bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Luke 19
Luke 19
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 20 →
1
ಆತನು ಯೆರಿಕೋ ಊರನ್ನು ಹೊಕ್ಕು ದಾಟಿಹೋಗುತ್ತಿದ್ದನು.
2
ಅಲ್ಲಿ ಜಕ್ಕಾಯನೆಂಬ ಹೆಸರುಳ್ಳ ಒಬ್ಬ ಮನುಷ್ಯನಿದ್ದನು; ಅವನು ಸುಂಕದ ಗುತ್ತಿಗೆದಾರನು ಮತ್ತು ಐಶ್ವರ್ಯವಂತನು.
3
ಅವನು ಯೇಸು ಎಂಥವನೆಂದು ನೋಡಲಪೇಕ್ಷಿಸಿದರೂ ತಾನು ಗಿಡ್ಡನಾಗಿದ್ದದರಿಂದ ಜನರ ಗುಂಪಿನ ನಿವಿುತ್ತ ನೋಡಲಾರದೆ ಹೋದನು.
4
ಆದಕಾರಣ ಆತನನ್ನು ನೋಡುವದಕ್ಕಾಗಿ ಮುಂದೆ ಓಡಿಹೋಗಿ ಆತನು ಬರುತ್ತಿರುವ ಮಾರ್ಗದಲ್ಲಿದ್ದ ಆಲದ ಮರವನ್ನು ಹತ್ತಿದನು.
5
ಯೇಸು ಅಲ್ಲಿಗೆ ಬಂದು ಮೇಲಕ್ಕೆ ನೋಡಿ - ಜಕ್ಕಾಯನೇ, ತಟ್ಟನೆ ಇಳಿದು ಬಾ, ನಾನು ಈಹೊತ್ತು ನಿನ್ನ ಮನೆಯಲ್ಲಿ ಇಳುಕೊಳ್ಳಬೇಕು ಎಂದು ಅವನಿಗೆ ಹೇಳಲು
6
ಅವನು ತಟ್ಟನೆ ಇಳಿದು ಬಂದು ಆತನನ್ನು ಸಂತೋಷದಿಂದ ಸೇರಿಸಿಕೊಂಡನು.
7
ಇದನ್ನು ನೋಡಿದವರೆಲ್ಲರು - ಈತನು ಪಾಪಿಯಾಗಿರುವವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಹೋಗಿದ್ದಾನೆ ಎಂದು ಗುಣುಗುಟ್ಟಿದರು.
8
ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.
9
ಇದನ್ನು ಕೇಳಿ ಯೇಸು - ಈಹೊತ್ತು ಈ ಮನೆಗೆ ರಕ್ಷಣೆಯಾಯಿತು; ಇವನು ಸಹ ಅಬ್ರಹಾಮನ ವಂಶಿಕನಲ್ಲವೇ.
10
ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.
11
ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇವಿುಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದದರಿಂದಲೂ ಇನ್ನೂ ಒಂದು ಸಾಮ್ಯವನ್ನು ಹೇಳಿದನು.
12
ಅದೇನಂದರೆ - ಶ್ರೀಮಂತನಾದ ಒಬ್ಬಾನೊಬ್ಬ ಮನುಷ್ಯನು ತಾನು ರಾಜ್ಯಾಧಿಕಾರವನ್ನು ಪಡೆದುಕೊಂಡು ಹಿಂತಿರುಗಿ ಬರಬೇಕೆಂದು ದೂರದೇಶಕ್ಕೆ ಹೊರಟನು.
13
ಹೊರಡುವಾಗ ತನ್ನ ಆಳುಗಳಲ್ಲಿ ಹತ್ತು ಮಂದಿಯನ್ನು ಕರೆದು ಅವರಿಗೆ ಹತ್ತು ಮೊಹರಿಗಳನ್ನು ಕೊಟ್ಟು - ನಾನು ಬರುವ ತನಕ ವ್ಯಾಪಾರಮಾಡಿಕೊಂಡಿರ್ರಿ ಎಂದು ಹೇಳಿಹೋದನು.
14
ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ಇವನು ನಮ್ಮ ಮೇಲೆ ದೊರೆತನಮಾಡುವದು ನಮಗೆ ಇಷ್ಟವಿಲ್ಲ ಎಂದು ಹೇಳಿಸಿದರು.
