bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Luke 2
Luke 2
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 3 →
1
ಆ ಕಾಲದಲ್ಲಿ ರಾಜ್ಯವೆಲ್ಲಾ ಖಾನೆಷುಮಾರಿ ಬರಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು.
2
ಕುರೇನ್ಯನು ಸುರಿಯಕ್ಕೆ ಅಧಿಪತಿಯಾಗಿದ್ದಾಗ ಈ ಮೊದಲನೆಯ ಖಾನೆಷುಮಾರಿ ನಡೆಯಿತು.
3
ಆಗ ಎಲ್ಲರೂ ಖಾನೆಷುಮಾರಿ ಬರಸಿಕೊಳ್ಳುವದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.
4
ಯೋಸೇಫನು ಸಹ ತಾನು ದಾವೀದನ ಮನೆತನದವನೂ ಗೋತ್ರದವನೂ ಆಗಿದ್ದದರಿಂದ ಹೆಸರು ಬರಸಿಕೊಳ್ಳುವದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಮರಿಯಳ ಸಂಗಡ ಗಲಿಲಾಯಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದನು.
6
ಆಗ ಮರಿಯಳು ಪೂರ್ಣಗರ್ಭಿಣಿಯಾಗಿದ್ದಳು. ಅವರು ಅಲ್ಲಿದ್ದಾಗ ಆಕೆಗೆ ದಿನತುಂಬಿತು.
7
ಆಕೆಯು ತನ್ನ ಚೊಚ್ಚಲುಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಚತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು.
8
ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರೀಹಿಂಡನ್ನು ಕಾಯುತ್ತಿರಲಾಗಿ
9
ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು.
10
ಆ ದೂತನು ಅವರಿಗೆ - ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ.
11
ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ.
12
ಆತನು ನಿಮಗೆ ಗೊತ್ತಾಗುವದಕ್ಕೆ ಗುರುತೇನಂದರೆ - ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವದನ್ನು ಕಾಣುವಿರಿ ಎಂದು ಹೇಳಿದನು.
13
ಫಕ್ಕನೆ ಆ ದೂತನ ಸಂಗಡ ಪರಲೋಕಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು -
14
ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.
15
ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು - ನಾವು ಈಗಲೇ ಬೇತ್ಲೆಹೇವಿುಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡೋಣ ನಡೆಯಿರಿ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡು ತಟ್ಟನೆ ಹೋಗಿ
16
ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು.
17
ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ತಮಗೆ ಹೇಳಿದ್ದ ಮಾತನ್ನು ತಿಳಿಯಪಡಿಸಿದರು.
18
ಅದನ್ನು ಕೇಳಿದವರೆಲ್ಲರೂ ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು.
19
ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಯೋಚಿಸುತ್ತಿದ್ದಳು.
20
ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗೋಸ್ಕರ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.
21
ಆ ಕೂಸಿಗೆ ಸುನ್ನತಿಮಾಡುವದಕ್ಕೆ ಕಳೆಯಬೇಕಾದ ಎಂಟು ದಿವಸಗಳು ತುಂಬಿದ ಮೇಲೆ ಅದಕ್ಕೆ ಯೇಸುವೆಂದು ಹೆಸರಿಟ್ಟರು. ಅದು ಗರ್ಭದಲ್ಲಿ ಮೂಡುವದಕ್ಕಿಂತ ಮೊದಲು ದೇವದೂತನು ಅದೇ ಹೆಸರನ್ನು ಸೂಚಿಸಿದ್ದನು.
22
ಬಳಿಕ ಮೋಶೆಯ ನೇಮದ ಪ್ರಕಾರ ಅವರ ಸೂತಕ ಕಳೆಯುವದಕ್ಕೆ ತಕ್ಕಷ್ಟು ದಿವಸಗಳು ತುಂಬಲು ಅವರು ಆ ಕೂಸನ್ನು ಯೆರೂಸಲೇವಿುಗೆ ತೆಗೆದುಕೊಂಡು ಹೋದರು.
23
ಯಾಕಂದರೆ ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವದು ಎಂಬದಾಗಿ ಕರ್ತನ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಅದನ್ನು ಕರ್ತನಿಗೆ ಸಮರ್ಪಿಸಬೇಕಾಗಿತ್ತು.
