bible
ra
🌐 Language
English
Español
Français
Deutsch
Português
Italiano
Nederlands
Русский
中文
日本語
한국어
العربية
Türkçe
Tiếng Việt
ไทย
Indonesia
All Languages
Home
/
Kannada
/
Kannada BSI JV (ಕನ್ನಡ ಸತ್ಯವೇದವು J.V. (BSI))
/
Luke 4
Luke 4
Kannada BSI JV (ಕನ್ನಡ ಸತ್ಯವೇದವು J.V. (BSI))
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 5 →
1
ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ಹೊಳೆಯಿಂದ ಹಿಂತಿರುಗಿ ದೇವರಾತ್ಮನಿಂದ ನಾಲ್ವತ್ತು ದಿವಸ ಅಡವಿಯಲ್ಲಿ ನಡಿಸಲ್ಪಡುತ್ತಾ ಸೈತಾನನಿಂದ ಶೋಧಿಸಲ್ಪಟ್ಟನು.
2
ಆ ದಿವಸಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಕಳೆದ ಮೇಲೆ ಆತನಿಗೆ ಹಸಿವಾಯಿತು.
3
ಆಗ ಸೈತಾನನು ಆತನಿಗೆ - ನೀನು ದೇವರ ಮಗನಾಗಿದ್ದರೆ ಈ ಕಲ್ಲು ರೊಟ್ಟಿಯಾಗುವಂತೆ ಇದಕ್ಕೆ ಅಪ್ಪಣೆಕೊಡು ಎಂದು ಹೇಳಲು
4
ಯೇಸು ಅವನಿಗೆ - ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವದಿಲ್ಲ ಎಂದು ಬರೆದದೆ ಎಂತ ಉತ್ತರಕೊಟ್ಟನು.
5
ಬಳಿಕ ಸೈತಾನನು ಆತನನ್ನು ಮೇಲಕ್ಕೆ ಕರೆದುಕೊಂಡು ಹೋಗಿ ಕ್ಷಣಮಾತ್ರದಲ್ಲಿ ಲೋಕದ ಎಲ್ಲಾ ರಾಜ್ಯಗಳನ್ನು ಆತನಿಗೆ ತೋರಿಸಿ -
6
ಇವೆಲ್ಲವುಗಳ ಅಧಿಕಾರವನ್ನೂ ಇವುಗಳ ವೈಭವವನ್ನೂ ನಿನಗೆ ಕೊಡುವೆನು; ಇದೆಲ್ಲಾ ನನಗೆ ಕೊಟ್ಟದೆ, ಇದನ್ನು ನನ್ನ ಮನಸ್ಸು ಬಂದವನಿಗೆ ಕೊಡುತ್ತೇನೆ;
7
ನೀನು ನನ್ನ ಮುಂದೆ ಅಡ್ಡಬಿದ್ದರೆ ಇದೆಲ್ಲಾ ನಿನ್ನದಾಗುವದು ಎಂದು ಆತನಿಗೆ ಹೇಳಿದನು.
8
ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನಿಗೆ ಅಡ್ಡಬಿದ್ದು ಆತನೊಬ್ಬನನ್ನೇ ಆರಾಧಿಸಬೇಕು ಎಂಬದಾಗಿ ಬರೆದದೆ ಎಂದು ಉತ್ತರಕೊಟ್ಟನು.
9
ಇದಲ್ಲದೆ ಅವನು ಆತನನ್ನು ಯೆರೂಸಲೇವಿುಗೆ ಕರೆದುಕೊಂಡು ಹೋಗಿ ದೇವಾಲಯದ ಶಿಖರದ ಮೇಲೆ ನಿಲ್ಲಿಸಿ ಆತನಿಗೆ - ನೀನು ದೇವರ ಮಗನಾಗಿದ್ದರೆ ಇಲ್ಲಿಂದ ಕೆಳಕ್ಕೆ ದುಮುಕು.
