bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Luke 22
Luke 22
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 23 →
1
ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಪಸ್ಕವೆಂಬ ಹಬ್ಬವು ಹತ್ತಿರವಾದಾಗ
2
ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದು ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.
3
ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರ ಲೆಕ್ಕದಲ್ಲಿ ಸೇರಿದವನಾದ ಇಸ್ಕರಿಯೋತೆಂಬ ಯೂದನಲ್ಲಿ ಪ್ರವೇಶಿಸಲು
4
ಅವನು ಮಹಾಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತಾಡಿದನು.
5
ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು ಅವನು ಒಡಂಬಟ್ಟು
6
ಆತನನ್ನು ಗದ್ದಲವಾಗದಂತೆ ಅವರಿಗೆ ಹಿಡುಕೊಡುವದಕ್ಕೆ ಅನುಕೂಲವಾದ ಸಮಯವನ್ನು ನೋಡುತ್ತಿದ್ದನು.
7
ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿವಸಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿವಸ ಬಂದಾಗ
8
ಯೇಸು ಪೇತ್ರನಿಗೂ ಯೋಹಾನನಿಗೂ - ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ ಎಂದು ಹೇಳಿ ಅವರನ್ನು ಕಳುಹಿಸಿದನು.
9
ಅವರು - ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ ಎಂದು ಆತನನ್ನು ಕೇಳಲು
10
ಆತನು ಅವರಿಗೆ - ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ
11
ಆ ಮನೆಯ ಯಜಮಾನನಿಗೆ - ನಮ್ಮ ಬೋಧಕನು ತನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವದಕ್ಕೆ ಭೋಜನ ಶಾಲೆ ಎಲ್ಲಿ ಎಂದು ನಿನ್ನನ್ನು ಕೇಳುತ್ತಾನೆ ಎಂಬದಾಗಿ ಹೇಳಿರಿ.
12
ಅವನು ತಕ್ಕ ಸಾಮಾನಿಟ್ಟಿರುವ ಮೇಲಂತಸ್ತಿನ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು; ಅಲ್ಲಿ ಸಿದ್ಧಮಾಡಿರಿ ಎಂದು ಹೇಳಿ ಕಳುಹಿಸಿದನು.
13
ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕಕ್ಕೆ ಸೌರಿಸಿದರು.
14
ಗಳಿಗೆ ಬಂದಾಗ ಆತನು ತನ್ನ ಹನ್ನೆರಡು ಮಂದಿ ಅಪೊಸ್ತಲರ ಸಂಗಡ ಊಟಕ್ಕೆ ಕೂತುಕೊಂಡನು.
15
ಆಗ ಆತನು ಅವರಿಗೆ - ನಾನು ಶ್ರಮೆ ಅನುಭವಿಸುವದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕದ ಊಟವನ್ನು ಮಾಡುವದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ.
16
ನಾನು ನಿಮಗೆ ಹೇಳುತ್ತೇನೆ, ಇದು ದೇವರ ರಾಜ್ಯದಲ್ಲಿ ನೆರವೇರುವ ತನಕ ನಾನು ಇನ್ನು ಮೇಲೆ ಪಸ್ಕದ ಊಟವನ್ನು ಮಾಡುವದೇ ಇಲ್ಲ ಎಂದು ಹೇಳಿದನು.
17
ಆಮೇಲೆ ಆತನು [ದ್ರಾಕ್ಷಾರಸದ] ಪಾತ್ರೆಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ - ಇದನ್ನು ತಕ್ಕೊಂಡು ನಿಮ್ಮಲ್ಲಿ ಹಂಚಿಕೊಳ್ಳಿರಿ.
18
ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವದೇ ಇಲ್ಲವೆಂದು ನಿಮಗೆ ಹೇಳುತ್ತೇನೆ ಅಂದನು.
19
ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.
20
ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನಿಮಗೋಸ್ಕರ ಸುರಿಸಲ್ಪಡುವ ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ.
21
ಆದರೂ ನೋಡಿರಿ, ನನ್ನನ್ನು ಹಿಡುಕೊಡುವವನು ನನ್ನೊಡನೆ ಮೇಜಿನ ಮೇಲೆ ಕೈಯಿಟ್ಟು ಊಟಮಾಡುತ್ತಿದ್ದಾನೆ.
22
ಮನುಷ್ಯಕುಮಾರನು ನೇಮಕವಾದ ಪ್ರಕಾರ ಹೊರಟುಹೋಗುತ್ತಾನೆ ಸರಿ; ಆದರೆ ಆತನನ್ನು ಹಿಡುಕೊಡುವ ಮನುಷ್ಯನ ಗತಿಯನ್ನು ಏನು ಹೇಳಲಿ ಅಂದನು.
