bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Leviticus 26
Leviticus 26
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 27 →
1
ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಕಲ್ಲುಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.
2
ನಾನು ನೇವಿುಸಿರುವ ಸಬ್ಬತ್ದಿನಗಳನ್ನು ನೀವು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.
3
ನೀವು ನನ್ನ ನಿಯಮಗಳನ್ನು ಕೈಕೊಂಡು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆದರೆ
4
ನಾನು ಮುಂಗಾರು ಹಿಂಗಾರು ಮಳೆಗಳನ್ನು ಆಯಾ ಕಾಲದಲ್ಲಿಯೇ ಬರಮಾಡುವೆನು; ನಿಮ್ಮ ಹೊಲಗಳು ಒಳ್ಳೇ ಬೆಳೆಯನ್ನು ಕೊಡುವವು, ತೋಟದ ಮರಗಳು ಬಹಳ ಫಲಕೊಡುವವು;
5
ಕಣತುಳಿಸುವ ಕೆಲಸವು ದ್ರಾಕ್ಷೆಯಬೆಳೆಯ ಪರ್ಯಂತರವೂ ದ್ರಾಕ್ಷೆಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ಪರ್ಯಂತರವೂ ನಡೆಯುವವು; ನೀವು ಸಮೃದ್ಧಿಯಾಗಿ ಊಟಮಾಡುವಿರಿ. ನಿಮ್ಮ ದೇಶದಲ್ಲಿ ನಿರ್ಭಯವಾಗಿ ವಾಸಮಾಡುವಿರಿ;
6
ನಿಮ್ಮ ದೇಶದಲ್ಲಿ ನಿಮಗೆ ಸುಕ್ಷೇಮವನ್ನು ಅನುಗ್ರಹಿಸುವೆನು; ಯಾರ ಭಯವೂ ಇಲ್ಲದೆ ಮಲಗಿಕೊಳ್ಳುವಿರಿ; ದುಷ್ಟಮೃಗಗಳು ದೇಶದಲ್ಲಿ ಇರದಂತೆ ಮಾಡುವೆನು; ನಿಮ್ಮ ದೇಶವು ಶತ್ರುಗಳ ಕತ್ತಿಯಿಂದ ಹಾಳಾಗುವದಿಲ್ಲ.
7
ನೀವು ನಿಮ್ಮ ವೈರಿಗಳನ್ನು ಓಡಿಸುವಿರಿ, ಅವರನ್ನು ಕತ್ತಿಯಿಂದ ಸಂಹರಿಸುವಿರಿ;
8
ನಿಮ್ಮಲ್ಲಿ ಐದು ಮಂದಿಯು ನೂರು ಮಂದಿಯನ್ನೂ ನೂರು ಮಂದಿಯು ಹತ್ತುಸಾವಿರ ಮಂದಿಯನ್ನೂ ಓಡಿಸುವರು; ನಿಮ್ಮ ಶತ್ರುಗಳು ನಿಮ್ಮ ಕತ್ತಿಯಿಂದ ಹತರಾಗುವರು.
9
ನಾನು ನಿಮ್ಮ ಮೇಲೆ ಕಟಾಕ್ಷವಿಟ್ಟು ಬಹುಸಂತಾನವನ್ನು ಕೊಟ್ಟು ಹೆಚ್ಚಿಸಿ ನಿಮಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
10
ನೀವು ಬಹುದಿವಸದಿಂದ ಇಟ್ಟುಕೊಂಡಿರುವ ಹಳೆಯ ಧಾನ್ಯವನ್ನು ಊಟಮಾಡುವಿರಿ; ಹೊಸದಕ್ಕೆ ಸ್ಥಳ ಉಂಟಾಗುವಂತೆ ಹಳೆಯದನ್ನು ತೆಗೆಯುವಿರಿ.
11
ನಾನು ನಿಮ್ಮ ನಡುವೆ ನಿವಾಸಮಾಡುವೆನು; ನಿಮ್ಮನ್ನು ತಳ್ಳಿಬಿಡುವದಿಲ್ಲ;
12
ನಿಮ್ಮ ನಡುವೆ ತಿರುಗಾಡುತ್ತಾ ನಿಮಗೆ ದೇವರಾಗಿರುವೆನು; ನೀವು ನನಗೆ ಪ್ರಜೆಯಾಗಿರುವಿರಿ.