24
ಇದಲ್ಲದೆ ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವಂತೆ ಒಂದು ಜೋಡಿ ಬೆಳವಕ್ಕಿಯನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ಬಲಿಕೊಡಬೇಕಾಗಿತ್ತು.
25
ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು.
26
ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವದಕ್ಕಿಂತ ಮುಂಚೆ ನೀನು ಸಾಯುವದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.
27
ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು; ಆಗ ತಂದೆತಾಯಿಗಳು ಯೇಸುವೆಂಬ ಮಗುವಿಗೆ ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡಿಸಬೇಕೆಂದು ಅದನ್ನು ಒಳಕ್ಕೆ ತರಲು
28
ಅವನು ಅದನ್ನು ತನ್ನ ಕೈಯಲ್ಲಿ ತಕ್ಕೊಂಡು ದೇವರನ್ನು ಕೊಂಡಾಡಿ -
29
ಒಡೆಯನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.
30
ನೀನು ನೇವಿುಸಿರುವ ರಕ್ಷಕನನ್ನು ನಾನು ಕಣ್ಣಾರೆ ಕಂಡೆನು.
31
ಎಲ್ಲಾ ಜನಗಳಿಗೆ ಪ್ರತ್ಯಕ್ಷನಾಗಲಿ ಎಂದು ಆತನನ್ನು ಒದಗಿಸಿಕೊಟ್ಟಿದ್ದೀ.
32
ಆತನು ಅನ್ಯದೇಶದವರಿಗೆ ಜ್ಞಾನೋದಯದ ಬೆಳಕು, ನಿನ್ನ ಪ್ರಜೆಯಾದ ಇಸ್ರಾಯೇಲ್ಯರಿಗೆ ಕೀರ್ತಿ, ಅಂದನು.
33
ಆ ಮಗುವಿನ ವಿಷಯವಾಗಿ ಹೇಳಿದ ಈ ಮಾತುಗಳಿಗೆ ಅದರ ತಂದೆತಾಯಿಗಳು ಆಶ್ಚರ್ಯಪಡುತ್ತಿರಲು
34
ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು.
35
ಇದಲ್ಲದೆ ನಿನ್ನ ಪ್ರಾಣಕ್ಕಂತೂ ಅಲಗು ನಾಟಿದಂತಾಗುವದು ಎಂದು ಹೇಳಿದನು.
36
ಇದಲ್ಲದೆ ಅಸೇರನ ಕುಲದ ಫನುವೇಲನ ಮಗಳಾದ ಅನ್ನಳೆಂಬ ಒಬ್ಬ ಪ್ರವಾದಿನಿ ಇದ್ದಳು. ಆಕೆ ಬಹಳ ಮುಪ್ಪಿನವಳು; ಆಕೆ ತನ್ನ ಕನ್ಯಾವಸ್ಥೆ ಕಳೆದ ತರುವಾಯ ಗಂಡನ ಕೂಡ ಏಳು ವರುಷ ಬಾಳುವೆಮಾಡಿ ಎಂಭತ್ತು ನಾಲ್ಕು ವರುಷ ವಿಧವೆಯಾಗಿದ್ದಳು.
37
ಆಕೆ ದೇವಾಲಯವನ್ನು ಬಿಟ್ಟುಹೋಗದೆ ಉಪವಾಸ ವಿಜ್ಞಾಪನೆಗಳಿಂದ ರಾತ್ರಿಹಗಲೂ ದೇವರ ಸೇವೆಯನ್ನು ಮಾಡುತ್ತಿದ್ದಳು.
38
ಆಕೆ ಅದೇ ಗಳಿಗೆಯಲ್ಲಿ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇವಿುನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತಾಡುವವಳಾದಳು.
