bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Leviticus 23
Leviticus 23
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 24 →
1
ಯೆಹೋವನು ಮೋಶೆಗೆ ಹೇಳಿದ್ದೇನಂದರೆ -
2
ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳು ಇವೇ; ಈ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂಬದಾಗಿ ಸಾರಬೇಕು. ನಾನು ನೇವಿುಸಿರುವ ಹಬ್ಬದದಿನಗಳು ಯಾವವಂದರೆ -
3
ಆರು ದಿನಗಳಲ್ಲಿ ನೀವು ಕೆಲಸವನ್ನು ನಡಿಸಬೇಕು; ಏಳನೆಯ ದಿನವು ಯಾವ ಕೆಲಸವನ್ನೂ ಮಾಡಕೂಡದ ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನೂ ಮಾಡಕೂಡದು. ನಿಮ್ಮ ಎಲ್ಲಾ ನಿವಾಸಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ.
4
ಯೆಹೋವನಿಂದ ನೇಮಕವಾದ ಹಬ್ಬದ ಕಾಲಗಳು ಇವೇ; ಈ ಕಾಲಗಳಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೇಮಕವಾದ ದಿನಗಳಲ್ಲಿ ಇವುಗಳನ್ನು ಪ್ರಸಿದ್ಧಪಡಿಸಬೇಕು.
5
ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಯೆಹೋವನು ನೇವಿುಸಿದ ಪಸ್ಕಹಬ್ಬವಾಗಬೇಕು.
6
ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.
7
ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.
8
ಏಳು ದಿನಗಳಲ್ಲಿಯೂ ನೀವು ಯೆಹೋವನಿಗೆ ಹೋಮವನ್ನು ಸಮರ್ಪಿಸಬೇಕು. ಏಳನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.
9
ಯೆಹೋವನು ಮೋಶೆಗೆ ಹೇಳಿದ್ದೇನಂದರೆ -
10
ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ [ಜವೆಗೋದಿಯ] ಪೈರನ್ನು ಕೊಯ್ಯುವಾಗ ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು. ನೀವು ಅಂಗೀಕಾರವಾಗುವಂತೆ ಅವನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
11
ಸಬ್ಬತ್ದಿನದ ಮಾರಣೆಯ ದಿನದಲ್ಲಿಯೇ ಅದನ್ನು ನಿವಾಳಿಸಬೇಕು.
12
ಆ ಸಿವುಡನ್ನು ನೈವೇದ್ಯವಾಗಿ ನಿವಾಳಿಸುವ ದಿನದಲ್ಲಿ ನೀವು ಒಂದು ವರುಷದ ಪೂರ್ಣಾಂಗವಾದ ಟಗರನ್ನು ಸರ್ವಾಂಗಹೋಮವಾಗಿ ಯೆಹೋವನಿಗೆ ಸಮರ್ಪಿಸಬೇಕು.
13
ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವದಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟೇ. ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.
14
ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದುಕೊಡುವವರೆಗೂ [ಆ ವರುಷದ ಬೆಳೆಯ] ರೊಟ್ಟಿಯನ್ನಾಗಲಿ ಸುಟ್ಟ ತೆನೆಗಳನ್ನಾಗಲಿ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.
15
ಸಬ್ಬತ್ದಿನದ ಮಾರಣೆಯ ದಿನ ಮೊದಲುಗೊಂಡು ಅಂದರೆ ಆ ಪ್ರಥಮ ಸಿವುಡನ್ನು ನೈವೇದ್ಯವಾಗಿ ನಿವಾಳಿಸಿದ ದಿನ ಮೊದಲುಗೊಂಡು ಪೂರ್ಣವಾಗಿ ಏಳು ವಾರಗಳು ಮುಗಿಯುವಂತೆ ಐವತ್ತು ದಿನಗಳನ್ನು ಲೆಕ್ಕಿಸಬೇಕು.
16
ಏಳನೆಯ ಸಬ್ಬತ್ದಿನದ ಮರುದಿನದಲ್ಲಿ ಯೆಹೋವನಿಗೆ ಹೊಸ ಬೆಳೆಯ ನೈವೇದ್ಯದ್ರವ್ಯವನ್ನು ಸಮರ್ಪಿಸಬೇಕು.
17
ನಿಮ್ಮ ನಿವಾಸಗಳಿಂದ [ತಂದ ಹಿಟ್ಟಿನಲ್ಲಿ] ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.