23
ಇದನ್ನು ಕೇಳಿ ಅವರು - ಇಂಥ ಕೆಲಸವನ್ನು ಮಾಡಬೇಕೆಂದಿರುವವನು ನಮ್ಮಲ್ಲಿ ಯಾವನಾಗಿರಬಹುದು ಎಂದು ಒಬ್ಬರನ್ನೊಬ್ಬರು ಕೇಳತೊಡಗಿದರು.
24
ಇದಲ್ಲದೆ ತಮ್ಮಲ್ಲಿ ಯಾವನು ಹೆಚ್ಚಿನವನೆನಿಸಿಕೊಳ್ಳುವನು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.
25
ಆಗ ಆತನು ಅವರಿಗೆ - ಅನ್ಯದೇಶದ ಅರಸರು ತಮ್ಮ ತಮ್ಮ ಜನಗಳ ಮೇಲೆ ದೊರೆತನ ಮಾಡುತ್ತಾರೆ, ಮತ್ತು ಅವರ ಮೇಲೆ ಅಧಿಕಾರ ನಡಿಸುವವರು ಧರ್ಮಿಷ್ಠರೆನಿಸಿಕೊಳ್ಳುತ್ತಾರೆ.
26
ನೀವು ಹಾಗಿರಬಾರದು; ನಿಮ್ಮಲ್ಲಿ ಹೆಚ್ಚಿನವನು ಚಿಕ್ಕವನಂತಾಗಬೇಕು, ಮುಖ್ಯಸ್ಥನು ಸೇವಕನಂತಾಗಬೇಕು.
27
ಯಾವನು ಹೆಚ್ಚಿನವನು; ಊಟಕ್ಕೆ ಕೂತವನೋ ಸೇವೆಮಾಡುವವನೋ? ಊಟಕ್ಕೆ ಕೂತವನಲ್ಲವೇ. ಆದರೆ ನಾನು ನಿಮ್ಮಲ್ಲಿ ಸೇವೆ ಮಾಡುವವನಂತಿದ್ದೇನೆ.
28
ನೀವು ನನ್ನ ಕಷ್ಟಗಳಲ್ಲಿ ನನ್ನ ಸಂಗಡ ಎಡೆಬಿಡದೆ ಇದ್ದವರು.
29
ಆದದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇವಿುಸಿದ ಪ್ರಕಾರ ನಾನು ನಿಮಗೂ ನೇವಿುಸುತ್ತೇನೆ;
30
ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
31
ಸೀಮೋನನೇ, ಸೀಮೋನನೇ, ನೋಡು, ಸೈತಾನನು ನಿಮ್ಮನ್ನು ಗೋದಿಯಂತೆ ಒನೆಯಬೇಕೆಂದು ಅಪ್ಪಣೆ ಕೇಳಿಕೊಂಡನು;
32
ಆದರೆ ನಿನ್ನ ನಂಬಿಕೆ ಕುಂದಿಹೋಗಬಾರದೆಂದು ನಾನು ನಿನ್ನ ವಿಷಯದಲ್ಲಿ ದೇವರಿಗೆ ವಿಜ್ಞಾಪನೆಮಾಡಿಕೊಂಡೆನು. ನೀನು ತಿರುಗಿಕೊಂಡ ಮೇಲೆ ನಿನ್ನ ಸಹೋದರರನ್ನು ದೃಢಪಡಿಸು ಎಂದು ಹೇಳಿದನು.
33
ಆದರೆ ಅವನು - ಸ್ವಾಮೀ, ನಿನ್ನ ಸಂಗಡ ಸೆರೆಮನೆಗೆ ಹೋಗುವದಕ್ಕೂ ಸಾಯುವದಕ್ಕೂ ಸಿದ್ಧವಾಗಿದ್ದೇನೆ ಅನ್ನಲು
34
ಆತನು - ಪೇತ್ರನೇ, ನನ್ನ ವಿಷಯದಲ್ಲಿ - ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವದಿಲ್ಲವೆಂದು ನಿನಗೆ ಹೇಳುತ್ತೇನೆ ಅಂದನು.
35
ಮತ್ತು ಆತನು - ನಿಮ್ಮನ್ನು ನಾನು ಹಮ್ಮೀಣಿ ಹಸಿಬೆ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.
36
ಅದಕ್ಕೆ ಆತನು - ಈಗಲಾದರೋ ಹಮ್ಮೀಣಿಯಿದ್ದವನು ಅದನ್ನು ತಕ್ಕೊಳ್ಳಲಿ, ಹಸಿಬೆಯಿದ್ದವನು ಅದನ್ನು ತಕ್ಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.
37
ಯಾಕಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು.
38
ಅವರು - ಸ್ವಾಮೀ, ಇಗೋ ಇಲ್ಲಿ ಎರಡು ಕತ್ತಿಗಳಿವೆ ಅನ್ನಲು ಆತನು ಅವರಿಗೆ - ಅಷ್ಟು ಸಾಕು ಅಂದನು.