13
ನೀವು ಐಗುಪ್ತ್ಯರಿಗೆ ದಾಸರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದೆನಲ್ಲವೇ.
14
ಆದರೆ ನೀವು ನನ್ನ ಮಾತನ್ನು ಕೇಳದೆ ಈ ಆಜ್ಞೆಗಳನ್ನೆಲ್ಲಾ ಅನುಸರಿಸದೆ
15
ನನ್ನ ನಿಯಮಗಳನ್ನು ಬೇಡವೆಂದು ನನ್ನ ವಿಧಿಗಳನ್ನು ತಳ್ಳಿಬಿಟ್ಟರೆ ನೀವು ನನ್ನ ಆಜ್ಞೆಗಳನ್ನು ಅನುಸರಿಸದೆ ನನ್ನ ನಿಬಂಧನವನ್ನು ಮೀರಿ ನಡೆದರೆ
16
ನಾನು ನಿಮಗೆ ಮಾಡುವದೇನಂದರೆ - ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜ ಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.
17
ನಾನು ನಿಮ್ಮ ಮೇಲೆ ಉಗ್ರಕೋಪವನ್ನು ಮಾಡುವದರಿಂದ ನೀವು ನಿಮ್ಮ ಶತ್ರುಗಳ ಎದುರಿನಿಂದ ಸೋತು ಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಹಿಂದಟ್ಟದೆ ಇರುವಾಗಲೂ ನೀವು ಹೆದರಿ ಓಡುವಿರಿ.
18
ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆಹೋದರೆ ನಾನು ನಿಮ್ಮ ಪಾಪಗಳ ನಿವಿುತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.
19
ನಿಮ್ಮ ಗರ್ವಕ್ಕೆ ಕಾರಣವಾದ ಬಲವನ್ನು ಮುರಿಯುವೆನು. ನಿಮ್ಮ ಮೇಲಿರುವ ಆಕಾಶವನ್ನು ಕಬ್ಬಿಣದಂತೆಯೂ ನೀವು ಸಾಗುವಳಿಮಾಡುವ ಭೂವಿುಯನ್ನು ತಾಮ್ರದಂತೆಯೂ ಮಾಡುವೆನು;
20
ನೀವು ದುಡಿದದ್ದೆಲ್ಲಾ ವ್ಯರ್ಥವಾಗುವದು; ನಿಮ್ಮ ಭೂವಿುಯಲ್ಲಿ ಬೆಳೆಯಾಗುವದಿಲ್ಲ, ತೋಟಗಳ ಮರಗಳು ಫಲಿಸುವದಿಲ್ಲ.
21
ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಾನು ನಿಮ್ಮ ಪಾಪಗಳ ನಿವಿುತ್ತ ಇನ್ನೂ ಏಳರಷ್ಟಾಗಿ ನಿಮ್ಮನ್ನು ಬಾಧಿಸುವೆನು.
22
ನಿಮ್ಮ ಮೇಲೆ ಕಾಡುಮೃಗಗಳನ್ನು ಬರಮಾಡುವೆನು; ಅವು ನಿಮ್ಮನ್ನು ಸಂತಾನವಿಲ್ಲದವರನ್ನಾಗಿ ಮಾಡುವವು; ನಿಮ್ಮ ಪಶುಗಳನ್ನು ಕೊಲ್ಲುವವು; ನಿಮ್ಮನ್ನು ಸ್ವಲ್ಪ ಮಂದಿಯನ್ನಾಗಿ ಮಾಡುವವು; ನಿಮ್ಮ ದಾರಿಗಳು ಹಾಳುಬೀಳುವವು.
23
ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ
24
ನಾನು ನಿಮಗೆ ವಿರೋಧವಾಗಿ ನಡೆಯುವೆನು; ನಿಮ್ಮ ಪಾಪಗಳ ನಿವಿುತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಬಾಧಿಸುವೆನು.
25
ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನವನ್ನು ಮೀರಿದದರಿಂದ ಆ ಕತ್ತಿಯು ಪ್ರತಿದಂಡನೆಮಾಡುವದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗವುಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.