18
ಆ ರೊಟ್ಟಿಗಳೊಡನೆ ಒಂದು ವರುಷದ ಪೂರ್ಣಾಂಗವಾದ ಏಳು ಕುರಿಗಳನ್ನೂ ಒಂದು ಹೋರಿಯನ್ನೂ ಎರಡು ಟಗರುಗಳನ್ನೂ ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆಯೂ ಪಾನದ್ರವ್ಯದೊಡನೆಯೂ ಅಗ್ನಿ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗುವವು.
19
ಅದಲ್ಲದೆ ದೋಷಪರಿಹಾರಕ ಯಜ್ಞವಾಗಿ ಒಂದು ಹೋತವನ್ನೂ ಸಮಾಧಾನಯಜ್ಞಕ್ಕಾಗಿ ಒಂದು ವರುಷದ ಎರಡು ಟಗರುಗಳನ್ನೂ ಸಮರ್ಪಿಸಬೇಕು.
20
ಯಾಜಕನು ಇವುಗಳನ್ನೂ ಪ್ರಥಮ ಫಲದ ರೊಟ್ಟಿಗಳನ್ನೂ ಎರಡು ಕುರಿಗಳನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.
21
ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆ ಕೂಡಬೇಕೆಂಬದಾಗಿ ಪ್ರಸಿದ್ಧಪಡಿಸಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
22
ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವದನ್ನೆಲ್ಲಾ ಕೊಯ್ಯಬಾರದು, ಮತ್ತು ಹಕ್ಕಲಾಯಬಾರದು. ಇವನ್ನು ಬಡವರಿಗೋಸ್ಕರವೂ ಪರದೇಶದವರಿಗೋಸ್ಕರವೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು.
23
ಯೆಹೋವನು ಮೋಶೆಗೆ ಹೇಳಿದ್ದೇನಂದರೆ -
24
ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಕೂಡಬೇಕು.
25
ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು; ಯೆಹೋವನಿಗೆ ಹೋಮವನ್ನು ಮಾಡಬೇಕು.
26
ಯೆಹೋವನು ಮೋಶೆಗೆ ಹೇಳಿದ್ದೇನಂದರೆ -
27
ಅದೇ ಏಳನೆಯ ತಿಂಗಳಿನ ಹತ್ತನೆಯ ದಿನವು ಸರ್ವದೋಷಪರಿಹಾರಕ ದಿನ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ನೀವು ಪೂರ್ಣವಾಗಿ ಉಪವಾಸಮಾಡಬೇಕು, ಮತ್ತು ಯೆಹೋವನ ಸನ್ನಿಧಿಯಲ್ಲಿ ಹೋಮವನ್ನು ಮಾಡಬೇಕು.
28
ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಅದು ದೋಷಪರಿಹಾರಕ ದಿವಸ; ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕಾಚಾರವು ನಡೆಯುವದು.
29
ಯಾವನಾದರೂ ಆ ದಿನದಲ್ಲಿ ಉಪವಾಸ ಮಾಡದೆಹೋದರೆ ಅವನು ಕುಲದಿಂದ ತೆಗೆದು ಹಾಕಲ್ಪಡಬೇಕು.
30
ಯಾವನಾದರೂ ಆ ದಿನದಲ್ಲಿ ಕೆಲಸವನ್ನು ಸ್ವಲ್ಪವಾಗಿ ನಡಿಸಿದರೂ ಅವನನ್ನು ಇಸ್ರಾಯೇಲ್ಯರಲ್ಲಿ ಇರದಂತೆ ನಾಶ ಮಾಡುವೆನು.
31
ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ.
32
ಆ ದಿನವು ಸಂಪೂರ್ಣ ವಿರಾಮವುಳ್ಳ ವಿಶ್ರಾಂತಿ ದಿನವಾಗಿರಬೇಕು. ಅದರಲ್ಲಿ ಉಪವಾಸದಿಂದಿರಬೇಕು. ಆ ತಿಂಗಳಿನ ಒಂಭತ್ತನೆಯ ದಿನದ ಸಾಯಂಕಾಲದಲ್ಲಿ ಪ್ರಾರಂಭಿಸಿ ಮರುದಿನದ ಸಾಯಂಕಾಲದವರೆಗೆ ನೀವು ಆ ವಿರಾಮದಿನವನ್ನು ಆಚರಿಸಬೇಕು.
33
ಯೆಹೋವನು ಮೋಶೆಗೆ ಹೇಳಿದ್ದೇನಂದರೆ -
34
ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸು - ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲುಗೊಂಡು ಏಳು ದಿನಗಳವರೆಗೆ ಪರ್ಣಶಾಲೆಗಳ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು.
35
ಮೊದಲನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು; ಯಾವ ಉದ್ಯೋಗವನ್ನೂ ನಡಿಸಬಾರದು.
36
ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಕೂಡಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಕೂಡುವ ದಿನವಾದದರಿಂದ ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು.