10
ನಿನ್ನನ್ನು ಕಾಯುವದಕ್ಕೆ ಆತನು ನಿನ್ನ ವಿಷಯವಾಗಿ ತನ್ನ ದೂತರಿಗೆ ಅಪ್ಪಣೆ ಕೊಡುವನು;
11
ಮತ್ತು ನಿನ್ನ ಕಾಲು ಕಲ್ಲಿಗೆ ತಗಲೀತೆಂದು ಅವರು ನಿನ್ನನ್ನು ಕೈಗಳಲ್ಲಿ ಎತ್ತಿಕೊಳ್ಳುವರು ಎಂಬದಾಗಿ ಬರೆದದೆಯಲ್ಲಾ ಎಂದು ಹೇಳಿದನು.
12
ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು ಹೇಳಿಯದೆ ಎಂತ ಉತ್ತರಕೊಟ್ಟನು.
13
ಸೈತಾನನು ಸಕಲವಿಧವಾದ ಶೋಧನೆಯನ್ನು ಮುಗಿಸಿ ಸ್ವಲ್ಪಕಾಲ ಆತನನ್ನು ಬಿಟ್ಟು ಹೊರಟುಹೋದನು.
14
ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ತಿರಿಗಿ ಗಲಿಲಾಯಕ್ಕೆ ಹೋದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹಬ್ಬಿಕೊಂಡಿತು.
15
ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಾ ಬಂದನು; ಎಲ್ಲರೂ ಆತನನ್ನು ಹೊಗಳಿದರು.
16
ಹೀಗಿರಲಾಗಿ ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ವಾಡಿಕೆಯ ಪ್ರಕಾರ ಸಬ್ಬತ್ದಿನದಲ್ಲಿ ಸಭಾಮಂದಿರಕ್ಕೆ ಹೋಗಿ ಓದುವದಕ್ಕಾಗಿ ಎದ್ದು ನಿಂತನು.
17
ಆಗ ಯೆಶಾಯನೆಂಬ ಪ್ರವಾದಿಯ ಗ್ರಂಥದ ಸುರಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರಳಿಯನ್ನು ಬಿಚ್ಚಿ ಮುಂದೆ ಹೇಳುವ ಮಾತು ಬರೆದಿರುವ ಸ್ಥಳವನ್ನು ಕಂಡು ಓದಿದನು; ಆ ಮಾತೇನಂದರೆ -
18
ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ
19
ಕರ್ತನು ನೇವಿುಸಿರುವ ಶುಭವರ್ಷವನ್ನು ಪ್ರಚುರಪಡಿಸುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ ಎಂಬದು.
20
ಓದಿದ ಮೇಲೆ ಆತನು ಆ ಸುರಳಿಯನ್ನು ಸುತ್ತಿ ಸಭಾಮಂದಿರದ ಆಳಿನ ಕೈಗೆ ಕೊಟ್ಟು ಕೂತುಕೊಂಡನು. ಅಲ್ಲಿದ್ದವರೆಲ್ಲರ ಕಣ್ಣುಗಳು ಆತನ ಮೇಲೆಯೇ ಬಿದ್ದಿರಲಾಗಿ
21
ಆತನು ಅವರಿಗೆ - ಈ ಹೊತ್ತು ನೀವು ನನ್ನ ಮಾತನ್ನು ಕೇಳುವಲ್ಲಿ ಈ ವೇದೋಕ್ತಿ ನೆರವೇರಿದೆ ಎಂದು ಹೇಳುತ್ತಿರುವಾಗ
22
ಎಲ್ಲರು ಆತನನ್ನು ಹೊಗಳಿ ಆತನ ಬಾಯಿಂದ ಹೊರಡುವ ಇಂಪಾದ ಮಾತುಗಳಿಗೆ ಆಶ್ಚರ್ಯಪಟ್ಟು ಇವನು ಯೋಸೇಫನ ಮಗನಲ್ಲವೇ ಎಂದು ಮಾತಾಡಿಕೊಂಡರು.