26
ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಮಂದಿ ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿ ಸುಟ್ಟು ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಉಂಡಾಗ ತೃಪ್ತಿಹೊಂದುವದಿಲ್ಲ.
27
ಇದನ್ನೆಲ್ಲಾ ನೀವು ಅನುಭವಿಸಿದ ಮೇಲೆಯೂ ಇನ್ನೂ ನನ್ನ ಮಾತನ್ನು ಕೇಳದೆ ನನಗೆ ವಿರೋಧವಾಗಿ ನಡೆದರೆ
28
ನಾನು ನಿಮಗೆ ವಿರೋಧವಾಗಿ ಕೋಪದಿಂದ ನಡೆಯುವವನಾಗಿ ನಿಮ್ಮ ಪಾಪಗಳ ನಿಮತ್ತ ಏಳರಷ್ಟಾಗಿ ಶಿಕ್ಷಿಸುವೆನು.
29
ನೀವು ನಿಮ್ಮ ಗಂಡು ಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.
30
ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.
31
ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು. ನಿಮ್ಮ ದೇವಸ್ಥಾನಗಳನ್ನು ನಾಶಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿನೋಡುವದಿಲ್ಲ.
32
ನಾನು ನಿಮ್ಮ ದೇಶವನ್ನು ಸಂಪೂರ್ಣವಾಗಿ ಹಾಳುಮಾಡಿದಾಗ ಅದರಲ್ಲಿ ಒಕ್ಕಲಾಗುವ ನಿಮ್ಮ ಶತ್ರುಗಳೂ ಅದನ್ನು ನೋಡಿ ಆಶ್ಚರ್ಯಪಡುವರು.
33
ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವದು, ನಿಮ್ಮ ಪಟ್ಟಣಗಳು ನಾಶವಾಗುವವು.
34
ನೀವು ನಿಮ್ಮ ಶತ್ರುಗಳ ದೇಶದಲ್ಲಿ ಇರುವ ದಿನಗಳಲ್ಲೆಲ್ಲಾ ನಿಮ್ಮ ದೇಶವು ಹಾಳುಬಿದ್ದು ತನಗೆ ಸಲ್ಲಬೇಕಾಗಿದ್ದ ಸಬ್ಬತ್ ಕಾಲವನ್ನು ಅನುಭವಿಸುವದು; ಅದು ವಿಶ್ರಾಂತಿಯನ್ನು ಹೊಂದಿ ಸಬ್ಬತ್ಕಾಲವನ್ನು ಅನುಭವಿಸುವದು.
35
ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿವಸಗಳಲ್ಲಿ ಅನುಭವಿಸುವದು.
36
ನಿಮ್ಮಲ್ಲಿ ಯಾರಾರು ಉಳಿದು ಶತ್ರುಗಳ ದೇಶದಲ್ಲಿರುವರೋ ಅವರ ಹೃದಯಗಳಲ್ಲಿ ನಾನು ಭೀತಿಯನ್ನು ಹುಟ್ಟಿಸುವೆನು. ಗಾಳಿಯಿಂದ ಬಡಿದಾಡುವ ಉದುರೆಲೆಯ ಸಪ್ಪಳವು ಅವರಲ್ಲಿ ದಿಗಿಲುಹುಟ್ಟಿಸುವದು; ಆ ಸಪ್ಪಳವನ್ನು ಕೇಳಿ ಕತ್ತಿಯ ಎದುರಿನಿಂದ ಓಡಿಹೋಗುವವರಂತೆ ಓಡಿಹೋಗುವರು; ಯಾರೂ ಹಿಂದಟ್ಟಿ ಬಾರದಿರುವಾಗಲೂ ಅವರು ಓಡಿ ಬೀಳುವರು;
37
ಯಾರೂ ಓಡಿಸದಿದ್ದರೂ ಕತ್ತಿಯ ಎದುರಿನಿಂದ ಓಡುವವರಂತೆ ಒಬ್ಬರ ಮೇಲೊಬ್ಬರು ಬೀಳುವರು; ಶತ್ರುಗಳ ಎದುರಿನಲ್ಲಿ ನಿಲ್ಲಲಾರದವರಾಗುವಿರಿ.