39
ತರುವಾಯ ಆತನು ಹೊರಟು ಪದ್ಧತಿಪ್ರಕಾರ ಎಣ್ಣೇಮರಗಳ ಗುಡ್ಡಕ್ಕೆ ಹೋದನು. ಶಿಷ್ಯರೂ ಆತನ ಹಿಂದೆ ಹೋದರು.
40
ಆತನು ಕ್ಲುಪ್ತಸ್ಥಳಕ್ಕೆ ಬಂದಾಗ ಅವರಿಗೆ - ನೀವು ಶೋಧನೆಗೆ ಒಳಗಾಗದಂತೆ ದೇವರನ್ನು ಪ್ರಾರ್ಥಿಸಿರಿ ಎಂದು ಹೇಳಿದನು.
41
ಆಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸುಗೆಯಷ್ಟು ದೂರ ಹೋಗಿ
42
ಮೊಣಕಾಲೂರಿ - ತಂದೆಯೇ, ನಿನಗೆ ಇಷ್ಟವಿದ್ದರೆ ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಹೇಗೂ ನನ್ನ ಚಿತ್ತವಲ್ಲ, ನಿನ್ನ ಚಿತ್ತವೇ ಆಗಲಿ ಅಂದನು.
43
ಆಗ ಪರಲೋಕದಿಂದ ಬಂದ ಒಬ್ಬ ದೇವದೂತನು ಆತನಿಗೆ ಕಾಣಿಸಿಕೊಂಡು ಆತನನ್ನು ಬಲಪಡಿಸಿದನು.
44
ಆತನು ಮನೋವ್ಯಥೆಯುಳ್ಳವನಾಗಿ ಇನ್ನೂ ಆಸಕ್ತಿಯಿಂದ ಪ್ರಾರ್ಥಿಸುತ್ತಿರಲಾಗಿ ಆತನ ಬೆವರು ಭೂವಿುಗೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳೋಪಾದಿಯಲ್ಲಿತ್ತು.
45
ಆತನು ಪ್ರಾರ್ಥನೆ ಮುಗಿಸಿ ಎದ್ದು ಶಿಷ್ಯರ ಬಳಿಗೆ ಬಂದು ದುಃಖಭಾರದಿಂದ ಇವರಿಗೆ ನಿದ್ರೆ ಹತ್ತಿರುವದನ್ನು ಕಂಡು
46
ಅವರಿಗೆ - ನೀವು ನಿದ್ರೆಮಾಡುವದೇನು? ಏಳಿರಿ, ಶೋಧನೆಗೆ ಒಳಗಾಗದಂತೆ ಪ್ರಾರ್ಥಿಸಿರಿ ಎಂದು ಹೇಳಿದನು.
47
ಆತನು ಇನ್ನೂ ಮಾತಾಡುತ್ತಿರಲು ಇಗೋ, ಜನರ ಗುಂಪು ಕಾಣಿಸಿತು. ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನೆಂಬವನು ಆ ಜನರ ಮುಂದೆ ಮುಂದೆ ನಡೆದನು.
48
ಅವನು ಯೇಸುವಿಗೆ ಮುದ್ದಿಡುವದಕ್ಕಾಗಿ ಆತನ ಬಳಿಗೆ ಬರಲು ಯೇಸು ಅವನಿಗೆ - ಯೂದನೇ, ಮುದ್ದಿಟ್ಟು ಮನುಷ್ಯಕುಮಾರನನ್ನು ಹಿಡುಕೊಡುತ್ತೀಯಾ ಎಂದು ಕೇಳಿದನು.
49
ಆತನ ಸುತ್ತಲಿದ್ದವರು ಮುಂದೆ ಆಗುವದನ್ನು ತಿಳಿದು - ಸ್ವಾಮೀ, ನಾವು ಕತ್ತಿಯಿಂದ ಹೊಡೆಯೋಣೋ ಎಂದು ಕೇಳಿದರು.
50
ಅವರಲ್ಲಿ ಒಬ್ಬನು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕಡಿದುಹಾಕಿದನು.
51
ಆದರೆ ಯೇಸು - ಇಷ್ಟಕ್ಕೇ ಬಿಡಿರಿ ಎಂದು ಹೇಳಿ ಆ ಕಿವಿಯನ್ನು ಮುಟ್ಟಿ ಅವನಿಗೆ ವಾಸಿಮಾಡಿದನು.
52
ಬಳಿಕ ಯೇಸು ತನ್ನನ್ನು ಹಿಡಿಯುವದಕ್ಕೆ ಬಂದ ಮಹಾಯಾಜಕರಿಗೂ ದೇವಾಲಯದ ಕಾವಲಿನ ದಳವಾಯಿಗಳಿಗೂ ಸಭೆಯ ಹಿರಿಯರಿಗೂ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರಾ?