23
ಆತನು ಅವರಿಗೆ - ನೀವಂತೂ ವೈದ್ಯನೇ, ನಿನ್ನನ್ನೇ ವಾಸಿಮಾಡಿಕೋ ಎಂಬ ಗಾದೆಯನ್ನು ನನಗೆ ಹೇಳಿ ಕಪೆರ್ನೌವಿುನಲ್ಲಿ ಎಂಥೆಂಥ ಕಾರ್ಯಗಳು ನಡೆದವೆಂದು ನಾವು ಕೇಳಿದೆವೋ ಅಂಥವುಗಳನ್ನು ಈ ನಿನ್ನ ಸ್ವಂತ ಸ್ಥಳದಲ್ಲಿ ಮಾಡು ಅನ್ನುವಿರಷ್ಟೆ.
24
ಆದರೆ ಯಾವ ಪ್ರವಾದಿಯೂ ಸ್ವದೇಶದಲ್ಲಿ ಸಮ್ಮತನಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
25
ಕೇಳಿರಿ, ಎಲೀಯನ ಕಾಲದಲ್ಲಿ ಮೂರು ವರುಷ ಆರು ತಿಂಗಳು ಮಳೆಬಾರದೆ ದೇಶದಲ್ಲೆಲ್ಲಾ ದೊಡ್ಡ ಬರ ಉಂಟಾದಾಗ ಇಸ್ರಾಯೇಲ್ ಜನರಲ್ಲಿ ಎಷ್ಟೋ ಮಂದಿ ವಿಧವೆಯರು ಇದ್ದದ್ದು ನಿಜ;
26
ಆದರೆ ಅವರಲ್ಲಿ ಒಬ್ಬರ ಬಳಿಗೂ ದೇವರು ಎಲೀಯನನ್ನು ಕಳುಹಿಸದೆ ಸೀದೋನ್ ದೇಶಕ್ಕೆ ಸೇರಿದ ಸರೆಪ್ತ ಊರಿನಲ್ಲಿದ್ದ ಒಬ್ಬ ವಿಧವೆಯ ಬಳಿಗೆ ಮಾತ್ರ ಕಳುಹಿಸಿದನು.
27
ಮತ್ತು ಎಲೀಷನೆಂಬ ಪ್ರವಾದಿಯ ಕಾಲದಲ್ಲಿ ಇಸ್ರಾಯೇಲ್ ಜನರೊಳಗೆ ಎಷ್ಟೋ ಮಂದಿ ಕುಷ್ಠರೋಗಿಗಳು ಇದ್ದಾಗ್ಯೂ ಅವರಲ್ಲಿ ಒಬ್ಬನಾದರೂ ಶುದ್ಧನಾಗದೆ ಸುರಿಯ ದೇಶದವನಾದ ನಾಮಾನನು ಮಾತ್ರ ಶುದ್ಧನಾದನು ಎಂದು ಹೇಳಿದನು.
28
ಸಭಾಮಂದಿರದಲ್ಲಿರುವವರೆಲ್ಲರು ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು ಎದ್ದು ಆತನನ್ನು ಊರಹೊರಕ್ಕೆ ಅಟ್ಟಿ
29
ತಮ್ಮ ಊರು ಕಟ್ಟಿದ್ದ ಗುಡ್ಡದ ಕಡಿದಾದ ಸ್ಥಳಕ್ಕೆ ನಡಿಸಿಕೊಂಡು ಹೋಗಿ ಅಲ್ಲಿಂದ ಕೆಳಕ್ಕೆ ದೊಬ್ಬಬೇಕೆಂದಿದ್ದರು.
30
ಆದರೆ ಆತನು ಅವರ ಮಧ್ಯದಲ್ಲಿ ಹಾದು ಹೊರಟುಹೋದನು.
31
ಬಳಿಕ ಆತನು ಗಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು.
32
ಅಲ್ಲಿ ಸಬ್ಬತ್ದಿನದಲ್ಲಿ ಅವರಿಗೆ ಉಪದೇಶ ಮಾಡುತ್ತಿರಲು ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.
