bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Luke 23
Luke 23
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 24 →
1
ಅಲ್ಲಿ ಕೂಡಿದ್ದವರೆಲ್ಲರು ಎದ್ದು ಆತನನ್ನು ಪಿಲಾತನ ಬಳಿಗೆ ತೆಗೆದುಕೊಂಡು ಹೋಗಿ -
2
ಇವನು ತಾನೇ ಕ್ರಿಸ್ತನೆಂಬ ಒಬ್ಬ ಅರಸನಾಗಿದ್ದೇನೆಂದು ಹೇಳುತ್ತಾ ಕೈಸರನಿಗೆ ತೆರಿಗೆಕೊಡಬಾರದೆಂದು ಬೋಧಿಸುತ್ತಾ ನಮ್ಮ ದೇಶದವರ ಮನಸ್ಸು ಕೆಡಿಸುವದನ್ನು ನಾವು ಕಂಡೆವು ಎಂಬದಾಗಿ ಆತನ ಮೇಲೆ ದೂರು ಹೇಳುವದಕ್ಕೆ ತೊಡಗಿದರು.
3
ಪಿಲಾತನು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಹೇಳಲು
4
ಆತನು - ನೀನೇ ಹೇಳಿದ್ದೀ ಎಂದು ಉತ್ತರಕೊಟ್ಟನು. ಪಿಲಾತನು ಮಹಾಯಾಜಕರಿಗೂ ಜನರ ಗುಂಪಿಗೂ - ಈ ಮನುಷ್ಯನಲ್ಲಿ ನನಗೆ ಯಾವ ಅಪರಾಧವೂ ಕಾಣಿಸುವದಿಲ್ಲವೆಂದು ಹೇಳಿದನು.
5
ಅದಕ್ಕೆ ಅವರು - ಗಲಿಲಾಯದಲ್ಲಿ ಪ್ರಾರಂಭಮಾಡಿ ಇಲ್ಲಿಯವರೆಗೂ ಯೂದಾಯ ಸೀಮೆಯಲ್ಲೆಲ್ಲಾ ಇವನು ಬೋಧನೆಮಾಡುತ್ತಾ ಜನರ ಮನಸ್ಸನ್ನು ಕದಲಿಸುತ್ತಾನೆ ಎಂದು ಇನ್ನೂ ಒತ್ತಿ ಹೇಳಿದರು.
6
ಇದನ್ನು ಪಿಲಾತನು ಕೇಳಿ - ಈ ಮನುಷ್ಯನು ಗಲಿಲಾಯದವನೋ ಎಂದು ವಿಚಾರಿಸಿ
7
ಇವನು ಹೆರೋದನ ಅಧಿಕಾರಕ್ಕೆ ಒಳಪಟ್ಟವನು ಎಂದು ತಿಳುಕೊಂಡು ಆತನನ್ನು ಹೆರೋದನ ಬಳಿಗೆ ಕಳುಹಿಸಿದನು. ಹೆರೋದನು ಆ ದಿವಸಗಳಲ್ಲಿ ಯೆರೂಸಲೇವಿುನಲ್ಲೇ ಇದ್ದನು.
8
ಹೆರೋದನು ಯೇಸುವನ್ನು ನೋಡಿದಾಗ ಬಹಳ ಸಂತೋಷಪಟ್ಟನು; ಯಾಕಂದರೆ ಆತನ ವಿಷಯವಾಗಿ ಅನೇಕ ಸಂಗತಿಗಳನ್ನು ಕೇಳಿದ್ದರಿಂದ ಆತನನ್ನು ಕಾಣಬೇಕೆಂದು ಬಹು ಕಾಲದಿಂದ ಅಪೇಕ್ಷಿಸಿದ್ದನು. ಆತನಿಂದ ಯಾವದಾದರೂ ಒಂದು ಸೂಚಕಕಾರ್ಯವಾಗುವದನ್ನು ನೋಡಬೇಕೆಂದು ನಿರೀಕ್ಷಿಸಿದನು.
9
ಆದರೆ ಅವನು ಅನೇಕ ಮಾತುಗಳಿಂದ ಆತನನ್ನು ಪ್ರಶ್ನೆ ಮಾಡಿದಾಗ್ಯೂ ಆತನು ಅವನಿಗೆ ಏನೂ ಉತ್ತರ ಕೊಡಲಿಲ್ಲ.
10
ಮಹಾಯಾಜಕರೂ ಶಾಸ್ತ್ರಿಗಳೂ ನಿಂತುಕೊಂಡು ಆತನ ಮೇಲೆ ಬಹು ಬಲವಾಗಿ ದೂರು ಹೇಳುತ್ತಿದ್ದರು.