38
ಅನ್ಯಜನಗಳಲ್ಲಿ ಚದರಿಸಲ್ಪಟ್ಟು ಕಾಣಿಸದೆ ಹೋಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ನುಂಗಿಬಿಡುವದು.
39
ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪಿತೃಗಳ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು.
40
ಆದರೆ ಅವರು ತಾವೂ ತಮ್ಮ ಪಿತೃಗಳೂ ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ತಾವು ನನಗೆ ವಿರೋಧವಾಗಿ ನಡೆದದ್ದರಿಂದಲೇ
41
ನಾನು ತಮಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶಕ್ಕೆ [ಸೆರೆಯವರನ್ನಾಗಿ] ಬರಮಾಡಬೇಕಾಯಿತೆಂದೂ ಒಪ್ಪಿ ತಮ್ಮ ಮೊಂಡವಾದ ಮನಸ್ಸನ್ನು ನನ್ನ ಆಜ್ಞೆಗೆ ಒಳಪಡಿಸಿ, ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವದಾದರೆ
42
ನಾನು ಯಾಕೋಬ್ ಇಸಾಕ್ ಅಬ್ರಹಾಮ್ ಇವರಿಗೆ ಮಾಡಿದ ವಾಗ್ದಾನಗಳನ್ನು ನೆನಪಿಗೆ ತಂದುಕೊಂಡು ನೆರವೇರಿಸುವೆನು; ಅವರ ಸ್ವದೇಶವನ್ನೂ ನಾನು ದಯೆಯಿಂದ ಜ್ಞಾಪಿಸಿಕೊಳ್ಳುವೆನು.
43
ಅವರು ಬಿಟ್ಟುಹೋದ ಸ್ವದೇಶವು ನಿರ್ಜನವಾಗಿ ಬಿದ್ದಿರುವಾಗ ತನಗೆ ಸಲ್ಲಬೇಕಾದ ಸಬ್ಬತ್ ವಿಶ್ರಾಂತಿಯನ್ನು ಹೊಂದುವದು. ಅವರು ಯೆಹೋವನ ಆಜ್ಞೆಬೇಡವೆಂದು ಆತನ ವಿಧಿಗಳನ್ನು ತಾತ್ಸಾರ ಮಾಡಿದ ಕಾರಣವೇ ತಮ್ಮ ಪಾಪದ ಫಲವನ್ನು ಅನುಭವಿಸಬೇಕಾಗಿರುವದು.
44
ಆದರೂ ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವದಿಲ್ಲ, ತಾತ್ಸಾರಮಾಡುವದಿಲ್ಲ; ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವದಿಲ್ಲ; ಅವರನ್ನು ಇಲ್ಲದಂತೆ ಮಾಡುವದಿಲ್ಲ; ನಾನು ಅವರ ದೇವರಾದ ಯೆಹೋವನಲ್ಲವೇ.
45
ಅವರ ಪಿತೃಗಳ ಸಂಗಡ ಮಾಡಿಕೊಂಡ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡು ಅವರಿಗೆ ಹಿತವನ್ನು ಮಾಡುವೆನು. ನಾನು ಅವರಿಗೆ ದೇವರಾಗಿರಬೇಕೆಂದು ಅವರ ಪಿತೃಗಳನ್ನು ಎಲ್ಲಾ ಜನಾಂಗಗಳ ಎದುರಿನಲ್ಲಿಯೇ ಐಗುಪ್ತ ದೇಶದೊಳಗಿಂದ ಬರಮಾಡಿದೆನಲ್ಲವೇ. ನಾನು ಯೆಹೋವನು.
46
ಯೆಹೋವನು ಸೀನಾಯಿಬೆಟ್ಟದಲ್ಲಿ ಮೋಶೆಯ ಮೂಲಕವಾಗಿ ಇಸ್ರಾಯೇಲ್ಯರ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ಅವರಿಗೆ ಕೊಟ್ಟ ಆಜ್ಞಾವಿಧಿಗಳು ಮೇಲೆ ಕಂಡವುಗಳೇ.
← Chapter 25
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 25
Chapter 26
Chapter 27
Chapter 27 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24
25
26
27