15
ಆಮೇಲೆ ಅವನು ರಾಜ್ಯಾಧಿಕಾರವನ್ನು ಪಡಕೊಂಡು ಹಿಂತಿರುಗಿ ಬಂದು ತಾನು ಹಣವನ್ನು ಕೊಟ್ಟಿದ್ದ ಆಳುಗಳು ವ್ಯಾಪಾರದಿಂದ ಎಷ್ಟೆಷ್ಟು ಲಾಭ ಸಂಪಾದಿಸಿಕೊಂಡಿದ್ದಾರೆಂದು ತಿಳುಕೊಳ್ಳುವದಕ್ಕಾಗಿ ಅವರನ್ನು ತನ್ನ ಬಳಿಗೆ ಕರಿಸಿದನು.
16
ಮೊದಲನೆಯವನು ಆತನ ಮುಂದೆ ಬಂದು - ದೊರೆಯೇ, ನೀನು ಕೊಟ್ಟ ಮೊಹರಿಯಿಂದ ಹತ್ತು ಮೊಹರಿಗಳು ಸಂಪಾದನೆಯಾದವು ಅನ್ನಲು
17
ಅವನು ಅವನಿಗೆ - ಭಲಾ! ನೀನು ಒಳ್ಳೇ ಆಳು; ನೀನು ಬಹು ಸ್ವಲ್ಪವಾದದ್ದರಲ್ಲಿ ನಂಬಿಕೆಯುಳ್ಳವನಾಗಿದ್ದದರಿಂದ ಹತ್ತು ಗ್ರಾಮಗಳ ಮೇಲೆ ಅಧಿಕಾರಿಯಾಗಿರು ಎಂದು ಹೇಳಿದನು.
18
ಎರಡನೆಯವನು ಬಂದು - ದೊರೆಯೇ, ನೀನು ಕೊಟ್ಟ ಮೊಹರಿಯಿಂದ ಐದು ಮೊಹರಿಗಳು ದೊರಕಿದವು ಅನ್ನಲು
19
ಅವನು ಇವನಿಗೆ - ನೀನು ಸಹ ಐದು ಗ್ರಾಮಗಳ ಮೇಲಿರು ಎಂದು ಹೇಳಿದನು.
20
ಬಳಿಕ ಮತ್ತೊಬ್ಬನು ಬಂದು - ದೊರೆಯೇ, ಇಗೋ ನೀನು ಕೊಟ್ಟ ಮೊಹರಿ.
21
ನೀನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ನಿನಗೆ ಹೆದರಿಕೊಂಡು ಇದನ್ನು ವಸ್ತ್ರದಲ್ಲಿ ಕಟ್ಟಿ ಇಟ್ಟುಕೊಂಡೆನು ಅಂದನು.
22
ಅದಕ್ಕೆ ಅವನು - ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ತೀರ್ಪುಮಾಡುತ್ತೇನೆ. ನಾನು ಇಡದೆಯಿರುವದನ್ನು ಎತ್ತಿಕೊಂಡು ಹೋಗುವ ಬಿತ್ತದೆಯಿರುವದನ್ನು ಕೊಯ್ಯುವ ಕಠಿನ ಮನುಷ್ಯನು ಎಂದು ತಿಳಿದಿಯಾ?
23
ಹಾಗಾದರೆ ನೀನು ನನ್ನ ಹಣವನ್ನು ಸಾಹುಕಾರನ ಕೈಯಲ್ಲಿ ಯಾಕೆ ಕೊಡಲಿಲ್ಲ? ಆಮೇಲೆ ನಾನು ಬಂದು ಅದನ್ನು ಬಡ್ಡಿ ಸಹಿತ ತೆಗೆದುಕೊಳ್ಳುತ್ತಿದ್ದೆನು ಎಂದು ಹೇಳಿ
24
ಹತ್ತಿರ ನಿಂತಿದ್ದವರಿಗೆ - ಆ ಮೊಹರಿಯನ್ನು ಇವನಿಂದ ತೆಗೆದುಕೊಂಡು ಹತ್ತು ಮೊಹರಿಗಳುಳ್ಳವನಿಗೆ ಕೊಡಿರಿ ಎಂದು ಹೇಳಿದನು.