11
ಕಡೆಗೆ ಹೆರೋದನು ತನ್ನ ಸಿಪಾಯಿಗಳನ್ನು ಕೂಡಿಕೊಂಡು ಆತನನ್ನು ತಿರಸ್ಕರಿಸಿ ಹಾಸ್ಯಮಾಡಿ ಶೋಭಾಯಮಾನವಾದ ಉಡುಪನ್ನು ಹಾಕಿಸಿ ಪಿಲಾತನ ಬಳಿಗೆ ತಿರಿಗಿ ಕಳುಹಿಸಿಕೊಟ್ಟನು.
12
ಅದೇ ದಿನದಲ್ಲಿ ಹೆರೋದನೂ ಪಿಲಾತನೂ ಒಬ್ಬರಿಗೊಬ್ಬರು ಸ್ನೇಹಿತರಾದರು; ಅದಕ್ಕಿಂತ ಮೊದಲು ವೈರಿಗಳಾಗಿದ್ದರು.
13
ತರುವಾಯ ಪಿಲಾತನು ಮಹಾಯಾಜಕರನ್ನೂ ಅಧಿಕಾರಿಗಳನ್ನೂ ಪ್ರಜೆಗಳನ್ನೂ ಒಟ್ಟಾಗಿ ಕರಸಿ
14
ಅವರಿಗೆ - ಈ ಮನುಷ್ಯನು ಪ್ರಜೆಗಳನ್ನು ತಿರುಗಿಬೀಳುವಂತೆ ಮಾಡುವವನು ಎಂದು ಇವನನ್ನು ನನ್ನ ಬಳಿಗೆ ತಂದಿರಲ್ಲಾ; ನೀವು ಇವನ ಮೇಲೆ ತಂದ ದೂರುಗಳ ವಿಷಯವಾಗಿ ನಾನು ನಿಮ್ಮ ಮುಂದೆಯೇ ವಿಚಾರಣೆಮಾಡಿದರೂ ಇವನಲ್ಲಿ ಒಂದು ತಪ್ಪಾದರೂ ನನಗೆ ಕಾಣಲಿಲ್ಲ.
15
ಹೆರೋದನಿಗಾದರೂ ಕಾಣಲಿಲ್ಲ; ಅವನು ಇವನನ್ನು ಹಿಂತಿರುಗಿ ನಮ್ಮ ಬಳಿಗೆ ಕಳುಹಿಸಿದನಲ್ಲಾ. ಇವನು ಮರಣದಂಡನೆಗೆ ಯೋಗ್ಯವಾದದ್ದೇನೂ ಮಾಡಿದವನಲ್ಲವೆಂದಾಯಿತು.
16
ಆದದರಿಂದ ನಾನು ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಹೇಳಿದನು.
18
ಆದರೆ ಅವರು - ಅವನನ್ನು ಕೊಲ್ಲಿಸು, ನಮಗೆ ಬರಬ್ಬನನ್ನು ಬಿಟ್ಟುಕೊಡು ಎಂದು ಒಟ್ಟಾಗಿ ಕೂಗಿದರು.
19
ಈ ಬರಬ್ಬನನ್ನು ಆ ಪಟ್ಟಣದಲ್ಲಿ ನಡೆದ ಒಂದಾನೊಂದು ದಂಗೆಯ ನಿವಿುತ್ತವಾಗಿಯೂ ಕೊಲೆಯ ನಿವಿುತ್ತವಾಗಿಯೂ ಸೆರೆಮನೆಯಲ್ಲಿ ಹಾಕಿದ್ದರು.
20
ಪಿಲಾತನು ಯೇಸುವನ್ನು ಬಿಡಿಸಬೇಕೆಂದು ಮನಸ್ಸುಳ್ಳವನಾಗಿದ್ದು ತಿರಿಗಿ ಅವರ ಸಂಗಡ ಮಾತಾಡಿದನು.
21
ಆದರೆ ಅವರು - ಅವನನ್ನು ಶಿಲುಬೆಗೆ ಹಾಕಿಸು, ಶಿಲುಬೆಗೆ ಹಾಕಿಸು ಎಂದು ಕೂಗುತ್ತಿದ್ದರು.
