bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Luke 24
Luke 24
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
1
ಆ ಸ್ತ್ರೀಯರು ಸಬ್ಬತ್ದಿನದಲ್ಲಿ ಧರ್ಮನಿಯಮದ ಪ್ರಕಾರ ವಿಶ್ರವಿುಸಿಕೊಂಡು ವಾರದ ಮೊದಲನೆಯ ದಿವಸದಲ್ಲಿ ಇನ್ನೂ ಮೊಬ್ಬಿರುವಾಗ ತಾವು ಸಿದ್ಧಮಾಡಿದ್ದ ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಬಂದರು.
2
ಸಮಾಧಿಗೆ ಮುಚ್ಚಿದ್ದ ಕಲ್ಲು ಅಲ್ಲಿಂದ ಉರುಳಿಸಲ್ಪಟ್ಟಿರುವದನ್ನು ಕಂಡು
3
ಒಳಕ್ಕೆ ಹೋಗಿ ನೋಡುವಲ್ಲಿ ಯೇಸು ಸ್ವಾವಿುಯ ದೇಹವು ಕಾಣಲಿಲ್ಲ.
4
ಈ ವಿಷಯದಲ್ಲಿ ಅವರಿಗೆ ಗಲಿಬಿಲಿ ಉಂಟಾದಾಗ ಹೊಳೆಯುವ ಉಡುಪನ್ನು ಧರಿಸಿದ್ದ ಇಬ್ಬರು ಪುರುಷರು ಅಕಸ್ಮಾತ್ತಾಗಿ ಅವರ ಬಳಿಯಲ್ಲಿ ನಿಂತುಕೊಂಡರು.
5
ಆ ಸ್ತ್ರೀಯರು ಭಯ ಹಿಡಿದವರಾಗಿ ತಮ್ಮ ಮುಖಗಳನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿರುವಾಗ ಆ ಪುರುಷರು ಅವರಿಗೆ - ಸತ್ತವರೊಳಗೆ ಬದುಕಿರುವವನನ್ನು ಹುಡುಕುವದೇನು? ಆತನು ಇಲ್ಲಿ ಇಲ್ಲ, ಎದ್ದಿದ್ದಾನೆ.
6
ಆತನು ಇನ್ನೂ ಗಲಿಲಾಯದಲ್ಲಿದ್ದಾಗ - ಮನುಷ್ಯಕುಮಾರನು ಪಾಪಿಗಳಾದ ಮನುಷ್ಯರ ಕೈಗೆ ಒಪ್ಪಿಸಲ್ಪಟ್ಟು ಶಿಲುಬೆಗೆ ಹಾಕಲ್ಪಟ್ಟು ಮೂರನೆಯ ದಿನದಲ್ಲಿ ಎದ್ದು ಬರುವದು ಅಗತ್ಯವೆಂದು ನಿಮಗೆ ಹೇಳಿದ್ದನ್ನು ನೆನಪಿಗೆ ತಂದುಕೊಳ್ಳಿರಿ ಎಂದು ಹೇಳಿದರು.
8
ಸ್ತ್ರೀಯರು ಆತನ ಮಾತುಗಳನ್ನು ನೆನಪಿಗೆ ತಂದುಕೊಂಡು
9
ಸಮಾಧಿಯ ಬಳಿಯಿಂದ ಹಿಂತಿರುಗಿ ಹೋಗಿ ಆ ಸಂಗತಿಗಳನ್ನೆಲ್ಲಾ ಹನ್ನೊಂದು ಮಂದಿ ಶಿಷ್ಯರಿಗೂ ಉಳಿದವರೆಲ್ಲರಿಗೂ ತಿಳಿಸಿದರು.
10
ಆ ಸ್ತ್ರೀಯರು ಯಾರಂದರೆ ಮಗ್ದಲದ ಮರಿಯಳು, ಯೋಹಾನಳು, ಯಾಕೋಬನ ತಾಯಿಯಾದ ಮರಿಯಳು ಇವರೇ. ಇವರ ಜೊತೆಯಲ್ಲಿದ್ದ ಬೇರೆ ಸ್ತ್ರೀಯರು ಸಹ ಅಪೊಸ್ತಲರಿಗೆ ಆ ಸಂಗತಿಗಳನ್ನು ಹೇಳಿದರು.
11
ಅವರು ನಂಬಲಿಲ್ಲ; ಆ ಮಾತುಗಳು ಅವರಿಗೆ ಬರೀ ಹರಟೆಯಾಗಿ ತೋರಿದವು.