25
ಅವರು - ದೊರೆಯೇ, ಹತ್ತು ಮೊಹರಿಗಳು ಅವನಲ್ಲಿ ಅವೆಯಲ್ಲಾ ಎಂದು ಅವನಿಗೆ ಹೇಳಿದರು.
26
ಅದಕ್ಕವನು - ಇದ್ದವರಿಗೆಲ್ಲಾ ಕೊಡಲ್ಪಡುವದು, ಇಲ್ಲದವನ ಕಡೆಯಿಂದ ಇದ್ದದ್ದೂ ತೆಗೆಯಲ್ಪಡುವದು ಎಂದು ನಾನು ನಿಮಗೆ ಹೇಳುತ್ತೇನೆ;
27
ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಬೇಕು ಅಂದನು.
28
ಆತನು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇವಿುಗೆ ಮುಂದೆ ಮುಂದೆ ಹೋದನು.
29
ಆಮೇಲೆ ಆತನು ಎಣ್ಣೇಮರಗಳ ಗುಡ್ಡ ಎನಿಸಿಕೊಳ್ಳುವ ಗುಡ್ಡದ ಬಳಿಯಲ್ಲಿರುವ ಬೇತ್ಫಗೆಗೂ ಬೇಥಾನ್ಯಕ್ಕೂ ಸಮೀಪಿಸಿದಾಗ ಶಿಷ್ಯರಲ್ಲಿ ಇಬ್ಬರನ್ನು ಕರೆದು - ನಿಮ್ಮೆದುರಿಗಿರುವ ಹಳ್ಳಿಗೆ ಹೋಗಿರಿ;
30
ಅದರೊಳಗೆ ಸೇರುತ್ತಿರುವಾಗಲೇ ಅಲ್ಲಿ ಕಟ್ಟಿರುವ ಒಂದು ಕತ್ತೇಮರಿಯನ್ನು ಕಾಣುವಿರಿ; ಇದುವರೆಗೆ ಅದರ ಮೇಲೆ ಯಾರೂ ಹತ್ತಿಲ್ಲ; ಅದನ್ನು ಬಿಚ್ಚಿ ಹಿಡುಕೊಂಡು ಬನ್ನಿರಿ.
31
ಯಾವನಾದರೂ ನಿಮ್ಮನ್ನು - ಯಾಕೆ ಬಿಚ್ಚುತ್ತೀರಿ ಎಂದು ಕೇಳಿದರೆ ಇದು ಸ್ವಾವಿುಯವರಿಗೆ ಬೇಕಾಗಿದೆ ಅನ್ನಿರಿ ಎಂದು ಹೇಳಿಕಳುಹಿಸಿದನು.
32
ಕಳುಹಿಸಲ್ಪಟ್ಟವರು ಹೋಗಿ ಆತನು ತಮಗೆ ಹೇಳಿದಂತೆಯೇ ಕಂಡರು.
33
ಅವರು ಆ ಕತ್ತೇಮರಿಯನ್ನು ಬಿಚ್ಚುತ್ತಿರುವಾಗ ಅದರ ಯಜಮಾನರು - ಈ ಮರಿಯನ್ನು ಯಾಕೆ ಬಿಚ್ಚುತ್ತೀರಿ ಎಂದು ಅವರನ್ನು ಕೇಳಿದ್ದಕ್ಕೆ
34
ಅವರು - ಇದು ಸ್ವಾವಿುಯವರಿಗೆ ಬೇಕಾಗಿದೆ ಎಂದು ಹೇಳಿದರು.
35
ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೇಮರಿಯ ಮೇಲೆ ಹಾಕಿ ಯೇಸುವನ್ನು ಕೂಡ್ರಿಸಿದರು.
36
ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.