22
ಅವನು ಮೂರನೆಯ ಸಾರಿ - ಯಾಕೆ? ಕೆಟ್ಟದ್ದೇನು ಮಾಡಿದನು? ನಾನು ಇವನಲ್ಲಿ ಮರಣದಂಡನೆಗೆ ತಕ್ಕ ಅಪರಾಧವೇನೂ ಕಾಣಲಿಲ್ಲ; ಆದದರಿಂದ ಇವನನ್ನು ಹೊಡಿಸಿ ಬಿಟ್ಟುಬಿಡುತ್ತೇನೆ ಎಂದು ಅವರಿಗೆ ಹೇಳಿದನು.
23
ಆದರೆ ಅವರು ದೊಡ್ಡ ಕೂಗಾಟ ಮಾಡುತ್ತಾ - ಅವನನ್ನು ಶಿಲುಬೆಗೆ ಹಾಕಿಸಬೇಕೆಂದು ಕೇಳಿಕೊಂಡು ಬಲವಂತ ಮಾಡಿದರು; ಅವರ ಕೂಗಾಟವು ಗೆದ್ದಿತು.
24
ಪಿಲಾತನು - ನೀವು ಕೇಳಿಕೊಂಡಂತೆ ಆಗಲಿ ಎಂದು ನಿರ್ಣಯಿಸಿ
25
ದಂಗೆ ಕೊಲೆಗಳ ನಿವಿುತ್ತವಾಗಿ ಸೆರೆಮನೆಯಲ್ಲಿ ಬಿದ್ದ ಆ ಮನುಷ್ಯನನ್ನು ಅವರು ಕೇಳಿಕೊಳ್ಳುತ್ತಿದ್ದ ಪ್ರಕಾರ ಬಿಟ್ಟುಕೊಟ್ಟು ಯೇಸುವನ್ನು ಅವರ ಚಿತ್ತಾನುಸಾರ ಒಪ್ಪಿಸಿದನು.
26
ಅವರು ಆತನನ್ನು ತೆಗೆದುಕೊಂಡು ಹೋಗುತ್ತಿರುವಾಗ ಹೊಲದಿಂದ ಬರುತ್ತಿದ್ದ ಕುರೇನೆಪಟ್ಟಣದ ಸೀಮೋನನೆಂಬವನನ್ನು ಹಿಡಿದು ಶಿಲುಬೆಯನ್ನು ಅವನ ಮೇಲೆ ಇಟ್ಟು ಯೇಸುವಿನ ಹಿಂದೆ ಹೊತ್ತುಕೊಂಡು ಬರುವ ಹಾಗೆ ಮಾಡಿದರು.
27
ಜನರೂ ಸ್ತ್ರೀಯರೂ ದೊಡ್ಡ ಗುಂಪಾಗಿ ಆತನ ಹಿಂದೆ ಬಂದರು. ಆ ಸ್ತ್ರೀಯರು ಎದೆಬಡುಕೊಳ್ಳುತ್ತಾ ಆತನ ವಿಷಯದಲ್ಲಿ ಗೋಳಾಡುತ್ತಾ ಇದ್ದರು.
28
ಯೇಸು ಅವರ ಕಡೆಗೆ ತಿರುಗಿಕೊಂಡು - ಯೆರೂಸಲೇವಿುನ ಸ್ತ್ರೀಯರೇ, ನನಗೋಸ್ಕರ ಅಳಬೇಡಿರಿ, ನಿಮಗೋಸ್ಕರವೂ ನಿಮ್ಮ ಮಕ್ಕಳಿಗೋಸ್ಕರವೂ ಅಳಿರಿ.
29
ಯಾಕಂದರೆ ಬಂಜೆಯರೂ ಬಸುರಾಗದವರೂ ಮೊಲೆಕುಡಿಸದವರೂ ಧನ್ಯರು ಎಂದು ಜನರು ಹೇಳುವ ದಿವಸಗಳು ಬರುತ್ತವೆ.
30
ಆ ಕಾಲದಲ್ಲಿ ಜನರು - ಬೆಟ್ಟಗಳೇ, ನಮ್ಮ ಮೇಲೆ ಬೀಳಿರಿ; ಗುಡ್ಡಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ ಅನ್ನುವರು.
31
ಮರ ಹಸಿಯಾಗಿರುವಾಗ ಇಷ್ಟೆಲ್ಲಾ ಮಾಡಿದರೆ ಮರ ಒಣಗಿರುವಾಗ ಏನಾಗಬಹುದು? ಅಂದನು.
32
ಆತನ ಸಂಗಡ ಕೊಲ್ಲುವದಕ್ಕಾಗಿ ದುಷ್ಕರ್ಮಿಗಳಾಗಿದ್ದ ಬೇರೆ ಇಬ್ಬರನ್ನೂ ತೆಗೆದುಕೊಂಡು ಹೋದರು.