53
ನಾನು ದಿನಾಲು ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನ ಎಂದು ಹೇಳಿದನು.
54
ಅವರು ಆತನನ್ನು ಹಿಡಿದು ಸಾಗಿಸಿಕೊಂಡು ಮಹಾಯಾಜಕನ ಮನೆಯೊಳಕ್ಕೆ ತೆಗೆದುಕೊಂಡು ಹೋದರು; ಪೇತ್ರನು ದೂರದಿಂದ ಹಿಂದೆಹಿಂದೆ ಹೋಗುತ್ತಿದ್ದನು.
55
ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕೂತುಕೊಳ್ಳಲು ಅವರ ನಡುವೆ ಪೇತ್ರನೂ ಕೂತುಕೊಂಡನು.
56
ಅವನು ಬೆಳಕಿಗೆ ಮುಖವಾಗಿ ಕೂತಿರುವಾಗ ಒಬ್ಬ ದಾಸಿಯು ಅವನನ್ನು ಕಂಡು ಅವನನ್ನು ದೃಷ್ಟಿಸಿ ನೋಡಿ - ಇವನು ಸಹ ಅವನ ಸಂಗಡ ಇದ್ದವನು ಅಂದಳು.
57
ಆದರೆ ಅವನು - ನಾನು ಅವನನ್ನು ಅರಿಯೆನಮ್ಮಾ ಎಂದು ಹೇಳಿದನು.
58
ತುಸು ಹೊತ್ತಿನ ಮೇಲೆ ಒಬ್ಬನು ಅವನನ್ನು ಕಂಡು - ನೀನು ಸಹ ಅವರಲ್ಲಿ ಒಬ್ಬನು ಅನ್ನಲು ಪೇತ್ರನು - ಅಲ್ಲಪ್ಪಾ ಅಂದನು.
59
ಹೆಚ್ಚು ಕಡಿಮೆ ಒಂದು ಘಂಟೆ ಹೊತ್ತಿನ ಮೇಲೆ ಇನ್ನೊಬ್ಬನು - ನಿಶ್ಚಯವಾಗಿ ಇವನು ಸಹ ಅವನ ಸಂಗಡ ಇದ್ದವನು, ಇವನು ಗಲಿಲಾಯದವನಷ್ಟೆ ಎಂದು ದೃಢವಾಗಿ ಹೇಳಿದನು.
60
ಆದರೆ ಪೇತ್ರನು - ನೀನು ಹೇಳುವದೇನೋ ನಾನರಿಯೆನಪ್ಪಾ ಅಂದನು. ಅವನು ಈ ಮಾತನ್ನು ಆಡುತ್ತಿರುವಾಗಲೇ ಕೋಳಿ ಕೂಗಿತು.
61
ಸ್ವಾವಿುಯು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು - ಈಹೊತ್ತು ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಸ್ವಾವಿು ನುಡಿದ ಮಾತನ್ನು ನೆನಸಿ
62
ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.
63
ಆಮೇಲೆ ಯೇಸುವನ್ನು ಹಿಡಿದವರು ಆತನನ್ನು ಹಾಸ್ಯಮಾಡುತ್ತಾ
64
ಆತನಿಗೆ ಮುಸುಕುಹಾಕಿ ಹೊಡೆದು - ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು ಎಂದು ಆತನನ್ನು ಕೇಳಿದರು.
65
ಆತನಿಗೆ ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು.
66
ಬೆಳಗಾಗುವಾಗ ಯೆಹೂದ್ಯರ ಹಿರೀ ಸಭೆಯವರು ಅಂದರೆ ಮಹಾಯಾಜಕರೂ ಶಾಸ್ತ್ರಿಗಳೂ ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು -
67
ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು ಅಂದರು. ಆತನು ಅವರಿಗೆ - ನಾನು ನಿಮಗೆ ಹೇಳಿದರೆ ನೀವು ನಂಬುವದಿಲ್ಲ,
68
ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವದಿಲ್ಲ.
69
ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು ಎಂದು ಹೇಳಿದನು.
70
ಆಗ ಎಲ್ಲರು - ಹಾಗಾದರೆ ನೀನು ದೇವರ ಕುಮಾರನೋ ಎಂದು ಕೇಳಲು ಆತನು ಅವರಿಗೆ - ನನ್ನನ್ನು ಅವನೇ ಎಂದು ನೀವೇ ಹೇಳುತ್ತೀರಿ ಎಂದು ಹೇಳಿದನು.
71
ಅದಕ್ಕೆ ಅವರು - ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ ಅಂದರು.
← Chapter 21
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 23 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24