33
ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.
34
ಆ ದೆವ್ವವು - ಹಾ! ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು. ನೀನು ದೇವರು ಪ್ರತಿಷ್ಠಿಸಿದವನೇ ಎಂದು ಅಬ್ಬರಿಸಿ ಹೇಳಿತು.
35
ಯೇಸು ಅದನ್ನು ಗದರಿಸಿ - ಸುಮ್ಮನಿರು, ಇವನನ್ನು ಬಿಟ್ಟುಹೋಗು ಎನ್ನಲಾಗಿ ಆ ದೆವ್ವವು ಅವನನ್ನು ನಡುವೆ ಕೆಡವಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.
36
ಅದಕ್ಕೆ ಎಲ್ಲರು ಬೆರಗಾಗಿ - ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ ಬಲದಿಂದಲೂ ದೆವ್ವಗಳಿಗೆ ಅಪ್ಪಣೆ ಕೊಡುತ್ತಾನೆ, ಅವು ಬಿಟ್ಟುಹೋಗುತ್ತವೆ ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
37
ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹಬ್ಬಿತು.
38
ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ಕಠಿನ ಜ್ವರದಿಂದ ಬಹಳ ಕಷ್ಟಪಡುತ್ತಿರಲಾಗಿ ಆಕೆಯ ವಿಷಯದಲ್ಲಿ ಆತನನ್ನು ಬೇಡಿಕೊಂಡರು.
39
ಆತನು ಆಕೆಯ ಬಳಿ ನಿಂತು ಬಾಗಿ ಆ ಜ್ವರವನ್ನು ಗದರಿಸಲು ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರಿಗೆ ಉಪಚಾರ ಮಾಡಿದಳು.
40
ಹೊತ್ತು ಮುಣುಗುವಾಗ ಆದದ್ದೇನಂದರೆ ಯಾರಾರ ಮನೆಯಲ್ಲಿ ತರತರದ ರೋಗಗಳಿಂದ ಅಸ್ವಸ್ಥವಾದವರಿದ್ದರೋ ಅವರೆಲ್ಲರು ಆ ರೋಗಿಗಳನ್ನು ಆತನ ಹತ್ತಿರಕ್ಕೆ ಕರಕೊಂಡು ಬಂದರು; ಆತನು ಪ್ರತಿಯೊಬ್ಬನ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.
41
ದೆವ್ವಗಳು ಸಹ - ನೀನು ದೇವರ ಕುಮಾರನು ಎಂದು ಅಬ್ಬರಿಸಿ ಅನೇಕರನ್ನು ಬಿಟ್ಟು ಹೋದವು. ತಾನು ಕ್ರಿಸ್ತನೆಂದು ಅವುಗಳಿಗೆ ತಿಳಿದದ್ದರಿಂದ ಆತನು ಅವುಗಳನ್ನು ಮಾತಾಡದಂತೆ ಗದರಿಸಿದನು.
42
ಬೆಳಗಾದ ಮೇಲೆ ಆತನು ಹೊರಟು ಅಡವಿಯ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು - ನೀನು ನಮ್ಮನ್ನು ಬಿಟ್ಟುಹೋಗಬೇಡ ಎಂದು ಆತನನ್ನು ತಡೆದರು.
43
ಆದರೆ ಆತನು ಅವರಿಗೆ - ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ ಎಂದು ಹೇಳಿದನು.
44
ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.
← Chapter 3
Jump to:
Chapter 1
Chapter 2
Chapter 3
Chapter 4
Chapter 5
Chapter 6
Chapter 7
Chapter 8
Chapter 9
Chapter 10
Chapter 11
Chapter 12
Chapter 13
Chapter 14
Chapter 15
Chapter 16
Chapter 17
Chapter 18
Chapter 19
Chapter 20
Chapter 21
Chapter 22
Chapter 23
Chapter 24
Chapter 5 →
All chapters:
1
2
3
4
5
6
7
8
9
10
11
12
13
14
15
16
17
18
19
20
21
22
23
24