12
[ಆದರೆ ಪೇತ್ರನು ಎದ್ದು ಸಮಾಧಿಗೆ ಓಡಿಹೋಗಿ ಬೊಗ್ಗಿನೋಡಿ ನಾರುಬಟ್ಟೆಗಳನ್ನು ಮಾತ್ರ ಕಂಡು ನಡೆದ ಸಂಗತಿಗಳಿಗೆ ತನ್ನಲ್ಲಿ ಆಶ್ಚರ್ಯಪಡುತ್ತಾ ಹೊರಟುಹೋದನು].
13
ಅದೇ ದಿನದಲ್ಲಿ ಶಿಷ್ಯರಲ್ಲಿ ಇಬ್ಬರು ಯೆರೂಸಲೇವಿುಗೆ ಆರುವರೆ ಮೈಲು ದೂರದಲ್ಲಿದ್ದ ಎಮ್ಮಾಹು ಎಂಬ ಹಳ್ಳಿಗೆ ಹೋಗುತ್ತಾ
14
ಸಂಭವಿಸಿದ ಈ ಎಲ್ಲಾ ಕಾರ್ಯಗಳ ವಿಷಯವಾಗಿ ಸಂಭಾಷಣೆ ಮಾಡುತ್ತಿದ್ದರು.
15
ಅವರು ಸಂಭಾಷಣೆಯಲ್ಲಿ ಚರ್ಚಿಸುತ್ತಿರುವಾಗ ಯೇಸು ತಾನೇ ಹತ್ತಿರಕ್ಕೆ ಬಂದು ಅವರ ಜೊತೆಯಲ್ಲಿ ಹೋದನು.
16
ಆದರೆ ಅವರು ಆತನ ಗುರುತನ್ನು ಹಿಡಿಯಲಿಲ್ಲ; ಅವರ ಕಣ್ಣು ಕಟ್ಟಿದ ಹಾಗಾಯಿತು.
17
ಆತನು ಅವರನ್ನು - ನೀವು ಮಾರ್ಗದಲ್ಲಿ ಹೋಗುತ್ತಾ ಚರ್ಚಿಸಿ ಮಾತಾಡಿಕೊಳ್ಳುವ ಈ ಸಂಗತಿಗಳೇನು ಎಂದು ಕೇಳಲು ಅವರು ದುಃಖದ ಮುಖವುಳ್ಳವರಾಗಿ ನಿಂತರು.
18
ಅವರಲ್ಲಿ ಕ್ಲೆಯೊಫನೆಂಬವನು ಆತನನ್ನು ಯೆರೂಸಲೇವಿುಗೆ ಬಂದ ಪರಸ್ಥಳದವರೆಲ್ಲರಿಗೂ ಈ ದಿವಸಗಳಲ್ಲಿ ಅದರೊಳಗೆ ನಡೆದಿರುವ ಸಂಗತಿಗಳು ಗೊತ್ತಿರಲಾಗಿ ನಿನಗೆ ಮಾತ್ರ ಗೊತ್ತಿಲ್ಲವೋ ಎಂದು ಕೇಳಲು
19
ಆತನು ಅವರನ್ನು - ಯಾವ ಸಂಗತಿಗಳು ಎಂದು ಕೇಳಿದನು. ಅದಕ್ಕೆ ಅವರು - ನಜರೇತಿನವನಾದ ಯೇಸುವಿನ ಸಂಗತಿಗಳೇ; ಆತನು ದೇವರ ಮುಂದೆ ಮತ್ತು ಮನುಷ್ಯರ ಮುಂದೆ ಕೃತ್ಯದಲ್ಲಿಯೂ ಮಾತಿನಲ್ಲಿಯೂ ಸಮರ್ಥನಾದ ಪ್ರವಾದಿಯಾಗಿದ್ದನು.
20
ಆತನನ್ನು ಮಹಾಯಾಜಕರೂ ನಮ್ಮ ಅಧಿಕಾರಿಗಳೂ ಮರಣದಂಡನೆಗೆ ಒಪ್ಪಿಸಿಕೊಟ್ಟು ಶಿಲುಬೆಗೆ ಹಾಕಿಸಿದರು.
21
ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಈ ಹೊತ್ತು ಮೂರನೆಯ ದಿನ;
22
ಆದರೂ ನಮ್ಮಲ್ಲಿ ಕೆಲವು ಮಂದಿ ಸ್ತ್ರೀಯರು ಬೆಳಗಾಗುವಾಗ ಸಮಾಧಿಯ ಬಳಿಯಲ್ಲಿ ಇದ್ದು
23
ಆತನ ದೇಹವನ್ನು ಕಾಣದೆ ಅಲ್ಲಿಂದ ಬಂದು ತಮಗೆ ದೇವದೂತರ ದರ್ಶನವಾಯಿತೆಂತಲೂ ಆತನು ಬದುಕುತ್ತಾನೆಂದು ಅವರು ಹೇಳಿದರೆಂತಲೂ ತಿಳಿಸಿ ನಮಗೆ ಅತ್ಯಾಶ್ಚರ್ಯವನ್ನುಂಟುಮಾಡಿದರು.