37
ಆತನು ಪಟ್ಟಣವನ್ನು ಸಮೀಪಿಸಿ ಎಣ್ಣೇಮರಗಳ ಗುಡ್ಡದಿಂದ ಇಳಿಯುವ ಸ್ಥಳಕ್ಕೆ ಬಂದಾಗ ಶಿಷ್ಯಮಂಡಲಿಯವರೆಲ್ಲಾ ಸಂತೋಷಪಡುತ್ತಾ ತಾವು ಕಂಡಿದ್ದ ಎಲ್ಲಾ ಮಹತ್ಕಾರ್ಯಗಳ ವಿಷಯದಲ್ಲಿ -
38
ಕರ್ತನ ಹೆಸರಿನಲ್ಲಿ ಬರುವ ಅರಸನಿಗೆ ಆಶೀರ್ವಾದ, ಪರಲೋಕದಲ್ಲಿ ಮಂಗಳ, ಮೇಲಣಲೋಕಗಳಲ್ಲಿ ಮಹಿಮೆ ಎಂದು ಮಹಾ ಶಬ್ದದಿಂದ ದೇವರನ್ನು ಕೊಂಡಾಡುವದಕ್ಕೆ ತೊಡಗಿದರು.
39
ಜನರ ಗುಂಪಿನೊಳಗಿದ್ದ ಫರಿಸಾಯರಲ್ಲಿ ಕೆಲವರು ಆತನಿಗೆ - ಬೋಧಕನೇ, ನಿನ್ನ ಶಿಷ್ಯರನ್ನು ಗದರಿಸು ಎಂದು ಹೇಳಿದ್ದಕ್ಕೆ
40
ಆತನು - ಇವರು ಸುಮ್ಮನಾದರೆ ಈ ಕಲ್ಲುಗಳೇ ಕೂಗುವವು ಎಂದು ನಿಮಗೆ ಹೇಳುತ್ತೇನೆ ಅಂದನು.
41
ತರುವಾಯ ಆತನು ಸಮೀಪಕ್ಕೆ ಬಂದಾಗ ಪಟ್ಟಣವನ್ನು ನೋಡಿ ಅದರ ವಿಷಯವಾಗಿ ಅತ್ತು -
42
ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡರೆ ಎಷ್ಟೋ ಒಳ್ಳೇದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.
43
ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳುಕೊಳ್ಳಲಿಲ್ಲವಾದದರಿಂದ ನಿನ್ನ ವೈರಿಗಳು ಒಡ್ಡುಕಟ್ಟಿ ನಿನ್ನ ಸುತ್ತಲೂ ಮುತ್ತಿಗೆ ಹಾಕಿ ಎಲ್ಲಾ ಕಡೆಗಳಲ್ಲಿಯೂ ನಿನ್ನನ್ನು ಬಂದುಮಾಡಿ ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿವಸಗಳು ನಿನ್ನ ಮೇಲೆ ಬರುವವು ಅಂದನು.
45
ಬಳಿಕ ಆತನು ದೇವಾಲಯಕ್ಕೆ ಹೋಗಿ ಮಾರುವವರನ್ನು ಹೊರಡಿಸಿಬಿಡುವದಕ್ಕೆ ಪ್ರಾರಂಭಿಸಿ ಅವರಿಗೆ -
46
ನನ್ನ ಆಲಯವು ಪ್ರಾರ್ಥನಾಲಯವಾಗಿರುವದು ಎಂದು ಬರೆದದೆಯಲ್ಲಾ; ಆದರೆ ನೀವು ಅದನ್ನು ಕಳ್ಳರ ಗವಿ ಮಾಡಿದ್ದೀರಿ ಎಂದು ಹೇಳಿದನು.
47
ಮತ್ತು ಆತನು ದಿನಾಲು ದೇವಾಲಯದಲ್ಲಿ ಉಪದೇಶಮಾಡುತ್ತಿದ್ದನು. ಅಷ್ಟರಲ್ಲಿ ಮಹಾಯಾಜಕರೂ ಶಾಸ್ತ್ರಿಗಳೂ ಪ್ರಜೆಗಳಲ್ಲಿ ಮುಖ್ಯಸ್ಥರೂ ಆತನನ್ನು ಕೊಲ್ಲುವದಕ್ಕೆ ಸಂದರ್ಭನೋಡುತ್ತಿದ್ದರು.
48
ಆದರೆ ಜನರೆಲ್ಲರು ಆತನನ್ನು ಅಂಟಿಕೊಂಡು ಉಪದೇಶವನ್ನು ಗಮನಿಸಿ ಕೇಳುತ್ತಿದ್ದದರಿಂದ ಏನು ಮಾಡಬೇಕೋ ತೋರಲಿಲ್ಲ.
← Chapter 18
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 20 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24