39
ಇತ್ತಲಾಗಿ ಅವರು ಕರ್ತನ ಧರ್ಮಶಾಸ್ತ್ರದಲ್ಲಿ ಹೇಳಿರುವ ಕಾರ್ಯಗಳನ್ನೆಲ್ಲಾ ನೆರವೇರಿಸಿದ ಮೇಲೆ ಗಲಿಲಾಯಕ್ಕೆ ಸೇರಿದ ನಜರೇತೆಂಬ ತಮ್ಮ ಊರಿಗೆ ಹಿಂತಿರುಗಿ ಹೋದರು.
40
ಆ ಬಾಲಕನು ಬೆಳೆದು ಬಲಗೊಂಡು ಜ್ಞಾನದಿಂದ ತುಂಬಿದವನಾದನು; ಮತ್ತು ಆತನ ಮೇಲೆ ದೇವರ ದಯವಿತ್ತು.
41
ಆತನ ತಂದೆತಾಯಿಗಳು ಪ್ರತಿವರುಷವೂ ಪಸ್ಕಹಬ್ಬದ ಜಾತ್ರೆಗೆ ಯೆರೂಸಲೇವಿುಗೆ ಹೋಗುತ್ತಿದ್ದರು.
42
ಹೀಗಿರಲಾಗಿ ಆತನು ಹನ್ನೆರಡು ವರುಷದವನಾದಾಗ ಅವರು ಹಬ್ಬದ ಪದ್ಧತಿಯ ಪ್ರಕಾರ ಅಲ್ಲಿಗೆ ಹೋದರು.
43
ಹಬ್ಬದ ದಿವಸಗಳನ್ನು ತೀರಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇವಿುನಲ್ಲಿಯೇ ಉಳುಕೊಂಡನು.
44
ಆತನ ತಂದೆತಾಯಿಗಳು ಅದನ್ನು ತಿಳಿಯದೆ ಆತನು ಯಾತ್ರೆಯವರ ಗುಂಪಿನಲ್ಲಿ ಸೇರಿರುವನು ಎಂದು ಭಾವಿಸಿ ಒಂದು ದಿನದ ಪ್ರಯಾಣ ನಡೆದು ಬಂಧುಬಾಂಧವರಲ್ಲಿಯೂ ಪರಿಚಿತಿಯವರಲ್ಲಿಯೂ
45
ಆತನನ್ನು ಹುಡುಕಿ ಕಾಣದೆ ತಿರಿಗಿ ಯೆರೂಸಲೇವಿುಗೆ ಹುಡುಕಿಕೊಂಡು ಹೋದರು.
46
ಮೂರು ದಿನದ ಮೇಲೆ ಆತನನ್ನು ದೇವಾಲಯದಲ್ಲಿ ಕಂಡರು. ಆತನು ಬೋಧಕರ ನಡುವೆ ಕುಳಿತುಕೊಂಡು ಅವರ ಉಪದೇಶವನ್ನು ಕೇಳುತ್ತಾ ಪ್ರಶ್ನೆಮಾಡುತ್ತಾ ಇದ್ದನು.
47
ಆತನು ಆಡಿದ ಮಾತುಗಳನ್ನು ಕೇಳಿದವರೆಲ್ಲರು ಆತನ ಬುದ್ಧಿಗೂ ಉತ್ತರಗಳಿಗೂ ಆಶ್ಚರ್ಯಪಟ್ಟರು.
48
ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು - ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ ಎಂದು ಹೇಳಲು
49
ಆತನು ಅವರಿಗೆ - ನೀವು ನನ್ನನ್ನು ಹುಡುಕಿದ್ದೇನು? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದದ್ದು ನಿಮಗೆ ತಿಳಿಯಲಿಲ್ಲವೇ? ಎಂದು ಉತ್ತರಕೊಟ್ಟನು.
50
ಆದರೆ ಆತನು ಹೇಳಿದ ಮಾತಿನ ಅರ್ಥವನ್ನು ಅವರು ಗ್ರಹಿಸಲಿಲ್ಲ.
51
ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.
52
ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ವೃದ್ಧಿಯಾಗುತ್ತಾ ಬಂದನು; ಇದಲ್ಲದೆ ದೇವರ ಮತ್ತು ಮನುಷ್ಯರ ದಯೆಯು ಆತನ ಮೇಲೆ ಹೆಚ್ಚಾಗುತ್ತಾ ಬಂತು.
← Chapter 1
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 3 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24