24
ನಮ್ಮ ಸಂಗಡ ಇದ್ದವರಲ್ಲಿ ಕೆಲವರು ಸಮಾಧಿಗೆ ಹೋಗಿ ಆ ಸ್ತ್ರೀಯರು ಹೇಳಿದ ಪ್ರಕಾರವೇ ಕಂಡರು; ಆತನನ್ನು ಮಾತ್ರ ಕಾಣಲಿಲ್ಲ ಎಂದು ಹೇಳಿದರು.
25
ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,
26
ಕ್ರಿಸ್ತನು ಇಂಥ ಶ್ರಮಗಳನ್ನು ಅನುಭವಿಸಿ ತನ್ನ ಮಹಾಪದವಿಗೆ ಸೇರುವದು ಅಗತ್ಯವಾಗಿತ್ತಲ್ಲವೇ ಎಂದು ಹೇಳಿ
27
ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.
28
ಅವರು ಹೋಗುತ್ತಿರುವ ಹಳ್ಳಿಯ ಸಮೀಪಕ್ಕೆ ಬಂದಾಗ ಆತನು ಇನ್ನೂ ಮುಂದಕ್ಕೆ ಹೋಗುವವನಂತೆ ಕಾಣಿಸಿದನು.
29
ಆದರೆ ಅವರು - ನಮ್ಮ ಸಂಗಡ ಇರು, ಸಂಜೆಯಾಯಿತು, ಹೊತ್ತು ಇಳಿಯುತ್ತಾ ಬಂತು ಎಂದು ಆತನಿಗೆ ಹೇಳಿ ಬಲವಂತಮಾಡಲು ಆತನು ಅವರ ಕೂಡ ಇರುವದಕ್ಕೆ ಊರೊಳಕ್ಕೆ ಹೋದನು.
30
ಆತನು ಅವರ ಸಂಗಡ ಊಟಕ್ಕೆ ಕೂತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಅವರಿಗೆ ಕೊಡುತ್ತಿರಲಾಗಿ ಅವರ ಕಣ್ಣುಗಳು ತೆರೆದವು.
31
ಅವರು ಆತನ ಗುರುತನ್ನು ಹಿಡಿದರು; ಆತನು ಅವರ ಕಣ್ಣಿಗೆ ಮಾಯವಾದನು.
32
ಆಗ ಅವರು ಒಬ್ಬರಿಗೊಬ್ಬರು - ಆತನು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗಲೂ ಗ್ರಂಥಗಳ ಅರ್ಥವನ್ನು ನಮಗೆ ಬಿಚ್ಚಿ ಹೇಳಿದಾಗಲೂ ನಮ್ಮ ಹೃದಯವು ನಮ್ಮಲ್ಲಿ ಕುದಿಯಿತಲ್ಲವೇ ಎಂದು ಹೇಳಿಕೊಂಡು
33
ಅದೇ ಗಳಿಗೆಯಲ್ಲಿ ಎದ್ದು ಯೆರೂಸಲೇವಿುಗೆ ಹಿಂತಿರುಗಿಹೋದರು. ಅಲ್ಲಿ ಹನ್ನೊಂದು ಮಂದಿ ಶಿಷ್ಯರೂ ಅವರ ಸಂಗಡ ಇದ್ದವರೂ ಒಟ್ಟಾಗಿ ಕೂಡಿಕೊಂಡಿದ್ದು -
34
ಸ್ವಾವಿು ಎದ್ದದ್ದು ನಿಜ, ಆತನು ಸೀಮೋನನಿಗೆ ಕಾಣಿಸಿಕೊಂಡನು ಎಂದು ಹೇಳುತ್ತಿದ್ದರು.
35
ಇದನ್ನು ಕಂಡು ಅವರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವದರಲ್ಲಿ ತಾವು ಆತನ ಗುರುತು ಹಿಡಿದೆವೆಂಬದನ್ನೂ ವಿವರಿಸಿದರು.
36
ಅವರು ಈ ಸಂಗತಿಯನ್ನು ಕುರಿತು ಮಾತಾಡುತ್ತಿರುವಾಗ ಆತನೇ ಅವರ ನಡುವೆ ನಿಂತು [- ನಿಮಗೆ ಮನಶ್ಶಾಂತಿಯಾಗಲಿ ಎಂದು ಅವರಿಗೆ ಹೇಳಿದನು].
37
ಅವರು ದಿಗಿಲುಬಿದ್ದು ಭಯಹಿಡಿದವರಾಗಿ ತಾವು ಕಂಡದ್ದನ್ನು ಭೂತವೆಂದು ಭಾವಿಸಿದರು.