37
ಯೆಹೋವನು ನೇವಿುಸಿರುವ ಸಬ್ಬತ್ ದಿನಗಳ ಹೊರತಾಗಿ ಮೇಲೆ ಕಂಡವುಗಳೇ ಯೆಹೋವನ ಹಬ್ಬದ ದಿನಗಳು. ಆ ದಿನಗಳಲ್ಲಿ ದೇವಾರಾಧನೆಗಾಗಿ ಸಭೆಕೂಡುವಂತೆ ನೀವು ಪ್ರಕಟಿಸಬೇಕು.
38
ಯೆಹೋವನಿಗೆ ಒಪ್ಪಿಸಬೇಕಾದ ಕಪ್ಪ, ಕಾಣಿಕೆ, ಹರಕೆ ಇವುಗಳನ್ನು ನೀವು ಸಮರ್ಪಿಸಬೇಕಲ್ಲದೆ ಮೇಲೆ ಸೂಚಿಸಿರುವ ಹಬ್ಬದ ದಿನಗಳಲ್ಲಿಯೂ ಆಯಾ ದಿನಕ್ಕೆ ನೇವಿುಸಿರುವ ಪ್ರಕಾರ ಸರ್ವಾಂಗಹೋಮ, ನೈವೇದ್ಯದ್ರವ್ಯ, ಸಮಾಧಾನಯಜ್ಞ, ಪಾನದ್ರವ್ಯ ಇವುಗಳನ್ನೂ ತಂದು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು.
39
ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದನಂತರ ಯೆಹೋವನು ನೇವಿುಸಿದ [ಪರ್ಣಶಾಲೆಗಳ] ಜಾತ್ರೆಯನ್ನು ಏಳು ದಿನಗಳವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನೂ ಮಾಡದೆ ಸಂಪೂರ್ಣವಿರಾಮದಿಂದಿರಬೇಕು.
40
ಮೊದಲನೆಯ ದಿನದಲ್ಲಿ ಶ್ರೇಷ್ಠ ವೃಕ್ಷದ ಹಣ್ಣುಗಳನ್ನೂ ಖರ್ಜೂರ ಮರದ ಗರಿಗಳನ್ನೂ ಎಲೆಗಳು ದಟ್ಟವಾಗಿರುವ ಮರಗಳ ಕೊಂಬೆಗಳನ್ನೂ ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆಯುವ ನೀರವಂಜಿ ಚಿಗುರುಗಳನ್ನೂ ತೆಗೆದುಕೊಂಡು ಯೆಹೋವನ ಸನ್ನಿಧಿಯಲ್ಲಿ ಏಳು ದಿನಗಳು ಸಂಭ್ರಮವಾಗಿರಬೇಕು.
41
ಹೀಗೆ ಪ್ರತಿ ವರುಷದಲ್ಲಿಯೂ ಏಳು ದಿನಗಳವರೆಗೆ ಈ ಉತ್ಸವವನ್ನು ಆಚರಿಸಬೇಕು; ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತನಿಯಮ; ಏಳನೆಯ ತಿಂಗಳಿನಲ್ಲಿ ಇದನ್ನು ಆಚರಿಸಬೇಕು.
42
ಏಳು ದಿನಗಳು ನೀವು ಪರ್ಣಶಾಲೆಗಳಲ್ಲಿ ವಾಸವಾಗಿರಬೇಕು; ಸ್ವದೇಶಸ್ಥರಾದ ಇಸ್ರಾಯೇಲ್ಯರೆಲ್ಲರೂ ಪರ್ಣಶಾಲೆಗಳಲ್ಲಿಯೇ ವಾಸವಾಗಿರಬೇಕು.
43
ನಾನು ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದಾಗ ಇಸ್ರಾಯೇಲ್ಯರು ಪರ್ಣಶಾಲೆಗಳಲ್ಲಿ ವಾಸವಾಗಿರುವಂತೆ ಮಾಡಿದೆನೆಂಬದಾಗಿ ಇದರಿಂದ ನಿಮ್ಮ ಸಂತತಿಯವರಿಗೆ ತಿಳಿಯುವದು. ನಾನು ನಿಮ್ಮ ದೇವರಾದ ಯೆಹೋವನು.
44
ಯೆಹೋವನಿಂದ ನೇಮಕವಾದ ಹಬ್ಬಗಳ ದಿನಗಳ ವಿಷಯವಾಗಿ ಮೋಶೆಯು ಅದೇ ಮೇರೆಗೆ ಇಸ್ರಾಯೇಲ್ಯರಿಗೆ ತಿಳಿಸಿದನು.
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 24 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27