವಳನ್ನಾಗಲಿ ಮಾನವನ್ನು ಭಂಗಪಡಿಸಿಕೊಂಡವಳನ್ನಾಗಲಿ ವೇಶ್ಯಾಸ್ತ್ರೀಯನ್ನಾಗಲಿ ಹೆಂಡತಿಯನ್ನಾಗಿ ಮಾಡಿಕೊಳ್ಳಬಾರದು. ಸ್ವದೇಶದವರಲ್ಲಿಯೇ ಹೆಣ್ಣನ್ನು ಪರಿಗ್ರಹಿಸಬೇಕು;
15
ಇಲ್ಲವಾದರೆ ಅವನ ಸಂತತಿಯು ಸ್ವಜನರೊಳಗೆ ಅಪವಾದಕ್ಕೆ ಗುರಿಯಾದೀತು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
16
ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನಿಗೆ ಹೀಗೆ ಆಜ್ಞಾಪಿಸು -
17
ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗಹೀನನೂ ದೇವರ ಆಹಾರವನ್ನು ಸಮರ್ಪಿಸುವದಕ್ಕೆ ಸನ್ನಿಧಿಗೆ ಬರಬಾರದು; ಅಂಗಹೀನನು ಈ ಕಾರ್ಯವನ್ನು ವಹಿಸಿಕೊಳ್ಳಲೇಕೂಡದು.
18
ಅವನು ಕುರುಡನಾಗಲಿ ಕುಂಟನಾಗಲಿ ಕೊರೆಮೂಗನಾಗಲಿ
19
ವಿಪರೀತ ಅವಯವಗಳುಳ್ಳವನಾಗಲಿ ಕೈಕಾಲು ಮುರುಕನಾಗಲಿ
20
ಗೂನು ಗುಜ್ಜಾರಿಯಾಗಲಿ ಹೂಗಣ್ಣ ಕಾಯಿಗಣ್ಣನಾಗಲಿ ಕಜ್ಜಿ ತುರಿಗಳುಳ್ಳವನಾಗಲಿ
21
ಬೀಜದೋಷವುಳ್ಳವನಾಗಲಿ ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.
22
ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನೂ ಮಹಾಪರಿಶುದ್ಧವಾದದ್ದನ್ನೂ ಅವನು ಊಟಮಾಡಬಹುದೇ ಹೊರತು
23
ಅವನಿಗೆ ಕಳಂಕವಿರುವದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.
24
ಮೋಶೆಯು ಆರೋನನಿಗೂ ಅವನ ಮಕ್ಕಳಿಗೂ ಇಸ್ರಾಯೇಲ್ಯರೆಲ್ಲರಿಗೂ ಈ ಆಜ್ಞೆಗಳನ್ನು ತಿಳಿಸಿದನು.
← Chapter 20
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 22 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27