38
ಆತನು ಅವರಿಗೆ - ಯಾಕೆ ಕಳವಳಗೊಳ್ಳುತ್ತೀರಿ? ನಿಮ್ಮ ಹೃದಯದಲ್ಲಿ ಅನುಮಾನಗಳು ಹುಟ್ಟುವದೇಕೆ? ನನ್ನ ಕೈಗಳನ್ನೂ ನನ್ನ ಕಾಲುಗಳನ್ನೂ ನೋಡಿರಿ, ನಾನೇ ಅಲ್ಲವೇ.
39
ನನ್ನನ್ನು ಮುಟ್ಟಿನೋಡಿರಿ, ನಿಮಗೆ ಕಾಣುವ ಪ್ರಕಾರ ನನಗೆ ಮಾಂಸವೂ ಎಲುಬುಗಳೂ ಉಂಟು; ಅವು ಭೂತಕ್ಕಿಲ್ಲ ಎಂದು ಹೇಳಿದನು.
40
[ಇದನ್ನು ಹೇಳಿದ ಮೇಲೆ ಆತನು ತನ್ನ ಕೈಗಳನ್ನೂ ಕಾಲುಗಳನ್ನೂ ಅವರಿಗೆ ತೋರಿಸಿದನು].
41
ಆದರೆ ಅವರು ಸಂತೋಷದ ದೆಸೆಯಿಂದ ಇನ್ನೂ ನಂಬದೆ ಆಶ್ಚರ್ಯಪಡುತ್ತಿರಲಾಗಿ ಆತನು - ತಿನ್ನತಕ್ಕ ಪದಾರ್ಥವೇನಾದರೂ ಇಲ್ಲಿ ನಿಮಗುಂಟೋ ಎಂದು ಅವರನ್ನು ಕೇಳಲು
42
ಅವರು ಸುಟ್ಟ ಮೀನಿನ ಒಂದು ತುಂಡನ್ನು ಆತನಿಗೆ ಕೊಟ್ಟರು.
43
ಆತನು ತಕ್ಕೊಂಡು ಅವರ ಮುಂದೆ ತಿಂದನು.
44
ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.
45
ಆಮೇಲೆ ಅವರು ಶಾಸ್ತ್ರವಚನಗಳನ್ನು ತಿಳುಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದು
46
ಅವರಿಗೆ - ಕ್ರಿಸ್ತನು ಶ್ರಮೆಪಟ್ಟು ಸತ್ತು ಮೂರನೆಯ ದಿನದಲ್ಲಿ ಜೀವಿತನಾಗಿ ಎದ್ದುಬರುವನೆಂತಲೂ
47
ಪಾಪಪರಿಹಾರಕ್ಕೋಸ್ಕರ ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಮಾತು ಯೆರೂಸಲೇಮು ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡುವದೆಂತಲೂ ಬರೆದದೆ.
48
ಇವುಗಳ ವಿಷಯದಲ್ಲಿ ನೀವೇ ಸಾಕ್ಷಿ ಹೇಳುವವರಾಗಿದ್ದೀರಿ.
49
ಇಗೋ ನನ್ನ ತಂದೆಯು ವಾಗ್ದಾನಮಾಡಿದ್ದನ್ನು ನಿಮಗೆ ಕಳುಹಿಸಿಕೊಡುತ್ತೇನೆ. ದೇವರು ಮೇಲಣ ಲೋಕದಿಂದ ನಿಮಗೆ ಶಕ್ತಿಯನ್ನು ಹೊದಿಸುವ ತನಕ ಈ ಪಟ್ಟಣದಲ್ಲೇ ಕಾದುಕೊಂಡಿರ್ರಿ ಎಂದು ಹೇಳಿದನು.
50
ಮತ್ತು ಆತನು ಅವರನ್ನು ಬೇಥಾನ್ಯದ ತನಕ ಕರಕೊಂಡು ಹೋಗಿ ತನ್ನ ಕೈಗಳನ್ನು ಎತ್ತಿ ಅವರನ್ನು ಆಶೀರ್ವದಿಸಿದನು.
51
ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು [ಪರಲೋಕಕ್ಕೆ ಒಯ್ಯಲ್ಪಟ್ಟನು].
52
ಅವರು [ಆತನನ್ನು ಆರಾಧಿಸಿ] ಬಹುಸಂತೋಷದಿಂದ
53
ಯೆರೂಸಲೇವಿುಗೆ ಹಿಂತಿರುಗಿ ಹೋಗಿ ಯಾವಾಗಲೂ ದೇವಾಲಯದಲ್ಲಿ ದೇವರನ್ನು ಕೊಂಡಾಡುತ್ತಿದ್ದರು.
← Chapter 23
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24