33
ಅವರು ಕಪಾಲವೆಂಬ ಸ್ಥಳಕ್ಕೆ ಬಂದಾಗ ಅಲ್ಲಿ ಆತನನ್ನೂ ಆ ದುಷ್ಕರ್ಮಿಗಳನ್ನೂ ಶಿಲುಬೆಗೆ ಹಾಕಿದರು, ಒಬ್ಬನನ್ನು ಆತನ ಬಲಗಡೆಯಲ್ಲಿ ಒಬ್ಬನನ್ನು ಆತನ ಎಡಗಡೆಯಲ್ಲಿ ಹಾಕಿದರು.
34
ಆಗ ಯೇಸು - ತಂದೆಯೇ, ಅವರಿಗೆ ಕ್ಷವಿುಸು; ತಾವು ಏನು ಮಾಡುತ್ತೇವೆಂಬದನ್ನು ಅರಿಯರು ಅಂದನು. ಆಮೇಲೆ ಆತನ ಬಟ್ಟೆಗಳನ್ನು ಪಾಲುಮಾಡಿ ಚೀಟು ಹಾಕಿದರು.
35
ಜನರು ನೋಡುತ್ತಾ ನಿಂತರು. ಇದಲ್ಲದೆ ಅಧಿಕಾರಿಗಳು ಹಾಸ್ಯಮಾಡಿ - ಅವನು ಮತ್ತೊಬ್ಬರನ್ನು ರಕ್ಷಿಸಿದನು; ಅವನು ದೇವರಾರಿಸಿಕೊಂಡ ಕ್ರಿಸ್ತನು ಆಗಿದ್ದರೆ ತನ್ನನ್ನು ತಾನೇ ರಕ್ಷಿಸಿಕೊಳ್ಳಲಿ ಅಂದರು.
36
ಸಿಪಾಯಿಗಳೂ ಆತನನ್ನು ಹಾಸ್ಯಮಾಡಿದರು; ಅವರು ಆತನ ಹತ್ತಿರ ಬಂದು ಹುಳಿ ಮದ್ಯವನ್ನು ತೋರಿಸಿ -
37
ನೀನು ಯೆಹೂದ್ಯರ ಅರಸನಾಗಿದ್ದರೆ ನಿನ್ನನ್ನು ರಕ್ಷಿಸಿಕೋ ಅಂದರು.
38
ಇದಲ್ಲದೆ ಆತನ ಮೇಲ್ಗಡೆಯಲ್ಲಿ - ಇವನು ಯೆಹೂದ್ಯರ ಅರಸನು ಎಂಬದಾಗಿ ಒಂದು ವಿಳಾಸವಿತ್ತು.
39
ತೂಗಹಾಕಿದ್ದ ಆ ದುಷ್ಕರ್ಮಿಗಳಲ್ಲಿ ಒಬ್ಬನು ಆತನನ್ನು ದೂಷಿಸಿ - ನೀನು ಬರಬೇಕಾದ ಕ್ರಿಸ್ತನಲ್ಲವೇ, ನಿನ್ನನ್ನು ರಕ್ಷಿಸಿಕೋ, ನಮ್ಮನ್ನೂ ರಕ್ಷಿಸು ಎಂದು ಹೇಳಿದ್ದಕ್ಕೆ
40
ಎರಡನೆಯವನು ಅವನನ್ನು ಗದರಿಸಿ - ನೀನು ಇದೇ ದಂಡನೆಯಲ್ಲಿರುವಾಗಲೂ ದೇವರಿಗೆ ಹೆದರುವದಿಲ್ಲವೋ?
41
ನಾವಂತೂ ನ್ಯಾಯವಾಗಿ ದಂಡನೆಯಲ್ಲಿದ್ದೇವೆ, ನಾವು ಮಾಡಿದ್ದಕ್ಕೆ ತಕ್ಕ ಪ್ರತಿಫಲವನ್ನು ಹೊಂದುತ್ತಾ ಇದ್ದೇವೆ; ಈತನಾದರೋ ಅಲ್ಲದ್ದೇನೂ ಮಾಡಲಿಲ್ಲ ಎಂದು ಹೇಳಿ -
42
ಯೇಸುವೇ, ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಸಿಕೋ ಅಂದನು.
43
ಅದಕ್ಕೆ ಯೇಸು - ಈಹೊತ್ತೇ ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ ಎಂದು ಉತ್ತರಕೊಟ್ಟನು.
44
ಇಷ್ಟರಲ್ಲಿ ಹೆಚ್ಚು ಕಡಿಮೆ ಮಧ್ಯಾಹ್ನವಾಯಿತು.
45
ಆಗಲಿಂದ ಸೂರ್ಯನು ಕಾಂತಿಗುಂದಿ ಮೂರು ಘಂಟೆಯ ತನಕ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು; ಇದಲ್ಲದೆ ದೇವಾಲಯದ ತೆರೆಯು ನಡುವೆ ಹರಿದುಹೋಯಿತು.
46
ಆಮೇಲೆ ಯೇಸು - ತಂದೆಯೇ, ನನ್ನ ಆತ್ಮವನ್ನು ನಿನ್ನ ಕೈಗೆ ಒಪ್ಪಿಸಿಕೊಡುತ್ತೇನೆ ಎಂದು ಮಹಾಧ್ವನಿಯಿಂದ ಕೂಗಿದನು; ಇದನ್ನು ಹೇಳಿದ ಮೇಲೆ ಪ್ರಾಣಬಿಟ್ಟನು.
47
ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ - ಈ ಮನುಷ್ಯನು ಸತ್ಪುರುಷನೇ ನಿಜ ಎಂದು ದೇವರನ್ನು ಕೊಂಡಾಡಿದನು.
48
ಈ ನೋಟಕ್ಕಾಗಿ ಕೂಡಿಬಂದಿದ್ದ ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ಎದೆಬಡುಕೊಳ್ಳುತ್ತಾ ಹಿಂತಿರುಗಿ ಹೋದರು.
49
ಇದಲ್ಲದೆ ಆತನ ಪರಿಚಿತಿಯವರೆಲ್ಲರೂ ಗಲಿಲಾಯದಿಂದ ಆತನ ಹಿಂದೆ ಬಂದಿದ್ದ ಸ್ತ್ರೀಯರೂ ದೂರದಲ್ಲಿ ನಿಂತು ಈ ಸಂಗತಿಗಳನ್ನು ನೋಡುತ್ತಿದ್ದರು.
50
ಅರಿಮಥಾಯವೆಂಬ ಯೆಹೂದ್ಯರದೊಂದು ಪಟ್ಟಣದ ಒಬ್ಬ ಮನುಷ್ಯನಿದ್ದನು; ಅವನ ಹೆಸರು ಯೋಸೇಫನು. ಅವನು ಹಿರೀಸಭೆಯವನು, ಉತ್ತಮನು, ಸತ್ಪುರುಷನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು; ಅವನು ಹಿರೀಸಭೆಯವರ ಆಲೋಚನೆಗೂ ಕೃತ್ಯಕ್ಕೂ ಸಮ್ಮತಿ ಪಟ್ಟಿರಲಿಲ್ಲ.
52
ಅವನು ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡು
53
ಅದನ್ನು ಇಳಿಸಿ ನಾರುಮಡಿಯಲ್ಲಿ ಸುತ್ತಿ ಬಂಡೆಯಲ್ಲಿ ತೋಡಿದ್ದ ಸಮಾಧಿಯಲ್ಲಿ ಇಟ್ಟನು. ಅದರಲ್ಲಿ ಅದುವರೆಗೆ ಯಾರನ್ನೂ ಮಲಗಿಸಿರಲಿಲ್ಲ.
54
ಆ ದಿನವು ಸೌರಣೆಯ ದಿನವಾಗಿತ್ತು; ಮತ್ತು ಸಬ್ಬತ್ದಿನ ಪ್ರಾರಂಭವಾಗುವದಕ್ಕೆ ಸ್ವಲ್ಪ ಹೊತ್ತು ಮಾತ್ರ ಇತ್ತು.
55
ಹೀಗಿರುವಲ್ಲಿ ಗಲಿಲಾಯದಿಂದ ಆತನ ಸಂಗಡ ಬಂದಿದ್ದ ಸ್ತ್ರೀಯರು ಜೊತೆಯಲ್ಲಿ ಹಿಂದೆಯೇ ಹೋಗಿ ಆ ಸಮಾಧಿಯನ್ನೂ ಆತನ ದೇಹವನ್ನಿಟ್ಟ ರೀತಿಯನ್ನೂ ನೋಡಿ
56
ಹಿಂತಿರುಗಿ ಬಂದು ಪರಿಮಳದ್ರವ್ಯಗಳನ್ನೂ ಸುಗಂಧತೈಲವನ್ನೂ ಸಿದ್ಧಮಾಡಿಕೊಂಡರು.
← Chapter 22
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 24 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24